ಕನ್ನಡ ಸುದ್ದಿ  /  Astrology  /  Tomorrow Horoscope Astrology Prediction In Kannada 26 February 2024 Zodiac Signs Kundali News Sts

Tomorrow Horoscope: ದಂಪತಿ ನಡುವೆ ಅನಗತ್ಯ ವಾದವಿವಾದ, ಸಾಲ ಕೊಡಲು-ಪಡೆಯಲು ಒಳ್ಳೆ ಸಮಯವಲ್ಲ; ಸೋಮವಾರದ ದಿನಭವಿಷ್ಯ

26 February 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ಇಂದು ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ಸೋಮವಾರದ ದಿನಭವಿಷ್ಯ ಹೀಗಿದೆ..

ಸೋಮವಾರದ ದಿನಭವಿಷ್ಯ
ಸೋಮವಾರದ ದಿನಭವಿಷ್ಯ

ನಾಳೆಯ ರಾಶಿ ಭವಿಷ್ಯ: ʼನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (Tomorrow Horoscope In Kannada, 26 February 2024)

ನಾಳಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಕೃಷ್ಣಪಕ್ಷ, ಸೋಮವಾರ

ತಿಥಿ : ಬಿದಿಗೆ ತಿಥಿಯು ರಾ.09.05 ರವರೆಗು ಇದ್ದು ಆನಂತರ ತದಿಗೆ ಆರಂಭವಾಗುತ್ತದೆ.

ನಕ್ಷತ್ರ : ಉತ್ತರ ನಕ್ಷತ್ರವು ರಾ.02.38 ವರೆಗು ಇರುತ್ತದೆ. ಆನಂತರ ಹಸ್ತ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.35

ಸೂರ್ಯಾಸ್ತ: ಸ.06.26

ರಾಹುಕಾಲ : ಬೆ.07.30 ರಿಂದ ಬೆ.09.00

ರಾಶಿ ಫಲಗಳು

ಮೇಷ

ಕುಟುಂಬದಲ್ಲಿನ ಕೆಲಸ ಕಾರ್ಯಗಳು ಸರಾಗವಾಗಿ ನಡೆಯಲಿವೆ. ಸ್ತ್ರೀಯರು ಆರೋಗ್ಯದ ಕಡೆ ಗಮನ ನೀಡಬೇಕು. ಕೈಕಾಲುಗಳಿಗೆ ಸಂಬಂಧಿಸಿದ ತೊಂದರೆ ಕಂಡುಬರುತ್ತದೆ. ಗರ್ಭಿಣಿಯರಿಗೆ ಉತ್ತಮ ದಿನವಲ್ಲ. ಉದ್ಯೋಗದಲ್ಲಿ ನೆಚ್ಚಿನ ವ್ಯಕ್ತಿಯೊಬ್ಬರ ಆಗಮನ ಹೊಸ ಹುರುಪು ನೀಡುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಹೊಸ ಯೋಜನೆಗಳಲ್ಲಿ ಹಣವನ್ನು ಹೂಡಿಕೆ ಮಾಡುವಿರಿ. ಹಣದ ಕೊರತೆ ಇರುವುದಿಲ್ಲ. ಕುಟುಂಬದ ಹಿರಿಯರ ಹೆತ್ತವರ ಆರೋಗ್ಯದ ಬಗ್ಗೆ ಚಿಂತೆ ಇರುತ್ತದೆ. ದಾಂಪತ್ಯದಲ್ಲಿ ಪರಸ್ಪರ ಹೊಂದಾಣಿಕೆ ಇರುತ್ತದೆ. ವಿದ್ಯಾರ್ಥಿಗಳು ಸಹಪಾಠಿಗಳ ಸಹಕಾರ ದೊರೆಯುತ್ತದೆ. ಸಂತೋಷ ಮತ್ತು ಅಚ್ಚರಿಯ ದಿನವಾಗಲಿದೆ. ಕೆಲಸ ಕಾರ್ಯಗಳನ್ನು ಆರಂಭಿಸುವ ಮುನ್ನ ಆತ್ಮೀಯರೊಂದಿಗೆ ಚರ್ಚಿಸುವುದು ಒಳ್ಳೆಯದು. ಸ್ವಂತ ಕೆಲಸಕಾರ್ಯಗಳು ಅಪೂರ್ಣಗೊಳ್ಳಲಿವೆ. ಅನಿರೀಕ್ಷಿತ ಧನಲಾಭವಿದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೆಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ನೀಲಿಮಿಶ್ರಿತಬಿಳಿ ಬಣ್ಣ

ವೃಷಭ

ಮನಸ್ಸಿಗೆ ಹಿತವೆನಿಸುವ ಕೆಲಸವನ್ನಷ್ಟೇ ಮಾಡಲಿಚ್ಚಿಸುವಿರಿ. ಕುಟುಂಬದಲ್ಲಿ ಒಮ್ಮತ ನೆಲೆಸಿರುತ್ತದೆ. ದುಡುಕದೇ ಶಾಂತರೀತಿಯಲ್ಲಿ ಕೆಲಸ ಕಾರ್ಯಗಳನ್ನು ನಿರ್ವಹಿಸುವಿರಿ. ಕೆಲವರಿಗೆ ಹಣದ ಸಹಾಯ ಮಾಡಬೇಕಾಗುತ್ತದೆ. ಉದ್ಯೋಗದಲ್ಲಿ ಯಾವುದೇ ನಿರೀಕ್ಷೆಗಳಿಲ್ಲದೆ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಕೊಂಚ ತಡವಾಗಿ ಪಲಿತಾಂಶಗಳು ಲಭ್ಯವಾಗುತ್ತವೆ. ವ್ಯಾಪಾರ ವ್ಯವಹಾರದಲ್ಲಿ ಮಧ್ಯಮಗತಿಯ ಆದಾಯ ಇರುತ್ತದೆ. ಅನ್ಯರು ನೀಡುವ ಭರವಸೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡದಿರಿ. ವಿದ್ಯಾರ್ಥಿಗಳು ವಿನಮ್ರತೆಯಿಂದ ಅಭ್ಯಾಸದಲ್ಲಿ ನಿರತರಾಗಲಿದ್ದಾರೆ. ದಂಪತಿಗಳ ನಡುವೆ ಅನಾವಶ್ಯಕ ವಾದ ವಿವಾದಗಳು ಎದುರಾಗಲಿವೆ. ಆರೋಗ್ಯದ ಬಗ್ಗೆ ಗಮನವಿಡಿ. ಸಂಗಾತಿಯ ಸಹಾಯ ಸಹಕಾರದಿಂದಾಗಿ ನಿಮ್ಮ ಕೆಲಸ ಕಾರ್ಯಗಳು ಸುಗಮವಾಗಿ ನಡೆಯಲಿವೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಹಾಲಿನ ಬಣ್ಣ

ಮಿಥುನ

ಕುಟುಂಬದಲ್ಲಿ ಅನಾವಶ್ಯಕ ವಾದ ವಿವಾದಗಳು ಉಂಟಾಗಲಿವೆ. ಮನಸ್ಸಿನಲ್ಲಿ ವೈರಾಗ್ಯದ ಭಾವನೆ ಮೂಡುತ್ತದೆ. ನೆಮ್ಮದಿಯ ಕೊರತೆಯೂ ಇರಲಿದೆ. ಯೋಗ ಪ್ರಾಣಾಯಾಮಗಳ ಸಹಾಯದಿಂದ ಆರೋಗ್ಯವನ್ನು ಕಾಪಾಡಿಕೊಳ್ಳುವಿರಿ. ಉದ್ಯೋಗದಲ್ಲಿನ ತಪ್ಪು ನಿರ್ಧಾರವನ್ನು ಬದಲಿಸಲು ನಿಮ್ಮ ಅಗತ್ಯತೆ ಬಹಳಷ್ಟು ಇರುತ್ತದೆ. ಉನ್ನತ ಅಧಿಕಾರಿಗಳಿಗೆ ಸರಿ ಸಮಾನವಾದ ಸ್ಥಾನಮಾನ ದೊರೆಯುತ್ತದೆ. ಬುದ್ಧಿವಂತಿಕೆಯಿಂದ ವ್ಯಾಪಾರ ವ್ಯವಹಾರಗಳಲ್ಲಿ ಉಂಟಾಗುವ ಹಾನಿಯನ್ನು ಲಾಭವಾಗಿ ಪರಿವರ್ತಿಸುವಿರಿ. ವಿದ್ಯಾರ್ಥಿಗಳು ಸ್ನೇಹಿತರೊಂದಿಗೆ ಮನರಂಜನೆಯಲ್ಲಿ ವೇಳೆ ಕಳೆಯುತ್ತಾರೆ. ಆದರೆ ಸಂಗಾತಿಯಿಂದ ಸಹಾಯ ಸಹಕಾರ ಕಂಡುಬರುತ್ತವೆ. ಹೆಚ್ಚಿನ ಹಣವನ್ನು ಸಂಪಾದಿಸುವ ಸಲುವಾಗಿ ಪಾರುಗಾರಿಕೆಯ ವ್ಯಾಪಾರವನ್ನು ಆರಂಭಿಸುವಿರಿ.

ಪರಿಹಾರ : ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ಕಟಕ

ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ಆಸಕ್ತಿ ಇರುವುದಿಲ್ಲ. ಅನಿವಾರ್ಯವಾಗಿ ಎದುರಾಗುವ ಸಮಸ್ಯೆಗಳಿಗೆ ಬಗೆಹರಿಸುವಿರಿ. ಕುಟುಂಬದ ಸ್ಥಿತಿಗತಿಗಳ ಸುಧಾರಣೆಗೆ ಪರಿಶ್ರಮಿಸುವಿರಿ. ಸ್ವಂತ ಕೆಲಸ ಕಾರ್ಯಗಳಿಗೆ ಮೊದಲ ಆದ್ಯತೆ ತೋರುವಿರಿ. ಉದ್ಯೋಗದಲ್ಲಿ ಯಾವುದೇ ಬದಲಾವಣೆಗಳು ಕಾಣುವುದಿಲ್ಲ. ಮನಸ್ಸಿಗೆ ಮುದ ನೀಡುವ ಮನರಂಜನ ಕಾರ್ಯಕ್ರಮಗಳಿಗೆ ತೆರಳುವಿರಿ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಅಭ್ಯಾಸದಲ್ಲಿ ಮುಂದುವರೆಯುವರು. ಹಣದ ಕೊರತೆ ಇದ್ದರೂ ಆದಾಯಕ್ಕೆ ತೊಂದರೆ ಇರದು. ಸಂಗೀತ ಸಾಹಿತ್ಯದಲ್ಲಿ ಆಸಕ್ತಿ ಮೂಡುತ್ತದೆ. ಸಾಮರ್ಥ್ಯಕ್ಕೆ ಸವಾಲೆನಿಸುವ ವಿವಾದಗಳು ಎದುರಾಗುತ್ತವೆ. ಅವಿವಾಹಿತರಿಗೆ ವಿವಾಹ ಯೋಗವಿದೆ. ಅನಾವಶ್ಯಕ ಖರ್ಚು ವೆಚ್ಚಗಳನ್ನು ಕಡಿಮೆ ಮಾಡಲು ಪ್ರಯತ್ನಿಸುವಿರಿ.

ಪರಿಹಾರ : ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಆಕಾಶ ನೀಲಿ ಬಣ್ಣ

ಸಿಂಹ

ಬೇಸರದಿಂದ ಹೊರಬರಲು ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ತೊಡಗುವಿರಿ. ಕುಟುಂಬದಲ್ಲಿ ಅನುಕೂಲಕರ ವಾತಾವರಣ ಕಂಡು ಬರುತ್ತದೆ. ವಿಶೇಷವಾಗಿ ಮಾನಸಿಕ ಸ್ಥಿಮಿತವನ್ನು ಗಳಿಸಲು ಧ್ಯಾನದ ಮಾರ್ಗವನ್ನು ಆಯ್ದುಕೊಳ್ಳೂವಿರಿ. ಕುಟುಂಬದವರ ಜೊತೆಯಲ್ಲಿ ಪಾಲುಗಾರಿಕೆಯ ವ್ಯಾಪಾರವನ್ನು ಆರಂಭಿಸುವಿರಿ. ಹಣದ ಕೊರತೆ ಕಂಡುಬರುವುದಿಲ್ಲ. ಹಳ್ಳಿ ಜೀವನದಲ್ಲಿ ಆಸಕ್ತಿ ಮೂಡುತ್ತದೆ. ಸ್ವಂತ ಜಮೀನು ಅಥವಾ ಮನೆಯಲ್ಲಿ ಕೊಳ್ಳಲು ಹಣವನ್ನು ವಿನಿಯೋಗಿಸುವಿರಿ. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏಕಾಂಗಿಯಾಗಿ ನಿರ್ವಹಿಸುವಿರಿ. ಅನಿರೀಕ್ಷಿತವಾಗಿ ಆತ್ಮೀಯರ ಸಮಾಗಮವಾಗುತ್ತದೆ. ವಿದ್ಯಾರ್ಥಿಗಳ ಜೀವನದಲ್ಲಿ ಯಾವುದೇ ರೀತಿಯ ಗುರುತರ ಬದಲಾವಣೆಗಳು ಕಾಣುವುದಿಲ್ಲ. ಸಾಲವನ್ನು ಕೊಡಲು ಅಥವಾ ಪಡೆಯಲು ಒಳ್ಳೆಯ ಸಮಯವಲ್ಲ.

ಪರಿಹಾರ : ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ರಕ್ತದ ಬಣ್ಣ

ಕನ್ಯಾ

ಕುಟುಂಬದವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಿರಿ. ನಿರೀಕ್ಷೆಗಿಂತಲೂ ಹೆಚ್ಚಿನ ಹಣದ ಅವಶ್ಯಕತೆ ಉಂಟಾಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯವಿರುತ್ತದೆ. ವಿದ್ಯಾರ್ಥಿಗಳು ಪರೀಕ್ಷೆಯ ಮೇಲೆ ಹೆಚ್ಚಿನ ಗಮನವನ್ನು ಹೊಂದಿರುತ್ತಾರೆ. ಪ್ರಯತ್ನಪಟ್ಟರೆ ಯಾವುದು ಅಸಾಧ್ಯವಲ್ಲ ಎಂದು ಸಾಧಿಸಿ ತೋರಿಸುವಿರಿ. ಸೋದರಿಯ ಜೀವನದಲ್ಲಿ ಪ್ರಮುಖವಾದ ಘಟನೆಯೊಂದು ನಡೆಯಲಿದೆ. ಉದ್ಯೋಗವನ್ನು ಬದಲಾಯಿಸಬಹುದಾದ ಸಾಧ್ಯತೆಗಳಿವೆ. ಆಡುವ ಮಾತಿನ ಮೇಲೆ ಹಿಡಿತವಿರಬೇಕು. ದುಡುಕಿ ಮಾತನಾಡಿದಲ್ಲಿ ಆತ್ಮೀಯರೂ ತಪ್ಪು ಮಾಡಿ ಪಶ್ಚಾತಾಪ ಪಡುವಿರಿ.

ಪರಿಹಾರ : ತಲೆಗೆ ಹಾಲಲ್ಲಿಟ್ಟು ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಎಲೆಹಸಿರು ಬಣ್ಣ

ತುಲಾ

ಎದುರಾಗುವ ಸಮಸ್ಯೆಗಳನ್ನು ಮೀರಿ ಕುಟುಂಬದ ಕೆಲಸ ಕಾರ್ಯಗಳನ್ನು ನಿರ್ವಹಿಸುವಿರಿ. ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ಕೆಲಸ ನಿರ್ವಹಿಸುವಿರಿ. ಉದ್ಯೋಗದಲ್ಲಿ ನಿಮ್ಮ ಕಾರ್ಯ ದಕ್ಷತೆಗೆ ಎಲ್ಲರ ಪ್ರಶಂಸೆ ದೊರೆಯುತ್ತದೆ. ಬಹುಶ: ಉದ್ಯೋಗವನ್ನು ಬದಲಾಯಿಸಬಹುದು. ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ಯಶಸ್ಸು ದೊರೆಯುತ್ತದೆ. ವಿದ್ಯಾರ್ಥಿಗಳು ಚುರುಕುತನದಿಂದ ಕರ್ತವ್ಯ ಪಾಲನೆ ಮಾಡುತ್ತಾರೆ. ಎಲ್ಲರ ಗಮನಸೆಳೆಯುವ ಕೆಲಸವೊಂದನ್ನು ಮಾಡುವಿರಿ. ವಿವಾಹ ನಿಶ್ಚಯವಾಗುವ ಸಾಧ್ಯತೆಗಳಿವೆ. ಖರ್ಚು ವೆಚ್ಚದ ಮೇಲೆ ಗಮನವಿರಲಿ. ಕಣ್ಣಿನ ತೊಂದರೆ ನಿಮ್ಮನ್ನು ಕಾಡಬಹುದು. ಪೂರ್ವ ನಿಯೋಜಿತ ಪ್ರವಾಸವು ಮೊಟಕುಗೊಳ್ಳುತ್ತದೆ.

ಪರಿಹಾರ : ಹಣೆಯಲ್ಲಿ ತಿಲಕವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕೇಸರಿ ಬಣ್ಣ

ವೃಶ್ಚಿಕ

ಕೈಹಿಡಿದ ಕೌಟುಂಬಿಕ ಕೆಲಸ ಕಾರ್ಯಗಳು ಯಶಸ್ವಿ ಆಗುತ್ತವೆ. ಪರಿಚಿತರ ಸಹಾಯದಿಂದ ಉದ್ಯೋಗ ಲಭಿಸುತ್ತದೆ. ಮನೆತನದ ವಿವಾದವೊಂದು ಪರಿಹಾರವಾಗಲಿದೆ. ಹೆಚ್ಚಿನ ಪರಿಸ್ರಮದಿಂದ ಮಾತ್ರ ವಿದ್ಯಾರ್ಥಿಗಳು ಗುರಿ ತಲುಪಲು ಸಾಧ್ಯ. ವಾಣಿಜ್ಯ ಸಂಸ್ಥೆಗೆ ಅಗತ್ಯವಾದ ಯಂತ್ರೋಪಕರಣಗಳ ಮಾರಾಟದಲ್ಲಿ ಲಾಭವಿರುತ್ತದೆ. ಅನಾವಶ್ಯಕ ವಾದ ವಿವಾದಗಳನ್ನು ನಂಬದಿರಿ. ಚಾಡಿಮಾತನ್ನು ಕೇಳಿದಲ್ಲಿ ಕುಟುಂಬದ ಸ್ವಾಸ್ಥ್ಯ ಹಾಳಾಗುತ್ತದೆ. ವಾಹನ ಚಾಲನೆ ಮಾಡುವಾಗ ಎಚ್ಚರಿಕೆ ವಹಿಸಿ. ಕಲುಷಿತ ನೀರಿನ ಸೇವನೆಯಿಂದ ಆರೋಗ್ಯದಲ್ಲಿ ತೊಂದರೆ ಉಂಟಾಗುತ್ತದೆ. ಕೃಷಿಕಾರ್ಯದಲ್ಲಿ ಸಹಾಯವಾಗುವ ಉಪಕರಣಗಳ ಅನ್ವೇಷಣೆಗೆ ಎಲ್ಲರ ಸಹಕಾರ ದೊರೆಯುತ್ತದೆ.

ಪರಿಹಾರ: ತಾಯಿಯವರಿಂದ 5 ರೂ ನಾಣ್ಯ ಪಡೆದು ದಿನದ ಕೆಲಸ ಆರಂಭಿಸಿರಿ

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಧನಸ್ಸು

ಕುಟುಂಬದಲ್ಲಿ ನೆಮ್ಮದಿ ಇರುತ್ತದೆ. ನಿಮ್ಮ ಮನಸ್ಸು ಸ್ಥಿಮಿತದಲ್ಲಿ ಇರುವುದಿಲ್ಲ. ಅನಾವಶ್ಯಕ ಕೋಪಕ್ಕೆ ಒಳಗಾಗುವಿರಿ. ಅದೃಷ್ಟವಿದೆ ಆದರೆ ಸಮಯವನ್ನು ಅರಿತು ವರ್ತಿಸುವುದಿಲ್ಲ. ಪ್ರೀತಿ ವಿಶ್ವಾಸದಿಂದ ಎಲ್ಲರ ಜೊತೆ ಬೆರೆತಲ್ಲಿ ಮಹದಾಸೆಯೊಂದು ನೆರವೇರುತ್ತದೆ. ಉದ್ಯೋಗದಲ್ಲಿ ತೊಂದರೆ ಬಾರದು. ವಿದ್ಯಾರ್ಥಿಗಳು ವ್ಯಾಸಂಗದಲ್ಲಿ ಆತ್ಮೀಯರ ಸಹ್ಕಾಯ ಪಡೆಯುತ್ತಾರೆ. ಹಣದ ಆಸೆ ಇರದು. ಆದರೆ ಜೀವನಕ್ಕೆ ಸಾಕಾಗುವಷ್ಟು ಹಣವನ್ನು ಗಳಿಸುವಿರಿ. ವಂಶಾಧಾರಿತ ವೃತ್ತಿಯನ್ನು ಮುಂದುವರಿಸುವಿರಿ. ಧಾರ್ಮಿಕ ಕಾರ್ಯವೊಂದನ್ನು ಯಶಸ್ವಿಯಾಗಿ ನಡೆಸುವಿರಿ. ಮಿತಿ ಇಲ್ಲದ ಆಹಾರ ಸೇವನೆಯಿಂದ ಅಜೀರ್ಣದ ತೊಂದರೆ ಉಂಟಾಗುತ್ತದೆ. ಸೋದರಿಯ ಕುಟುಂಬದಲ್ಲಿ ಅಶಾಂತಿ ಇರುತ್ತದೆ. ಹಿರಿಯರ ಮಾರ್ಗದರ್ಶನ ಇಲ್ಲದೆ ಯಾವುದೇ ಕೆಲಸ ಮಾಡಲಾರಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕೆಂಪು ಬಣ್ಣ

ಮಕರ

ಸಮಯ ಸಂದರ್ಭವನ್ನು ಅರಿತು ವರ್ತಿಸುವ ಕಾರಣ ಸುಖಜೀವನ ನಡೆಸುವಿರಿ. ಕುಟುಂಬದಲ್ಲಿ ನೆಮ್ಮದಿ ಇರುತ್ತದೆ. ವಾಹನಗಳ ದುರಸ್ಥಿ ಮತ್ತು ಮಾರಾಟಕ್ಕೆ ಸಂಬಂಧಿಸಿದ ಉದ್ಯೋಗ ಲಭಿಸುತ್ತದೆ. ಉತ್ತಮ ಅದಾಯವಿರುತ್ತದೆ. ಹಿರಿಯರಿಗೆ ಸಂಬಂಧಿಸಿದ ಆಸ್ತಿಯ ವಿವಾದ ಇರುತ್ತದೆ. ಕೈಕಾಲುಗಳಲ್ಲಿ ನಿಶ್ಯಕ್ತಿ ಉಂಟಾಗುತ್ತದೆ. ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ಉತ್ತಮ ಫಲಿತಾಂಶ ಪಡೆಯುತ್ತಾರೆ. ವಾಸಸ್ಥಳವನ್ನು ಬದಲಾಯಿಸುವಿರಿ. ಕಷ್ಟದ ವೇಳೆ ಸ್ನೇಹಿತರೊಬ್ಬರು ಹಣದ ಸಹಾಯ ಮಾಡುತ್ತಾರೆ. ಎಲ್ಲರನ್ನೂ ಅನುಮಾನದ ದೃಷ್ಠಿಯಲ್ಲಿ ನೋಡುವಿರಿ. ಮನೆಯಲ್ಲಿ ಮಂಗಳಕಾರ್ಯವೊಂದನ್ನು ಯಶಸ್ವಿಯಾಗಿ ನಡೆಸಿಕೊಡುವಿರಿ. ತಾಯಿಯವರ ಜೊತೆಯಲ್ಲಿ ಪಾಲುಗಾರಿಕೆ ವ್ಯಾಪಾರ ಆರಂಭಿಸುವಿರಿ.

ಪರಿಹಾರ: ನಿತ್ಯ ಬಳಸುವ ವಾಹನವನ್ನು ಶುಚಿಗೊಳಿಸಿ ದಿನದ ಕೆಲಸ ಆರಂಭಿಸಿರಿ

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಕುಂಭ

ಅಪರೂಪದ ಪ್ರತಿಭೆಯ ಅನಾವರಣಕ್ಕೆ ವೇದಿಕೆಯೊಂದು ದೊರೆಯಲಿದೆ. ಕುಟುಂಬದಲ್ಲಿ ಹಣದ ವಿವಾದ ಇರುತ್ತದೆ. ತಾಯಿಗೆ ಭೂಮಿಯೊಂದು ಉಡುಗೊರೆಯಾಗಿ ಬರಲಿದೆ. ಬಟ್ಟೆಯ ತಯಾರಿಕೆಯಲ್ಲಿ ಆದಾಯವಿರುತ್ತದೆ. ಕೇಳುವುದೆಲ್ಲಾ ನಿಜ ಎಂದು ನಂಬದಿರಿ. ಉದ್ಯೋಗದಲ್ಲಿ ತೊಂದರೆ ಇರದು. ವಿದ್ಯಾರ್ಥಿಗಳು ಹಠದಿಂದ ಕಲಿಯುವಿಕೆಯಲ್ಲಿ ಮುಂದೆ ಇರುತ್ತಾರೆ. ಹಣಕಾಸಿನ ವಿಚಾರದಲ್ಲಿ ಇಕ್ಕಟ್ಟಿನ ಪರಿಸ್ಥಿತಿಯನ್ನು ಎದುರಿಸುವಿರಿ. ವ್ಯಾಪಾರ ವ್ಯವಹಾರದಲ್ಲಿ ಅಗತ್ಯತೆ ಪೂರೈಸುವಷ್ಟು ಆದಾಯ ಇರುತ್ತದೆ. ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ. ಆರೋಗ್ಯದ ಬಗ್ಗೆ ಗಮನವಿರಲಿ. ವಿವಾಹದ ಮಾತುಕತೆ ನಡೆಯಬಹುದು. ತಂದೆಯವರಿಂದ ಹಣದ ಸಹಾಯ ದೊರೆಯಲಿದೆ.

ಪರಿಹಾರ : ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಹಳದಿ ಬಣ್ಣ

ಮೀನ

ಎದುರಾಗುವ ತೊಂದರೆಗಳಿಂದ ಕುಟುಂಬದ ಸದಸ್ಯರನ್ನು ಪಾರು ಮಾಡುವಿರಿ. ಕುಟುಂಬದಲ್ಲಿ ನೆಮ್ಮದಿ ನೆಲೆಸುತ್ತದೆ. ಸಾಮಾಜಿಕ ಕಳಕಳಿಯಿಂದ ಸಂಘ ಸಂಸ್ಥೆಯನ್ನು ಸ್ಥಾಪಿಸುವಿರಿ. ಉತ್ತಮ ಆದಾಯಕ್ಕಾಗಿ ಎರಡು ರೀತಿಯ ಉದ್ಯೋಗವನ್ನು ಮಾಡುವಿರಿ. ವೃತ್ತಿಕ್ಷೇತ್ರದಲ್ಲಿ ಅಧಿಕಾರಿಯಂತಹ ಸ್ಥಾನ ಮಾನ ದೊರೆಯುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಆತ್ಮೀಯರ ಸಹಾಯದಿಂದ ಉತ್ತಮ ಲಾಭವಿರುತ್ತದೆ. ನೀರಾವರಿ ಭೂಮಿ ಇದ್ದಲ್ಲಿ ಹಣ್ಣು ಮತ್ತು ತರಕಾರಿ ಬಿತ್ತನೆಗೆ ಪ್ರಯತ್ನಿಸುವಿರಿ. ವಿದ್ಯಾರ್ಥಿಗಳು ಹೆಚ್ಚಿನ ಅಧ್ಯಯನಕ್ಕೆ ವಿದೇಶಕ್ಕೆ ತೆರಳುವಿರಿ. ಆರೋಗ್ಯದ ಬಗ್ಗೆ ಗಮನ ಇರಲಿ. ಕುಟುಂಬದ ಬಳಕೆಗಾಗಿ ತಂದೆಯ ಸಹಾಯದಿಂದ ಹೊಸ ವಾಹನವನ್ನು ನೀಡಲಿದ್ದಾರೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಎಳನೀರು ಮತ್ತು ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಹಸಿರು ಬಣ್ಣ

------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).