Tomorrow Horoscope: ನೆಚ್ಚಿನ ಅತಿಥಿಗಳ ಆಗಮನ, ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಲಾಭ; ಗುರುವಾರದ ದಿನಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ನೆಚ್ಚಿನ ಅತಿಥಿಗಳ ಆಗಮನ, ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಲಾಭ; ಗುರುವಾರದ ದಿನಭವಿಷ್ಯ

Tomorrow Horoscope: ನೆಚ್ಚಿನ ಅತಿಥಿಗಳ ಆಗಮನ, ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಲಾಭ; ಗುರುವಾರದ ದಿನಭವಿಷ್ಯ

29 February 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ಇಂದು ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ಗುರುವಾರದ ದಿನಭವಿಷ್ಯ ಹೀಗಿದೆ..

ಗುರುವಾರದ ದಿನಭವಿಷ್ಯ
ಗುರುವಾರದ ದಿನಭವಿಷ್ಯ

ನಾಳೆಯ ರಾಶಿ ಭವಿಷ್ಯ: ʼನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (Tomorrow Horoscope In Kannada, 29 February 2024)

ನಾಳಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಕೃಷ್ಣಪಕ್ಷ, ಗುರುವಾರ

ತಿಥಿ : ಪಂಚಮಿ ರಾ.02.08 ರವರೆಗು ಇದ್ದು ಆನಂತರ ಷಷ್ಠಿ ಆರಂಭವಾಗುತ್ತದೆ.

ನಕ್ಷತ್ರ : ಚಿತ್ತೆ ನಕ್ಷತ್ರವು ಬೆ.07.19ರವರೆಗೆ ಇರುತ್ತದೆ. ಆನಂತರ ಸ್ವಾತಿ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.36

ಸೂರ್ಯಾಸ್ತ: ಸ.06.27

ರಾಹುಕಾಲ : ಮ.01.30 ರಿಂದ ಮ.03.00

ರಾಶಿ ಫಲಗಳು

ಮೇಷ

ತಂದೆಯ ಪ್ರಭಾವದಿಂದ ಉದ್ಯೋಗದಲ್ಲಿ ಅನುಕೂಲತೆಗಳು ದೊರೆಯುತ್ತವೆ. ಕುಟುಂಬದ ನೆಮ್ಮದಿಗೆ ಭಂಗವಿರುವುದಿಲ್ಲ. ಬುದ್ಧಿವಂತಿಕೆಯಿಂದ ಎದುರಾಗುವ ತೊಂದರೆಗಳಿಂದ ಪಾರಾಗುವಿರಿ. ಸಂಗಾತಿಯಿಂದ ಭೂಮಿಯ ಒಡೆತನ ಲಭಿಸುತ್ತದೆ. ಲೇವಾದೇವಿ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ವಿದ್ಯಾರ್ಥಿಗಳು ಹೆಚ್ಚಿನ ಪ್ರಯತ್ನದಿಂದ ಗುರಿ ಸಾಧಿಸುತ್ತಾರೆ. ಸ್ತ್ರೀಯರು ಆರೋಗ್ಯದ ದೃಷ್ಠಿಯಿಂದ ವಿಶ್ರಾಂತಿ ಪಡೆಯುವುದು ಒಳ್ಳೆಯದು. ಸಮಾಜದ ಗಣ್ಯ ವ್ಯಕ್ತಿಗಳಾಗಿ ರೂಪುಗೊಳ್ಳುವಿರಿ. ಮಾನಸಿಕ ಒತ್ತಡ ಇರುತ್ತದೆ. ಆದಾಯವಿಲ್ಲದ ಕೆಲಸಗಳನ್ನು ಅನಿವಾರ್ಯವಾಗಿ ಮಾಡಬೇಕಾಗುತ್ತದೆ. ಮಕ್ಕಳಿಗೆ ಉದೋಗ ದೊರಕಿಸಿಕೊಳ್ಳಲು ಪ್ರಯತ್ನಿಸುವಿರಿ. ಪಾಲುಗಾರಿಕೆಯ ವ್ಯಾಪಾರವನ್ನು ಆರಂಭ ಮಾಡುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಬೂದು ಬಣ್ಣ

ವೃಷಭ

ಪರಿಚಿತರಿಂದಲೇ ಕುಟುಂಬದಲ್ಲಿ ಶಂಕೆಯ ವಾತಾವರಣ ಮೂಡುತ್ತದೆ. ಎದುರಾಗುವ ಸಮಸ್ಯೆಯನ್ನು ಪರಿಹರಿಸಿಕೊಳ್ಳುವಿರಿ. ಉದ್ಯೋಗದಲ್ಲಿ ಆಡಳಿತದ ಚುಕ್ಕಾಣಿ ದೊರೆಯಲಿದೆ. ಉದ್ಯೋಗ ಬದಲಾಯಿಸುವ ನಿರ್ಧಾರವನ್ನು ಬದಲಾಯಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯವರ್ತಿಗಳಿಂದ ತೊಂದರೆ ಉಂಟಾಗಬಹುದು. ಆರೋಗ್ಯದ ತೊಂದರೆ ಆತಂಕ ಮೂಡಿಸುತ್ತದೆ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗಮನ ಇರಲಿ. ವಾಸ ಸ್ಥಳವನ್ನು ಬದಲಾಯಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ವಿದೇಶ ಪ್ರಯಾಣ ಯೋಗವಿದೆ. ಮನಸಿಗೆ ಒಪ್ಪುವ ಒಡವೆ ವಸ್ತ್ರಗಳಿಗೆ ಹಣ ವೆಚ್ಚವಾಗುತ್ತದೆ. ಕರಿದ ಪದಾರ್ಥಗಳ ಸೇವನೆಯಿಂದ ದೂರವಿರಿ. ಆತ್ಮೀಯರ ಸಲಹೆಯನ್ನು ಪಾಲಿಸಿರಿ.

ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಬಿಸಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ಕಂದು ಬಣ್ಣ

ಮಿಥುನ

ನೆಚ್ಚಿನ ಅತಿಥಿಗಳ ಆಗಮನ ಸಂತಸವನ್ನು ನೀಡುತ್ತದೆ. ಕೈ ಹಿಡಿದ ಕೆಲಸ ಕಾರ್ಯಗಳು ನಿರೀಕ್ಷೆಯಂತೆ ಯಶಸ್ಸನ್ನು ಗಳಿಸುತ್ತದೆ. ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆಯುತ್ತಾರೆ. ಉದ್ಯೋಗದಲ್ಲಿ ಸಹೋದ್ಯೋಗಿಗಳಿಂದ ಸಹಾಯ ಸಹಕಾರ ಲಭಿಸುತ್ತದೆ. ದುಡುಕುತನದಿಂದ ಯಾರನ್ನು ದೂಷಿಸಬೇಡಿ. ನಿಮ್ಮ ಮನಸ್ಸಿನ ಆಸೆಯಂತೆ ಸ್ವಂತ ಮನೆಯನ್ನು ಕಟ್ಟಿಸುವ ಸಾಧ್ಯತೆಗಳಿವೆ. ಕಡಿಮೆ ಬಂಡವಾಳದ ವ್ಯಾಪಾರ ವ್ಯವಹಾರಗಳಿಂದ ಲಾಭವಿದೆ. ವಿದ್ಯಾರ್ಥಿಗಳು ಉತ್ತಮ ಪ್ರಯತ್ನದಿಂದ ಇತರರಿಗೆ ಮಾದರಿ ಆಗುತ್ತಾರೆ. ದೂರದ ಊರಿಗೆ ಪ್ರಯಾಣ ಬೆಳೆಸುವಿರಿ. ಯಂತ್ರ ಮಂತ್ರದಲ್ಲಿ ನಂಬಿಕೆ ಇರುತ್ತದೆ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕಪ್ಪು ಬಣ್ಣ

ಕಟಕ

ಕಷ್ಟದ ಜೀವನದಿಂದ ಪಾರಾದ ಕಾರಣ ಯಾರನ್ನೂ ನಂಬುವುದಿಲ್ಲ. ಕುಟುಂಬದಲ್ಲಿ ಒಮ್ಮತದ ಭಾವನೆ ಇರುತ್ತದೆ. ಹಣಕಾಸಿನ ಸಂಸ್ಥೆಯಲ್ಲಿ ಉದ್ಯೋಗ ದೊರೆಯಲಿದೆ. ಸೋದರಿಗೆ ಆತ್ಮೀಯರಿಂದ ಹಣದ ವ್ಯವಹಾರದ ತೊಂದರೆ ಆಗಬಹುದು. ಅಧಿಕಾರ ಸ್ಥಾನದಲ್ಲಿ ಇರುವವರಿಗೆ ನೌಕರರ ಸಹಕಾರ ದೊರೆಯುವುದಿಲ್ಲ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಮುನ್ನಡೆಯಬೇಕು. ಸಮಯಕ್ಕೆ ತಕ್ಕಂತೆ ವರ್ತಿಸಿ ಕೌಟುಂಬಕ ವಿವಾದವೊಂದನ್ನು ಜಯಿಸುವಿರಿ. ಬಂಧು ಬಳಗದವರಿಂದ ದೂರ ಉಳಿಯುವಿರಿ. ಕುಟುಂಬದ ಹಿರಿಯರ ಹಣದ ವಿವಾದ ಪರಿಹರಿಸುವಿರಿ. ಹಣದ ಉಳಿತಾಯದ ಬಗ್ಗೆ ಯೋಚಿಸುವಿರಿ. ಪ್ರಾಣಿ ಪಕ್ಷಿಗಳ ಬಗ್ಗೆ ಒಲವು ಮೂಡುತ್ತದೆ. ಅಶಕ್ತರಿಗೆ ಸಹಾಯ ಮಾಡುವಿರಿ.

ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ತಿಳಿಹಸಿರು ಬಣ್ಣ

ಸಿಂಹ

ಹಠದ ಸ್ವಭಾವದ ಕಾರಣ ಕೆಲವರಿಗೆ ಇರಿಸು ಮುರಿಸು ಉಂಟಾಗಲಿದೆ. ನಿಮ್ಮ ಮನಸ್ಸಿಗೆ ಇಷ್ಟವೆನಿಸುವ ಕೆಲಸಗಳನ್ನು ಮಾಡುವಿರಿ. ಕುಟುಂಬದಲ್ಲಿ ಒಮ್ಮತದ ಕೊರತೆ ಇರುತ್ತದೆ. ಕಿರಿಯರ ಮೇಲೆ ಅಧಿಕಾರ ಚಲಾಯಿಸದಿರಿ. ಆರಂಭದಲ್ಲಿ ಉದ್ಯೋಗದಲ್ಲಿ ಅಡೆ ತಡೆ ಉಂಟಾಗಬಹುದು. ಆತ್ಮ ವಿಶ್ವಾಸವೇ ಜಯದ ಹಾದಿಯನ್ನು ತೋರಿಸುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ವರಮಾನ ದೊರೆಯುವ ಸಾಧ್ಯತೆಗಳಿವೆ. ಸಂಗಾತಿಯ ಜೊತೆಗೂಡಿ ವಿದೇಶಕ್ಕೆ ತೆರಳುವಿರಿ. ವಿದ್ಯಾರ್ಥಿಗಳು ವ್ಯಾಸಂಗದಲ್ಲಿ ಮುಂದಿರುತ್ತಾರೆ. ಸರಕಾರ ಅಧೀನದಲ್ಲಿ ಸಾರಿಗೆ ವ್ಯವಸ್ಥೆಯ ಸಂಸ್ಥೆಯನ್ನು ಆರಂಭಿಸುವಿರಿ. ಕೋಪಕ್ಕೆ ಮನ ಕೊಡದೆ ಸಹನೆಯಿಂದ ಇರುವುದು ಒಳ್ಳೆಯದು. ಸಾಧು ಸತ್ಪುರುಷರ ಭೇಟಿ ಮಾಡುವಿರಿ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ

ಕನ್ಯಾ

ಕುಟುಂಬದಲ್ಲಿನ ಜವಾಬ್ದಾರಿ ಹೆಚ್ಚುತ್ತದೆ. ಆರೋಗ್ಯದಲ್ಲಿ ಏರಿಳಿತ ಕಂಡು ಬರುತ್ತದೆ. ಕುಟುಂಬದಲ್ಲಿನ ಹಿರಿಯರ ಬಗ್ಗೆ ಗಮನ ಇರಲಿ. ಮುಖ್ಯವಾದ ಕೆಲಸ ಕಾರ್ಯಗಳಲ್ಲಿ ಬೇರೆಯವರ ಸಹಾಯ ಬೇಕಾಗಬಹುದು. ಆಹಾರದ ಸೇವನೆಯ ಬಗ್ಗೆ ನಿಯಮ ಇರಲಿ. ಹಣಕಾಸಿನ ವಿಚಾರದಲ್ಲಿ ಸೋದರಿಯಿಂದ ತೊಂದರೆ ಆಗಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಸ್ಥಿರವಾದ ಆದಾಯ ಇರಲಿದೆ. ವಿದ್ಯಾರ್ಥಿಗಳು ಹಠ ಮತ್ತು ಪರಿಶ್ರಮದಿಂದ ವಿದ್ಯಾಭ್ಯಾಸದಲ್ಲಿ ಯಶಸ್ಸನ್ನು ಗಳಿಸುತ್ತಾರೆ. ಹಣಕಾಸಿನ ವಿಚಾರದಲ್ಲಿ ಸಹನೆ ಸಂಯದ ಅವಶ್ಯಕತೆ ಇರುತ್ತದೆ. ಸ್ನೇಹಿತರ ವ್ಯಾಪಾರದಲ್ಲಿ ಪಾಲುದಾರಿಕೆ ದೊರೆಯಲಿದೆ. ಬಿಡುವಿನ ವೇಳೆ ಜನೋಪಕಾರಿ ಸೇವೆಯಲ್ಲಿ ತಲ್ಲೀನರಾಗುವಿರಿ.

ಪರಿಹಾರ : ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ ಬಣ್ಣ

ತುಲಾ

ಸತ್ಯಾಸತ್ಯತೆಯನ್ನು ಪರಿಶೀಲಿಸಿ ಕೆಲಸ ಕಾರ್ಯಗಳನ್ನು ಆರಂಭಿಸುವಿರಿ. ಕುಟುಂಬದಲ್ಲಿ ಮನಸ್ಸಿಗೆ ಇಷ್ಟವಾದ ಸನ್ನಿವೇಶವೊಂದು ಎದುರಾಗುತ್ತದೆ. ಉದ್ಯೋಗದಲ್ಲಿ ಕೀರ್ತಿ ಯಶಸ್ಸು ಪಡೆಯುವಿರಿ. ಮನಗೆದ್ದ ಎಲ್ಲರ ಸಂತಸಕ್ಕೆ ಸಂತೋಷ ಕೂಟವನ್ನು ಆಯೋಜಿಸುವಿರಿ. ಹಿರಿಯ ವ್ಯಕ್ತಿಗಳ ಅನುಭವದಿಂದ ಪಾಠ ಕಲಿಯುವಿರಿ. ಸಂಗಾತಿಯ ಸಹಕಾರ ದೊರೆಯುತ್ತದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಸಂತಸವನ್ನು ಕಾಣುತ್ತಾರೆ. ವಿದ್ಯಾರ್ಥಿ ದೆಸೆಯಲ್ಲಿಯೇ ಉದ್ಯೋಗ ಲಭಿಸುತ್ತದೆ. ಅವಶ್ಯಕತೆ ಇದ್ದಷ್ಟು ಹಣವನ್ನು ಸಂಪಾದಿಸುವಿರಿ. ಕೇವಲ ಕೆಲಸ ಒಂದೇ ಮುಖ್ಯವೆನಿಸದು. ಉತ್ತಮ ಆರೋಗ್ಯ ಗಳಿಸಲು ವಿಶ್ರಾಂತಿಯ ಮೊರೆ ಹೋಗುವಿರಿ. ಪರಸ್ಥಳದಲ್ಲಿ ಭೂಲಾಭ ಇರುತ್ತದೆ.

ಪರಿಹಾರ : ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಹಾಲಿನ ಬಣ್ಣ

ವೃಶ್ಚಿಕ

ಪ್ರತಿಯೊಂದು ವಿಚಾರದಲ್ಲಿಯೂ ಲೆಕ್ಕಾಚಾರದ ಭಾವನೆ ಇರುತ್ತದೆ. ಕುಟುಂಬದ ಸದಸ್ಯರೊಂದಿಗೆ ಮನಸ್ತಾಪ ಉಂಟಾಗುತ್ತದೆ. ಉದ್ಯೋಗದಲ್ಲಿ ಬೇರೆಯವರ ಬಗ್ಗೆ ಇದ್ದ ತಪ್ಪು ಕಲ್ಪನೆಯನ್ನು ಸರಿಪಡಿಸಿಕೊಳ್ಳುವಿರಿ. ವ್ಯಾಪಾರ ವ್ಯವಹಾರದಲ್ಲಿ ಅಲ್ಪಮಟ್ಟಿನ ಹಿನ್ನಡೆ ಇರುತ್ತದೆ. ವಿದ್ಯಾರ್ಥಿಗಳು ಗೆಲುವು ಸಾಧಿಸಲು ಏಕಾಗ್ರತೆಯನ್ನು ಬೆಳೆಸಿಕೊಳ್ಳಬೇಕು. ಹಳೆಯ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ಇರುತ್ತದೆ. ಆರೋಗ್ಯವನ್ನು ಸರಿಪಡಿಸಿಕೊಳ್ಳಲು ಯೋಗ ಪ್ರಾಣಾಯಾಮವನ್ನು ಅವಲಂಬಿಸುವಿರಿ. ಹೊಸ ವ್ಯಾಪಾರ ವ್ಯವಹಾರದ ಬಗ್ಗೆ ಆತ್ಮೀಯರೊಂದಿಗೆ ಚರ್ಚಿಸುವಿರಿ. ತಂದೆಯವರ ಆರೋಗ್ಯದ ವಿಚಾರವಾಗಿ ಹಣದ ಅವಶ್ಯಕತೆಯಿದೆ. ಸಾಲದ ವ್ಯವಹಾರ ಮಾಡದಿರಿ.

ಪರಿಹಾರ : ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಬಿಸಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ಧನಸ್ಸು

ಗುರು ಹಿರಿಯರ ಸಮಕ್ರಮದಲ್ಲಿ ಸಮಾಜದ ನಾಯಕತ್ವ ವಹಿಸುವಿರಿ. ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ಬೇರೆಯವರಿಂದ ಸಹಾಯ ನಿರೀಕ್ಷಿಸುವುದಿಲ್ಲ. ಸಹೋದ್ಯೋಗಿಗಳಿಗೆ ಉತ್ತಮ ಸಹಕಾರ ನೀಡುವಿರಿ. ಕ್ಲಿಷ್ಟಕರ ಕೆಲಸವೊಂದನ್ನು ಸುಲಭವಾಗಿ ಮಾಡುವಿರಿ. ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಲಾಭ ದೊರೆಯುತ್ತವೆ. ನಿಮ್ಮ ನೆರೆಹೊರೆಯವರು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಕುಟುಂಬದ ಹಣಕಾಸಿನ ಸಮಸ್ಯೆಯನ್ನು ಬಗೆಹರಿಸುವಿರಿ. ವಿದ್ಯಾರ್ಥಿಗಳು ಆತಂಕದಿಂದಲೇ ತಮ್ಮ ಗುರಿಯನ್ನು ತಲುಪುತ್ತಾರೆ. ಅವಿವಾಹಿತರಿಗೆ ಸಂಬಂಧ ಅಥವಾ ಪರಿಚಿತರ ಜೊತೆ ವಿವಾಹ ಆಗುತ್ತದೆ. ಜನರ ಮಧ್ಯೆ ಮೌನವನ್ನು ವಹಿಸುವಿರಿ.

ಪರಿಹಾರ : ಕೈ ಅಥವ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವದರಿಂದ ಶುಭವಿರುತ್ತದೆ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಆಕಾಶನೀಲಿ ಬಣ್ಣ

ಮಕರ

ವಯಸ್ಸಿನ ಅಂತರವಿಲ್ಲದೆ ಎಲ್ಲರನ್ನೂ ಗೌರವದಿಂದ ಕಾಣುವಿರಿ. ಕುಟುಂಬದಲ್ಲಿನ ಐಕ್ಯತೆಯನ್ನು ಕಾಪಾಡುವಿರಿ. ಕಷ್ಟ ನಷ್ಟಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಉದ್ಯೋಗದಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸನ್ನು ಕಾಣುವಿರಿ. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಸದಾ ಕಾಲ ನಿರತರಾಗಿರುತ್ತಾರೆ. ಅತಿಯಾದ ನಿದ್ದೆ ಬೇಸರಕ್ಕೆ ಕಾರಣವಾಗುತ್ತದೆ. ತಂದೆಗೆ ಸೇರಿದ ಭೂ ವಿವಾದವನ್ನು ಅಂತ್ಯಗೊಳಿಸುವಿರಿ. ಸೋದರಿಗೆ ಉನ್ನತ ಗೌರವ ಮತ್ತು ಐಶ್ವರ್ಯ ಲಭಿಸುತ್ತದೆ. ಹಿಂದಿನ ತಲೆಮಾರಿನ ಆಸ್ತಿಯು ಲಭಿಸುತ್ತದೆ. ಯಂತ್ರೋಪಕರಣಗಳ ವ್ಯಾಪಾರದಲ್ಲಿ ಲಾಭವಿರುತ್ತದೆ. ಕುಟುಂಬದ ಸದಸ್ಯರ ಜೊತೆಯ ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯುತ್ತದೆ.

ಪರಿಹಾರ : ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ರಕ್ತದ ಬಣ್ಣ

ಕುಂಭ

ಸತತ ಪ್ರಯತ್ನದಿಂದ ಕೆಲಸ ಕಾರ್ಯದಲ್ಲಿ ಜಯ ಗಳಿಸುವಿರಿ. ಕುಟುಂಬದಲ್ಲಿ ಪರಸ್ಪರ ವಿರೋಧಾಭಾಸ ಇರುತ್ತದೆ. ಉದ್ಯೋಗದಲ್ಲಿ ಸಾಧಾರಣ ಯಶಸ್ಸು ದೊರೆಯುತ್ತದೆ. ಸಂಗಾತಿಗೆ ಸಂಬಂಧಿಸಿದ ಆಸ್ತಿಯ ವಿವಾದ ಇರುತ್ತದೆ. ವಿದ್ಯಾರ್ಥಿಗಳು ಮನದಲ್ಲಿನ ಆತಂಕದಿಂದ ಹೊರಬಂದು ಓದಿನಲ್ಲಿ ಮಗ್ನರಾಗುವುದು ಒಳ್ಳೆಯದು. ಮನೆತನದಲ್ಲಿಯೇ ವಿಶೇಷವಾದ ಸ್ಥಾನಮಾನ ದೊರೆಯುವುದು. ಸಂಗಾತಿಯ ಸಹಾಯದಿಂದ ವ್ಯಾಪಾರವೊಂದನ್ನು ಆರಂಭಿಸಬಹುದು. ಬೇರೆಯವರ ವಾದ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸಿ ಸೂಕ್ತ ಸಲಹೆಯನ್ನು ನೀಡುವಿರಿ. ಹೆಚ್ಚಿನ ಪ್ರಯತ್ನದಿಂದ ಸ್ವಂತ ಭೂಮಿಯನ್ನು ಕೊಳ್ಳಬಹುದು. ತಾಯಿಯವರ ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ತಿಳಿಹಸಿರು ಬಣ್ಣ

ಮೀನ

ಆದಾಯದ ಕೊರತೆ ಇರುವುದಿಲ್ಲ. ಆದರೆ ಹೆಚ್ಚಿನ ಖರ್ಚು ನಿಮ್ಮನ್ನು ಭಾದಿಸುತ್ತದೆ. ಕುಟುಂಬದಲ್ಲಿ ಉತ್ತಮ ಹೊಂದಾಣಿಕೆ ಇರುತ್ತದೆ. ಮಾನಸಿಕ ಒತ್ತಡವನ್ನು ಸಹಿಸದೆ ಕೋಪದಿಂದ ವರ್ತಿಸುವಿರಿ. ಉದ್ಯೋಗದಲ್ಲಿ ಯಾವುದೇ ಸಮಸ್ಯೆ ಬಾರದು. ಕೆಲವೊಮ್ಮೆ ಕೆಲಸ ಕಾರ್ಯದಲ್ಲಿ ಆತಂಕದ ಸನ್ನಿವೇಶ ಎದುರಾಗಬಹುದು. ವಿದ್ಯಾರ್ಥಿಗಳಿಗೆ ಸಹಪಾಠಿಗಳ ಸಹಕಾರ ದೊರೆಯಲಿದೆ. ಉತ್ತಮ ಅವಕಾಶ ದೊರೆವ ಕಾರಣ ಉದ್ಯೋಗ ಬದಲಾಯಿಸುವಿರಿ. ಆದಾಯ ಮತ್ತು ಖರ್ಚನ್ನು ಸರಿದೂಗಿಸಲು ಕಡಿಮೆ ಬಂಡವಾಳದ ವ್ಯಾಪಾರ ಒಂದನ್ನು ಆರಂಭಿಸುವಿರಿ. ಆರೋಗ್ಯದಲ್ಲಿ ಸ್ಥಿರತೆ ಇರುತ್ತದೆ. ಆದರೆ ಆತ್ಮವಿಶ್ವಾಸವನ್ನು ಕಳೆದುಕೊಳ್ಳಬೇಡಿರಿ. ಧಾರ್ಮಿಕ ಸಂಸ್ಥೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡುವಿರಿ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಎಲೆ ಹಸಿರು ಬಣ್ಣ

--------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.