ಕನ್ನಡ ಸುದ್ದಿ  /  Astrology  /  Tomorrow Horoscope Astrology Prediction In Kannada 25 March 2024 Zodiac Signs Kundali News Sts

Tomorrow Horoscope: ಅಧಿಕಾರ ಗಳಿಸುವ ಆಸೆ ನನಸಾಗಲಿದೆ, ರಕ್ತ ಸಂಬಂಧಿಯೊಬ್ಬರು ನಿಮ್ಮ ಆಶ್ರಯ ಬಯಸಿ ಬರಬಹುದು; ಸೋಮವಾರದ ದಿನಭವಿಷ್ಯ

25 March 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ಇಂದು ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ಸೋಮವಾರದ ದಿನಭವಿಷ್ಯ ಹೀಗಿದೆ..

 ಸೋಮವಾರದ ದಿನಭವಿಷ್ಯ
ಸೋಮವಾರದ ದಿನಭವಿಷ್ಯ

ನಾಳೆಯ ರಾಶಿ ಭವಿಷ್ಯ: ʼನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (Tomorrow Horoscope In Kannada, 25 March 2024)

ನಾಳಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲಪಕ್ಷ, ಸೋಮವಾರ

ತಿಥಿ : ಹುಣ್ಣಿಮೆ ಹ.11.18 ರವರೆಗು ಇರುತ್ತದೆ. ಆನಂತರ ಪಾಡ್ಯ ಆರಂಭವಾಗಲಿದೆ.

ನಕ್ಷತ್ರ : ಉತ್ತರ ನಕ್ಷತ್ರವು ಬೆ. 09.43 ರವರೆಗು ಇರುತ್ತದೆ. ಆನಂತರ ಹಸ್ತ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆ.06.21

ಸೂರ್ಯಾಸ್ತ: ಸ.06.30

ರಾಹುಕಾಲ : ಬೆ. 07.30 ರಿಂದ ಬೆ. 09.00

ರಾಶಿ ಫಲಗಳು

ಮೇಷ

ತಪ್ಪು ಕಲ್ಪನೆಯಿಂದ ಕುಟುಂಬದಲ್ಲಿ ಆತಂಕದ ಭಾವನೆ ಇರುತ್ತದೆ. ಉದ್ಯೋಗದಲ್ಲಿ ಸಮರ್ಪಣಾ ಮನೋಭಾವನೆ ತೋರುವಿರಿ. ಇದರ ಫಲವಾಗಿ ಉನ್ನತ ಸ್ಥಾನ ಲಭಿಸುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಕಷ್ಟವಾದರೂ ನಿರೀಕ್ಷಿಸಿದ ಲಾಭ ದೊರೆಯುತ್ತದೆ. ವಿದ್ಯಾರ್ಥಿಗಳು ಹೊಸ ಭರವಸೆಗಳಿಂದ ಆತ್ಮೀಯರ ಭೇಟಿಗೆ ತೆರಳುತ್ತಾರೆ. ಆವಿಷ್ಕಾರದ ಮನೋಭಾವನೆ ಇರುವ ಕಾರಣ ಬಿಡುವು ಇರುವುದಿಲ್ಲ. ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ವರ್ತಿಸುವ ಕಾರಣ ವಿವಾದಗಳಿಂದ ದೂರ ಉಳಿಯುವಿರಿ. ತಾಯಿಯವರ ಸಲಹೆ ತೊಂದರೆಯಿಂದ ಪಾರುಮಾಡುತ್ತದೆ. ಎಲ್ಲರೊಂದಿಗೆ ಆತ್ಮೀಯತೆಯಿಂದ ನಡೆದುಕೊಳ್ಳುವಿರಿ. ಅವಶ್ಯಕತೆ ಇದ್ದಲ್ಲಿ ಸೋದರರಿಗೆ ಹಣದ ಸಹಾಯ ಮಾಡುವಿರಿ.

ಪರಿಹಾರ : ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ವೃಷಭ

ಕುಟುಂಬದಲ್ಲಿ ಬೇಸರದ ಸನ್ನಿವೇಶ ಎದುರಾದರೂ ನಿಮ್ಮಿಂದಾಗಿ ಸಂತಸ ನೆಲೆಸುತ್ತದೆ. ಆತ್ಮೀಯರೊಬ್ಬರ ಸಹಾಯದಿಂದ ನಿಮ್ಮ ಮನ ಒಪ್ಪುವ ಉದ್ಯೋಗ ದೊರೆಯಲಿದೆ. ವ್ಯಾಪಾರ ವ್ಯವಹಾರದಲ್ಲಿ ಮಾತಿನ ಮೂಲಕ ಜನರ ಮನಸ್ಸನ್ನು ಗೆಲ್ಲುವಿರಿ. ಪಾಲುಗಾರಿಕೆಯ ವ್ಯಾಪಾರವಿದ್ದಲ್ಲಿ ಹಣದ ವ್ಯವಹಾರದ ಮೆಲೆ ಹಿಡಿತ ಸಾಧಿಸುವಿರಿ. ವಿದ್ಯಾರ್ಥಿಗಳು ಯಶಸ್ಸಿನ ವಿಶ್ವಾಸದಲ್ಲಿ ಇರಲಿದ್ದಾರೆ. ಭೂವ್ಯವಹಾರದಲ್ಲಿ ದುಡುಕಿನ ನಿರ್ಧಾರ ತೆಗೆದುಕೊಳ್ಳದಿರಿ ಎಚ್ಚರಿಕೆ ಇರಲಿ. ರಕ್ತ ಸಂಬಂಧಿಯೊಬ್ಬರು ನಿಮ್ಮ ಆಶ್ರಯ ಬಯಸಿ ಬರಬಹುದು. ಅವಿವಾಹಿತರಿಗೆ ವಿವಾಹ ಯೋಗವಿದೆ. ಯಾರೊಬ್ಬರನ್ನೂ ಸುಲಭವಾಗಿ ನಂಬದೆ ಸ್ವಂತ ಪ್ರರಿಶ್ರಮವನ್ನು ಆಧರಿಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಎಳನೀರು ಮತ್ತು ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಹಳದಿ ಬಣ್ಣ

ಮಿಥುನ

ತಪ್ಪು ಅಭಿಪ್ರಾಯಗಳು ಮನೆಯನ್ನು ಆವರಿಸಿಕೊಳ್ಳುತ್ತದೆ. ಮುಖ್ಯವಾದ ಸ್ವಂತ ಕೆಲಸವು ಅಪೂರ್ಣಗೊಳ್ಳಲಿದೆ. ಉದ್ಯೋಗದಲ್ಲಿ ದೊರೆಯಬೇಕಾಗಿದ್ದ ವಿಶೇಷ ಸ್ಥಾನಮಾನದ ಬಗ್ಗೆ ಚರ್ಚೆ ನಡೆಯಲಿದೆ. ವ್ಯಾಪಾರ ವ್ಯವಹಾರದ ಆದಾಯದಲ್ಲಿ ಕುಸಿತ ಕಂಡುಬರಲಿದೆ. ಖರ್ಚು ವೆಚ್ಚಗಳು ಹೆಚ್ಚಲಿವೆ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪ್ರವಾಸದಲ್ಲಿ ನಿರತಾರಾಗುತ್ತಾರೆ. ಆಹಾರಕ್ಕೆ ಸಂಬಂಧಿಸಿದ ವ್ಯಾಪಾರ ವಹಿವಾಟನ್ನು ಆರಂಭಿಸುವ ಸೂಚನೆಗಳಿವೆ. ಬೇರೆಯವರ ಹಣಕಾಸಿನ ವಿಚಾರದಲ್ಲಿ ಸಾಕ್ಷೀದಾರರಾಗದಿರಿ. ಅವಿವಾಹಿತರಿಗೆ ವಿವಾಹಯೋಗವಿದೆ. ಹಿರಿಯರಿಂದ ಉಡುಗೊರೆಯಾಗಿ ಆಸ್ತಿ ದೊರೆಯುತ್ತದೆ. ದೇವಾಲಯದ ಜೀರ್ಣೋದ್ದಾರ ಕೆಲಸದಲ್ಲಿ ಭಾಗಿಯಾಗುವಿರಿ.

ಪರಿಹಾರ : ತಾಯಿಯವರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಹಸಿರು ಬಣ್ಣ

ಕಟಕ

ಮಕ್ಕಳ ಜವಾಬ್ದಾರಿ ಕಡಿಮೆಯಾದ ಕಾರಣ ಕುಟುಂಬದಲ್ಲಿ ಆತ್ಮೀಯತೆ ಇರಲಿದೆ. ಉದ್ಯೋಗದಲ್ಲಿ ಸಮಯ ವ್ಯರ್ಥವಾಗುತ್ತದೆ. ಎಲ್ಲರ ಮನಸ್ಸನ್ನು ಅರ್ಥಮಾಡಿಕೊಂಡರೆ ತೊಂದರೆ ಬಾರದು. ಹಿರಿಯರ ಅನುಭವದಿಂದ ಪಾಠ ಕಲಿಯುವಿರಿ. ವಿದ್ಯಾರ್ಥಿಗಳು ಜವಾಬ್ದಾರಿಯನ್ನು ಪೂರ್ಣಗೊಳಿಸಿ ನೆಮ್ಮದಿಯಿಂದ ಬಾಳುವಿರಿ. ಮನಸ್ಸಿದ್ದಲ್ಲಿ ಉದ್ಯೋಗವನ್ನು ಬದಲಾಯಿಸಬಹುದು. ಬೇಸರ ಕಳೆಯಲು ಮನರಂಜನಾ ಸ್ಥಳಕ್ಕೆ ತೆರಳುವಿರಿ. ಮಕ್ಕಳಿಗೆ ಸಂಗೀತ ನಾಟ್ಯದಲ್ಲಿ ಆಸಕ್ತಿ ಮೂಡಲಿದೆ. ಪಾಲುಗಾರಿಕೆಯಲ್ಲಿ ಷೇರಿನ ವ್ಯವಹಾರ ಆರಂಭಿಸಿದಲ್ಲಿ ಲಾಭವಿದೆ. ನಡೆಯಲು ಅಶಕ್ತರಾದವರಿಗೆ ಸಹಾಯ ಮಾಡುವಿರಿ. ಆತುರದಿಂದ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳದಿರಿ.

ಪರಿಹಾರ : ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನೀಲಿ ಬಣ್ಣ

ಸಿಂಹ

ಮಕ್ಕಳು ಹಿರಿಯರ ಆಸೆ ಆಕಾಂಕ್ಷೆಗಳನ್ನು ಪೂರೈಸುತ್ತಾರೆ. ಕುಟುಂಬದ ಹಣಕಾಸಿನ ಹೊಣೆ ನಿಮ್ಮದಾಗಲಿದೆ. ಉದ್ಯೋಗದಲ್ಲಿ ನ್ಯಾಯಯುತ ಹಕ್ಕನ್ನು ಪಡೆಯುವಿರಿ. ವ್ಯಾಪಾರ ವ್ಯವಹಾರದಲ್ಲಿ ಅನಿರೀಕ್ಷಿತ ಆದಾಯ ದೊರೆಯುತ್ತದೆ. ಹಣದ ತೊಂದರೆ ಬಾರದು. ವಿದ್ಯಾರ್ಥಿಗಳು ಪ್ರತಿ ವಿಚಾರಗಳಿಗೂ ಹೆಚ್ಚಿನ ಆಸಕ್ತಿ ನೀಡುತ್ತಾರೆ. ಗಣ್ಯ ವ್ಯಕ್ತಿಗಳ ಆಸರೆ ದೊರೆಯುತ್ತದೆ. ದಿನ ನಿತ್ಯದ ಕೆಲಸದಲ್ಲಿ ತೊಂದರೆ ಇರದು. ರಾಜಕೀಯದಲ್ಲಿ ಆಸಕ್ತಿ ಉಂಟಾಗುತ್ತದೆ. ತಂದೆಯವರಿಗೆ ವಂಶದ ಆಸ್ತಿಯ ವಿವಾದ ಸಾಮರಸ್ಯದಲ್ಲಿ ಕೊನೆಯಾಗುತ್ತದೆ. ಹಣದ ಕೊರತೆ ಎದುರಾದಲ್ಲಿ ಸಿಡುಕಿನಿಂದ ವರ್ತಿಸುವಿರಿ. ಮನರಂಜನೆಗಾಗಿ ದೂರದ ಊರಿಗೆ ಪ್ರಯಾಣ ಬೆಳೆಸುವಿರಿ. ಕೋಪ ತೊರೆದು ಶಾಂತಿಯಿಂದ ಕೆಲಸ ಕಾರ್ಯಗಳನ್ನು ಪೂರೈಸುವಿರಿ.

ಪರಿಹಾರ : ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ನೇರಳೆ ಬಣ್ಣ

ಕನ್ಯಾ

ಕುಟುಂಬದ ವಿಚಾರದಲ್ಲಿ ಮುಂಜಾಗರೂಕತೆಯಿಂದ ವರ್ತಿಸುವಿರಿ. ಉದ್ಯೋಗದಲ್ಲಿ ನಿಮ್ಮ ಪ್ರಯತ್ನಕ್ಕೆ ನಿರೀಕ್ಷಿತ ಫಲಿತಾಂಶವನ್ನು ಪಡೆಯುವಿರಿ. ಅತಿ ನಿರೀಕ್ಷೆಯಿಂದ ವ್ಯಾಪಾರವೊಂದನ್ನು ಆರಂಭಿಸುವಿರಿ. ವಿದ್ಯಾರ್ಥಿಗಳು ಯೋಚನೆ ತೊರೆದು ಉನ್ನತ ಕಲಿಕೆಯಲ್ಲಿ ಮುಂದುವರೆಯಲಿದ್ದಾರೆ. ಹಣಕಾಸಿನ ವಿಚಾರದಲ್ಲಿ ಆತ್ಮೀಯರೊಬ್ಬರ ವಿರೋಧವನ್ನು ಎದುರಿಸಬೇಕಾಗುತ್ತದೆ. ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ. ವ್ಯಾಣಿಜ್ಯ ಸಂಕೀರ್ಣದ ಆಡಳಿತದ ಜವಾಬ್ದಾರಿ ದೊರೆಯುತ್ತದೆ. ಜನಸೇವೆಯಲ್ಲಿ ದಿನವನ್ನು ಕಳೆಯುವಿರಿ. ಅವಶ್ಯಕತೆ ಇದ್ದವರಿಗೆ ಹಣದ ಸಹಾಯ ಮಾಡುವಿರಿ. ಉದ್ಯೋಗದಲ್ಲಿ ಆಸಕ್ತಿ ಇರುವುದಿಲ್ಲ. ಒಪ್ಪಿದ ಕೆಲಸವನ್ನಷ್ಟೇ ಮಾಡುವಿರಿ. ದಂಪತಿಗಳ ನಡುವೆ ಅನಾವಶ್ಯಕ ವಾದ ವಿವಾದಗಲಿರಲಿವೆ.

ಪರಿಹಾರ : ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ತುಲಾ

ಕುಟುಂಬದಲ್ಲಿ ಅನುಕೂಲಕರ ಬದಲವಣೆಗಳು ಊಂಟಾಗುತ್ತವೆ. ಉದ್ಯೋಗದಲ್ಲಿ ಉನ್ನತ ಅಧಿಕಾರಿಗಳ ಸಲಹೆಯನ್ನು ಪಾಲಿಸಬೇಕಾಗುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ದೊರೆಯುತ್ತದೆ. ವಿದ್ಯಾರ್ಥಿಗಳು ಕ್ರಿಯಾಶೀಲತೆಯಿಂದ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗುತ್ತದೆ. ಹಣಕಾಸಿನ ವ್ಯವಹಾರವನ್ನು ಏಕಾಂಗಿಯಾಗಿ ನಿರ್ವಹಿಸುವಿರಿ. ಸಂಗಾತಿಯ ಜೊತೆಯಲ್ಲಿ ವಿದೇಶಕ್ಕೆ ಪ್ರಯಾಣ ಬೆಳೆಸುವಿರಿ. ಷ್ಟಾಕ್ ಮತ್ತು ಷೇರಿನ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭಾಂಶ ದೊರೆಯುತ್ತದೆ. ತಾಯಿಯವರ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಸ್ತ್ರೀಯರು ಮನಮೆಚ್ಚುವ ಚಿನ್ನದ ಆಭರಣಗಳನ್ನು ಕೊಳ್ಳುತ್ತಾರೆ.

ಪರಿಹಾರ : ಕೆಂಪು ಬೆಲ್ಲದಿಂದ ಮಾಡಿದ ದ್ರವಾಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ವೃಶ್ಚಿಕ

ಕುಟುಂಬದ ಜವಾಬ್ದಾರಿ ಹೆಚ್ಚುವ ಕಾರಣ ಬೇಸರ ಉಂಟಾಗುತ್ತದೆ. ಉದ್ಯೋಗದ ವಿಚಾರದಲ್ಲಿ ತಪ್ಪು ನಿರ್ಧಾರವನ್ನು ಬದಲಾಯಿಸುವುದಿಲ್ಲ. ವ್ಯಾಪಾರ ವ್ಯವಹಾರದಲ್ಲಿ ಯಾರ ಮಾತನ್ನೂ ಕೇಳದೆ ಸ್ವಂತ ನಿರ್ಧಾರಕ್ಕೆ ಬದ್ದರಾಗುವಿರಿ. ನೇರವಾದ ನಡೆ ನುಡಿ ವಿವಾದಕ್ಕೆ ಕಾರಣವಾಗುತ್ತದೆ. ತಂದೆಯವರ ಆಶ್ರಯದಲ್ಲಿ ವಂಶಾದಾರಿತ ವ್ಯಾಪಾರವನ್ನು ಆರಂಭಿಸುವಿರಿ. ಬಿಡುವಿಲ್ಲದ ಕೆಲಸ ಕಾರ್ಯಗಳಿಂದ ದೇಹಾಲಸ್ಯ ಉಂಟಾಗುತ್ತದೆ. ವ್ಯವಸಾಯ ಮಾಡುವ ಇಚ್ಚೆ ಮೂಡುತ್ತದೆ. ಮನೆಯ ಮುಂದಿನ ಮರ ಗಿಡಗಳನ್ನು ಪೂಷಿಸುವಿರಿ. ಸಣ್ಣ ಪುಟ್ಟ ತಪ್ಪುಗಳನ್ನು ಕ್ಷಮಿಸುವುದಿಲ್ಲ. ನಿಮ್ಮ ಮನಸ್ಸನ್ನು ಅರ್ಥಮಾಡಿಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ.

ಪರಿಹಾರ : ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಬೂದು ಬಣ್ಣ

ಧನಸ್ಸು

ಕುಟುಂಬದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗಲಿದೆ. ಉದ್ಯೋಗದಲ್ಲಿ ಅನುಕೂಲಕರ ಬೆಳವಣಿಗಗಳು ಉಂಟಾಗಲಿವೆ. ಅಧಿಕಾರ ಗಳಿಸುವ ಆಸೆ ನನಸಾಗಲಿದೆ. ಹೊಸ ಜವಾಬ್ದಾರಿನ್ನು ಯಶಸ್ವಿಯಾಗಿ ನಿರ್ವಹಿಸುವಿರಿ. ವ್ಯಾಪಾರ ವ್ಯವಹಾರದಲ್ಲಿ ನಿರ್ದಿಷ್ಠವಾದ ಮನಸ್ಸು ಮುಖ್ಯವಾಗುತ್ತದೆ. ಪಾಲುಗಾರಿಕೆ ಆದಾಯದಲ್ಲಿ ಏರಿತಗಳು ಎದುರಾಗಲಿವೆ. ವಿದ್ಯಾರ್ಥಿಗಳು ಮನರಂಜನೆಯಿಂದಾಗಿ ಒತ್ತಡದಿಂದ ಪಾರಾಗಲಿದ್ದಾರೆ. ಬದಲಾದ ಆಹಾರ ಪದ್ದತಿ ಉತ್ತಮ ಆರೋಗ್ಯ ನೀಡಲಿದೆ. ಅನಾವಶ್ಯಕವಾಗಿ ಯಾವುದೇ ವಿಚಾರವನ್ನು ಮುಂದೂಡದಿರಿ. ನಿಮ್ಮಲ್ಲಿರುವ ಬುದ್ಧಿಶಕ್ತಿಯಿಂದ ಕುಟುಂಬದ ಸಮಸ್ಯೆಯೊಂದು ಪರಿಹಾರವಾಗುತ್ತದೆ. ಕುಟುಂಬದಲ್ಲಿ ನಡೆಯಬೇಕಿದ್ದ ವಿವಾಹಕಾರ್ಯವೊಂದು ಮುಂದೂಡಲ್ಪಡುತ್ತದೆ. ಆದಾಯಕ್ಕೆ ತಕ್ಕಂತಹ ಖರ್ಚು ವೆಚ್ಚಗಳು ಇರುತ್ತವೆ

ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಂದು ಬಣ್ಣ

ಮಕರ

ಕಷ್ಟ ನಷ್ಟ ಮರೆತು ಕುಟುಂಬದ ಎಲ್ಲರೊಂದಿಗೆ ಸಂತಸದಿಂದ ದಿನಕಳೆಯುವಿರಿ. ಉದ್ಯೋಗದಲ್ಲಿ ಕೆಲಸ ಮಾಡುವ ವಿಧಾನ ಎಲ್ಲರಿಗೂ ಮಾದರಿಯಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪರಿಸ್ಥಿತಿಗೆ ತಕ್ಕಂತೆ ತೀರ್ಮಾನವನ್ನು ತೆಗೆದುಕೊಳ್ಳ ಬಲ್ಲಿರಿ. ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನದ ಬಗ್ಗೆ ಮೂಡುತ್ತದೆ. ವಂಶದ ಆಸ್ತಿಯ ವಿಚಾರದಲ್ಲಿ ಸಂಪೂರ್ಣ ಅರಿವಿರುತ್ತದೆ. ಆದಾಯದ ಕೊರತೆ ನೀಗಲು ಕುಲಕಸುಬನ್ನು ಆರಂಭಿಸುವಿರಿ. ವಿದ್ಯಾರ್ಥಿಗಳಿಗೆ ಶುಭಸುದ್ಧಿಯೊಂದು ದೊರೆಯಲಿದೆ. ಕಬ್ಬಿಣದ ವಸ್ತುಗಳ ವ್ಯಾಪಾರವನ್ನು ಆತ್ಮೀಯರ ಜೊತೆ ಆರಂಭಿಸುವಿರಿ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ದೊರೆಯುತ್ತದೆ.

ಪರಿಹಾರ : ತಾಯಿಯವರಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕಪ್ಪು ಬಣ್ಣ

ಕುಂಭ

ಸ್ವಂತ ಇಚ್ಚೆಯಿಂದ ಕುಟುಂಬದ ಜವಾಬ್ದಾರಿ ನಿರ್ವಹಿಸುವಿರಿ. ಮಾತಿನ ಮೋಡಿಯಿಂದ ಕೆಲಸ ಸಾಧಿಸುವಿರಿ. ವಿದ್ಯಾರ್ಥಿಗಳಿಗೆ ವಿದೇಶಕ್ಕೆ ಸಂಬಂಧಿಸಿದ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ಕುಟುಂಬದ ಹಿರಿಯರ ಸಹಾಯದಿಂದ ಸ್ವಂತ ವ್ಯಾಪಾರವೊಂದನ್ನು ಆರಂಭಿಸುವಿರಿ. ಹಣದ ಬಗ್ಗೆ ವ್ಯಾಮೋಹ ಇರದು. ವಿದ್ಯಾರ್ಥಿಗಳು ಮೌನದಿಂದ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಸಮಾಜದ ಮುಖ್ಯಸ್ಥರಾಗುವಿರಿ. ಸೋದರರ ವ್ಯಾಪಾರದಲ್ಲಿ ಸಹಭಾಗಿತ್ವ ಪಡೆಯುವಿರಿ. ಹಣದ ವಿವಾದವೊಂದು ಎದುರಾಗಲಿದೆ. ಆಹಾರ ಸೇವನೆಯ ಬಗ್ಗೆ ಎಚ್ಚರಿಕೆ ಇರಲಿ. ಮೌನವನ್ನು ತೊರೆದು ಮನಬಿಚ್ಚಿ ಮಾತನಾಡಿದಲ್ಲಿ ಯಾವುದೇ ತೊಂದರೆ ಕಾಣದು. ಉತ್ತಮ ಆರೋಗ್ಯವಿರುತ್ತದೆ.

ಪರಿಹಾರ : ಹಾಲಲ್ಲಿಟ್ಟು ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ

ಮೀನ

ಕುಟುಂಬದಲ್ಲಿ ಪ್ರೀತಿ ವಿಶ್ವಾಸ ಮನೆಮಾಡಿರುತ್ತದೆ. ಯಾರೊಬ್ಬರ ಸಲಹೆಯನ್ನೂ ಪರಿಗಣಿಸದೆ ಉದ್ಯೋಗವನ್ನು ಬದಲಿಸುವಿರಿ. ವಿದ್ಯಾರ್ಥಿಗಳು ಬೇರೊಬ್ಬರ ಸಹಾಯದಿಂದ ಕಲಿಕೆಯಲ್ಲಿ ಮುಳುಗುತ್ತಾರೆ. ಕಮಿಷನ್​ ಏಜೆನ್ಸಿ ನಿರ್ವಹಣೆಯಿಂದ ಉತ್ತಮ ಲಾಭ ಗಳಿಸುವಿರಿ. ವಂಶಾಧಾರಿತ ವ್ಯಾಪಾರದಲ್ಲಿ ಒತ್ತಾಯಪೂರ್ವಕವಾಗಿ ಪಾಲೊಳ್ಳುವಿರಿ. ತಂದೆಯಿಂದ ಆಸ್ತಿಯ ಪಾಲು ದೊರೆಯುತ್ತದೆ. ಕೆಲಸ ಕಾರ್ಯಗಳ ಬಗ್ಗೆ ಬಗ್ಗೆ ಯಾರಿಗೂ ತಿಳಿಸುವುದಿಲ್ಲ. ಗುರುಪೀಠದ ಸಂಪೂರ್ಣ ಜವಾಬ್ವಾರಿಯನ್ನು ಹೊರುವಿರಿ. ಮನರಂಜನಾ ಸ್ಥಳಕ್ಕೆ ಪ್ರವಾಸ ಹೋಗುವಿರಿ. ಸಾಕುಪ್ರಾಣಿಗಳ ಬಗ್ಗೆ ಹೆಚ್ಚಿನ ಕರುಣೆ ಪ್ರೀತಿ ತೋರುವಿಎರಿ. ಅನಾವಶ್ಯಕ ಚಿಂತೆಗೆ ಒಳಗಾಗುವಿರಿ.

ಪರಿಹಾರ : ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ಕಿತ್ತಳೆ ಬಣ್ಣ

-------------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).