Tomorrow Horoscope: ಕುಟುಂಬದಲ್ಲಿ ನೆಮ್ಮದಿ, ಮಕ್ಕಳಿಗಾಗಿ ಹೆಚ್ಚಿನ ಹಣ ಹೊಂದಿಸಬೇಕು; ಶುಕ್ರವಾರದ ದಿನಭವಿಷ್ಯ
8 March 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ಇಂದು ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ಶುಕ್ರವಾರದ ದಿನಭವಿಷ್ಯ ಹೀಗಿದೆ..
ನಾಳೆಯ ರಾಶಿ ಭವಿಷ್ಯ: ʼನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (Tomorrow Horoscope In Kannada, 8 March 2024)
ನಾಳಿನ ಪಂಚಾಂಗ
ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಕೃಷ್ಣಪಕ್ಷ, ಶುಕ್ರವಾರ
ತಿಥಿ : ತ್ರಯೋದಶಿ ರಾ.08.00 ರವರೆಗು ಇದ್ದು ಆನಂತರ ಚತುರ್ದಶಿ ಆರಂಭವಾಗುತ್ತದೆ.
ನಕ್ಷತ್ರ: ಶ್ರವಣ ನಕ್ಷತ್ರವು ಬೆ.08.23 ರವರೆಗೆ ಇರುತ್ತದೆ. ಆನಂತರ ಧನಿಷ್ಠ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆ.06.29
ಸೂರ್ಯಾಸ್ತ: ಸ.06.28
ರಾಹುಕಾಲ : ಬೆ.10.30 ರಿಂದ ಮ.12.00
ರಾಶಿ ಫಲಗಳು
ಮೇಷ
ಆತುರದ ಮಾತಿನಿಂದ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಉಂಟಾಗಬಹುದು. ಉದ್ಯೋಗದಲ್ಲಿ ಅನುಕೂಲಕರ ಸನ್ನಿವೇಶವು ಎದುರಾಗುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಸಮಯವನ್ನು ಅರಿತು ತೀರ್ಮಾನ ತೆಗೆದುಕೊಳ್ಳಿ. ಕ್ರೀಯಾಶೀಲ ಗುಣದಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಸಂಗಾತಿಯೊಂದಿಗೆ ಧಾರ್ಮಿಕ ಸ್ಥಳವೊಂದಕ್ಕೆ ತೆರಳುವಿರಿ. ಹಣದ ಕೊರತೆ ಕಂಡು ಬರುತ್ತದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಮನೆಯ ಸೊಬಗು ಹೆಚ್ಚಿಸಲು ಆಕರ್ಷಕ ವಸ್ತುಗಳನ್ನು ಖರೀದಿಸುವಿರಿ. ಆತ್ಮೀಯರ ಆಗಮನದಿಂದ ಕೆಲಸವೊಂದು ಅಪೂರ್ಣಗೊಳ್ಳುತ್ತದೆ. ಮನೆಯಲ್ಲಿರುವ ಹೆಣ್ಣು ಮಕ್ಕಳಿಗೆ ಉತ್ತಮ ಉದ್ಯೋಗ ದೊರೆಯುತ್ತದೆ.
ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಕಂದು ಬಣ್ಣ
ವೃಷಭ
ಯಾವುದೇ ವಿಶೇಷ ಬದಲಾವಣೆಗಳು ಕಂಡುಬರುವುದಿಲ್ಲ. ಕುಟುಂಬ ನಿರ್ವಹಣೆಗಾಗಿ ಹಣದ ಅಗತ್ಯತೆ ಇರುತ್ತದೆ. ಉದ್ಯೋಗವನ್ನು ಬದಲಾಯಿಸುವ ವಿಚಾರ ಮಾಡುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ನಿಧಾನ ಗತಿಯ ಪ್ರಗತಿ ಕಂಡು ಬರುತ್ತದೆ. ವಿದ್ಯಾರ್ಥಿಗಳು ದೃಢ ಮನಸ್ಸಿನಿಂದ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಅನಿವಾರ್ಯವಾಗಿ ಆತ್ಮೀಯರಿಂದ ಹಣವನ್ನು ಪಡೆಯುವಿರಿ. ಪ್ರತಿಯೊಂದು ವಿಚಾರವನ್ನು ಗಮನವಹಿಸಿ ನೋಡುವಿರಿ. ಕುಟುಂಬದ ಸದಸ್ಯರ ಜೊತೆ ಸಂತೋಷದ ಕ್ಷಣಗಳು ಎದುರಾಗಲಿವೆ. ಹೊಸ ನಿರೀಕ್ಷೆಯಿಂದ ದಿನ ಕಳೆಯುವಿರಿ. ಮನದಲ್ಲಿ ವೈರಾಗ್ಯ ಭಾವನೆ ಮೂಡುತ್ತದೆ. ಎದುರಾಗುವ ಕಷ್ಟ ನಷ್ಟಗಳನ್ನು ಎದುರಿಸಿ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ : ಕಪ್ಪು ಬಣ್ಣ
ಮಿಥುನ
ಉತ್ತಮ ಆದಾಯವಿದ್ದರೂ ಕುಟುಂಬದಲ್ಲಿ ಹಣಕಾಸಿನ ಕೊರತೆ ಇರುತ್ತದೆ. ಉದ್ಯೋಗದಲ್ಲಿ ಅನಿರೀಕ್ಷಿತವಾದ ಬೆಳವಣಿಗೆಗಳು ಜವಾಬ್ದಾರಿಯನ್ನು ಹೆಚ್ಚಿಸುತ್ತದೆ. ವ್ಯಾಪಾರ ವ್ಯವಹಾರದಲ್ಲಿನ ಬದಲಾವಣೆ ಆದಾಯವನ್ನು ಹೆಚ್ಚಿಸುತ್ತದೆ. ವಿದ್ಯಾರ್ಥಿಗಳು ಮಾನಸಿಕ ಒತ್ತಡದಿಂದ ಹೊರ ಬಂದಲ್ಲಿ ಸುಲಭವಾಗಿ ಗುರಿ ತಲುಪಬಹುದು. ಸಂಗಾತಿ ಮತ್ತು ಮಕ್ಕಳ ಜೊತೆಯಲ್ಲಿ ಕಿರು ಪ್ರವಾಸ ಕೈಗೊಳ್ಳುವಿರಿ. ಸ್ನೇಹಿತರಿಂದ ಹಣದ ಸಹಾಯ ಸಹಕಾರ ದೊರೆಯುತ್ತದೆ. ಭವಿಷ್ಯದ ಜೀವನಕ್ಕಾಗಿ ಸ್ಟಾಕ್ ಮತ್ತು ಷೇರುಗಳಲ್ಲಿ ಹಣವನ್ನು ವಿನಿಯೋಗಿಸುವಿರಿ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗುತ್ತದೆ. ಪಾಲುಗಾರಿಕೆಯ ವ್ಯಾಪಾರದಲ್ಲಿ ಉತ್ತಮ ಲಾಭವಿದೆ. ಆಹಾರ ಸೇವನೆಯಲ್ಲಿ ಮಿತಿ ಇರಲಿ.
ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ತಿಳಿ ಹಸಿರು ಬಣ್ಣ
ಕಟಕ
ಅತಿಯಾದ ಶಿಸ್ತಿನ ವಾತಾವರಣ ಕುಟುಂಬದಲ್ಲಿ ಬೇಸರ ಉಂಟುಮಾಡುತ್ತದೆ. ಉದ್ಯೋಗದಲ್ಲಿ ಎದುರಾದ ಆತಂಕವನ್ನು ಸಹನೆಯಿಂದ ಗೆಲ್ಲುವಿರಿ. ಹಣದ ಕೊರತೆ ಉಂಟಾದಲ್ಲಿ ಸಿಡುಕಿನಿಂದ ವರ್ತಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಆತುರದ ನಿರ್ಧಾರ ತೆಗೆದುಕೊಂಡು ನಂತರ ಪಶ್ಚಾತಾಪ ಪಡುವಿರಿ. ಪಾಲುಗಾರಿಕೆಯ ವ್ಯಾಪಾರದಲ್ಲಿ ತೊಂದರೆ ಇರುತ್ತದೆ. ವಿದ್ಯಾರ್ಥಿಗಳು ಹಠದ ಬುದ್ಧಿಯಿಂದ ನಿರೀಕ್ಷಿತ ಯಶಸ್ಸು ಗಳಿಸುತ್ತಾರೆ. ಅವಶ್ಯಕತೆ ಇದ್ದಾಗ ಹಣದ ಸಹಾಯ ದೊರೆಯುತ್ತದೆ. ಸಮಾಜದ ಗಣ್ಯ ವ್ಯಕ್ತಿ ಒಬ್ಬರನ್ನು ಭೇಟಿ ಮಾಡುವಿರಿ. ಕೆಲಸದ ನಡುವೆ ವಿಶ್ರಾಂತಿ ಪಡೆಯಲು ಪ್ರಯತ್ನಿಸಿ. ಮಕ್ಕಳಿಗಾಗಿ ಹೆಚ್ಚಿನ ಹಣವನ್ನು ಹೊಂದಿಸಬೇಕಾಗುತ್ತದೆ.
ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈ ಖಡ್ಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ
ಸಿಂಹ
ಸಣ್ಣ ಪುಟ್ಟ ತಪ್ಪುಗಳನ್ನು ಸಹ ಮನ್ನಿಸಿದರೆ ಕುಟುಂಬದಲ್ಲಿ ಸೌಹಾರ್ದಯುತ ವಾತಾವರಣ ಮೂಡುತ್ತದೆ. ಉದ್ಯೋಗದಲ್ಲಿ ಹೊಸ ಯೋಜನೆಗಳ ನಿರೀಕ್ಷೆಯಲ್ಲಿ ಇರುವಿರಿ. ಅಧಿಕಾರಿಗಳ ವೃತ್ತಿಜೀವನದಲ್ಲಿ ನಿರೀಕ್ಷಿತ ಬದಲಾವಣೆ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಉನ್ನತ ಮಟ್ಟ ತಲುಪುವಿರಿ. ವಿದ್ಯಾರ್ಥಿಗಳು ಹಠದಿಂದ ಎಲ್ಲರ ವಿಶ್ವಾಸ ಕಳೆದುಕೊಳ್ಳಬಹುದು. ಮನೆತನದ ಹಣ ಮತ್ತು ಆಸ್ತಿಯ ವಿಚಾರದಲ್ಲಿನ ವಿವಾದ ಕೊನೆಗೊಳ್ಳಲಿದೆ. ಆಸ್ತಿ ವಿಸ್ತರಿಸುವ ಆಶಯ ಇರುತ್ತದೆ. ಸ್ವಂತ ಬಳಕೆಗಾಗಿ ಹೊಸ ವಾಹನ ಕೊಳ್ಳುವಿರಿ. ಕೈಕಾಲುಗಳ ಶಕ್ತಿ ಕುಂಠಿತಗೊಳ್ಳಬಹುದು. ಹೊಸ ಹಣಕಾಸಿನ ವ್ಯವಹರದ ಬಗ್ಗೆ ಮಾತುಕತೆ ನಡೆಯುತ್ತದೆ. ವೃಥಾ ತಿರುಗಾಟ ಇರುತ್ತದೆ.
ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ನೀಲಿಯುಕ್ತ ಬಿಳಿ ಬಣ್ಣ
ಕನ್ಯಾ
ಮಾಡುವ ತಪ್ಪನ್ನು ಒಪ್ಪದೆ ಕೋಪದಿಂದ ವರ್ತಿಸಿ ಪಾರಾಗುವಿರಿ. ಕುಟುಂಬದಲ್ಲಿ ಪರಸ್ಪರ ಅಸಮಾಧಾನ ಇರಬಹುದು. ಒಲ್ಲದ ಮನಸ್ಸಿನಿಂದ ಮಾಡುವ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ಇರದು. ಉದ್ಯೋಗದಲ್ಲಿ ಎಲ್ಲರ ಜೊತೆ ಅನುಸರಣೆ ಮುಖ್ಯ. ವಿದ್ಯಾರ್ಥಿಗಳು ಏಕಾಗ್ರತೆಯನ್ನು ಬೆಳೆಸಿಕೊಂಡರೆ ಶುಭ ಫಲಿತಾಂಶಗಳು ದೊರೆಯುತ್ತವೆ. ಸ್ನೇಹಿತರೊಂದಿಗೆ ಸಂತೋಷಕೂಟಕ್ಕೆ ತೆರಳುವಿರಿ. ವಂಶಾನುಗತವಾಗಿ ಬಂದ ವಿದ್ಯೆಯೊಂದು ಜೀವನಕ್ಕೆ ಆಧಾರವಾಗುತ್ತದೆ. ಆತ್ಮೀಯರೊಬ್ಬರು ಮನೆಗೆ ಭೇಟಿ ನೀಡಲಿದ್ದಾರೆ. ಸೋದರ ಮಾವನಿಂದ ಅನುಕೂಲತೆ ಉಂಟಾಗಲಿದೆ. ಮಾನಸಿಕವಾಗಿ ದುರ್ಬಲರಾಗುವಿರಿ. ಅನಿರೀಕ್ಷಿತವಾದ ಧನಲಾಭ ಇರುತ್ತದೆ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ
ಅದೃಷ್ಟದ ಸಂಖ್ಯೆ : 9
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಹಾಲಿನ ಬಣ್ಣ
ತುಲಾ
ಕುಟುಂಬದ ಸದಸ್ಯರ ಜೊತೆ ಹಣಕಾಸಿನ ವಿವಾದವೊಂದು ಉಂಟಾಗುತ್ತದೆ. ಉದ್ಯೋಗದಲ್ಲಿ ಸಂತಸದ ಕ್ಷಣಗಳು ನೆಲೆಸಿರುತ್ತವೆ. ಹೊಸ ನಿರೀಕ್ಷೆಗಳು ಉದ್ಯೋಗವನ್ನು ಬದಲಿಸಲು ಪ್ರೇರೇಪಿಸುತ್ತದೆ. ಸಮಾಜದಲ್ಲಿ ಉನ್ನತ ಮಟ್ಟದ ಸ್ಥಾನ ಮಾನ ಲಭಿಸುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಆತ್ಮೀಯರ ಸಹಾಯ ದೊರೆಯುತ್ತದೆ. ಸಹನೆಯಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಯಶಸ್ಸನ್ನು ಗಳಿಸುತ್ತಾರೆ. ಮಕ್ಕಳ ಸಂತಸ ಹೊಸ ಅವಕಾಶವನ್ನು ಕಲ್ಪಿಸುತ್ತದೆ. ಹಣಕಾಸಿನ ವಿಚಾರದಲ್ಲಿ ಸಂತೃಪ್ತಿ ಕಾಣುವಿರಿ. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸುವಿರಿ. ಕಷ್ಟಕ್ಕೆಂದು ನೀಡಿದ್ದ ಹಣವನ್ನು ಸಂಬಂಧಿಕರು ಮರಳಿಸುತ್ತಾರೆ. ಅಲ್ಪ ತೃಪ್ತಿಗೆ ಪಾಲುಗಾರಿಕೆಯ ವ್ಯಾಪಾರವನ್ನು ಆರಂಭಿಸುವಿರಿ.
ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ
ಅದೃಷ್ಟದ ಸಂಖ್ಯೆ : 9
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಎಲೆ ಹಸಿರು ಬಣ್ಣ
ವೃಶ್ಚಿಕ
ಯಾರ ಸಲಹೆಯನ್ನೂ ಸುಲಭವಾಗಿ ಒಪ್ಪುವುದಿಲ್ಲ. ಅತಿಯಾದ ನಿರೀಕ್ಷೆ ಕುಟುಂಬದಲ್ಲಿ ಹೊಸತನವನ್ನು ಉಂಟುಮಾಡುತ್ತದೆ. ಉದ್ಯೋಗದಲ್ಲಿ ಉನ್ನತ ಅಧಿಕಾರಕ್ಕೆ ಹಾತೊರೆಯುವಿರಿ. ನಿರಾಸೆಯ ಕಾರಣ ಉದ್ಯೋಗವನ್ನು ಬದಲಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಹಿನ್ನಡೆ ಲಭಿಸುತ್ತದೆ. ಕುಟುಂಬದವರ ಸಹಾಯ ದೊರೆಯುತ್ತದೆ. ವಿದ್ಯಾರ್ಥಿಗಳು ಪ್ರಥಮ ಆದ್ಯತೆಯನ್ನು ವಿದ್ಯಾಭ್ಯಾಸಕ್ಕೆ ನೀಡುತ್ತಾರೆ. ಹೆಚ್ಚಿನ ಕಲಿಕೆಗಾಗಿ ವಿದೇಶಕ್ಕೆ ತೆರಳುವ ಅವಕಾಶವಿದೆ. ಜಾಣ್ಮೆಯ ಮಾತಿನಿಂದ ಜನರ ಮನಸ್ಸನ್ನು ಗೆಲ್ಲುವಿರಿ. ಆಧ್ಯಾತ್ಮಿಕತೆಯ ಕಡೆಗೆ ಮನಸ್ಸು ವಾಲುತ್ತದೆ. ಹಣಕಾಸಿನ ವ್ಯವಹಾರ ಒಳ್ಳೆಯದಲ್ಲ. ತಾಯಿಯವರಿಗೆ ಸಂಬಂಧಿಸಿದ ಕೆಲಸವೊಂದು ಪೂರ್ಣಗೊಳ್ಳುತ್ತದೆ.
ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಬಿಸಿ.
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಕೇಸರಿ ಬಣ್ಣ
ಧನಸ್ಸು
ಕುಟುಂಬದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಉದ್ಯೋಗದಲ್ಲಿ ಸಮಸ್ಯೆ ಉದ್ಭವಿಸಿದರೂ ಅದರಿಂದ ಪಾರಾಗುವಿರಿ. ಹೆಚ್ಚಿನ ಹಣದ ನಿರೀಕ್ಷೆಯಿಂದ ಉದ್ಯೋಗವನ್ನು ಬದಲಿಸುವಿರಿ. ವಿದ್ಯಾರ್ಥಿಗಳು ವಿಶೇಷವಾದ ಜ್ಞಾನಾರ್ಜನೆಗಾಗಿ ವಿದೇಶಕ್ಕೆ ತೆರಳುತ್ತಾರೆ. ವ್ಯಾಪಾರ ವ್ಯವಹಾರಗಳಲ್ಲಿ ಗಡಿಬಿಡಿಯ ನಿರ್ಧಾರಗಳನ್ನು ಕೈಗೊಳ್ಳದಿರಿ. ಹಣಕಾಸಿನ ವ್ಯವಹಾರಗಳ ಬಗ್ಗೆ ದೃಢವಾದ ನಿಶ್ಚಯ ತೆಗೆದುಕೊಳ್ಳುವಿರಿ. ಮನೆಯಲ್ಲಿ ಶಾಂತಿ ಹಾಗೂ ಸಾಮರಸ್ಯಕ್ಕೆ ಕಾರಣರಾಗುವಿರಿ. ಕೋಪವನ್ನು ಮರೆತರೆ ಆತ್ಮೀಯರ ಸಹವಾಸ ದೊರೆಯುತ್ತದೆ. ವೈವಾಹಿಕ ಜೀವನದಲ್ಲಿನ ವಿವಾದ ಬಗೆಹರಿಯುತ್ತದೆ. ಮನೆಯನ್ನು ಕೂಳ್ಳುವ ಸಾಧ್ಯತೆ ಇದೆ. ಸೋದರಿಯಿಂದ ಹಣದ ಸಹಾಯ ದೊರೆಯುತ್ತದೆ.
ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ
ಮಕರ
ಆಶಾವಾದಿಗಳಾದ ಕಾರಣ ಕುಟುಂಬದಲ್ಲಿ ನೆಮ್ಮದಿ ನೆಲೆಸಿರುತ್ತದೆ. ಬದಲಾದ ಉದ್ಯೋಗದಲ್ಲಿ ಉಜ್ವಲವಾದ ಭವಿಷ್ಯವಿದೆ. ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷೆಗಳು ಸಾಫಲ್ಯಗೊಳ್ಳುತ್ತವೆ. ವಿದ್ಯಾರ್ಥಿಗಳು ಭರವಸೆಗಳು ಮತ್ತು ಆಸೆಗಳನ್ನು ಈಡೇರಿಸಿಕೊಳ್ಳುವಲ್ಲಿ ಯಶಸ್ವಿಯಾಗುತ್ತಾರೆ. ಆರ್ಥಿಕ ಪರಿಸ್ಥಿತಿ ಕ್ರಮೇಣವಾಗಿ ಸಹಜಸ್ಥಿತಿಗೆ ಮರಳುತ್ತದೆ. ದಿನ ನಿತ್ಯದ ಯೋಜನೆ ರೂಪಿಸಲು ಆತ್ಮೀಯರೊಬ್ಬರು ಸಹಾಯ ಮಾಡುತ್ತಾರೆ. ಸಂಗಾತಿಯೊಡನೆ ಉತ್ತಮ ಸಂಬಂಧವನ್ನು ಹೊಂದಿರುತ್ತೀರಿ. ಕುಟುಂಬದೊಂದಿಗೆ ಕಿರುಪ್ರವಾಸ ಕೈಗೊಳ್ಳುವಿರಿ. ಮಕ್ಕಳ ವಿಚಾರದಲ್ಲಿನ ಒತ್ತಡ ದೂರವಾಗುವುದು. ಮನೆಯಲ್ಲಿ ಆಂತರಿಕ ಬದಲಾವಣೆಯನ್ನು ಮಾಡುವಿರಿ. ವಾಹನವನ್ನು ಬದಲಾವಣೆ ಮಾಡುವಿರಿ.
ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಕೆಂಪು ಬಣ್ಣ
ಕುಂಭ
ನಿಮ್ಮಲ್ಲಿ ವಿಶೇಷವಾದ ಚೈತನ್ಯ ಮನೆಮಾಡಿರುತ್ತದೆ. ಕುಟುಂಬದಲ್ಲಿನ ನಿರೀಕ್ಷೆಗಳು ಕಾರ್ಯರೂಪಕ್ಕೆ ಬರಲಿವೆ. ಉದ್ಯೋಗದಲ್ಲಿನ ಜಾವಾಬ್ದಾರಿ ಪೂರೈಸಲು ಸಹೋದ್ಯೋಗಿಗಳ ಸಹಕಾರ ದೊರೆಯುತ್ತದೆ. ಕುಟುಂಬದ ಹಿರಿಯರ ಸೇವಾಮನೋಭಾವ ನಿಮ್ಮ ಮನಸ್ಸಿನ ಮೇಲೆ ಪ್ರಭಾವ ಬೀರುತ್ತದೆ. ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಕಟ್ಟಿದ ಕನಸು ನನಸಾಗಲಿದೆ. ಸಹೋದ್ಯೋಗಿಯೊಬ್ಬರು ಅಮೂಲ್ಯವಾದ ಉಡುಗೊರೆ ನೀಡಲಿದ್ದಾರೆ. ಆತ್ಮೀಯರ ಜೊತೆಯಲ್ಲಿ ಉದ್ಧಿಮೆಯೊಂದನ್ನು ಆರಂಭಿಸಲಿದ್ದೀರಿ. ಚೆನ್ನಾಗಿ ಮಾತನಾಡಿ ಸ್ವಂತ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಯಾರಿಗಾದರೂ ಭಾಷೆ ನೀಡುವ ಮೊದಲು ಪೂರ್ಣ ಮಾಹಿತಿಯನ್ನು ಸಂಗ್ರಹಿಸಿ. ಮನೆಯ ದುರಸ್ತಿಗೆ ಹಣದ ಕೊರತೆ ಇರಲಿದೆ.
ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಹಳದಿ ಬಣ್ಣ
ಮೀನ
ಕುಟುಂಬದಲ್ಲಿ ಪರಸ್ಪರ ಆತ್ಮೀಯತೆ ಇರುತ್ತದೆ. ಉದ್ಯೋಗದಲ್ಲಿನ ಜವಾಬ್ದಾರಿ ಹೆಚ್ಚುತ್ತದೆ. ವ್ಯಾಪಾರ ವ್ಯವಹಾರದಲ್ಲಿ ತೃಪ್ತಿ ಮತ್ತು ಉತ್ತಮ ಆದಾಯ ದೊರೆಯುತ್ತದೆ. ವಿದ್ಯಾರ್ಥಿಗಳು ಮನರಂಜನೆಯಲ್ಲಿ ಹೆಚ್ಚು ಸಮಯ ಕಳೆಯಲಿದ್ದಾರೆ. ಅನಾವಶ್ಯಕವಾಗಿ ಖರ್ಚುವೆಚ್ಚಗಳು ಹೆಚ್ಚಲಿವೆ. ಕುಟುಂಬದ ಸದಸ್ಯರ ಭಾವನೆಗಳನ್ನು ನೋಯಿಸದಿರಿ. ಕೋಪವನ್ನು ನಿಯಂತ್ರಿಸಿ ಶಾಂತಿ ಸಂಯಮದಿಂದ ವರ್ತಿಸಿ. ಕುಟುಂಬದವರ ಜೊತೆಯಲ್ಲಿ ಯಾತ್ರಾ ಸ್ಥಳಕ್ಕೆ ಭೇಟಿ ನೀಡಬಹುದು. ಪ್ರಯಾಣದಿಂದ ಲಾಭವಿದೆ. ಸ್ವಂತ ವಾಹನಲಾಭವಿದೆ. ಮನೆಯಲ್ಲಿನ ಸಾಕು ಪ್ರಾಣಿಗಳ ಬಗ್ಗೆ ಎಚ್ಚರಿಕೆ ಇರಲಿ. ಅಜೀರ್ಣದ ಸಮಸ್ಯೆ ಬಹುವಾಗಿ ಕಾಡಲಿದೆ. ಆಹಾರ ಸೇವನೆಯಲ್ಲಿ ಇತಿಮಿತಿ ಇರಲಿ.
ಪರಿಹಾರ : ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ : ಬೆಳ್ಳಿಯ ಬಣ್ಣ
------------
ಜ್ಯೋತಿಷಿ: ಎಚ್. ಸತೀಶ್, ಬೆಂಗಳೂರು
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).