ಕನ್ನಡ ಸುದ್ದಿ  /  Astrology  /  Tomorrow Horoscope Astrology Prediction In Kannada 19 March 2024 Zodiac Signs Kundali News Sts

Tomorrow Horoscope: ಉದ್ಯೋಗದಲ್ಲಿ ನೆಮ್ಮದಿ, ಸಂಗಾತಿಯ ಮಾತು ಕೇಳಿದ್ರೆ ಹಣದ ವಿಚಾರದಲ್ಲಿ ತೊಂದರೆ ಬರಲ್ಲ; ಮಂಗಳವಾರದ ದಿನಭವಿಷ್ಯ

19 March 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ಇಂದು ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ಮಂಗಳವಾರದ ದಿನಭವಿಷ್ಯ ಹೀಗಿದೆ..

ಮಂಗಳವಾರದ ದಿನಭವಿಷ್ಯ
ಮಂಗಳವಾರದ ದಿನಭವಿಷ್ಯ

ನಾಳೆಯ ರಾಶಿ ಭವಿಷ್ಯ: ʼನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (Tomorrow Horoscope In Kannada, 19 March 2024)

ನಾಳಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲಪಕ್ಷ, ಮಂಗಳವಾರ

ತಿಥಿ : ದಶಮಿ ರಾ.02.46 ರವರೆಗು ಇರುತ್ತದೆ. ಆನಂತರ ಏಕಾದಶಿ ಆರಂಭವಾಗುತ್ತದೆ.

ನಕ್ಷತ್ರ : ಪುನರ್ವಸು ನಕ್ಷತ್ರವು ರಾ.10.41 ರವರೆಗೆ ಇರುತ್ತದೆ. ಆನಂತರ ಪುಷ್ಯ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.24

ಸೂರ್ಯಾಸ್ತ: ಸ.06.29

ರಾಹುಕಾಲ : ಮ.03.00 ರಿಂದ ಬೆ.04.30

ರಾಶಿ ಫಲಗಳು

ಮೇಷ

ಕುಟುಂಬದಲ್ಲಿನ ಬದಲಾವಣೆಗಳು ಅನುಕೂಲಕರ ವಾತಾವರಣವನ್ನು ಉಂಟುಮಾಡುತ್ತದೆ. ಉದ್ಯೋಗದಲ್ಲಿ ಹಿರಿಯ ಅಧಿಕಾರ ನಿಮ್ಮದಾಗುತ್ತದೆ. ಸಹೋದ್ಯೋಗಿಗಳ ಸಹಕಾರ ಚೇತೋಹಾರಿ ಆಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭ ದೊರೆಯುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಅಧ್ಯಯನಕ್ಕಾಗಿ ವಿದೇಶಕ್ಕೆ ತೆರಳುತ್ತಾರೆ. ಸಮಾಜದ ಗಣ್ಯರ ಸ್ನೇಹ ದೊರೆಯುತ್ತದೆ. ಜನೋಪಕಾರಿ ಕೆಲಸದಲ್ಲಿ ಭಾಗಿಯಾಗುವಿರಿ. ದೈನಂದಿನ ಜೀವನ ನಿರೀಕ್ಷಿಸಿದ ಮಾದರಿಯಲ್ಲಿ ನಡೆದರೂ ಮನದಲ್ಲಿ ಚಿಂತೆ ಇರುತ್ತದೆ. ವಿನೂತನ ಅವಕಾಶ ದೊರೆತು ಉದ್ಯೋಗವನ್ನು ಬದಲಾಯಿಸುವಿರಿ. ತಂದೆಯವರ ಜೊತೆಯಲ್ಲಿ ಹಣಕಾಸಿನ ವಿವಾದವಿರುತ್ತದೆ. ದಿನ ನಿತ್ಯ ಬಳಸುವ ವಾಹನದ ದುರಸ್ತಿಗೆ ಹಣ ಖರ್ಚಾಗಲಿದೆ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಹಾಲಿನ ಬಣ್ಣ

ವೃಷಭ

ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲಸಲು ಕಾರಣರಾಗುವಿರಿ. ಉದ್ಯೋಗದಲ್ಲಿ ದುಡುಕಿನ ನಿರ್ಧಾರವನ್ನು ತೆಗೆದುಕೊಳ್ಳದಿರಿ. ಸಮಯಕ್ಕೆ ತಕ್ಕಂತೆ ವರ್ತಿಸುವಕಾರಣ ವಾದ ವಿವಾದಗಳಿಂದ ದೂರ ಉಳಿಯುವಿರಿ. ಹಣಕಾಸಿನ ವಿಚಾರದಲ್ಲಿ ಸ್ವಂತ ತೀರ್ಮಾನವನ್ನು ತೆಗೆದುಕೊಳ್ಳುವಿರಿ. ವ್ಯಾಪಾರ ವ್ಯವಹಾರಗಳು ಇಚ್ಚಿಸಿದಂತೆ ನಡೆಯಲಿವೆ. ವಿದ್ಯಾರ್ಥಿಗಳ ದಿಟ್ಟತನ ಅಚ್ಚರಿಯ ಬೆಳವಣಿಗೆಗೆ ಕಾರಣವಾಗಲಿದೆ. ಶಾಂತ ಸ್ವಭಾವದಿಂದ ಎದುರಾಗುವ ಚಿಕ್ಕ ಪುಟ್ಟ ತೊಂದರೆಗಳನ್ನು ಗೆಲ್ಲುವಿರಿ. ಹೊಸತನ್ನು ನಿರೀಕ್ಷಿಸುತ್ತಾ ಸಹೋದ್ಯೋಗಿಗಳನ್ನೂ ಹುರಿದುಂಬಿಸುವಿರಿ. ತಪ್ಪನ್ನು ಮನ್ನಿಸದೆ ನೇರ ಮತ್ತು ನಿಷ್ಠುರದ ಮಾತುಗಳನ್ನು ಆಡುವ ಕಾರಣ ಆತ್ಮೀಯರೊಬ್ಬರು ದೂರವಾಗಬಗುದು. ಹಣಕಾಸಿನ ವ್ಯವಹಾರಗಳಲ್ಲಿ ತೊಂದರೆ ಬಾರದು. ಧಾರ್ಮಿಕ ಕೇಂದ್ರಕ್ಕೆ ದಿನನಿತ್ಯದ ಅವಶ್ಯಕತೆಗಳನ್ನು ಪೂರೈಸುವಿರಿ.

ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಹೊಗೆಯ ಬಣ್ಣ

ಮಿಥುನ

ಕುಟುಂಬದ ಕೆಲಸ ಕಾರ್ಯಗಳಿಗೆ ಹೆಚ್ಚಿನ ಮಹತ್ವ ನೀಡುವಿರಿ. ಉದ್ಯೋಗದಲ್ಲಿ ಯಶಸ್ಸಿನ ಜೊತೆಯಲ್ಲಿ ಶಾಂತಿ-ನೆಮ್ಮದಿ ಲಭಿಸುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಅಡ್ಡಿ ಆತಂಕವನ್ನು ಎದುರಿಸುವಿರಿ. ವಿದ್ಯಾರ್ಥಿಗಳು ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು. ಮಕ್ಕಳಿಗೆ ಅನುಕೂಲವೆನಿಸುವ ಕೆಲಸವೊಂದನ್ನು ಮಾಡುವಿರಿ. ಹೊಸ ವಾಹನವನ್ನು ಕೊಳ್ಳುವಿರಿ. ಖರ್ಚು ವೆಚ್ಚಗಳು ಮಿತಿ ಮೀರಿದಲ್ಲಿ ಸಹನೆ ಕಳೆದುಕೊಳ್ಳುವಿರಿ. ಸಂಘ ಸಂಸ್ಥೆಯ ಆಡಳಿತದಲ್ಲಿ ವಿವಾದವೊಂದನ್ನು ಎದುರಿಸಬೇಗಾಗುತ್ತದೆ. ಅರೆಮನಸ್ಸಿನಿಂದ ಕೆಲಸ ಮಾಡಿದರೂ ಯಶಸ್ವನ್ನು ಗಳಿಸುವಿರಿ. ಸೋದರಿಗೆ ಹಣದ ಸಹಾಯವನ್ನು ಮಾಡಬೇಕಾಗುತ್ತದೆ. ಸಕಾರಾತ್ಮಕ ಶಕ್ತಿಯಿಂದ ದಿನದ ಕೆಲಸ ಆರಂಭಿಸಿರಿ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಆಕಾಶನೀಲಿ ಬಣ್ಣ

ಕಟಕ

ಕುಟುಂಬದಲ್ಲಿ ಪರಸ್ಪರ ನಂಬಿಕೆಯ ಗುಣ ಇರುತ್ತದೆ. ಒಗ್ಗಟ್ಟಿನಿಂದ ಮಾಡುವ ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಯಶಸ್ಸು ಲಭಿಸುತ್ತದೆ. ಉದ್ಯೋಗದಲ್ಲಿ ಅನಿರೀಕ್ಷಿತ ಬದಲಾವಣೆಗಳು ಉಂಟಾಗಲಿವೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ ದೊರೆಯುತ್ತದೆ. ವಿದ್ಯಾರ್ಥಿಗಳು ಏಕಾಂಗಿತನ ತೊರೆದು ಸ್ನೇಹಿತರ ಸಲಹೆ ಒಪ್ಪಬೇಕು. ಸಂಗಾತಿಯ ಮಾತನ್ನು ಕೇಳಿದಲ್ಲಿ ಹಣದ ವಿಚಾರದಲ್ಲಿ ತೊಂದರೆ ಬಾರದು. ಮನೆಯ ಮುಖ್ಯ ವಿಚಾರದಲ್ಲಿ ತಾಯಿಯವರ ತೀರ್ಮಾನವೇ ಅಂತಿಮವಾಗುತ್ತದೆ. ಹಣದ ವಿವಾದವೊಂದು ಕಾನೂನಿನ ಮೂಲಕ ಪರಿಹಾರಗೊಳ್ಳುತ್ತದೆ. ವಂಶದ ಆಸ್ತಿಯಲ್ಲಿ ನ್ಯಾಯಯುತ ಪಾಲು ದೊರೆಯುತ್ತದೆ. ಯಾತ್ರಾಸ್ಥಳಗಳಿಗೆ ಪ್ರವಾಸಗಳನ್ನು ಆಯೋಜಿಸುವ ವ್ಯವಹಾರದಲ್ಲಿ ಲಾಭವಿರುತ್ತದೆ.

ಪರಿಹಾರ : ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ .

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ರಕ್ತದ ಬಣ್ಣ

ಸಿಂಹ

ಕುಟುಂಬದಲ್ಲಿ ಸಲಹೆ ನೀಡುವವರ ಸಂಖ್ಯೆ ಹೆಚ್ಚಾಗುತ್ತದೆ. ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗುವಿರಿ. ಉದ್ಯೋಗದಲ್ಲಿ ಯಾವುದೆ ಬದಲಾವಣೆಗಳು ಕಾಣದು. ಮಾಡುವ ಪ್ರತಿ ಕೆಲಸದಲ್ಲಿಯೂ ಉನ್ನತ ಸ್ಥಾನಮಾನ ಗಳಿಸುವಿರಿ. ಅಧಿಕಾರದ ಆಸೆ ಇದ್ದಲ್ಲಿ ಯಶಸ್ಸನ್ನು ಕಾಣುವಿರಿ. ಸೇವಾಧಾರಿತ ವ್ಯಾಪಾರ ವ್ಯವಹಾರದಲ್ಲಿ ವಿಶೇಷ ಲಾಭ ದೊರೆಯುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ದೊರೆತರೆ ಮೇಲ್ಮಟ್ಟಕ್ಕೆ ಏರಲಿದ್ದಾರೆ. ಸರ್ಕಾರದ ಅನುದಾನದಲ್ಲಿ ಸಮಾಜಸೇವಾ ಸಂಘ ಸಂಸ್ಥೆಯನ್ನು ಆರಂಭಿಸುವಿರಿ. ಅವಿವಾಹಿತರಿಗೆ ದೊಡ್ಡ ಮನೆತನದವರ ಜೊತೆ ವಿವಾಹ ನಿಶ್ಚಯವಾಗಲಿದೆ. ಸಹನೆಯಿಂದ ಎಲ್ಲವನ್ನೂ ಗೆಲ್ಲಬಲ್ಲಿರಿ. ಧಾರ್ಮಿಕ ಗುರುಗಳ ಆಶೀರ್ವಾದ ದೊರೆಯುತ್ತದೆ. ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡುವಿರಿ.

ಪರಿಹಾರ : ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಎಲೆಹಸಿರು ಬಣ್ಣ

ಕನ್ಯಾ

ಕೌಟುಂಬಿಕ ಕಲಹದಿಂದ ಬೇಸರಕ್ಕೆ ಒಳಗಾಗುವಿರಿ. ದುಡುಕುವ ಕಾರಣ ಕೆಲಸವು ಅಂತಿಮ ಹಂತ ತಲುಪುವ ವೇಳೆ ಕ್ಕೆ ಜಾರಲಿದೆ. ಉದ್ಯೋಗದಲ್ಲಿ ಸ್ಥಿರತೆ ಕಾಣದೆ ಉದ್ಯೋಗವನ್ನು ಬದಲಿಸುವಿರಿ. ವ್ಯಾಪಾರ ವ್ಯವಹಾರದಲ್ಲಿ ಲಾಭಕ್ಕೆ ಮೋಸವಾಗದು. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಮುಂದಿನ ಹಂತ ತಲುಪಲಿದ್ದಾರೆ. ನಿಸರ್ಗವನ್ನುಇಷ್ಟಪಟ್ಟು ಕೃಷಿಕಾರ್ಯವನ್ನು ಆರಂಭಿಸುವಿರಿ. ಸ್ವಂತ ಮನೆ ಕೊಳ್ಳುವ ಬಗ್ಗೆ ಮಾತುಕತೆ ನಡೆಸುವಿರಿ. ಯಂತ್ರ ಸಂಬಂದಿತ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ನೀರಿನ ಜೊತೆ ಚೆಲ್ಲಾಟವಾಡದಿರಿ. ಹಿರಿಯ ಸೋದರನೊಂದಿಗೆ ಹಣಕಾಸಿನ ಮನಸ್ತಾಪ ಇರುತ್ತದೆ. ಬೆಳ್ಳಿಯ ಸರ ಮತ್ತು ಪದಕ ಕೊಳ್ಳುವಿರಿ. ಆರೋಗ್ಯದಲ್ಲಿ ಸಣ್ಣ ಪುಟ್ಟ ತೊಂದರೆ ಎದುರಾಗಬಹುದು.

ಪರಿಹಾರ : ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಬಿಸಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಕೇಸರಿ ಬಣ್ಣ

ತುಲಾ

ಕುಟುಂಬದಲ್ಲಿ ಆತುರದ ಭಾವನೆ ಸ್ವಭಾವ ಇರುತ್ತದೆ. ಯೋಚಿಸದೆ ಮಾಡುವ ಕೆಲಸ ಕಾರ್ಯಗಳ್ಳಲ್ಲಿ ಹಿನ್ನಡೆ ಉಂಟಾಗಲಿದೆ. ಉದ್ಯೋಗದಲ್ಲಿ ಯಾವುದೇ ತೊಂದರೆ ಇರದು. ಬೇರೆಯವರ ಹಣಕಾಸಿನ ವ್ಯವಹಾರದಲ್ಲಿ ಮಧ್ಯಸ್ಥಿಕೆ ವಹಿಸಿದರೆ ತೊಂದರೆ ಎದುರಿಸುವಿರಿ. ತಂದೆಯವರಿಗೆ ವ್ಯಾಪಾರದಲ್ಲಿ ಸಹಾಯ ಮಾಡಿದಲ್ಲಿ ಹೆಚ್ಚಿನ ಅನುಕೂಲವಿದೆ. ತಾಯಿಗೆ ಸೋದರ ವರ್ಗದವರಿಂದ ಸಹಾಯ ಇರುತ್ತದೆ. ವಿದ್ಯಾರ್ಥಿಗಳಿಗೆ ರಾಜಕೀಯದ ನಂಟು ದೊರೆಯುತ್ತದೆ. ಹೆಚ್ಚಿನ ಪ್ರಯತ್ನದಿಂದ ಉನ್ನತ ಅಧಿಕಾರ ಗಳಿಸುವಿರಿ. ಆಧುನಿಕ ತಂತ್ರಜ್ಞಾನದ ಅರಿವು ಇದ್ದವರು ವಿದೇಶದಲ್ಲಿ ಉದ್ಯೋಗವನ್ನು ಗಳಿಸುತ್ತಾರೆ. ದುಡುಕಿನ ತೀರ್ಮಾನವನ್ನು ತೆಗೆದುಕೊಳ್ಳದಿರಿ. ಪಾಲುಗಾರಿಕೆ ವ್ಯಾಪಾರವು ಮಧ್ಯಮಗತಿಯಲ್ಲಿ ನಡೆಯಲಿದೆ.

ಪರಿಹಾರ : ಕೈ ಅಥವಾ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವದರಿಂದ ಶುಭವಿರುತ್ತದೆ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ವೃಶ್ಚಿಕ

ಕುಟುಂಬದ ಕೆಲಸ ಕಾರ್ಯಗಳು ಹಠ ಮತ್ತು ಛಲದ ಕಾರಣ ಅಪೂರ್ಣಗೊಳ್ಳಬಹುದು. ನಿಮ್ಮಲ್ಲಿನ ತಪ್ಪು ಅಭಿಪ್ರಾಯ ಉದ್ಯೋಗದಲ್ಲಿ ವಿವಾದಕ್ಕೆ ಕಾರಣವಾಗಲಿದೆ. ಆದರೂ ಬುದ್ಧಿವಂತಿಕೆಯಿಂದ ಪಾರಾಗುವಿರಿ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯಲಿದೆ. ಉನ್ನತ ಅಧಿಕಾರ ದೊರೆತು ಉದ್ಯೋಗವನ್ನು ಬದಲಾಯಿಸುವಿರಿ. ಹಣಕಾಸಿನ ಕೊರತೆಯು ಕ್ರಮೇಣವಾಗಿ ಕಡಿಮೆ ಆಗುತ್ತದೆ. ವಿದ್ಯಾರ್ಥಿಗಳು ಉನ್ನತ ಜ್ಞಾನಾರ್ಜನೆಗಾಗಿ ಸತತ ಅಭ್ಯಾಸದಲ್ಲಿ ತೊಡಗುತ್ತಾರೆ. ಸಂಗಾತಿಯ ಜೊತೆಯಲ್ಲಿ ಅನಾವಶ್ಯಕ ವಾದ ವಿವಾದಗಳು ಉಂಟಾಗುತ್ತವೆ. ಭೂವ್ಯವಹಾರದಲ್ಲಿ ಸಾಧಾರಣ ಲಾಭವಿರುತ್ತದೆ. ಬಡ ವಿಧ್ಯಾರ್ಥಿಗಳಿಗೆ ಸಹಾಯ ಮಾಡುವಿರಿ.

ಪರಿಹಾರ : ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕೆಂಪು ಬಣ್ಣ

ಧನಸ್ಸು

ಕುಟುಂಬದಲ್ಲಿ ಸ್ಪೂರ್ತಿದಾಯಕ ವಾತಾವರಣ ನೆಲೆಸಿರುತ್ತದೆ. ಉದ್ಯೋಗದಲ್ಲಿ ಸಮಯಕ್ಕೆ ತಕ್ಕಂತೆ ನಡೆದುಕೊಂಡಲ್ಲಿ ಯಾವುದೇ ತೊಂದರೆ ಬಾರದು. ವ್ಯಾಪಾರ ವ್ಯವಹಾರದಲ್ಲಿ ಅಳುಕು ತೊರೆದು ಧೈರ್ಯದಿಂದ ಮುಂದುವರೆಯಬೇಕು. ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸದ ಕೊರತೆ ಕಂಡುಬರುತ್ತದೆ. ಕುಟುಂಬದ ಒಳಗೂ ಹೊರಗೂ ಗೌರವಯುತ ಸ್ಥಾನ ಮಾನ ದೊರೆಯುತ್ತದೆ. ಒಮ್ಮೆ ತೆಗೆದು ಕೊಂಡ ತೀರ್ಮಾನಗಳನ್ನು ಬದಲಿಸದಿರಿ. ಕುಟುಂಬದ ಸದಸ್ಯರ ಜೊತೆಯಲ್ಲಿ ಪಾಲುಗಾರಿಕೆಯ ವ್ಯಾಪಾರ ಆರಂಭಿಸುವಿರಿ. ವೈವಾಹಿಕ ಜೀವನದಲ್ಲಿ ಶುಭ ವರ್ತಮಾನವೊಂದು ಬರಲಿದೆ. ಮಕ್ಕಳ ಆಶೋತ್ತರಗಳ್ಳನ್ನು ಈಡೇರಿಸುವಲ್ಲಿ ಸಫಲರಾಗುವಿರಿ. ಆರೋಗ್ಯದ ಬಗ್ಗೆ ಗಮನವಿರಲಿ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಕಿತ್ತಳೆಬಣ್ಣ

ಮಕರ

ಕುಟುಂಬದಲ್ಲಿ ಸುಖ ಸಂತಸ ನೆಲೆಸಿರುತ್ತದೆ. ಮಕ್ಕಳ ಮನ ಗೆಲ್ಲಲು ಹೆಚ್ಚಿನ ಹಣ ಖರ್ಚುಮಾಡುವಿರಿ. ಉದ್ಯೋಗದಲ್ಲಿ ನೈಜ ಬದಲಾವಣೆ ಕಂಡುಬರುತ್ತದೆ. ಕೇವಲ ಹಣಕ್ಕೆ ಹೆಚ್ಚಿನ ಬೆಲೆ ನೀಡುವುದಿಲ್ಲ. ವ್ಯಾಪಾರ ವ್ಯವಹಾರದ ಆದಾಯದಲ್ಲಿ ಯಾವುದೆ ಕೊರತೆ ಕಾಣದು. ಎಲ್ಲರ ಸಹಕಾರ ನಿಮಗೆ ದೊರೆಯುತ್ತದೆ. ಲಾಭವಿರುವ ಕೆಲಸಗಳನ್ನು ಮಾತ್ರ ಮಾಡಲು ಇಷ್ಟ ಪಡುವಿರಿ. ಉದ್ಯೋಗ ಬದಲಿಸಲು ಸಾಧ್ಯವಾಗದು. ಹೊಸ ವ್ಯಾಪಾರವನ್ನು ಆರಂಭಿಸಲು ಇದು ಸಕಾಲವಲ್ಲ. ಕಷ್ಟಪಟ್ಟು ದುಡಿದಲ್ಲಿ ಜೀವನದಲ್ಲಿ ಉನ್ನತಿ ಕಂಡುಬರುತ್ತದೆ. ಮನರಂಜನೆ ಮರೆತು ವಿದ್ಯಾರ್ಥಿಗಳು ಕಲಿಕೆಯಲ್ಲಿ ಉತ್ತಮ ಸಾಧನೆ ಮಾಡುವಿರಿ. ಹಣಕಾಸಿನ ವ್ಯವಹಾರದಲ್ಲಿ ಮಧ್ಯಸ್ಥಿಕೆ ವಹಿಸದಿರಿ. ಕಾರ್ಮಿಕರಿಗೆ ನಿರೀಕ್ಷಿತ ಸಹಾಯ ದೊರಯಲಿದೆ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಹಳದಿ ಬಣ್ಣ

ಕುಂಭ

ಹಠದ ಗುಣದಿಂದಾಗಿ ಕುಟುಂಬದ ಕೆಲಸ ಕಾರ್ಯಗಳಲ್ಲಿ ಹಿನ್ನೆಡೆ ಉಂಟಾಗುತ್ತದೆ. ಉದ್ಯೋಗದಲ್ಲಿನ ಸವಾಲುಗಳು ಮರೆಯಾಗಲಿವೆ. ವಿರೋಧಿಗಳನ್ನು ಯಶಸ್ವಿಯಾಗಿ ಎದುರಿಸುವಿರಿ. ವ್ಯಾಪಾರ ವ್ಯವಹಾರಗಳು ಸಣ್ಣಮಟ್ಟವಾದರೂ ಉತ್ತಮ ಲಾಭ ಗಳಿಸುವಿರಿ. ವಿದ್ಯಾರ್ಥಿಗಳು ನಿರೀಕ್ಷಿಸಿದ ಯಶಸ್ಸು ಗಳಿಸುತ್ತಾರೆ. ಸ್ವಂತ ಕೆಲಸ ಕಾರ್ಯಗಳಲ್ಲಿನ ಯಶಸ್ಸಿನ ಗುಟ್ಟನ್ನು ಸದಾ ಕಾಪಾಡುವಿರಿ. ಸೋದರನ ಜೊತೆಗಿನ ಮನಸ್ತಾಪವು ಕೊನೆಗೊಳ್ಳಲಿದೆ. ತಂದೆಯವರ ವ್ಯಾಪಾರದ ಯಶಸ್ಸಿಗೆ ಕಾರಣರಾಗುವಿರಿ. ಅನಾವಶ್ಯಕವಾಗಿ ಕೆಲಸ ಕಾರ್ಯಗಳನ್ನು ಮುಂದೂಡದಿರಿ. ಸಾಲದ ವ್ಯವಹಾರ ಬೇಡ. ಕುಟುಂಬದ ಮಂಗಳ ಕಾರ್ಯವೊಂದರ ನೇತೃತ್ವ ವಹಿಸುವಿರಿ.

ಪರಿಹಾರ : ಸಾಧು ಸಂತರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಹಸಿರು ಬಣ್ಣ

ಮೀನ

ಕುಟುಂಬದಲ್ಲಿ ಹೊಸ ನಿರೀಕ್ಷೆ ಇರುವ ಕಾರಣ ಸಂತಸ ತುಂಬಿರುತ್ತದೆ. ಉದ್ಯೋಗದಲ್ಲಿ ಯಾವುದೇ ವಿಚಾರವೆಂದರೂ ಹೆಚ್ಚಿನ ಪ್ರಯತ್ನದಿಂದ ಯಶಸ್ಸನ್ನು ಗಳಿಸಬಹುದು. ಹಣಕಾಸಿನ ವಿಚಾರದಲ್ಲಿ ಕುಟುಂಬದ ಸದಸ್ಯರ ಸಹಾಯ ದೊರೆಯುತ್ತದೆ. ಅದೃಷ್ಟದಿಂದ ವಿದ್ಯಾರ್ಥಿಗಳ ಆಶೋತ್ತರಗಳು ನೆರವೇರಲಿವೆ. ಹಣಕಾಸಿನ ತೊಂದರೆ ಬಾರದು. ಸ್ವಂತ ಉದ್ಧಿಮೆಯನ್ನು ಆರಂಭಿಸುವ ಮಾತುಕತೆ ನಡೆಸುವಿರಿ. ಅಶಕ್ತರ ಜೀವನಕ್ಕೆ ಆಧಾರವಾಗುವಿರಿ. ಆಧುನಿಕ ತಂತ್ರಜ್ಞಾನ ಆಧಾರಿತ ಸಂಸ್ಥೆಯ ಉದ್ಯೋಗ ಇದ್ದಲ್ಲಿ ವಿದೇಶ ಪ್ರಯಾಣ ಮಾಡುವಿರಿ. ಹೊಸ ವಾಹನವನ್ನು ಕೊಳ್ಳುವಿರಿ. ಚಿನ್ನ ಮತ್ತು ಬೆಳ್ಳಿಯ ವ್ಯಾಪಾರದಲ್ಲಿ ಹೇರಳ ಲಾಭವಿರುತ್ತದೆ.

ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ನೀಲಿ ಬಣ್ಣ

--------------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).