ಕನ್ನಡ ಸುದ್ದಿ  /  Astrology  /  Tomorrow Horoscope Astrology Prediction In Kannada 24 February 2024 Zodiac Signs Kundali News Sts

Tomorrow Horoscope: ಪಡೆದ ಸಾಲ ಮರುಪಾವತಿ ಮಾಡುವಿರಿ, ತೆಗೆದುಕೊಂಡ ನಿರ್ಧಾರ ಬದಲಿಸದಿರಿ; ಶನಿವಾರದ ದಿನಭವಿಷ್ಯ

24 February 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ಇಂದು ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ಶನಿವಾರದ ದಿನಭವಿಷ್ಯ ಹೀಗಿದೆ..

ಶನಿವಾರದ ದಿನಭವಿಷ್ಯ
ಶನಿವಾರದ ದಿನಭವಿಷ್ಯ

ನಾಳೆಯ ರಾಶಿ ಭವಿಷ್ಯ: ʼನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (Tomorrow Horoscope In Kannada, 24 February 2024)

ನಾಳಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಶುಕ್ಲಪಕ್ಷ, ಶನಿವಾರ

ತಿಥಿ : ಹುಣ್ಣಿಮೆ ತಿಥಿಯು ಹಗಲು 04.54 ರವರೆಗು ಇದ್ದು ಆನಂತರ ಪಾಡ್ಯ ಆರಂಭವಾಗುತ್ತದೆ.

ನಕ್ಷತ್ರ : ಮಖೆ ನಕ್ಷತ್ರವು ರಾ.09.30 ವರೆಗು ಇರುತ್ತದೆ. ಆನಂತರ ಪುಬ್ಬ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.39

ಸೂರ್ಯಾಸ್ತ: ಸ.06.26

ರಾಹುಕಾಲ : ಬೆ.09.00 ರಿಂದ ಬೆ.10.30

ರಾಶಿ ಫಲಗಳು

ಮೇಷ

ಶುಚಿ ರುಚಿಯಾದ ಆಹಾರವನ್ನು ಸೇವಿಸಿ. ಕುಟುಂಬದ ಒಳಿತಿಗಾಗಿ ಹಣ ಸಂಗ್ರಹಿಸುವಿರಿ. ಉದ್ಯೋಗದಲ್ಲಿ ಬಹುದಿನದಿಂದ ನಿರೀಕ್ಷಿಸುತ್ತಿದ್ದ ವರ್ತಮಾನವೊಂದು ಬರಲಿದೆ. ಪ್ರಯೋಜನವಿಲ್ಲದ ಮಾತುಕತೆ ಮಾನಸಿಕ ಒತ್ತಡಕ್ಕೆ ಕಾರಣವಾಗಲಿದೆ. ಕೊಂಚ ಸ್ವಾರ್ಥದ ಮನೋಭಾವನೆ ನಿಮ್ಮಲ್ಲಿರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಶಾಂತಿಯಿಂದ ವರ್ತಿಸಿದರೆ ಉತ್ತಮ ಆದಾಯವಿರುತ್ತದೆ. ವಿದ್ಯಾರ್ಥಿಗಳು ಎಲ್ಲರಿಂದ ದೂರವಿದ್ದು ಓದಿಗೆ ಪ್ರಾಮುಖ್ಯತೆಯನ್ನು ನೀಡುತ್ತಾರೆ. ಸಂಬಂಧಿಕರು ಅಥವಾ ಪರಿಚಯದವರ ಜೊತೆಯಲ್ಲಿ ವಿವಾಹ ಆಗಬಹುದು. ದೂರದೂರಿಗೆ ಪ್ರಯಾಣ ಬೆಳೆಸುವ ಅನಿವಾರ್ಯತೆ ಎದುರಾಗುತ್ತದೆ. ಯಾವುದೇ ವಿಚಾರದಲ್ಲಿ ಅಂತಿಮವಾಗಿ ತೀರ್ಮಾನ ತೆಗೆದುಕೊಳ್ಳುವ ಮುನ್ನ ಯೋಚಿಸಿರಿ.

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ತಿಳಿಹಸಿರು ಬಣ್ಣ

ವೃಷಭ

ಸಣ್ಣ ವಿಚಾರವಾದರೂ ಎಚ್ಚರಿಕೆಯಿಂದ ನಿರ್ವಹಿಸಬೇಕು. ಕಡೆಗಣಿಸಿದಲ್ಲಿ ತೊಂದರೆ ಎದುರಾಗಬಹುದು. ಕುಟುಂಬದ ರಕ್ಷಣೆಗೆ ಯಾವುದೇ ತ್ಯಾಗವನ್ನು ಮಾಡಬಲ್ಲಿರಿ. ಭೂ ಸಂಬಂಧಿತ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯವಿರುತ್ತದೆ. ಉದ್ಯೋಗದಲ್ಲಿ ಯಾವುದೇ ಬದಲಾವಣೆ ಕಾಣುವುದಿಲ್ಲ. ಹಠದ ಸ್ವಭಾವವನ್ನು ಬಿಟ್ಟು ಎಲ್ಲರೊಂದಿಗೆ ವಿಶ್ವಾಸದಿಂದ ನಡೆದುಕೊಳ್ಳಿರಿ. ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಮಣಿಯದೆ ಕಲಿಕೆಯಲ್ಲಿ ಮುಂದುವರೆಯಬೇಕು. ಕುಟುಂಬದ ಸದಸ್ಯರ ಆರೋಗ್ಯದಲ್ಲಿ ತೊಂದರೆ ಉಂಟಾಗಬಹುದು. ಅನವಶ್ಯಕ ಚರ್ಚೆಗಳು ಬೇಸರವನ್ನು ಉಂಟುಮಾಡುತ್ತದೆ. ಗಳಿಸಿದ ಹಣವೆಲ್ಲ ಖರ್ಚಾಗುವ ಸಾಧ್ಯತೆ ಇದೆ. ತೋಟಗಾರಿಕೆಯಲ್ಲಿ ಆಸಕ್ತಿ ಮೂಡಬಹುದು.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ನಸುಕೆಂಪು ಬಣ್ಣ

ಮಿಥುನ

ಯಾವುದೇ ಕೆಲಸ ಕಾರ್ಯಗಳಾದರೂ ಕುಟುಂಬದಲ್ಲಿ ಟೀಕೆ ವ್ಯಕ್ತವಾಗುತ್ತದೆ. ಇದರಿಂದಾಗಿ ಮನದಲ್ಲಿ ಬೇಸರವಿರುತ್ತದೆ. ಉದ್ಯೋಗದಲ್ಲಿ ಯಾವುದೇ ಆಸೆ ಆಕಾಂಕ್ಷೆಗಳು ಫಲಿಸುವುದಿಲ್ಲ. ಒಳಒಪ್ಪಂದಗಳಿಂದ ಪರಸ್ಪರ ಉದ್ಯೋಗಿಗಳಲ್ಲಿ ಮನಸ್ತಾಪವಿರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ವರಮಾನಕ್ಕೆ ಕೊರತೆ ಇರುವುದಿಲ್ಲ. ಆದರೆ ಪಾಲುಗಾರಿಕೆಯ ವ್ಯಾಪಾರ ಲಾಭದಾಯಕವಲ್ಲ. ವಿದ್ಯಾರ್ಥಿಗಳು ತಮ್ಮ ಮನಸ್ಸನ್ನು ಹತೋಟಿಯಲ್ಲಿ ಇರಿಸಿ ಕಲಿಕೆಯಲ್ಲಿ ಮುಂದುವರೆಯಬೇಕಾಗುತ್ತದೆ. ಮುಖ್ಯವಾಗಿ ಆತ್ಮವಿಶ್ವಾಸ ಜೀವನವನ್ನು ನಿರ್ಧರಿಸುತ್ತದೆ. ಹಣವನ್ನು ಉಳಿಸಲು ಪ್ರಯತ್ನಿಸಿ. ನಿಮ್ಮಲ್ಲಿರುವ ಹಾಸ್ಯದ ಮನೋಭಾವನೆ ಎಲ್ಲ ನೋವನ್ನು ಮರೆಸುತ್ತದೆ. ಧ್ಯಾನ ಮಾರ್ಗದಲ್ಲಿ ನಡೆಯಲು ಗುರುವೊಬ್ಬರು ದೊರೆಯಲಿದ್ದಾರೆ.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ ಬಣ್ಣ

ಕಟಕ

ಕುಟುಂಬದಲ್ಲಿ ದೊರೆಯುವ ಬೆಂಬಲ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಕುಟುಂಬದ ಕೆಲಸ ಕಾರ್ಯಗಳು ಸುಸೂತ್ರವಾಗಿ ಸಾಗಲಿದೆ. ಉದ್ಯೋಗದಲ್ಲಿ ಉಪಯೋಗಕಾರಿ ಬದಲಾವಣೆಗಳು ಸಂಭವಿಸಲಿವೆ. ಖ್ಯಾತ ಸಂಸ್ಥೆಯಲ್ಲಿ ಸೇವೆ ಸಲ್ಲಿಸುವ ಅವಕಾಶವೂ ದೊರೆಯಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ನಷ್ಟದ ಸಂಭವ ಇರುವುದಿಲ್ಲ. ಯೋಚಿಸಿ ತೀರ್ಮಾನವನ್ನು ಕೈಗೊಂಡರೆ ಯಾವುದೇ ತೊಂದರೆ ಕಂಡು ಬರದು. ವಿದ್ಯಾರ್ಥಿಗಳು ತಮ್ಮ ಕರ್ತವ್ಯಕ್ಕೆ ಆದ್ಯತೆ ನೀಡುತ್ತಾರೆ. ಏಕಾಂಗಿತನವನ್ನು ಧನಾತ್ಮಕವಾಗಿ ಬಳಸಿಕೊಳ್ಳಬಲ್ಲರು. ಬಹುದಿನದ ಹಿಂದೆ ಪಡೆದ ಹಣವನ್ನು ಮರುಪಾವತಿ ಮಾಡುವಿರಿ. ಅತಿಯಾದ ಆತ್ಮಭಿಮಾನ ಸಮಸ್ಯೆಗೆ ಕಾರಣವಾಗಬಹುದು. ನಯ ವಿನಯದಿಂದ ಎಲ್ಲರ ಮನಸ್ಸನ್ನು ಗೆಲ್ಲಲು ಪ್ರಯತ್ನಿಸಿ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಖಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಹಾಲಿನ ಬಣ್ಣ

ಸಿಂಹ

ಅವಿರತ ಕೆಲಸ ಕಾರ್ಯಗಳ ಕಾರಣ ವಿಶ್ರಾಂತಿಯನ್ನು ಬಯಸುವಿರಿ. ಅವಶ್ಯಕತೆ ಇರುವಂತಹ ಕೆಲಸಗಳಿಗೆ ಮಾತ್ರ ಗಮನ ನೀಡುವಿರಿ. ಕುಟುಂಬದ ಸದಸ್ಯರ ಸಂಪೂರ್ಣ ಬೆಂಬಲ ದೊರೆಯುತ್ತದೆ. ಸ್ನಾಯುಗಳ ಸೆಳೆತದ ತೊಂದರೆ ಉಂಟಾಗಬಹುದು. ಉದ್ಯೋಗಸ್ಥರು ಅನಿವಾರ್ಯವಾಗಿ ವೃತ್ತಿ ಬದಲಾವಣೆ ಮಾಡುತ್ತಾರೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಗಳಿಕೆ ಸಾಧ್ಯ. ವಿದ್ಯಾರ್ಥಿಗಳು ಎಲ್ಲರೊಂದಿಗೆ ಬೆರೆತು ಕಲಿಕೆಯಲ್ಲಿ ಮುಂದುವರೆಯಬೇಕು. ಆರ್ಥಿಕಾಭಿವೃದ್ಧಿಯಲ್ಲಿ ಆತ್ಮೀಯರ ಸಹಭಾಗಿತ್ವ ಮುಖ್ಯವಾಗುತ್ತದೆ. ಯಾರ ಸಲಹೆಯನ್ನು ಕಡೆಗಣಿಸದಿರಿ. ನಿಮ್ಮ ಪ್ರತಿಸ್ಪರ್ಧಿಗಳು ಸಹ ಸ್ನೇಹಕ್ಕೆ ಹಾತೊರೆಯುತ್ತಾರೆ. ಬೇಸರದಿಂದ ಹೊರಬರಲು ಮನರಂಜನ ಕೇಂದ್ರಕ್ಕೆ ತೆರಳುವಿರಿ. ಮಕ್ಕಳ ಆಟ ಪಾಠಗಳು ಸಂತೋಷ ನೀಡಲಿವೆ.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ಕನ್ಯಾ

ಕುಟುಂಬದಲ್ಲಿ ಕೆಲಸದ ಒತ್ತಡವಿದ್ದರೂ ಪರಸ್ಪರ ಒಳ್ಳೆಯ ಸ್ಪಂದನೆ ಕಂಡುಬರುತ್ತದೆ. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ತೋರಬೇಕು. ಕುಟುಂಬದ ಹಿರಿಯರ ಸಹಾಯದಿಂದ ಎದುರಾದ ಸಮಸ್ಯೆಯೊಂದು ಮರೆಯಾಗುವುದು. ಉದ್ಯೋಗದಲ್ಲಿ ಎದುರಾಗುವ ಬದಲಾವಣೆಗಳು ನಿಮ್ಮ ಪರವಾಗಿರುತ್ತದೆ. ಸಮ ವಯಸ್ಕರ ನಡುವೆ ನಾಯಕರಾಗಿ ಬಾಳುವಿರಿ. ಉತ್ತಮ ಆದಾಯವಿದ್ದರೂ ಖರ್ಚುವೆಚ್ಚದ ಮೇಲೆ ಹಿಡಿತ ಸಾಧಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಗಳಿಸಿದ ವರಮಾನವನ್ನು ಉಳಿತಾಯ ಮಾಡುವಿರಿ. ಸಮಯ ವ್ಯರ್ಥ ಮಾಡದೆ ಸಮಾಜಕ್ಕೆ ಉಪಯೋಗವಾಗುವ ಕೆಲಸಗಳನ್ನು ಆರಂಭಿಸುವಿರಿ. ವಿದ್ಯಾರ್ಥಿಗಳು ಸಹಪಾಠಿಗಳು ಮತ್ತು ಶಿಕ್ಷಕರ ಪ್ರಶಂಸೆಯನ್ನು ಗಳಿಸುತ್ತಾರೆ. ಸಾಧ್ಯವಾದಷ್ಟು ತೆಗೆದುಕೊಂಡ ನಿರ್ಧಾರಗಳನ್ನು ಬದಲಿಸದಿರಿ. ಮನರಂಜನೆಗಾಗಿ ಸಮಯವನ್ನು ಮೀಸಲಿಡುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಆಕಾಶನೀಲಿ ಬಣ್ಣ

ತುಲಾ

ಉಪಯೋಗವೆನಿಸುವ ಕೆಲಸ ಕಾರ್ಯಗಳನ್ನು ಆಯ್ಕೆ ಮಾಡುವಿರಿ. ಕುಟುಂಬದ ಕೆಲಸ ಕಾರ್ಯಗಳನ್ನು ಪೂರೈಸಿ ಎಲ್ಲರ ಮನೆಗೆಲ್ಲುವಿರಿ. ದೃಢವಾದ ಮನಸ್ಸು ಮತ್ತು ಧೈರ್ಯ ಜೀವನದಲ್ಲಿ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ. ಯಾವುದೇ ವಿಚಾರವನ್ನು ಪರೀಕ್ಷಿಸಿ ಸೂಕ್ತ ತೀರ್ಮಾನಕ್ಕೆ ಬನ್ನಿರಿ. ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯಮ ಮಟ್ಟದ ವರಮಾನವಿರುತ್ತದೆ. ಉದ್ಯೋಗದಲ್ಲಿ ಯಾವುದೇ ತೊಂದರೆ ಇರುವುದಿಲ್ಲ. ಆದರೆ ಯೋಚಿಸದೆ ಯಾವುದೇ ಯೋಜನೆಯನ್ನು ಅಂತಿಮಗೊಳಿಸದಿರಿ. ವಿದ್ಯಾರ್ಥಿಗಳು ಉತ್ತಮ ಮಟ್ಟದಲ್ಲಿ ಕಲಿಕೆಯನ್ನು ಮುಂದುವರಿಸುತ್ತಾರೆ. ನೆರೆಹೊರೆಯವರೊಂದಿಗೆ ಅನಾವಶ್ಯಕ ವಾದವಿವಾದಗಳು ಎದುರಾಗಬಹುದು. ದಿಢೀರನೆ ವಿವಾಹ ಕಾರ್ಯ ಒಂದು ನಿಶ್ಚಯವಾಗಬಹುದು. ಸ್ವಂತ ಜಮೀನು ಅಥವಾ ಮನೆಯನ್ನು ಕೊಳ್ಳಲು ತಂದೆಯಿಂದ ಸಹಾಯ ದೊರೆಯುತ್ತದೆ. ನಿಮ್ಮ ತಪ್ಪಿಗೆ ಬೇರೆಯವರನ್ನು ದೂರುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ರಕ್ತದ ಬಣ್ಣ

ವೃಶ್ಚಿಕ

ಹಣಕಾಸಿನ ಹೂಡಿಕೆಗಳಿಂದ ಕುಟುಂಬದ ಆದಾಯವು ಹೆಚ್ಚುತ್ತದೆ. ಬಿಡುವಿಲ್ಲದ ಕೆಲಸ ಕಾರ್ಯಗಳು ದೈಹಿಕ ಬಲವನ್ನು ಕುಗ್ಗಿಸುತ್ತದೆ. ಉದ್ಯೋಗದಲ್ಲಿ ನಿಮ್ಮ ಮಾತನ್ನು ಎಲ್ಲರೂ ಒಪ್ಪಬೇಕಾಗುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಲಾಭ ಅಚ್ಚರಿ ಮೂಡಿಸುತ್ತದೆ. ವಿದ್ಯಾರ್ಥಿಗಳು ಆತ್ಮೀಯರ ಸಹಾಯದಿಂದ ಕಲಿಕೆಯಲ್ಲಿ ಉನ್ನತಮಟ್ಟ ತಲುಪುತ್ತಾರೆ. ಕ್ರೀಡಾ ಸ್ಪರ್ಧೆಗಳಲ್ಲಿ ಮೊದಲಿಗರಾಗುತ್ತಾರೆ. ಯಾರ ಮಾತನ್ನು ಗಂಭೀರವಾಗಿ ಪರಿಗಣಿಸದೆ ಮರೆವ ಕಾರಣ ನೆಮ್ಮದಿ ಇರುತ್ತದೆ. ಸ್ವತಂತ್ರವಾಗಿ ಯಾವುದೇ ಕೆಲಸ ಕಾರ್ಯಗಳನ್ನು ನಿರ್ವಹಿಸಬಲ್ಲಿರಿ. ಸಂಗಾತಿಯ ಆಶಯದಂತೆ ಕಿರು ಪ್ರವಾಸ ಕೈಗೊಳ್ಳುವಿರಿ. ಮಕ್ಕಳ ಬಗ್ಗೆ ಹೆಮ್ಮೆ ಮತ್ತು ಪ್ರೀತಿ ಇರುತ್ತದೆ. ಸಾಲದ ವ್ಯವಹಾರದಿಂದ ಸಮಸ್ಯೆ ಉದ್ಭವಿಸಬಹುದು.

ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಬಿಸಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಎಲೆಹಸಿರು ಬಣ್ಣ

ಧನಸ್ಸು

ಕುಟುಂಬದ ಧಾರ್ಮಿಕ ಕಾರ್ಯಕ್ರಮವೊಂದರ ನೇತೃತ್ವ ವಹಿಸುವಿರಿ. ನಿಮ್ಮ ರೀತಿ ನೀತಿಗೆ ಎಲ್ಲರೂ ಮಾರುಹೋಗುತ್ತಾರೆ. ಯಾವುದೇ ಸಂದರ್ಭವಾದರೂ ನಿಮ್ಮ ಅನುಕೂಲಕ್ಕೆ ತಕ್ಕಂತೆ ಬದಲಾಯಿಸಿಕೊಳ್ಳಬಲ್ಲಿರಿ. ಬೇಗನೆ ಕೋಪ ಬಂದರು ಆತ್ಮೀಯರ ಮೇಲಿನ ಪ್ರೀತಿ ಕುಂದುವುದಿಲ್ಲ. ಉದ್ಯೋಗದಲ್ಲಿ ಜಯ ಅಪಜಯಗಳನ್ನು ಒಂದೇ ರೀತಿಯಲ್ಲಿ ಸ್ವೀಕರಿಸುವಿರಿ. ವ್ಯಾಪಾರ ವ್ಯವಹಾರಗಳು ನಿಮ್ಮ ಆಸಕ್ತಿಗೆ ತಕ್ಕಂತೆ ನಡೆಯಲಿದೆ. ಹಣದ ತೊಂದರೆ ಕಂಡು ಬರುವುದಿಲ್ಲ. ಆರೋಗ್ಯದ ಬಗ್ಗೆ ಎಚ್ಚರವಿರಬೇಕು. ವಿದ್ಯಾರ್ಥಿಗಳು ತಮ್ಮ ಓದಿನ ನಡುವೆ ಬೇರೆಯವರಿಗೂ ಸಹಾಯ ಮಾಡುತ್ತಾರೆ. ಜೀವನದ ಹಲವು ಸಮಸ್ಯೆಗಳು ಬಗೆಹರಿಯುತ್ತವೆ. ಅಸಮಾಧಾನಗೊಂಡ ಜನರನ್ನು ಸುಲಭವಾಗಿ ಗೆಲ್ಲಬಲ್ಲಿರಿ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕೇಸರಿ ಬಣ್ಣ

ಮಕರ

ಕುಟುಂಬದಲ್ಲಿನ ಬೇಜವಾಬ್ದಾರಿಯತನ ಕಿರಿಕಿರಿಗೆ ಕಾರಣವಾಗುತ್ತದೆ. ನಿಮ್ಮ ಪ್ರಯತ್ನದಿಂದ ಕುಟುಂಬವು ಸರಿಹಾದಿಗೆ ಬರಲಿದೆ. ತಡವಾದರೂ ಮಾಡುವ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುತ್ತದೆ. ಉದ್ಯೋಗದಲ್ಲಿ ಪ್ರತಿಯೊಬ್ಬರು ನಿಮ್ಮನ್ನು ಅವಲಂಬಿಸುತ್ತಾರೆ. ಅವಶ್ಯಕತೆ ಇದ್ದಲ್ಲಿ ಉದ್ಯೋಗವನ್ನು ಬದಲಿಸುವ ಪ್ರಯತ್ನ ಮಾಡಿರಿ. ವ್ಯಾಪಾರ ವ್ಯವಹಾರಗಳಲ್ಲಿ ಆತ್ಮೀಯರ ನಡುವೆ ಸಂಘರ್ಷ ಉಂಟಾಗಬಹುದು. ವಾದ ಪ್ರತಿವಾದಗಳಿಗೆ ಅವಕಾಶ ನೀಡದೆ ಶಾಂತಿಯಿಂದ ಸಮಸ್ಯೆಯನ್ನು ಗೆಲ್ಲುವಿರಿ. ವಿದ್ಯಾರ್ಥಿಗಳು ಕಲಿಕೆಯ ನಡುವೆ ವಿಶ್ರಾಂತಿಯ ಮೊರೆ ಹೋಗುತ್ತಾರೆ. ವಿದ್ಯೆಗಿಂತಲೂ ಬುದ್ಧಿಶಕ್ತಿಯಿಂದ ಯಾವುದೇ ಅಡೆತಡೆಗಳನ್ನು ಹಿಮ್ಮೆಟ್ಟಿಸುವಿರಿ. ಸಂತಾನ ಲಾಭವಿದೆ. ಮಾಡುವ ಕೆಲಸಕ್ಕೆ ಪ್ರತ್ಯುಪಕಾರದ ಬದಲು ಹೊಗಳಿಕೆಯನ್ನು ನಿರೀಕ್ಷಿಸುವಿರಿ.

ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಕುಂಭ

ಕುಟುಂಬದ ಹಿರಿಯರ ಆರೋಗ್ಯದಲ್ಲಿ ಏರಿಳಿತ ಕಂಡುಬರುತ್ತದೆ. ಈ ಕಾರಣದಿಂದ ಮನಸ್ಸಿನ ನೆಮ್ಮದಿ ಮರೆಯಾಗುತ್ತದೆ. ಹಣದ ಅಗತ್ಯವು ಹೆಚ್ಚಾಗುತ್ತದೆ. ವಿಧಿಇಲ್ಲದೆ ಕೂಡಿಟ್ಟ ಹಣವನ್ನು ಖರ್ಚು ಮಾಡುವಿರಿ. ಉದ್ಯೋಗದಲ್ಲಿ ಆಂತರಿಕ ಕಲಹವು ಹೆಚ್ಚಾಗಬಹುದು. ವಿದ್ಯಾರ್ಥಿಗಳು ಏಕಾಂಗಿಯಾಗಿ ಕುಳಿತು ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಹೊಸ ವಾಹನವನ್ನು ಕೊಳ್ಳಲು ತೀರ್ಮಾನಿಸುವಿರಿ. ಸಂಗಾತಿಯ ಮಧ್ಯಸ್ಥಿಕೆಯಿಂದ ಹಣದ ವಿವಾದ ಒಂದು ಬಗೆಹರಿಯುತ್ತದೆ. ಹಣದ ಕೊರತೆ ನೀಗಿಸಲು ಕಮಿಷನ್ ಆಧಾರಿತ ವ್ಯಾಪಾರವನ್ನು ಆರಂಭಿಸುವಿರಿ. ದೂರದ ಬಂಧುವೊಬ್ಬರು ಹಣದ ಸಹಾಯ ಮಾಡಲಿದ್ದಾರೆ. ಕುಟುಂಬದ ಎಲ್ಲರೊಡನೆ ಯಾತ್ರಾ ಸ್ಥಳಕ್ಕೆ ಭೇಟಿ ನೀಡುವಿರಿ. ಅವಿವಾಹಿತರಿಗೆ ವಿವಾಹ ಯೋಗವಿದೆ. ನಿಧಾನ ಗತಿಯಲ್ಲಿ ನಿಮ್ಮ ಆಲೋಚನೆಗಳು ಸಾಕಾರಗೊಳ್ಳಲಿವೆ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕೆಂಪು ಬಣ್ಣ

ಮೀನ

ಕುಟುಂಬದ ಆಗುಹೋಗುಗಳ ಬಗ್ಗೆ ವಿಶೇಷ ಗಮನ ನೀಡುವಿರಿ. ಕುಟುಂಬದಲ್ಲಿ ಆತ್ಮವಿಶ್ವಾಸವು ಹೆಚ್ಚುತ್ತದೆ. ಉದ್ಯೋಗದಲ್ಲಿ ಆತಂಕದ ಕ್ಷಣ ಎದುರಾದರೂ ಸೂಕ್ತ ಪರಿಹಾರ ಕಂಡುಹಿಡಿಯಿರಿ. ಹಣಕಾಸಿನ ಕೊರತೆಯಿಂದ ಹೊರಬರಲು ಉಪವೃತ್ತಿಯನ್ನು ಆರಂಭಿಸುವಿರಿ. ಆಕರ್ಷಕವಾಗಿ ತೋರುವ ವಸ್ತುಗಳನ್ನು ಕೊಳ್ಳುವಿರಿ. ಅನಾವಶ್ಯಕ ಖರ್ಚು ವೆಚ್ಚಗಳು ಮಾನಸಿಕ ಒತ್ತಡಕ್ಕೆ ಕಾರಣವಾಗುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯವಿದ್ದರೂ ಹಣವನ್ನುಉಳಿಸಿಕೊಳ್ಳಲಾರದೆ ಹೋಗುವಿರಿ. ವಿದ್ಯಾರ್ಥಿಗಳು ಅರಮನಸ್ಸಿನಿಂದ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಹೆಚ್ಚಿನ ಪ್ರಯತ್ನದಿಂದ ಗುರಿ ತಲುಪುವರು. ಸಂಪೂರ್ಣ ವಿವೇಚನೆಗೆ ತೆಗೆದುಕೊಳ್ಳದೆ ಯಾವುದೇ ವಿಚಾರವನ್ನು ಒಪ್ಪಿಕೊಳ್ಳುವುದಿಲ್ಲ. ಆತ್ಮವಿಶ್ವಾಸದಿಂದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಲ್ಗೊಳ್ಳುವುದು ಒಳ್ಳೆಯದು.

ಪರಿಹಾರ : ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನೇರಳೆ ಬಣ್ಣ

-------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).