ಕನ್ನಡ ಸುದ್ದಿ  /  Astrology  /  Tomorrow Horoscope Astrology Prediction In Kannada 5 March 2024 Zodiac Signs Kundali News Sts

Tomorrow Horoscope: ವಿವಾಹ ಯೋಗವಿದೆ, ತಪ್ಪು ತಿಳುವಳಿಕೆಯಿಂದ ಚಿಕ್ಕ ವಿವಾದ ದೊಡ್ಡದಾಗುತ್ತೆ; ಮಂಗಳವಾರದ ದಿನಭವಿಷ್ಯ

5 March 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ಇಂದು ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ಮಂಗಳವಾರದ ದಿನಭವಿಷ್ಯ ಹೀಗಿದೆ..

ಮಂಗಳವಾರದ ದಿನಭವಿಷ್ಯ
ಮಂಗಳವಾರದ ದಿನಭವಿಷ್ಯ

ನಾಳೆಯ ರಾಶಿ ಭವಿಷ್ಯ: ʼನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (Tomorrow Horoscope In Kannada, 5 March 2024)

ನಾಳಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಕೃಷ್ಣಪಕ್ಷ, ಮಂಗಳವಾರ

ತಿಥಿ : ದಶಮಿ ರಾ.01.24 ರವರೆಗು ಇದ್ದು ಆನಂತರ ಏಕಾದಶಿ ಆರಂಭವಾಗುತ್ತದೆ.

ನಕ್ಷತ್ರ : ಮೂಲ ನಕ್ಷತ್ರವು ಹ.11.12 ರವರೆಗೆ ಇರುತ್ತದೆ. ಆನಂತರ ಪೂರ್ವಾಷಾಡ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.33

ಸೂರ್ಯಾಸ್ತ: ಸ.06.27

ರಾಹುಕಾಲ : ಬೆ.03.00 ರಿಂದ ಬೆ.04.30

ರಾಶಿ ಫಲಗಳು

ಮೇಷ

ಅನಾವಶ್ಯಕ ಮಾನಸಿಕ ಒತ್ತಡ ಇರಲಿದೆ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ತೊಂದರೆ ಇರುತ್ತದೆ. ಸೋಲು ಗೆಲುವನ್ನು ಕ್ರೀಡಾ ಮನೋಭಾವನೆಯಿಂದ ಸ್ವೀಕರಿಸಲು ಪ್ರಯತ್ನಿಸಿ. ಕುಟುಂಬ ನಿರ್ವಹಣೆಗಾಗಿ ಹೆಚ್ಚಿನ ಹಣದ ಅವಶ್ಯಕತೆ ಇರುತ್ತದೆ. ಮಕ್ಕಳ ಕಾರಣದಿಂದಾಗಿ ಕುಟುಂಬದಲ್ಲಿ ಸಂತಸ ಇರಲಿದೆ. ಹೊಸ ವಿಚಾರ ತಿಳಿಯುವ ತವಕದಲ್ಲಿ ವೇಳೆ ಕಳೆಯುವಿರಿ. ಉದ್ಯೋಗದಲ್ಲಿ ಅನುಕೂಲಕರ ಬದಲಾವಣೆಗಳು ಉಂಟಾಗಲಿವೆ. ವ್ಯಾಪಾರ ವ್ಯವಹಾರದಲ್ಲಿ ಹಿರಿಯರ ಸಹಾಯದಿಂದ ಸಮಸ್ಯೆಯಿಂದ ಪಾರಾಗುವಿರಿ. ಮನರಂಜನೆಗಾಗಿ ಹಣ ವೆಚ್ಚವಾಗಲಿದೆ. ಆತ್ಮೀಯರ ಮನೆಗೆ ಭೇಟಿ ನೀಡುವಿರಿ. ವಿದ್ಯಾರ್ಥಿಗಳು ಯಶಸ್ಸಿನ ಹಾದಿಯಲ್ಲಿ ಸಾಗುತ್ತಾರೆ.

ಪರಿಹಾರ : ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ..

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ನೀಲಿ ಬಣ್ಣ

ವೃಷಭ

ನಿಸ್ವಾರ್ಥದ ಬುದ್ಧಿಯಿಂದ ಎಲ್ಲರ ಮನಸ್ಸನ್ನು ಗೆಲ್ಲುವಿರಿ. ವಂಶದ ಹಿರಿಯರ ಆಗಮನ ಹೊಸ ಚೇತನವನ್ನು ನೀಡುತ್ತದೆ. ಉದ್ಯೋಗದಲ್ಲಿ ಹೆಚ್ಚಿನ ಪ್ರಯತ್ನದಿಂದ ಉದ್ದೇಶಿತ ಗುರಿ ತಲುಪುವಿರಿ. ಮುಂದಿನ ಜೀವನಕ್ಕಾಗಿ ಹಣವನ್ನು ಸಂಹ್ರಹಿಸುವಿರಿ. ವ್ಯಾಪಾರ ವಹಿವಾಟಿನಲ್ಲಿ ನಿರೀಕ್ಷಿತ ಲಾಭ ಇರದಿದ್ದರೂ ತೊಂದರೆ ಬಾರದು. ವಿದ್ಯಾರ್ಥಿಗಳು ಶಿಕ್ಷಕರ ಸಹಾಯದಿಂದಾಗಿ ನಿರೀಕ್ಷಿತ ಮಟ್ಟ ತಲುಪಲಿದ್ದಾರೆ. ಸಾಮಾನ್ಯ ಮಟ್ಟದ ಜೀವನ ನಡೆಸಲು ಅನುವಾಗುವಿರಿ. ಕುಟುಂಬದ ಮುಖ್ಯ ಸ್ಥಾನ ಅಲಂಕರಿಸುವಿರಿ. ಕುಟುಂಬದಲ್ಲಿ ವಿವಾಹಕಾರ್ಯವೊಂದು ನಡೆಯಲಿದೆ. ಆತ್ಮೀಯರ ಜೊತೆಯಲ್ಲಿ ಪಾಲುಗಾರಿಕೆಯ ವ್ಯಾಪಾರ ಆರಂಭಿಸುವಿರಿ. ಸಂಗಾತಿಯೊಂದಿಗೆ ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡುವಿರಿ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ನೇರಳೆ ಬಣ್ಣ

ಮಿಥುನ

ಕುಟುಂಬದಲ್ಲಿ ಗಾಂಭೀರ್ಯ ಮನೆಮಾಡಲಿದೆ. ಉದ್ಯೋಗದಲ್ಲಿ ಅನಿಶ್ಚಿತ ವಾತಾವರಣ ನಿರ್ಮಾಣವಾಗುತ್ತದೆ. ದೃಢವಾದ ನಿರ್ಧಾರದಿಂದ ಸಮಸ್ಯೆಯನ್ನು ಪರಿಹರಿಸುವಿರಿ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭವಿದೆ. ವಿದ್ಯಾರ್ಥಿಗಳು ವಿದ್ಯೆಯ ಜೊತೆಯಲ್ಲಿ ಉತ್ತ್ಗಮ ವ್ಯಕ್ತಿತ್ವವನ್ನು ಬೆಳಸಿಕೊಳ್ಳುತ್ತಾರೆ. ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಗಂಭೀರ ಪ್ರಯತ್ನಗಳನ್ನು ಮಾಡಬೇಕಾಗುತ್ತದೆ. ಅವಿವಾಹಿತರಿಗೆ ವಿವಾಹಯೋಗವಿದೆ. ಹೆಚ್ಚಿನ ಅಧ್ಯಯನದ ಸಲುವಾಗಿ ವಿದೇಶಕ್ಕೆ ತೆರಳಬಹುದು. ಸಹೋದರಿಯ ಕೌಟುಂಬಿಕ ಕಲಹಕ್ಕೆ ಶಾಶ್ವತ ಪರಿಹಾರವನ್ನು ಕಂಡುಹಿಡಿಯುವಿರಿ. ಕೃಷಿ ಉತ್ಪನ್ನಗಳ ವ್ಯಾಪಾರದಲ್ಲಿ ಹಣದ ಲಾಭವಾಗುವ ಸಾಧ್ಯತೆ ಇದೆ. ಆರೋಗ್ಯವನ್ನು ಕಾಪಾಡಿಕೊಳ್ಳಲು ವಾಯುವಿಹಾರಕ್ಕೆ ತೆರಳುವಿರಿ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ಕಟಕ

ಹೊಂದಾಣಿಕೆಯ ಗುಣದಿಂದ ಕುಟುಂಬದಲ್ಲಿನ ಶಾಂತಿಯನ್ನು ಕಾಪಾಡುವಿರಿ. ಎಲ್ಲರೊಂದಿಗೆ ಮನದಲ್ಲಿನ ಯೋಚನೆಯನ್ನು ಹಂಚಿಕೊಳ್ಳುವಿರಿ. ಮೇಲಧಿಕಾರಿಗಳ ಮನೋಭಾವನೆಯನ್ನು ಅರ್ಥಮಾಡಿಕೊಳ್ಳಲು ವಿಫಲರಾಗುವಿರಿ. ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಉಳಿಸುವ ಯೋಜನೆ ರೂಪಿಸುವಿರಿ. ಮನಗೆದ್ದವರಿಗೆ ಹಣವನ್ನು ಸಂಪಾದಿಸುವ ಮಾರ್ಗವನ್ನು ತೋರುವಿರಿ. ವಿದ್ಯಾರ್ಥಿಗಳು ಅಧ್ಯಯನಕ್ಕೆ ಮಾತ್ರ ಗಮನ ನೀಡುವಿರಿ. ಸಮಯವನ್ನು ಆಧರಿಸಿ ಯಾವುದಾದರೊಂದು ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಿರಿ. ವ್ಯಾಪಾರ ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಸಂಗಾತಿಯಿಂದ ವಿಶೇಷವಾದ ಕೊಡುಗೆ ಸಿಗಬಹುದು. ಕಲುಷಿತ ನೀರಿನ ಸೇವನೆಯಿಂದ ಸೋಂಕು ಉಂಟಾಗಬಹುದು.

ಪರಿಹಾರ : ಸಾಧು ಸಂತರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ಸಿಂಹ

ಹೊಸ ನಿರೀಕ್ಷೆಯಿಂದ ದಿನವನ್ನು ಆರಂಭಿಸುವಿರಿ. ಆತ್ಮವಿಶ್ವಾಸದಿಂದಾಗಿ ಕುಟುಂಬದಲ್ಲಿ ಇಚ್ಚಿಸಿದ ಕೆಲಸಕಾರ್ಯಗಳು ನಡೆಯಲಿವೆ. ಸ್ವಂತ ಕೆಲಸ ಕಾರ್ಯಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುವಿರಿ. ಅನಗತ್ಯ ಖರ್ಚು ವೆಚ್ಚಗಳನ್ನು ನಿಯಂತ್ರಿಸಲಾರಿರಿ. ಉದ್ಯೋಗದಲ್ಲಿ ಒಮ್ಮತದ ಕೊರತೆ ಉಂಟಾಗಬಹುದು. ಸಾಮಾಜಿಕ ಕಳ ಕಳಿ ಇರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭ ದೊರೆಯುತ್ತದೆ. ವಿಧ್ಯಾರ್ಥಿಗಳು ಅಧ್ಯಯನದಲ್ಲಿ ಸಫಲರಾಗುತ್ತಾರೆ. ಸಭೆ ಸಮಾರಂಭಗಳ ಕೇಂದ್ರಬಿಂದುವಾಗುವಿರಿ. ಮನಗೆದ್ದವರ ಜೊತೆಯಲ್ಲಿ ಹಿರಿಯರ ಸಮ್ಮುಖದಲ್ಲಿ ವಿವಾಹವಾಗುತ್ತದೆ. ಆತ್ಮೀಯರ ಜೊತೆಯಲ್ಲಿ ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡುವರಿ.

ಪರಿಹಾರ : ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಬೂದು ಬಣ್ಣ

ಕನ್ಯಾ

ಮನದ ನೋವನ್ನು ಮರೆಯಲು ಏಕಾಂಗಿಯಾಗಿ ಇರಲು ಇಷ್ಟಪಡುವಿರಿ. ಕುಟುಂಬದಲ್ಲಿ ಹೊಂದಾಣಿಕೆಯ ಕೊರತೆ ಇರುತ್ತದೆ. ಒಳ್ಳೆಯ ಅಭ್ಯಾಸದ ಕಾರಣ ಆರೋಗ್ಯ ಚೆನ್ನಾಗಿರುತ್ತದೆ. ಉದ್ಯೋಗದಲ್ಲಿನ ಕೆಲಸ ಕಾರ್ಯಗಳಲ್ಲಿ ಶ್ರದ್ದೆಯ ಕೊರತೆ ಕಾಣುತ್ತದೆ. ತಪ್ಪು ನಿರ್ಧಾರದಿಂದ ತೊಂದರೆ ಅನುಭವಿಸುವಿರಿ. ಮನದಲ್ಲಿರುವ ಆಸೆ ಆಕಾಂಕ್ಷೆಗಳು ಕಾರ್ಯರೂಪಕ್ಕೆ ಬರಲಿದೆ. ಟೀಕಿಸದೆ ಎಲ್ಲರೊಂದಿಗೆ ಶಾಂತಿ ಸಂಯಮದಿಂದ ವರ್ತಿಸಿ. ವ್ಯಾಪಾರ ವ್ಯವಹಾರದಲ್ಲಿ ಆತ್ಮೀಯರ ಬೆಂಬಲ ದೊರೆಯುತ್ತದೆ. ವಿದ್ಯಾರ್ಥಿಗಳು ಅಧ್ಯಯನದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಬೇಡದ ವಿಚಾರಗಳಿಗೆ ಸಮಯ ವ್ಯರ್ಥ ಮಾಡದಿರಿ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಂದು ಬಣ್ಣ

ತುಲಾ

ಕುಟುಂಬದಲ್ಲಿ ಸ್ನೇಹದ ಮನೋಭಾವನೆಯ ವಾತಾವರಣ ಇರುತ್ತದೆ. ಮನೆಯ ಆಧನೀಕತೆಗೆ ಹೆಚ್ಚಿನ ಹಣ ಖರ್ಚಾಗಬಹುದು. ಉದ್ಯೋಗದಲ್ಲಿ ಉಂಟಾಗುವ ಬದಲಾವಣೆಗಳು ನಿಮ್ಮ ಪರವಾಗಿರುತ್ತವೆ. ವ್ಯಾಪಾರ ವ್ಯವಹಾರದಲ್ಲಿ ಬುದ್ಧಿವಂತಿಕೆಯ ಫಲವಾಗಿ ಉತ್ತಮ ಲಾಭ ಗಳಿಸುವಿರಿ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಮುನ್ನಡೆಯುವರು. ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಹಣಕಾಸಿನ ವ್ಯವಹಾರದಲ್ಲಿ ಹಾನಿಯಾಗುತ್ತದೆ. ಅನುಭವಸ್ಥರ ಸಲಹೆಯನ್ನು ಪಾಲಿಸಿ. ಆತ್ಮೀಯರೊಂದಿಗೆ ವಿವಾಹಯೋಗವಿದೆ. ಪರೋಪಕಾರಿ ಕೆಲಸದಲ್ಲಿ ಪಾಲ್ಗೊಳ್ಳುವಿರಿ. ಚಿನ್ನಾಭರಣಗಳಿಗೆ ಹೆಚ್ಚಿನ ಹಣದ ಅವಶ್ಯಕತೆ ಇರುತ್ತದೆ. ಭೂವಿವಾದವೊಂದು ನೆಮ್ಮದಿ ಕೆಡಿಸುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೆಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಪ್ಪು ಬಣ್ಣ

ವೃಶ್ಚಿಕ

ಕುಟುಂಬದಲ್ಲಿನ ತೊಂದರೆಗಳಿಗೆ ಪ್ರೀತಿ ವಿಶ್ವಾಸವೇ ನಿಜವಾದ ಪರಿಹಾರ. ಅರೋಗ್ಯದಲ್ಲಿ ಚೇತರಿಕೆ ಇರುತ್ತದೆ. ಹಳೆಯ ಸ್ನೇಹಿತರ ಬೇಟಿ ಹೊಸ ಆಯಾಮವನ್ನು ಉಂಟು ಮಾಡುತ್ತದೆ. ಉದ್ಯೋಗದಲ್ಲಿ ಎಲ್ಲರ ಸಹಾಯ ದೊರೆಯುತ್ತದೆ. ಆರ್ಥಿಕ ಪರಿಸ್ಥಿತಿಯಲ್ಲಿ ಏಳು ಬೀಳು ಉಂಟಾಗಬಹುದು. ಅವಶ್ಯಕತೆ ಇದ್ದಲ್ಲಿ ಮಾತ್ರ ಹಣ ವೆಚ್ಚಮಾಡಿರಿ. ಸೋದರಿಯ ಪ್ರೀತಿ ಹೊಸ ಸ್ಪೂರ್ತಿಯನ್ನು ನೀಡುತ್ತದೆ. ವ್ಯಾಪಾರ ವ್ಯವಹಾರದಲ್ಲಿ ತಾಳ್ಮೆಯಿಂದ ವರ್ತಿಸಿ. ಸ್ವಂತ ಬಳಕೆಗಾಗಿ ಹೊಸ ವಾಹನವನ್ನು ಕೊಳ್ಳುವಿರಿ. ವಿದ್ಯಾರ್ಥಿಗಳು ಹೊಸ ಆಶಯದೊಂದಿಗೆ ಇರುತ್ತಾರೆ. ಹಣಕಾಸಿನ ವ್ಯವಹಾರದಲ್ಲಿ ಲಾಭವಿರುತ್ತದೆ. ಬೆಳ್ಳಿಯ ಪದಾರ್ಥಗಳನ್ನು ಕೊಳ್ಳುವಿರಿ. ಆತ್ಮೀಯರೊಂದಿಗೆ ಸಂತಸದಿಂದ ವೇಳೆ ಕಳೆಯುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ತಿಳಿಹಸಿರು ಬಣ್ಣ

ಧನಸ್ಸು

ಕುಟುಂಬದ ಕೆಲಸ ಕಾರ್ಯಗಳು ಅಪೂರ್ಣಗೊಳ್ಳುವ ಕಾರಣ ಬೇಸರ ಉಂಟಾಗಲಿದೆ. ಅನಾವಶ್ಯಕವಾದ ವಿಚಾರಗಳಿಂದ ಖಿನ್ನತೆಗೆ ಒಳಗಾಗುವಿರಿ. ಉದ್ಯೋಗದಲ್ಲಿ ಧನಾತ್ಮಕ ಬದಲಾವಣೆಗಳು ಉಂಟಾಗಲಿವೆ. ಅನಿರೀಕ್ಷಿತ ಧನಲಾಭ ಇದ್ದರೂ ಹಣದ ಕೊರತೆ ಕಂಡುಬರುತ್ತದೆ. ವಿದ್ಯಾರ್ಥಿಗಳು ಮನರಂಜನೆಯ ನಡುವೆ ಕಲಿಕೆಯಲ್ಲಿ ಮುಂಚೂಣಿಯಲ್ಲಿ ಇರುತ್ತಾರೆ. ನಿಮ್ಮಲ್ಲಿ ಏಕತೆಯ ಮನೋಭಾವನೆ ಇರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಲಾಭವಿದೆ. ಪಾಲುಗಾರಿಕೆಯ ವ್ಯಾಪಾರ ಆರಂಭಿಸುವಿರಿ. ಸಂಗಾತಿಯ ಜೊತೆ ಮಧುರ ಭಾಂದವ್ಯ ಇರುತ್ತದೆ. ಅಜೀರ್ಣತೆಯ ತೊಂದರೆ ಉಂಟಾಗುತ್ತದೆ. ಉಳಿಸಿದ್ದ ಹಣವು ಖರ್ಚಾಗುವ ಸಾಧ್ಯತೆಗಳಿವೆ. ಸಿಹಿ ತಿಂಡಿಗಳಿಂದ ದೂರವಿರಿ.

ಪರಿಹಾರ : ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ

ಮಕರ

ಸಹನೆಯ ಗುಣ ಕುಟುಂಬದಲ್ಲಿನ ಆತ್ಮೀಯತೆಯನ್ನು ಹೆಚ್ಚಿಸುತ್ತದೆ. ಅತಿ ಮುಖ್ಯವೆನಿಸುವ ಕೆಲಸಗಳನ್ನು ಮಾತ್ರ ಮಾಡಲಿಚ್ಚಿಸುವಿರಿ. ಉದ್ಯೋಗದಲ್ಲಿನ ಜವಾಬ್ದಾರಿಯನ್ನು ನಿರ್ವಹಿಸಲು ಹೆಚ್ಚಿನ ಆತ್ಮವಿಶ್ವಾಸ ಬೇಕಾಗುತ್ತದೆ. ತಪ್ಪು ತಿಳುವಳಿಕೆಯಿಂದ ಚಿಕ್ಕ ವಿವಾದವೊಂದು ದೊಡ್ಡದಾಗುತ್ತದೆ. ಉದ್ಯೋಗದಲ್ಲಿ ಅಡಚಣೆ ಕಂಡುಬರುವುದಿಲ್ಲ. ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ವಿದ್ಯಾರ್ಥಿಗಳು ಚುರುಕಿನಿಂದ ಮುಂದುವರೆಯುತ್ತಾರೆ. ವಿದ್ಯಾರ್ಥಿಗಳು ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳುವರು. ವಿವಾದಗಳನ್ನು ಸಹನೆಯಿಂದ ಗೆಲ್ಲುವಿರಿ. ಉದ್ಯೋಗ ಬದಲಿಸುವಿರಿ. ಹಿರಿಯರ ಅನುಕಂಪ ದೊರೆಯುತ್ತದೆ. ಕಮೀಷನ್​ ವ್ಯವಹಾರದಲ್ಲಿ ಲಾಭವಿದೆ.

ಪರಿಹಾರ : ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಕುಂಭ

ಕುಟುಂಬದ ಸಮಸ್ಯೆಗಳಿಗೆ ಪರಿಹಾರ ಸೂಚಿಸುವಿರಿ. ಉದ್ಯೋಗದಲ್ಲಿನ ಯೋಜನೆಯೊಂದರಲ್ಲಿ ಹಿನ್ನಡೆ ಇರುತ್ತದೆ. ಅನಿವಾರ್ಯವಾಗಿ ಉದಗಯೋಗ ಬದಲಿಸುವ ತೀರ್ಮಾನ ಮಾಡುವಿರಿ. ಸ್ವಂತ ವ್ಯಾಪಾರದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಹಣವನ್ನು ಸಂಪಾದಿಸಬಲ್ಲಿರಿ. ವಿದ್ಯಾರ್ಥಿಗಳು ಉನ್ನತ ಅಧ್ಯಯನಕ್ಕೆ ಪರಸ್ಥಳಕ್ಕೆ ತೆರಳಲಿದ್ದಾರೆ. ಆತ್ಮೀಯರೊಂದಿಗೆ ಸಂತೋಷಕೂಟ ಆಯೋಜಿಸುವಿರಿ. ಬೇಸರದಿಂದ ದೂರವಾಗಲು ಧ್ಯಾನದ ಮಾರ್ಗದಲ್ಲಿ ಸಾಗುವಿರಿ. ಧಾರ್ಮಿಕ ಕಾರ್ಯಗಳಲ್ಲಿ ತನ್ಮಯರಾಗುವಿರಿ. ಅವಿವಾಹಿತರಿಗೆ ವಿವಾಹದ ಮಾತುಕತೆ ನಡೆಯಲಿದೆ. ಷ್ಟಾಕ್ ಷೇರಿನ ವ್ಯವಹಾರದಲ್ಲಿ ಉತ್ತಮ ಹಣಗಳಿಕೆ ಇರುತ್ತದೆ. ಸೋದರರ ನಡುವೆ ಅನಾವಶ್ಯಕ ವಾದ ವಿವಾದ ಉಂಟಾಗುತ್ತದೆ.

ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ನೀಲಿ ಬಣ್ಣ

ಮೀನ

ಕುಟುಂಬಕ್ಕೆ ಹೊಸಬರ ಆಗಮನ ಆಗಲಿದೆ. ಕುಟುಂಬದವರೊಂದಿಗೆ ದೀರ್ಘಕಾಲದ ಪ್ರಯಾಣಕ್ಕೆ ಯೋಜನೆ ರೂಪಿಸುವಿರಿ. ಉದ್ಯೋಗದಲ್ಲಿನ ಸಮಸ್ಯೆಗೆ ಪರಿಹಾರವನ್ನು ಕಂಡುಹಿಡಿಯುವಿರಿ. ಹಣಕಾಸಿನ ವಿಚಾರದಲ್ಲಿ ಒಮ್ಮೆ ತೆಗೆದುಕೊಂಡ ತೀರ್ಮಾನವನ್ನು ಬದಲಿಸದಿರಿ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ವರಮಾನ ಇರಲಿದೆ. ಆತ್ಮೀಯರ ಸಹಾಯದಿಂದ ಹಣ ಉಳಿಸುವ ಸಾಧ್ಯತೆಗಳಿವೆ. ಅವಿವಾಹಿತರಿಗೆ ವಿವಾಹಯೋಗವಿದೆ. ಎಲ್ಲರೂ ಮೆಚ್ಚುವಂತಹ ಕೆಲಸವನ್ನು ಮಾಡಲಿದ್ದೀರಿ. ವಿದ್ಯಾರ್ಥಿಗಳು ವಿದೇಶೀ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ತಲೆನೋವಿನ ತೊಂದರೆಯಿಂದ ಬಳಲುವಿರಿ. ಯಂತ್ರೋಪಕರಣಗಳಿಂದ ತೊಂದರೆ ಉಂಟಾಗಬಹುದು.

ಪರಿಹಾರ : ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ಎಲೆ ಹಸಿರು ಬಣ್ಣ

-----------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).