ಕನ್ನಡ ಸುದ್ದಿ  /  Astrology  /  Tomorrow Horoscope Astrology Prediction In Kannada 3 March 2024 Zodiac Signs Kundali News Sts

Tomorrow Horoscope: ದೂರಾಗಿದ್ದ ಕುಟುಂಬ ಸದಸ್ಯರು ಮರಳಿ ಬರುವರು, ನೀರಿರುವ ಜಾಗದಲ್ಲಿ ಎಚ್ಚರ; ಭಾನುವಾರದ ದಿನಭವಿಷ್ಯ

3 March 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ಇಂದು ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ಭಾನುವಾರದ ದಿನಭವಿಷ್ಯ ಹೀಗಿದೆ..

ಭಾನುವಾರದ ದಿನಭವಿಷ್ಯ
ಭಾನುವಾರದ ದಿನಭವಿಷ್ಯ

ನಾಳೆಯ ರಾಶಿ ಭವಿಷ್ಯ: ʼನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (Tomorrow Horoscope In Kannada, 3 March 2024)

ನಾಳಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಕೃಷ್ಣಪಕ್ಷ, ಭಾನುವಾರ

ತಿಥಿ : ಅಷ್ಟಮಿ ರಾ.03.10 ರವರೆಗು ಇದ್ದು ಆನಂತರ ನವಮಿ ಆರಂಭವಾಗುತ್ತದೆ.

ನಕ್ಷತ್ರ : ಅನೂರಾಧ ನಕ್ಷತ್ರವು ಬೆ.11.05 ರವರೆಗೆ ಇರುತ್ತದೆ. ಆನಂತರ ಜ್ಯೇಷ್ಠ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.34

ಸೂರ್ಯಾಸ್ತ: ಸ.06.27

ರಾಹುಕಾಲ : ಬೆ.04.30 ರಿಂದ ಸ.06.00

ರಾಶಿ ಫಲಗಳು

ಮೇಷ

ಕುಟುಂಬದ ಜವಾಬ್ದಾರಿಯು ಕಡಿಮೆಯಾಗುತ್ತದೆ. ಆದರೆ ಮಾನಸಿಕ ಒತ್ತಡ ಸದಾ ಇರುತ್ತದೆ. ಸಮಯಕ್ಕೆ ತಕ್ಕಂತೆ ಹಣದ ಅನುಕೂಲತೆ ದೊರೆಯುತ್ತದೆ. ಉದ್ಯೋಗದಲ್ಲಿ ಎಲ್ಲರೊಂದಿಗೆ ಸ್ನೇಹ ಪ್ರೀತಿಯಿಂದ ನಡೆದುಕೊಳ್ಳುವಿರಿ. ಕೆಲವೊಂದು ಬದಲಾವಣೆಗಳು ಮನದ ಸಂತೋಷವನ್ನು ಹೆಚ್ಚಿಸುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಆತ್ಮೀಯರ ಸಹಕಾರ ಇರಲಿದೆ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗಬಹುದು. ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಆಶ್ರಯವೆನಿಸುವ ಘಟನೆ ಒಂದು ಆತ್ಮವಿಶ್ವಾಸ ತುಂಬಲಿದೆ. ಅನಾವಶ್ಯಕವಾದ ಖರ್ಚು ವೆಚ್ಚಗಳನ್ನು ಧೃಡವಾದ ಮನಸ್ಸಿನಿಂದ ಕಡಿಮೆ ಮಾಡುವಿರಿ.

ಪರಿಹಾರ : ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ವೃಷಭ

ಕ್ರೀಡಾ ಸ್ಪೂರ್ತಿಯನ್ನು ಬೆಳೆಸಿಕೊಂಡರೆ ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸುತ್ತದೆ. ಕೈಹಾಕುವ ಕೆಲಸ ಕಾರ್ಯಗಳು ಕಠಿಣ ಪರಿಶ್ರಮದಿಂದ ಯಶಸ್ವಿಯಾಗುತ್ತದೆ. ಉದ್ಯೋಗದಲ್ಲಿ ಉನ್ನತ ಮಟ್ಟವನ್ನು ಗಳಿಸುವಿರಿ. ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯವಿರುತ್ತದೆ. ಆದರೆ ಖರ್ಚುವೆಚ್ಚಗಳನ್ನು ಕಡಿತಗೊಳಿಸಬೇಕು. ವಿದ್ಯಾರ್ಥಿಗಳು ಹಠದ ಬುದ್ಧಿಯಿಂದ ವಿದ್ಯಾಭ್ಯಾಸದಲ್ಲಿ ಪ್ರಥಮಸ್ಥಾನ ಗಳಿಸುತ್ತಾರೆ. ಮನರಂಜನೆಯ ಸಲುವಾಗಿ ಹಣವನ್ನು ಖರ್ಚು ಮಾಡುವಿರಿ. ಸಂಗಾತಿಯ ಆರೋಗ್ಯದ ಬಗ್ಗೆ ಗಮನವಹಿಸಿ. ಮಕ್ಕಳಿಗೆ ಸಂಬಂಧಪಟ್ಟಂತೆ ಶುಭ ವರ್ತಮಾನವೊಂದು ಬರಲಿದೆ.

ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಹಳದಿ ಬಣ್ಣ

ಮಿಥುನ

ಕುಟುಂಬದವರೊಂದಿಗೆ ಸಂತೋಷದಿಂದ ಬಾಳುವಿರಿ. ಸತತ ದುಡಿಮೆಯಿಂದ ಬೇಸತ್ತು ಕಿರು ಪ್ರವಾಸಕ್ಕೆ ತೆರಳುವಿರಿ. ಅನಿವಾರ್ಯವಾದ ಕೆಲಸ ಕಾರ್ಯಗಳು ಉತ್ತಮ ಫಲಗಳನ್ನು ನೀಡಲಿವೆ. ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿಯನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ಹಣದ ಅವಶ್ಯಕತೆ ಇರುತ್ತದೆ. ದಂಪತಿಗಳ ನಡುವೆ ಇದ್ದ ಮನಸ್ತಾಪವು ಕೊನೆಗೊಳ್ಳಲಿದೆ. ಜೀವನದಲ್ಲಿ ನಡೆವ ಮುಖ್ಯವಾದ ಘಟನೆಯೊಂದು ಸಂತಸ ಮೂಡಿಸುತ್ತದೆ. ಬೇರೆಯವರ ಮಾತನ್ನು ತಪ್ಪಾಗಿ ಭಾವಿಸುವಿರಿ. ಸ್ನೇಹಿತರಿಂದ ಹಣಕಾಸಿನ ಸಹಾಯ ದೊರೆಯುತ್ತದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಮುಳುಗುತ್ತಾರೆ. ತಪ್ಪು ಅಭಿಪ್ರಾಯದಿಂದ ದೂರವಾಗಿದ್ದ ಕುಟುಂಬದ ಸದಸ್ಯರು ಮರಳಿ ಬರುವರು.

ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಹಸಿರು ಬಣ್ಣ

ಕಟಕ

ಕ್ರಿಯಾಶೀಲತೆಯ ಬುದ್ಧಿ ಇರುವ ಕಾರಣ ಕುಟುಂಬಕ್ಕೆ ಬೆಂಗಾವರಾಗುವಿರಿ. ಒಳ್ಳೆಯ ವಿಚಾರಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳುವಿರಿ. ಭೂ ಸಂಬಂಧಿತ ವ್ಯವಹಾರಗಳಲ್ಲಿ ಬಂಡವಾಳ ಹೂಡುವಿರಿ. ಉದ್ಯೋಗದಲ್ಲಿನ ಸಮಸ್ಯೆಗಳನ್ನು ಬಗೆಹರಿಸಿ ಮೆಚ್ಚುಗೆ ಗಳಿಸುವಿರಿ. ಬಡ್ತಿ ದೊರೆಯುವ ಸಾಧ್ಯತೆಗಳಿವೆ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಆಸಕ್ತಿ ತೋರುವುದಿಲ್ಲ. ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳ ಜೊತೆಯಲ್ಲಿ ಕಲಿಕೆಗೆ ಪ್ರಮುಖ ಸ್ಥಾನ ನೀಡಲಿದ್ದಾರೆ. ಒಳ್ಳೆಯ ಮಾತುಗಳಿಗೆ ಸುಲಭವಾಗಿ ಸೋತು ಹೋಗುವಿರಿ. ನಿಮ್ಮ ಮನಸ್ಸಿಗೆ ಒಪ್ಪುವ ಕೆಲಸಗಳನ್ನು ಗಮನವಿಟ್ಟು ಪೂರೈಸುವಿರಿ. ಚಿಕ್ಕ ಮಕ್ಕಳ ಆರೋಗ್ಯದ ಬಗ್ಗೆ ಗಮನ ವಹಿಸಿ. ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯ ರೂಪುಗೊಳ್ಳಲಿದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ನೀಲಿ ಬಣ್ಣ

ಸಿಂಹ

ಆತ್ಮವಿಶ್ವಾಸದ ಕೊರತೆ ಕಂಡು ಬರುತ್ತದೆ. ಆದರೆ ಗೆಲ್ಲಲೇ ಬೇಕೆಂಬ ಹಠದಿಂದ ಆತ್ಮೀಯರ ಸಹಾಯ ಬಯಸುವಿರಿ. ಪ್ರಯೋಜನವಿಲ್ಲದ ವಿಚಾರಗಳಿಗೆ ಯೋಚನೆ ಮಾಡುವಿರಿ. ಉದ್ಯೋಗದಲ್ಲಿ ಯಾವುದೇ ರೀತಿಯ ಬದಲಾವಣೆಗಳು ಕಂಡುಬರುವುದಿಲ್ಲ. ಒಂದೇ ರೀತಿಯ ಜೀವನದಿಂದ ಬೇಸರ ಉಂಟಾಗುತ್ತದೆ. ಉದ್ಯೋಗದಲ್ಲಿ ಹೆಚ್ಚಿನ ನಿರೀಕ್ಷೆ ಬೇಡ. ವ್ಯಾಪಾರ ವ್ಯವಹಾರಗಳಲ್ಲಿ ಅನುಭವಸ್ಥರ ಮಾರ್ಗದರ್ಶನ ಮುಖ್ಯ. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಕಲಿಕೆಯಲ್ಲಿ ಹಿಂದುಳಿಯುವುದಿಲ್ಲ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನವಿರಬೇಕು. ನಿಮ್ಮ ಮನಸ್ಸಿಗೆ ಒಪ್ಪುವ ವಸ್ತುಗಳನ್ನು ಸಂಗ್ರಹಿಸುವಿರಿ. ಹಣವನ್ನು ಉಳಿಸಲು ಹೊಸ ಯೋಜನೆಗಳನ್ನು ರೂಪಿಸುವಿರಿ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನೇರಳೆ ಬಣ್ಣ

ಕನ್ಯಾ

ಮನಸ್ಸು ಸದಾಕಾಲ ಒಳಿತನ್ನೆ ಬಯಸುತ್ತದೆ. ಇದರಿಂದ ಕುಟುಂಬದ ಜನರೊಂದಿಗೆ ಪ್ರೀತಿ ವಿಶ್ವಾಸದಿಂದ ಬಾಳುವಿರಿ. ಅಪೂರ್ಣಗೊಂಡ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಆತ್ಮವಿಶ್ವಾಸದಿಂದ ಉದ್ಯೋಗದಲ್ಲಿನ ಜವಾಬ್ದಾರಿಯನ್ನು ನಿರ್ವಹಿಸುವಿರಿ. ನಿಮ್ಮಲ್ಲಿರುವ ಒಳ್ಳೆಯ ಭಾವನೆಗಳಿಗೆ ಎಲ್ಲರೂ ತಲೆಬಾಗುತ್ತಾರೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ವಿರುತ್ತದೆ. ವಿದ್ಯಾರ್ಥಿಗಳು ಸಹಪಾಠಿಗಳ ಜೊತೆಗೂಡಿ ಅಭ್ಯಾಸದಲ್ಲಿ ನಿರತರಾಗುತ್ತಾರೆ. ಭವಿಷ್ಯದ ಜೀವನಕ್ಕಾಗಿ ರೂಪುರೇಷಗಳನ್ನು ರೂಪಿಸುವಿರಿ. ಯಾವುದೇ ವಿಚಾರದಲ್ಲಿ ಬೇರೆಯವರಿಗೆ ವಚನ ನೀಡುವ ಮುನ್ನ ಯೋಚಿಸಿ. ದುಡುಕುತನದಿಂದ ತೆಗೆದುಕೊಳ್ಳುವ ನಿರ್ಧಾರಗಳು ವಿವಾದಕ್ಕೆ ಕಾರಣವಾಗುತ್ತದೆ. ಅತಿಯಾದ ಆಹಾರ ಸೇವನೆಯಿಂದ ಆರೋಗ್ಯದಲ್ಲಿ ತೊಂದರೆ ಉಂಟಾಗುತ್ತದೆ.

ಪರಿಹಾರ : ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ತುಲಾ

ಪ್ರತಿ ವಿಚಾರದಲ್ಲಿಯೂ ಮಾಸಿಕ ಒತ್ತಡಕ್ಕೆ ಒಳಗಾಗುವಿರಿ. ಶಾಂತಿ ಸಹನೆಯನ್ನು ಕಾಪಾಡಿಕೊಂಡರೆ ಕುಟುಂಬದಲ್ಲಿ ನೆಮ್ಮದಿ ಇರುತ್ತದೆ. ಕುಟುಂಬದಲ್ಲಿನ ಜವಾಬ್ದಾರಿ ನಿಮ್ಮದಾಗುತ್ತದೆ. ಕೆಲಸ ಕಾರ್ಯಗಳ ಮಧ್ಯೆ ಮನರಂಜನೆಗೂ ಸಮಯ ನೀಡುವಿರಿ. ಅನಾವಶ್ಯಕ ಹೆಚ್ಚು ವೆಚ್ಚಗಳು ಎದುರಾಗಲಿವೆ. ಉದ್ಯೋಗದಲ್ಲಿ ಯಾವುದೇ ತೊಂದರೆ ಎದುರಾಗುವುದಿಲ್ಲ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ ದೊರೆಯಲಿದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಏಕಾಗ್ರತೆಯನ್ನು ಬೆಳೆಸಿಕೊಳ್ಳಬೇಕು. ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯ ರೂಪಗೊಳ್ಳುತ್ತದೆ. ಸಂಗಾತಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಹಣಕಾಸಿನ ವಿಚಾರಗಳನ್ನು ರಹಸ್ಯವಾಗಿ ಇಡುವಿರಿ. ಹೊಸ ವಾಹನವನ್ನು ಕೊಳ್ಳುವಿರಿ.

ಪರಿಹಾರ : ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹೊಸ ಉಡುಗೆ ತೊಡುಗೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ವೃಶ್ಚಿಕ

ನಿಮ್ಮ ಮುಖದಲ್ಲಿರುವ ಮಂದಹಾಸ ಕುಟುಂಬದ ನಿರೀಕ್ಷೆಗಳನ್ನು ಹೆಚ್ಚಿಸುತ್ತದೆ. ಎಲ್ಲರ ಸಹಾಯ ದೊರೆಯುವ ಕಾರಣ ಮನಸ್ಸು ನಿರಾಳವಾಗಿರುತ್ತದೆ. ಕೈ ಹಿಡಿದ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುತ್ತದೆ. ಉದ್ಯೋಗದಲ್ಲಿ ಕೆಲವೊಂದು ಬಾರಿ ದೃಡವಾದ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿಸಿದ ಆದಾಯ ದೊರೆಯಲಿದೆ. ವಿದ್ಯಾರ್ಥಿಗಳು ಏಕಾಂಗಿಯಾಗಿ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಮನರಂಜನೆಗೆ ಆಸ್ಪದ ಇರುವುದಿಲ್ಲ. ಸಂಬಂಧಿತ ತೊಂದರೆ ಕಂಡು ಬರುತ್ತದೆ. ಸೋದರದ ನಡುವಿನ ಮನಸ್ತಾಪವು ಕೊನೆಗೊಳ್ಳುತ್ತದೆ. ದುಂದು ವೆಚ್ಚವನ್ನು ಕಡಿತಗೊಳಿಸುವುದು ಒಳ್ಳೆಯದು. ಹಣ ಉಳಿಸಲು ಸಾಧ್ಯವಾಗದು.

ಪರಿಹಾರ : ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹೊಸ ಉಡುಗೆ ತೊಡುಗೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಬೂದು ಬಣ್ಣ

ಧನಸ್ಸು

ಮೌನವಾಗಿದ್ದು ದಿಢೀರನೆ ತೆಗೆದುಕೊಳ್ಳುವ ನಿರ್ಧಾರಗಳು ಕುಟುಂಬದಲ್ಲಿ ಬೇಸರ ಮೂಡಿಸುತ್ತದೆ. ಅತಿಯಾದ ಯೋಚನೆಯಿಂದ ಆರೋಗ್ಯದಲ್ಲಿ ಏರಿಳಿತ ಕಂಡು ಬರುತ್ತದೆ. ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸಿ. ಉದ್ಯೋಗದಲ್ಲಿ ಅನಿವಾರ್ಯವಾಗಿ ಬೇರೆಯವರ ಕೆಲಸವನ್ನು ನೀವೇ ಮಾಡಬೇಕಾಗಬಹುದು. ವಿಶ್ರಾಂತಿ ಇಲ್ಲದ ದುಡಿಮೆ ಆಯಾಸವನ್ನು ಉಂಟುಮಾಡುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ವಿರುತ್ತದೆ. ಮರುಬಂಡವಾಳ ಮಾಡುವ ಮುನ್ನ ಒಮ್ಮೆ ಯೋಚಿಸಿ. ವಿದ್ಯಾರ್ಥಿಗಳು ಪದೇ ಪದೇ ಮನಸ್ಸನ್ನು ಬದಲಾಯಿಸದಿರಿ. ಕುಟುಂಬದ ಎಲ್ಲರ ಸಹಾಯ ಸಹಕಾರ ದೊರೆಯಲಿದೆ. ಮಾಡುವ ಕೆಲಸ ಕಾರ್ಯಗಳಿಗೆ ಮೆಚ್ಚುಗೆ ಗಳಿಸುವಿರಿ. ಮಕ್ಕಳಿಗೆ ಸಂಬಂಧದಲ್ಲಿ ವಿವಾಹ ನಿಶ್ಚಯವಾಗುತ್ತದೆ. ನೀರಿರುವ ಜಾಗಗಳಲ್ಲಿ ಅನಾಹುತ ನಡೆಯಬಹುದು ಎಚ್ಚರಿಕೆ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಕಂದು ಬಣ್ಣ

ಮಕರ

ಕುಟುಂಬದ ಹಣಕಾಸಿನ ವಿಚಾರದಲ್ಲಿ ಮನದಲ್ಲಿ ಬೇಸರ ಉಂಟಾಗುತ್ತದೆ. ದುಡುಕದೆ ಬುದ್ದಿವಂತಿಕೆಯಿಂದ ಯೋಚಿಸಿ ಜವಾಬ್ದಾರಿಯನ್ನು ಪೂರೈಸುವಿರಿ. ಉದ್ಯೋಗದಲ್ಲಿ ದುಡುಕಿನ ನಿರ್ಧಾರವನ್ನು ತೆಗೆದುಕೊಳ್ಳದಿರಿ. ಎದುರಾಗುವ ಸಮಸ್ಯೆಗೆ ಅಧಿಕಾರಿಗಳಿಂದ ಪರಿಹಾರ ದೊರೆಯುತ್ತದೆ. ಬೇರೆಯವರಿಗೆ ಹಣದ ಸಹಾಯ ಮಾಡುವ ಮುನ್ನ ಒಮ್ಮೆ ಯೋಚಿಸಿ. ಆತ್ಮೀಯರೊಬ್ಬರು ನಿಮ್ಮಿಂದ ದೂರ ಸರಿಯಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಆಸಕ್ತಿಯ ಅವಶ್ಯಕತೆ ಇರುತ್ತದೆ. ವಿದ್ಯಾರ್ಥಿಗಳು ಸಹಪಾಠಿಗಳ ಸಮೂಹದಲ್ಲಿ ಅಭ್ಯಾಸ ಮಾಡುವುದು ಒಳ್ಳೆಯದು. ಒತ್ತಾಯ ಪೂರ್ವಕವಾಗಿ ಯಾವುದೇ ಕೆಲಸವನ್ನು ಮಾಡಡಿರಿ. ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯ ಮೂಡುತ್ತದೆ.

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕಪ್ಪು ಬಣ್ಣ

ಕುಂಭ

ಎದುರಾಗುವ ದೊಡ್ಡ ಸಮಸ್ಯೆಯೊಂದನ್ನು ಎದುರಿಸಿ ಗೆಲ್ಲುವಿರಿ. ಚಿಕ್ಕ ವಿಚಾರವಾದರೂ ಪೂರ್ವ ನಿಯೋಜನೆಯ ಅಗತ್ಯವಿದೆ. ಉದ್ಯೋಗದಲ್ಲಿ ಬಿಡುವಿಲ್ಲದ ಕೆಲಸ ನಿಮ್ಮದಾಗುತ್ತದೆ. ಅನಗತ್ಯ ಜವಾಬ್ದಾರಿಗಳಿಂದ ಮಾನಸಿಕ ಒತ್ತಡಕ್ಕೆ ಒಳಗಾಗುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಧನಲಾಭ ಇರುತ್ತದೆ. ಪಾಲುಗಾರಿಕೆಯ ವ್ಯಾಪಾರದಲ್ಲಿ ಲಾಭವಿದೆ. ವಿದ್ಯಾರ್ಥಿಗಳು ಏಕಾಂಗಿಯಾಗಿ ವಿಶ್ವಾಸದಿಂದ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಕೆಲವೊಂದು ಸಂದರ್ಭದಲ್ಲಿ ಏಕಾಂಗಿಯಾಗಿ ಹೋರಾಡಬೇಕಾದ ಪರಿಸ್ಥಿತಿಯು ಎದುರಾಗುತ್ತದೆ. ನೂತನ ದಂಪತಿಗಳ ನಡುವೆ ಅನಾವಶ್ಯಕ ಭಿನ್ನಾಭಿಪ್ರಾಯ ಉಂಟಾಗುತ್ತದೆ. ಸಾಲದ ವ್ಯವಹಾರದಿಂದ ದೂರ ಉಳಿಯುವುದು ಒಳ್ಳೆಯದು.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ತಿಳಿಹಸಿರು ಬಣ್ಣ

ಮೀನ

ಬಿಡುವೇ ಇಲ್ಲದ ಕುಟುಂಬದ ಕಾರ್ಯಕ್ರಮಗಳಿಂದ ಬೇಸರಗೊಳ್ಳುವಿರಿ. ವಿಶ್ರಾಂತಿ ಇಲ್ಲದ ಕಾರಣ ಅನಾರೋಗ್ಯ ಉಂಟಾಗಲಿದೆ. ಉದ್ಯೋಗದಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ. ಒಳ್ಳೆಯ ಮಾತುಕತೆಯಿಂದ ಎಲ್ಲರ ಮನಸ್ಸನ್ನು ಗೆಲ್ಲುವಿರಿ. ಹಣಕಾಸಿನ ಕೊರತೆಯನ್ನು ನೀಗಿಸಲು ವಂಶಾನುಗತವಾಗಿ ಬಂದ ವೃತ್ತಿಯನ್ನು ಆರಂಭಿಸಿರಿ. ವಿದ್ಯಾರ್ಥಿಗಳು ಹೆಚ್ಚಿನ ಪರಿಶ್ರಮದಿಂದ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗಬಹುದು. ಹಣಕಾಸಿನ ವಿಚಾರದಲ್ಲಿ ಖರ್ಚನ್ನು ಕಡಿಮೆ ಮಾಡುವಿರಿ. ಸಂಗಾತಿಯಿಂದ ಹಣದ ಸಹಾಯ ದೊರೆಯಲಿದೆ. ಕುಟುಂಬದ ಸದಸ್ಯರೊಂದಿಗೆ ಸಂತೋಷ ಪ್ರೀತಿಯಿಂದ ಸಮಯ ಕಳೆಯುವಿರಿ. ಕಣ್ಣಿನ ದೋಷ ಉಂಟಾಗಬಹುದು.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ನಸುಗೆಂಪು ಬಣ್ಣ

---------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).