ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಉದ್ಯೋಗದಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು, ಹಣದ ವ್ಯವಹಾರದಲ್ಲಿ ಇರಲಿ ಎಚ್ಚರಿಕೆ; ಸೋಮವಾರದ ದಿನಭವಿಷ್ಯ

Tomorrow Horoscope: ಉದ್ಯೋಗದಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು, ಹಣದ ವ್ಯವಹಾರದಲ್ಲಿ ಇರಲಿ ಎಚ್ಚರಿಕೆ; ಸೋಮವಾರದ ದಿನಭವಿಷ್ಯ

8th April 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ. ನಾಳೆಯ ದಿನ ಭವಿಷ್ಯ ಹೀಗಿದೆ.

ಏಪ್ರಿಲ್ 8 ರ ಸೋಮವಾರದ ಭವಿಷ್ಯ ತಿಳಿಯಿರಿ
ಏಪ್ರಿಲ್ 8 ರ ಸೋಮವಾರದ ಭವಿಷ್ಯ ತಿಳಿಯಿರಿ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಸಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವುದು ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀಲವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್‌. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (8th April 2024 Horoscope)

ನಾಳಿನ ಪಂಚಾಂಗ

ಶ್ರೀಶೋಭಕೃತುನಾಮ ಸಂವತ್ಸರ,ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣಪಕ್ಷ, ಸೋಮವಾರ

ತಿಥಿ: ಯುಗಾದಿ ಅಮಾವಾಸ್ಯೆ ರಾ . 12.13 ರವರೆಗು ಇರುತ್ತದೆ. ಆನಂತರ ಪಾಡ್ಯ ಇರುತ್ತದೆ.

ನಕ್ಷತ್ರ: ಉತ್ತರಾ ಭಾದ್ರ ನಕ್ಷತ್ರವು ಬೆ.09.58 ರವರೆಗು ಇರುತ್ತದೆ. ಆನಂತರ ರೇವತಿ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 06.11

ಸೂರ್ಯಾಸ್ತ: ಸಂಜೆ 06.31

ರಾಹುಕಾಲ: ಬೆಳಗ್ಗೆ 07.30 ರಿಂದ 09.00

ಸೋಮವಾರ (ಏಪ್ರಿಲ್ 8) ಸಂಭವಿಸುವ ಸೂರ್ಯ ಗ್ರಹಣವು ಭಾರತದಲ್ಲಿ ಕಾಣುವುದಿಲ್ಲ. ಆದ್ದರಿಂದ ಇದನ್ನು ಆಚರಿಸುವ ಅಗತ್ಯತೆ ಇರುವುದಿಲ್ಲ. ಈ ಗ್ರಹಣದಿಂದ ಯಾವುದೇ ಪ್ರಭಾವ ಇರುವುದಿಲ್ಲ.

ಮೇಷ

ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಯೋಗ ವ್ಯಾಯಾಮದಿಂದ ದೈಹಿಕವಾಗಿ ಸದೃಢವಾಗುವಿರಿ. ಕುಟುಂಬದಲ್ಲಿ ಸ್ನೇಹಪೂರ್ವ ವಾತಾವರಣವಿರುತ್ತದೆ. ಉದ್ಯೋಗದಲ್ಲಿ ನಿಯೋಜಿತ ರೀತಿಯಲ್ಲಿ ಕಾರ್ಯವನ್ನು ಪೂರ್ಣ ಗೊಳಿಸುವಿರಿ. ವ್ಯಾಪಾರ ವ್ಯವಹಾರಗಳು ಸಹಜ ಸ್ಥಿತಿಯಲ್ಲಿ ಸಾಗುತವೆ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಮುಂದುವರೆಯುತ್ತಾರೆ.

ಪರಿಹಾರ: ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 1

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಕೇಸರಿ

ವೃಷಭ

ಅತಿಯಾದ ನಿರೀಕ್ಷೆ ಯಿಂದ ಮಾನಸಿಕ ಚಿಂತೆಗೆ ಒಳಗಾಗುವಿರಿ. ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳುವ ಪ್ರಯತ್ನ ಮಾಡುವಿರಿ. ಶಾಂತಿ ಸಹನೆಯಿಂದ ಇರುವುದು ಒಳ್ಳೆಯದು. ಉದ್ಯೋಗದಲ್ಲಿ ನಿಧಾನಗತಿಯ ಪ್ರಗತಿ ಕಂಡು ಬರುತ್ತದೆ. ವ್ಯಾಪಾರ ವ್ಯವಹಾರಗಳು ಸುಗಮವಾಗಿ ನಡೆಯಲಿವೆ. ವಿದ್ಯಾರ್ಥಿಗಳು ಆತಂಕವನ್ನು ಬಿಟ್ಟು ಆತ್ಮ ವಿಶ್ವಾಸವನ್ನು ರೂಡಿಸಿಕೊಳ್ಳಬೇಕು. ಭೂಸಂಬಂಧಿತ ವ್ಯವಹಾರ ಒಂದರಲ್ಲಿ ಉತ್ತಮ ಲಾಭ ಗಳಿಸುವಿರಿ.

ಅದೃಷ್ಟದ ಸಂಖ್ಯೆ: 4

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಮಿಥುನ

ಕುಟುಂಬದಲ್ಲಿ ಹಿರಿಯರ ಒಪ್ಪಿಗೆ ಇಲ್ಲದೆ ಯಾವುದೇ ಕೆಲಸವನ್ನು ಮಾಡುವುದಿಲ್ಲ. ಉದ್ಯೋಗದಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು ದೊರೆಯಲಿದೆ. ವ್ಯಾಪಾರದಲ್ಲಿ ಉತ್ತಮ ಆದಾಯವಿದ್ದರೂ ಸದುಪಯೋಗಪಡಿಸಿಕೊಳ್ಳುವುದಿಲ್ಲ. ಹಣಕಾಸಿನ ವಿವಾದವನ್ನು ಲಘುವಾಗಿ ಪರಿಗಣಿಸುತ್ತೀರಿ. ವಿದ್ಯಾರ್ಥಿಗಳು ಶ್ರದ್ಧೆಯಿಂದ ತಮ್ಮ ಕರ್ತವ್ಯ ಪಾಲಿಸುತ್ತಾರೆ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಸಂಪಾದನೆ ಇರುತ್ತದೆ. ಮನಸ್ಸು ಬದಲಾಯಿಸುವ ಕಾರಣ ತೊಂದರೆಯನ್ನು ಅನುಭವಿಸುವಿರಿ. ಸಂಗಾತಿಯ ಜೊತೆಯಲ್ಲಿ ಪ್ರವಾಸಕ್ಕೆ ತೆರಳಬಹುದು.

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 7

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಕೆಂಪು

ಕಟಕ

ಸದಾಕಾಲ ಯಾವುದಾದರೂ ಒಂದು ಕೆಲಸ ಕಾರ್ಯಗಳಲ್ಲಿ ನಿರತರಾಗುವಿರಿ. ಸಾರಿಗೆಗೆ ಸಂಬಂಧಪಟ್ಟ ಉದ್ಯೋಗದಲ್ಲಿ ನಿರತರಾಗುವಿರಿ. ಉದ್ಯೋಗದಲ್ಲಿ ಬೇಸರವಿರುತ್ತದೆ. ವ್ಯಾಪಾರ ವ್ಯವಹಾರಗಳು ನಿರ್ದಿಷ್ಟಗತಿಯಲ್ಲಿ ನಡೆಯಲಿವೆ. ವಿದ್ಯಾರ್ಥಿಗಳು ಆಟ ಪಾಠಗಳಲ್ಲಿ ಮುಂದಿರುತ್ತಾರೆ. ಮನಸ್ಸಿಗೆ ಹತ್ತಿರವಾದವರ ಜೊತೆ ವೇಳೆ ಕಳೆಯುವಿರಿ. ಪಾಲುಗಾರಿಕೆಯ ವ್ಯಾಪಾರದಲ್ಲಿ ಅದೃಷ್ಟ ವಿದೆ. ಜನಸಾಮಾನ್ಯರಿಗೆ ಅನುಕೂಲವಾಗುವಂತಹ ಸೇವಾ ವೃತ್ತಿಯನ್ನು ಆರಂಭಿಸುವಿರಿ.

ಪರಿಹಾರ: ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 2

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಕಿತ್ತಳೆ

ಸಿಂಹ

ಅನಾವಶ್ಯಕವಾದ ವಿವಾದ ಬೇಸರವನ್ನು ಉಂಟುಮಾಡಲಿದೆ. ನೇರ ಮತ್ತು ನಿಷ್ಠುರದ ಮಾತು ಕತೆಯಿಂದ ವಿರೋಧಿಗಳು ಹೆಚ್ಚುತ್ತಾರೆ. ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳನ್ನು ಪೂರೈಸುವಿರಿ. ಜವಾಬ್ದಾರಿಯುತ ಕೆಲಸ ಕಾರ್ಯಗಳನ್ನು ಪೂರೈಸಲು ಇಚ್ಚಿಸುವಿರಿ. ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ಸಮಾನವಾದಂತಹ ಸ್ಥಾನಮಾನ ಲಭಿಸುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಯಶಸ್ಸನ್ನುಗಳಿಸುವಿರಿ. ವಿದ್ಯಾರ್ಥಿಗಳು ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳುತ್ತಾರೆ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ.

ಪರಿಹಾರ: ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಹಳದಿ

ಕನ್ಯಾ

ಅನಿರೀಕ್ಷಿತವಾದ ವಿವಾದದಿಂದ ಬೇಸರಗೊಳ್ಳುವಿರಿ. ವಾತಾವರಣಕ್ಕೆ ಹೊಂದಿಕೊಂಡು ನಡೆವ ಕಾರಣ ನೆಮ್ಮದಿ ಇರುತ್ತದೆ. ಉದ್ಯೋಗದಲ್ಲಿ ಸಣ್ಣಮಟ್ಟದಟ್ಟ ಕೆಲಸಗಳಿಗೂ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡುವಿರಿ. ಹಿರಿಯ ಅಧಿಕಾರಿಗಳ ಪ್ರಶಂಸೆ ದೊರೆಯಲಿದೆ. ದುಡುಕದೆ ಸಂಧರ್ಬಾನುಸಾರವಾಗಿ ಬುದ್ಧಿವಂತಿಕೆಯ ತೀರ್ಮಾನವನ್ನು ತೆಗೆದುಕೊಳ್ಳುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಬಂಡವಾಳಕ್ಕೆ ಮೋಸವಾಗದು. ವಿದ್ಯಾರ್ಥಿಗಳು ದೃಢವಾದ ಮನಸ್ಸಿನಿಂದ ಕಲಿಕೆಯಲ್ಲಿ ಮುಂದುವರೆಯುತ್ತಾರೆ.

ಪರಿಹಾರ: ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 8

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಹಸಿರು

ತುಲಾ

ಸಂತೋಷದ ವಿಚಾರವೊಂದು ಬರಲಿದೆ. ಉದ್ಯೋಗದಲ್ಲಿ ಗುರುತರ ಬದಲಾವಣೆಗಳು ಕಂಡು ಬರಲಿವೆ. ನಿಮ್ಮ ಕಾರ್ಯದಕ್ಷತೆಗೆ ಮೆಚ್ಚಿಗೆ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಲಾಭಕ್ಕೆ ಕೊರತೆ ಕಂಡುಬರದು . ಉತ್ತಮ ಆದಾಯ ಇದ್ದರೂ ಹಣ ಉಳಿಸಲಾಗದು. ಹೊಸ ವ್ಯಾಪಾರವನ್ನು ಆರಂಭಿಸುವ ಸೂಚನೆ ಇದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಉನ್ನತ ಸ್ಥಾನ ಗಳಿಸುತ್ತಾರೆ.

ಪರಿಹಾರ: ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ನೀಲಿ

ವೃಶ್ಚಿಕ

ಕಷ್ಟದಲ್ಲಿ ಇರುವವರ ಬಗ್ಗೆ ಕನಿಕರ ಇದ್ದರೂ ಸಹಾಯ ಮಾಡಲಾಗದು. ಮನದಲ್ಲಿ ಒಳ್ಳೆಯ ಯೋಚನೆಗಳು ಇರುತ್ತವೆ. ಕುಟುಂಬದ ಶಾಂತಿ ನೆಮ್ಮದಿಯನ್ನು ಕಾಪಾಡುವಿರಿ. ಅನುಕೂಲಕರ ಬದಲಾವಣೆಗಳು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಕುಟುಂಬದಲ್ಲಿ ಪರಸ್ಪರ ಸಹಕಾರ ಮನೋಭಾವನೆ ಇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿನ ಬಂಡವಾಳದಲ್ಲಿ ಹಿಡಿತ ಇರಲಿ. ವಿದ್ಯಾರ್ಥಿಗಳು ಹೆಚ್ಚಿನ ಪ್ರಯತ್ನದಿಂದ ಗುರಿ ತಲುಪಲು ಸಾಧ್ಯವಾಗುತ್ತದೆ.

ಪರಿಹಾರ: ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 6

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನೇರಳೆ

ಧನಸ್ಸು

ತಪ್ಪನ್ನು ಒಪ್ಪುವ ಅಥವಾ ಕ್ಷಮಿಸುವ ಗುಣ ಇರುವುದಿಲ್ಲ. ಮಾತಿನಲ್ಲಿ ಮೋಡಿ ಮಾಡುವ ಕಲೆ ಸಿದ್ಧಿಸಿರುತ್ತದೆ. ಉದ್ಯೋಗದಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಲಾಭಗಳಿಸುವಿರಿ ವಿದ್ಯಾ ರ್ಥಿಗಳು ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕು. ಕುಟುಂಬದ ಹಿರಿಯರ ಆರೋಗ್ಯದಲ್ಲಿ ತೊಂದರೆ ಉಂಟಾಗಬಹುದು.

ಪರಿಹಾರ: ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 9

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಗುಲಾಬಿ

ಮಕರ

ಉತ್ತಮ ಕಾರ್ಯಯೋಜನೆಯಿಂದ ಚಿಂತೆ ದೂರವಾಗುತ್ತದೆ. ಸಹನೆಯಿಂದ ಕೆಲಸ ನಿರ್ವಹಿಸಿದರೆ ಉನ್ನತ ಮಟ್ಟದ ಯಶಸ್ಸು ದೊರೆಯುತ್ತದೆ. ಎಲ್ಲರ ವಿಶ್ವಾಸವನ್ನು ಗಳಿಸುವಿರಿ. ಉದ್ಯೋಗದಲ್ಲಿನ ತಿರುವುಗಳಿಂದ ಅಸ್ಥಿರತೆ ಉಂಟಾದರೂ ಸರಿದಾರಿಗೆ ತರುವಿರಿ. ದೈನಂದಿನ ಜೀವನದಲ್ಲಿ ಯಾವುದೇ ತೊಂದರೆ ಎದುರಾಗದು. ವ್ಯಾಪಾರ ವ್ಯವಹಾರಗಳಲ್ಲಿ ನಷ್ಟವಿರದು. ವಿದ್ಯಾರ್ಥಿಗಳು ಕ್ರಿಡಾ ಮನೋಭಾವನೆಯನ್ನು ರೂಢಿಸಿಕೊಳ್ಳಬೇಕು. ಸಂಬಂಧಿಕರು ಅಥವಾ ಆಪ್ತರ ಜೊತೆಯಲ್ಲಿ ಅನಾವಶ್ಯಕವಾಗಿ ವಿವಾದ ಉಂಟಾಗಲಿದೆ.

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 4

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಬೂದು

ಕುಂಭ

ವಿಶ್ರಾಂತಿ ಬಯಸಿ ಬಂಧು ವರ್ಗದ ಮನೆಗೆ ತೆರಳುವಿರಿ. ಕುಟುಂಬದಲ್ಲಿನ ಆಗು ಹೋಗುಗಳು ನಿಮ್ಮನ್ನು ಅವಲಂಭಿಸುತ್ತವೆ. ಮನೆಯ ಹೊರಗೂ ಒಳಗೂ ನಿಮಗೆ ಜವಾಬ್ದಾರಿ ಲಭಿಸುತ್ತದೆ. ಆದರೆ ಹೆಚ್ಚಿನ ಪರಿಶ್ರಮವನ್ನು ಇಚ್ಚಿಸದೆ ಸರಳವಾದ ಕೆಲಸ ಕಾರ್ಯಗಳನ್ನು ಮಾಡುವಿರಿ. ಕುಟುಂಬದಲ್ಲಿ ಮೌನ ನೆಲೆಸಿರುತ್ತದೆ. ಸತತ ಪ್ರಯತ್ನದಿಂದ ಉದ್ಯೋಗದಲ್ಲಿ ಯಶಸ್ಸನ್ನು ಗಳಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷೆಯಂತೆ ಹೆಚ್ಚಿನ ಲಾಭ ಕಾಣದು. ವಿದ್ಯಾರ್ಥಿಗಳು ಬಯಸಿದಂತೆ ಫಲಿತಾಂಶವನ್ನು ಪಡೆಯುತ್ತಾರೆ.

ಪರಿಹಾರ: ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ಮೀನ

ಅನಿರೀಕ್ಷಿತ ಧನಲಾಭದಿಂದ ಮನದ ಆತಂಕವು ಕಡಿಮೆಯಾಗಲಿದೆ. ಕುಟುಂಬದಲ್ಲಿ ವಿಶೇಷವಾದ ಧಾರ್ಮಿಕ ಕಾರ್ಯವೊಂದು ನಡೆಯಲಿದೆ. ಶೀತದ ತೊಂದರೆ ನಿಮನ್ನು ಕಾಡುತ್ತದೆ. ಉದ್ಯೋಗದಲ್ಲಿ ನಿಮ್ಮ ರೀತಿ ನೀತಿಗೆ ಉನ್ನತ ಗೌರವ ಲಭಿಸುತ್ತದೆ. ವ್ಯಾಪಾರ ವ್ಯವಹಾರಗಳು ಸರಳ ಗತಿಯಲ್ಲಿ ಸಾಗಲಿವೆ. ಬೇರೆಯವರ ಪ್ರಭಾವಕ್ಕೆ ಸುಲಭವಾಗಿ ಒಳಗಾಗುವಿರಿ. ವಿವಾಹ ಯೋಗವಿದೆ. ಉದ್ಯೋಗವನ್ನು ಬದಲಿಸುವ ತೀರ್ಮಾನ ಮಾಡುವಿರಿ.

ಪರಿಹಾರ: ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಹಾಲಿನ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 85468 65832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಗೌರಿವಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).