Tomorrow Horoscope: ಆಧಾರವಿಲ್ಲದೆ ಬೇರೆಯವರ ಮಾತು ನಂಬಬೇಡಿ, ಆಹಾರ ಸೇವನೆಯಲ್ಲಿ ಇತಿಮಿತಿ ಇರಲಿ; ನಾಳಿನ ದಿನಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಆಧಾರವಿಲ್ಲದೆ ಬೇರೆಯವರ ಮಾತು ನಂಬಬೇಡಿ, ಆಹಾರ ಸೇವನೆಯಲ್ಲಿ ಇತಿಮಿತಿ ಇರಲಿ; ನಾಳಿನ ದಿನಭವಿಷ್ಯ

Tomorrow Horoscope: ಆಧಾರವಿಲ್ಲದೆ ಬೇರೆಯವರ ಮಾತು ನಂಬಬೇಡಿ, ಆಹಾರ ಸೇವನೆಯಲ್ಲಿ ಇತಿಮಿತಿ ಇರಲಿ; ನಾಳಿನ ದಿನಭವಿಷ್ಯ

11th April 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ. ನಾಳೆಯ ದಿನ ಭವಿಷ್ಯ ಹೀಗಿದೆ.

ಏಪ್ರಿಲ್‌ 11ರ ದಿನಭವಿಷ್ಯ
ಏಪ್ರಿಲ್‌ 11ರ ದಿನಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಸಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವುದು ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀಲವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್‌. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (11th April 2024 Horoscope)

ನಾಳಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲಪಕ್ಷ, ಗುರುವಾರ

ತಿಥಿ: ತದಿಗೆ ಸಂಜೆ 6.18ರವರೆಗೂ ಇರುತ್ತದೆ. ಅನಂತರ ಚೌತಿ ಆರಂಭವಾಗುತ್ತದೆ.

ನಕ್ಷತ್ರ: ಕೃತ್ತಿಕ ನಕ್ಷತ್ರವು ಬೆಳಗಿನ ಜಾವ 5.03ರವರೆಗೂ ಇರುತ್ತದೆ. ಅನಂತರ ರೋಹಿಣಿ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಿಗ್ಗೆ 6.09

ಸೂರ್ಯಾಸ್ತ: ಸಂಜೆ 6.31

ರಾಹುಕಾಲ: ಮಧ್ಯಾಹ್ನ 1.30 ರಿಂದ ಮಧ್ಯಾಹ್ನ 3.00

ಮೇಷ

ದುಡುಕದೆ ದೊರೆವ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಿರಿ. ಗೃಹಿಣಿಯರು ಮಕ್ಕಳ ಬಟ್ಟೆಯ ತಯಾರಿಕೆ ಮತ್ತು ಮಾರಾಟ ಕೇಂದ್ರ ಆರಂಭಿಸಲಿದ್ದಾರೆ. ಆಧಾರವಿಲ್ಲದೆ ಬೇರೆಯವರ ಮಾತನ್ನು ನಂಬದಿರಿ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಉನ್ನತ ವಿದ್ಯಾಭ್ಯಾಸದಲ್ಲಿ ಮುಂದುವರೆಯುತ್ತಾರೆ. ಆತುರದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯದು.

ಪರಿಹಾರ: ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಎಲೆಹಸಿರು ಬಣ್ಣ

ವೃಷಭ

ತಂದೆಗೆ ರಕ್ತಸಂಬಂಧಿಕರ ಜೊತೆಯಲ್ಲಿ ಭಿನ್ನಾಭಿಪ್ರಾಯ ಇರುತ್ತದೆ. ಕುಟುಂಬಕ್ಕೆ ಸೇರಿದ್ದ ಭೂಮಿಯೊಂದು ವಿವಾದಕ್ಕೆ ಸಿಲುಕಬಹುದು. ವ್ಯಾಪಾರ ವ್ಯವಹಾರದಲ್ಲಿ ನಷ್ಟವಿರದು. ಕಮಿಷನ್‌ ವ್ಯವಹಾರದಲ್ಲಿ ಉತ್ತಮ ಲಾಭಾಂಶ ದೊರೆಯುತ್ತದೆ. ಬೇಸರ ಕಳೆಯಲು ಕಿರುಪ್ರವಾಸ ಕೈಗೊಳ್ಳುವಿರಿ. ಸಾಧು ಸಂತರನ್ನು ಭೇಟಿ ಮಾಡುವಿರಿ.

ಪರಿಹಾರ: ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 6

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ : ಕೇಸರಿ ಬಣ್ಣ

ಮಿಥುನ

ಉದ್ಯೋಗದಲ್ಲಿ ಸಣ್ಣ ತಪ್ಪಿನಿಂದಾಗಿ ಹಿನ್ನಡೆ ಉಂಟಾಗುವ ಸಾಧ್ಯತೆ ಇರುತ್ತದೆ. ಸಂಗಾತಿಯ ಸಹಕಾರ ಹೊಸ ಜೀವನವನ್ನು ರೂಪಿಸುತ್ತದೆ. ದುಡುಕಿ ಮಾತನಾಡುವ ಕಾರಣ ಆತ್ಮೀಯರ ವಿರೋಧವನ್ನು ಎದುರಿಸುವಿರಿ. ಜಮೀನೊಂದನ್ನು ಮಾರಾಟ ಮಾಡಿ ಹೊಸ ಮನೆಕೊಳ್ಳುವ ತೀರ್ಮಾನಕ್ಕೆ ಬರುವಿರಿ. ಸ್ವಂತ ಬಳಕೆಕಾಗಿ ಐಷಾರಾಮಿ ವಾಹನ ಕೊಳ್ಳುವಿರಿ.

ಪರಿಹಾರ: ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 9

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಕಟಕ

ಸಮಯವನ್ನು ಗೌರವಿಸುವ ನೀವು ಯಾವುದಾದರೊಂದು ಕೆಲಸದಲ್ಲಿ ನಿರತರಾಗುವಿರಿ. ಉದ್ಯೋಗದಲ್ಲಿನ ಅನಿರೀಕ್ಷಿತವಾದ ಬದಲಾವಣೆಗಳು ಅನುಕೂಲವಾಗಲಿವೆ. ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸಿ. ವ್ಯಾಪಾರ ವ್ಯವಹಾರಗಳು ಸುಗಮವಾಗಿ ನಡೆಯುತ್ತವೆ. ತೋಟಗಾರಿಕೆಯಿಂದ ಉತ್ತಮ ಆದಾಯ ದೊರೆಯುತ್ತದೆ.

ಪರಿಹಾರ: ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕೆಂಪು ಬಣ್ಣ

ಸಿಂಹ

ಸ್ಥಿರವಾದ ಮನಸ್ಸಿನಿಂದ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ನಿರ್ವಹಿಸುವಿರಿ. ಸ್ವಗೃಹ ಭೂಲಾಭವಿದೆ. ಉದ್ಯೋಗದಲ್ಲಿ ಸುಲಭವಾಗಿ ಯಶಸ್ಸನ್ನು ಗಳಿಸುವಿರಿ. ಹಣದ ಲೆಕ್ಕಾಚಾರ ಸಂಸ್ಥೆಯಲ್ಲಿ ಉನ್ನತ ಅಧಿಕಾರ ಲಭಿಸುತ್ತದೆ. ವಿದ್ಯಾರ್ಥಿಗಳು ವ್ಯಾಸಂಗದಲ್ಲಿ ಮುಂಚೂಣಿಯಲ್ಲಿ ಇರುತ್ತಾರೆ. ಸಾಲದ ವ್ಯವಹಾರ ಮಾಡದಿರಿ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 7

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ : ಕಿತ್ತಳೆ ಬಣ್ಣ

ಕನ್ಯಾ

ಅನಾವಶ್ಯಕ ಖರ್ಚು ವೆಚ್ಚದ ಮೇಲೆ ಹಿಡಿತವಿರಲಿ. ಉದ್ಯೋಗದಲ್ಲಿನ ಬೇಸರ ಮರೆಯಾಗಿ ಹೊಸ ಯೋಜನೆಗಳು ದೊರೆಯುತ್ತವೆ. ಸೋದರನಿಗೆ ದೂರದ ಸ್ಥಳದಲ್ಲಿ ಕೆಲಸ ಸಿಗುತ್ತದೆ. ಕವಿಗಳು ಮತ್ತು ಕತೆಗಾರರಿಗೆ ವಿಶೇಷವಾದ ಗೌರವಾದರಗಳು ಲಭಿಸುತ್ತವೆ.

ಪರಿಹಾರ: ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ತುಲಾ

ಮನದಲ್ಲಿ ವೈರಾಗ್ಯದ ಭಾವನೆ ಮೂಡುತ್ತದೆ. ಸಮಾಜಸೇವೆಯಲ್ಲಿ ಆಸಕ್ತಿ ಮೂಡುತ್ತದೆ. ಉದ್ಯೋಗದಲ್ಲಿ ನಿರೀಕ್ಷಿತ ಫಲಿತಾಂಶ ದೊರೆಯುತ್ತದೆ. ದಿನನಿತ್ಯಕ್ಕೆ ಅವಶ್ಯಕವಾದ ಯಂತ್ರೋಪಕರಣಗಳ ಸರಬರಾಜಿನಲ್ಲಿ ಹೆಚ್ಚಿನ ಲಾಭಾಂಶ ದೊರೆಯಲಿದೆ. ಆದಾಯ ಹೆಚ್ಚಿಸಿಕೊಳ್ಳುವ ದೃಷ್ಠಿಯಿಂದ ಪಾಲುದಾರಿಕೆಯ ವ್ಯಾಪಾರವನ್ನು ಆರಂಭಿಸುವಿರಿ. ಸಹೋದರಿಯ ವಿವಾಹ ಮಾತುಕತೆ ನಡೆಯುತ್ತದೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಎಳನೀರು ಮತ್ತು ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಹಳದಿ ಬಣ್ಣ

ವೃಶ್ಚಿಕ

ಅಂತರರಾಷ್ಟ್ರೀಯ ಸಂಸ್ಥೆಯಲ್ಲಿ ಉದ್ಯೋಗ ಲಭಿಸುತ್ತದೆ. ಕುಟುಂಬದ ಹಿರಿಯರ ಕೆಲಸವೊಂದನ್ನು ಮುಂದುವರಿಸುವಿರಿ. ಆಧುನಿಕ ತಂತ್ರಜ್ಞಾನಕ್ಕೆ ಸಂಬಂಧಿಸಿದ ಯಂತ್ರೋಪಕರಣಗಳ ಮಾರಾಟದಲ್ಲಿ ಲಾಭವಿರುತ್ತದೆ. ವಾಹನ ಚಾಲನೆ ಮಾಡುವಾಗ ಎಚ್ಚರ ವಹಿಸಿ. ಧಾರ್ಮಿಕ ಅನುಯಾಯಿಗಳಿಗೆ ಸಹಾಯ ಮಾಡುವಿರಿ.

ಪರಿಹಾರ: ತಾಯಿಯವರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 8

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಹಳದಿ ಬಣ್ಣ

ಧನಸ್ಸು

ಅನಾವಶ್ಯಕವಾಗಿ ಕುಟುಂಬದಲ್ಲಿನ ಮನಸ್ತಾಪಕ್ಕೆ ಕಾರಣರಾಗುವಿರಿ. ಮುಂಗೋಪದಿಂದ ಅಮೂಲ್ಯವಾದ ಅವಕಾಶವೊಂದನ್ನು ದೂರ ಮಾಡುವಿರಿ. ಉದ್ಯೋಗದಲ್ಲಿ ತೊಂದರೆ ಬಾರದು. ವಿದ್ಯಾರ್ಥಿಗಳು ವ್ಯಾಸಂಗದಲ್ಲಿ ತನ್ಮಯರಾಗುತ್ತಾರೆ. ಅತಿಯಾದ ಹಣದ ಆಸೆ ಇರುವುದಿಲ್ಲ. ಆಹಾರ ಸೇವನೆಯಲ್ಲಿ ಇತಿಮಿತಿ ಇರಲಿ.

ಪರಿಹಾರ: ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಹಸಿರು ಬಣ್ಣ

ಮಕರ

ವಾಹನಗಳ ದುರಸ್ಥಿ ಮತ್ತು ಮಾರಾಟಕ್ಕೆ ಸಂಬಂಧಿಸಿದ ಉದ್ಯೋಗದಲ್ಲಿ ಅದಾಯವಿರುತ್ತದೆ. ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ಉತ್ತಮ ಫಲಿತಾಂಶ ಪಡೆಯುತ್ತಾರೆ. ಸ್ನೇಹಿತರೊಬ್ಬರು ಹಣದ ಸಹಾಯ ಮಾಡುತ್ತಾರೆ. ಹೊಸವಾಹನ ಕೊಳ್ಳುವಿರಿ.

ಪರಿಹಾರ: ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 6

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನೀಲಿ ಬಣ್ಣ

ಕುಂಭ

ಕುಟುಂಬದ ಸದಸ್ಯರ ಸಹಾಯದಿಂದ ಎದುರಾಗುವ ತೊಂದರೆಯೊಂದರಿಂದ ಪಾರಾಗುವಿರಿ. ಉದ್ಯೋಗದಲ್ಲಿ ಹೆಚ್ಚಿನ ಆದಾಯ ದೊರೆಯುತ್ತದೆ. ಸಾಮಾಜಿಕ ಜೀವನದಲ್ಲಿ ನಾಯಕನ ಸ್ಥಾನಮಾನ ದೊರೆಯುತ್ತದೆ. ನೀರಾವರಿ ಭೂಮಿ ಇದ್ದಲ್ಲಿ ಹಣ್ಣು ಮತ್ತು ತರಕಾರಿ ಬಿತ್ತನೆಗೆ ಪ್ರಯತ್ನಿಸುವಿರಿ.

ಪರಿಹಾರ: ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ನೇರಳೆ ಬಣ್ಣ

ಮೀನ

ಯಾವುದೇ ಅಡಚಣೆ ಇಲ್ಲದೆ ದಿನದ ಕೆಲಸ ಕಾರ್ಯಗಳನ್ನು ಪೂರೈಸುವಿರಿ. ಸ್ವಂತ ಭೂಮಿಯ ಲಾಭ ದೊರೆಯುತ್ತದೆ. ವಿದ್ಯಾರ್ಥಿಗಳಿಗೆ ಶುಭ ವರ್ತಮಾನವೊಂದು ಬರಲಿದೆ. ಸ್ಟಾಕ್‌ ಷೇರಿನ ವ್ಯವಹಾರದಲ್ಲಿ ಲಾಭ ದೊರೆಯುತ್ತದೆ.

ಪರಿಹಾರ: ಕೆಂಪು ಬೆಲ್ಲದಿಂದ ಮಾಡಿದ ದ್ರವಾಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ಗುಲಾಬಿ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 85468 65832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಗೌರಿವಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.