ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಹೊಸ ವಾಹನ ಕೊಳ್ಳುವ ಯೋಗವಿದೆ, ಹೆಣ್ಣುಮಕ್ಕಳು ಸಂತಸದ ಸುದ್ದಿಯೊಂದನ್ನು ಕೇಳಲಿದ್ದಾರೆ; ನಾಳಿನ ದಿನಭವಿಷ್ಯ

Tomorrow Horoscope: ಹೊಸ ವಾಹನ ಕೊಳ್ಳುವ ಯೋಗವಿದೆ, ಹೆಣ್ಣುಮಕ್ಕಳು ಸಂತಸದ ಸುದ್ದಿಯೊಂದನ್ನು ಕೇಳಲಿದ್ದಾರೆ; ನಾಳಿನ ದಿನಭವಿಷ್ಯ

9th April 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ. ನಾಳೆಯ ದಿನ ಭವಿಷ್ಯ ಹೀಗಿದೆ.

ಏಪ್ರಿಲ್‌ 9ರ ದಿನಭವಿಷ್ಯ
ಏಪ್ರಿಲ್‌ 9ರ ದಿನಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಸಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವುದು ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀಲವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್‌. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (9th April 2024 Horoscope)

ನಾಳಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲಪಕ್ಷ, ಮಂಗಳವಾರ

ತಿಥಿ: ಪಾಡ್ಯ ರಾತ್ರಿ 10.01ರವರೆಗೂ ಇರುತ್ತದೆ. ಅನಂತರ ಬಿದಿಗೆ ಆರಂಭವಾಗುತ್ತದೆ.

ನಕ್ಷತ್ರ: ರೇವತಿ ನಕ್ಷತ್ರವು ಬೆಳಿಗ್ಗೆ 8.22ರವರೆಗೂ ಇರುತ್ತದೆ. ಅನಂತರ ಅಶ್ವಿನಿ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಿಗ್ಗೆ 6.10

ಸೂರ್ಯಾಸ್ತ: ಸಂಜೆ 6.31

ರಾಹುಕಾಲ: ಬೆಳಿಗ್ಗೆ 3.00 ರಿಂದ ಮಧ್ಯಾಹ್ನ 4.30

ಮೇಷ

ನಿಮ್ಮ ಬಗ್ಗೆ ಸುತ್ತಮುತ್ತಲಿನ ಜನರಿಗೆ ವಿಶೇಷ ಪ್ರೀತಿ, ಗೌರವ ಮೂಡುತ್ತದೆ. ಸಾಮರ್ಥ್ಯಕ್ಕೆ ಸವಾಲೆನಿಸುವ ಕೆಲಸಗಳು ಎದುರಾಗಲಿವೆ. ಉದ್ಯೋಗದಲ್ಲಿ ಯಾವುದೇ ಆತಂಕ ಇರದು. ವ್ಯಾಪಾರ ವ್ಯವಹಾರಗಳು ಲಾಭದಾಯಕವಾಗಿ ಸಾಗಲಿವೆ. ಹೊಸ ವಾಹನವನ್ನು ಕೊಳ್ಳುವಿರಿ. ಆತ್ಮೀಯರ ಮನೆಗೆ ತೆರಳುವಿರಿ.

ಪರಿಹಾರ: ಧಾರ್ಮಿಕ ಕೇಂದ್ರಗಳಿಗೆ ಹಾಲು, ಮೊಸರು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 6

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ವೃಷಭ

ಕುಟುಂಬದಲ್ಲಿ ಸಂತೋಷದ ಘಟನೆಯೊಂದು ನಡೆಯಲಿದೆ. ಉದ್ಯೋಗದಲ್ಲಿ ಕಾರ್ಯದ ಒತ್ತಡವಿರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಬದಲಾವಣೆಗಳು ಕಾಣದಿದ್ದರೂ ಲಾಭವಿರುತ್ತದೆ. ವಿದೇಶ ಪ್ರವಾಸದ ಅವಕಾಶ ದೊರೆಯತ್ತದೆ. ಹುರುಳಿಲ್ಲದ ಮಾತನ್ನು ನಂಬಿ ದುಡುಕಿನ ನಿರ್ಧಾರಗಳನ್ನು ಕೈಗೊಳ್ಳುವಿರಿ.

ಪರಿಹಾರ: ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 9

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ : ಆಕಾಶನೀಲಿ ಬಣ್ಣ

ಮಿಥುನ

ಅನ್ಯರ ವಿಚಾರದಲ್ಲಿ ಆಸಕ್ತಿ ತೋರಿಸದೆ ಸ್ವಂತ ಕೆಲಸ ಕಾರ್ಯಗಳಿಗೆ ಮೊದಲ ಆದ್ಯತೆಯನ್ನು ನೀಡುವಿರಿ. ಹಣಕಾಸಿನ ವಿಚಾರದಲ್ಲಿ ದೃಢವಾದ ನಿಲುವನ್ನು ತೆಗೆದುಕೊಳ್ಳಬೇಕು. ಸಣ್ಣ ಪ್ರಮಾಣದ ವ್ಯಾಪಾರ ವ್ಯವಹಾರಗಳು ಲಾಭದಾಯಕವಾಗಿರುತ್ತದೆ. ದೃಢವಾದ ನಿರ್ಧಾರಗಳು ಹೊಸ ಜೀವನ ರೂಪಿಸುತ್ತವೆ.

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 12

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ರಕ್ತದ ಬಣ್ಣ

ಕಟಕ

ಸೋಲನ್ನು ಗೆಲುವನ್ನಾಗಿಸುವ ಬುದ್ಧಿವಂತಿಕೆ ನಿಮ್ಮಲಿರುತ್ತದೆ. ಅತಿಯಾದ ಆತ್ಮವಿಶ್ವಾಸ ಜೀವನದಲ್ಲಿ ವಿವಾದವನ್ನು ಸೃಷ್ಟಿಸುತ್ತದೆ. ಶಾಂತಿ ಸಂಯಮದ ಹಾದಿ ಸುಖ ಜೀವನವನ್ನು ರೂಪಿಸುತ್ತದೆ. ಆರೋಗ್ಯದ ಬಗ್ಗೆ ಗಮನವಿರಲಿ. ಉದ್ಯೋಗದಲ್ಲಿ ಅಭಿವೃದ್ದಿ ಇರುತ್ತದೆ.

ಪರಿಹಾರ: ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಎಲೆಹಸಿರು ಬಣ್ಣ

ಸಿಂಹ

ಮಗಳು ಅಥವಾ ಸೋದರಿಗೆ ಪ್ರಖ್ಯಾತ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ಸಮಾಜದ ಮುಖ್ಯಸ್ಥರ ಸ್ಥಾನ ದೊರೆಯಲಿದೆ. ಕುಟುಂಬಕ್ಕೆ ಸೇರಿದ ವಿವಾದಿತ ಆಸ್ತಿ ಮರಳಿ ಕೈ ಸೇರುತ್ತದೆ. ಉದ್ಯೋಗದಲ್ಲಿ ಉನ್ನತಾಧಿಕಾರಿಗಳ ಸಹಾಯ ಸಹಕಾರ ದೊರೆಯುತ್ತದೆ. ಹೆಣ್ಣುಮಕ್ಕಳಿಗೆ ಸಂತಸದ ವಾರ್ತೆಯೊಂದು ಕೇಳಿ ಬರಲಿದೆ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ : ಕೇಸರಿ ಬಣ್ಣ

ಕನ್ಯಾ

ಗಲಿಬಿಲಿಯ ಮನಸ್ಸಿನ ನಡುವೆಯೂ ಕೆಲಸ ಕಾರ್ಯದಲ್ಲಿ ತೊಂದರೆ ಕಂಡುಬರದು. ವಿದ್ಯಾರ್ಥಿಗಳು ಏಕಾಗ್ರತೆಯನ್ನು ಬೆಳೆಸಿಕೊಳ್ಳಲಿದ್ದಾರೆ. ತಂದೆಯವರ ಜೊತೆಯಲ್ಲಿ ಮಾಡುವ ವ್ಯಾಪಾರದಲ್ಲಿ ಹೇರಳ ಲಾಭ ದೊರೆಯುತ್ತದೆ. ಅಪರಿಚಿತರೊಂದಿಗೆ ಹಣದ ವ್ಯವಹಾರವನ್ನು ಮಾಡದಿರಿ.

ಪರಿಹಾರ: ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 1

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ತುಲಾ

ಅನುಕೂಲಗಳ ನಡುವೆಯೂ ಆತಂಕದಿಂದ ದಿನ ಕಳೆಯುವಿರಿ. ಕುಟುಂಬದ ಹಿರಿಯರ ಆರೋಗ್ಯದ ಬಗ್ಗೆ ಮನಸ್ಸಿನಲ್ಲಿ ತಳಮಳ ಇರುತ್ತದೆ. ವಿದ್ಯಾರ್ಥಿಗಳು ವಿದ್ಯಾರ್ಜನೆಯಲ್ಲಿ ಯಶಸ್ಸನ್ನು ಗಳಿಸುತ್ತಾರೆ. ಆದಾಯದಲ್ಲಿ ತೊಂದರೆ ಬಾರದು. ಅವಿವಾಹಿತರಿಗೆ ವಿವಾಹಯೋಗವಿದೆ. ಕುಟುಂಬದಲ್ಲಿ ಸಂತೋಷಕೂಟವನ್ನು ಏರ್ಪಡಿಸುವಿರಿ.

ಪರಿಹಾರ: ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಕೆಂಪುಬಣ್ಣ

ವೃಶ್ಚಿಕ

ನಿಮ್ಮ ಮನದ ಆಸೆ ಆಕಾಂಕ್ಷೆಗಳು ಈಡೇರಲಿವೆ. ಹಣಕಾಸಿನ ವಿಚಾರದಲ್ಲಿ ಯಾವುದೇ ತೊಂದರೆ ಬಾರದು. ವಿದ್ಯಾರ್ಥಿಗಳಿಗೆ ಅಧ್ಯಯನ ಮುಗಿವ ಮುನ್ನವೇ ಉದ್ಯೋಗ ದೊರೆಯಲಿದೆ. ರಾಜಕೀಯದಲ್ಲಿ ನಿರೀಕ್ಷಿತ ಸ್ಥಾನಮಾನ ದೊರೆಯುತ್ತದೆ. ತಂದೆಯವರಿಗೆ ವಂಶದ ಆಸ್ಥಿಯಲ್ಲಿ ನ್ಯಾಯಯುತ ಪಾಲು ದೊರೆಯುತ್ತದೆ.

ಪರಿಹಾರ: ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಭಿಸಿ

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಧನಸ್ಸು

ದೃಢವಾದ ಮನಸ್ಸಿನಿಂದ ಕೆಲಸ-ಕಾರ್ಯದಲ್ಲಿ ಮುಂದುವರೆಯಲು ಪ್ರಯತ್ನಿಸುವಿರಿ. ಉದ್ಯೋಗದಲ್ಲಿ ವಿಶೇಷವಾದ ಬದಲಾವಣೆ ಕಂಡುಬರಲಿದೆ. ಪಾಲುದಾರಿಕೆಯ ವ್ಯಾಪಾರದಿಂದ ಆದಾಯ ಗಳಿಸುವಿರಿ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ವಿಧ್ಯಾರ್ಥಿಗಳಿಗೆ ವಿಶೇಷ ಅನುಕೂಲತೆ ದೊರಕಿಸುತ್ತದೆ.

ಪರಿಹಾರ: ಕೈ ಅಥವಾ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವುದರಿಂದ ಶುಭವಿರುತ್ತದೆ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಹಳದಿ ಬಣ್ಣ

ಮಕರ

ಹಣಕಾಸಿನ ವಿಚಾರದಲ್ಲಿ ಹೊಸ ಆಸೆಯೊಂದು ಚಿಗುರುತ್ತದೆ. ಸ್ವಂತ ಮನೆಯಿದ್ದರೂ ಪರಸ್ಥಳದಲ್ಲಿ ನೆಲೆಸಬೇಕಾಗುತ್ತದೆ. ಯುವಕರು ಉದ್ಯೋಗದಲ್ಲಿ ನಿರೀಕ್ಷಿತ ಮಟ್ಟವನ್ನು ತಲುಪುವರು. ಯಾರ ಸಲಹೆ ಸೂಚನೆಯನ್ನು ಸುಲಭವಾಗಿ ಒಪ್ಪುವುದಿಲ್ಲ. ವಿದ್ಯಾರ್ಥಿಗಳು ಕಷ್ಟವಿಲ್ಲದೆ ತಮ್ಮ ಗುರಿ ತಲುಪುವರು.

ಪರಿಹಾರ: ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಹಸಿರು ಬಣ್ಣ

ಕುಂಭ

ಅನುಮಾನ ಪ್ರಕೃತಿಯಿಂದ ಹೊರಬನ್ನಿ. ಚುರುಕುತನದಲ್ಲಿ ದೈನಂದಿನ ಕೆಲಸ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಹಣಕಾಸಿನ ನಿರ್ವಹಣೆಯ ವಿಚಾರದಲ್ಲಿ ಕುಟುಂಬದಲ್ಲಿ ವಾದ ವಿವಾದ ಉಂಟಾಗುತ್ತದೆ. ಎಲ್ಲರ ಜೊತೆಯಲ್ಲಿ ಸ್ನೇಹದಿಂದ ನಡೆದುಕೊಳ್ಳಿ. ಲೋಹದ ವ್ಯಾಪಾರ ವ್ಯವಹಾರದಿಂದ ಆದಾಯವು ಹೆಚ್ಚುತ್ತದೆ. ಹಳೆಯದ ಕಾಲದ ಮನೆಯನ್ನು ಕೊಂಡು ನವೀಕರಿಸು ತೀರ್ಮಾನ ಮಾಡುವಿರಿ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ನೀಲಿ ಬಣ್ಣ

ಮೀನ

ತಾಂತ್ರಿಕ ಪರಿಜ್ಞಾನ ಇರುವವರಿಗೆ ವಿದೇಶದಲ್ಲಿ ಉದ್ಯೋಗ ಲಭಿಸುತ್ತದೆ. ದೊಡ್ಡ ಕುಟುಂಬದ ಸಂಪೂರ್ಣ ಜವಾಬ್ದಾರಿ ಹೊರಬೇಕಾಗುತ್ತದೆ. ಪಾಲುದಾರಿಕೆಯ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭಾಂಶ ನಿಮ್ಮದಾಗಲಿದೆ. ಭೂವಿವಾದದಿಂದ ಮುಕ್ತರಾಗುವಿರಿ. ಹೊಸ ವಾಹನ ಕೊಳ್ಳುವ ಸೂಚನೆ ಇದೆ.

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ನೇರಳೆ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 85468 65832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಗೌರಿವಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).