ನಾಳೆಯ ದಿನ ಭವಿಷ್ಯ; ಧನು, ವೃಶ್ಚಿಕ ರಾಶಿಯವರಿಗೆ ಕೆಲಸದಲ್ಲಿ ಕಿರಿಕಿರಿ, ಸಿಂಹ ರಾಶಿಯವರಿಗೆ ಉದ್ಯೋಗದಲ್ಲಿ ಉನ್ನತಿ
Tomorrow Rashi Bhavishya in Kannada July 15; ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿ ಇದ್ದು, ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಕರ್ಮ ಫಲಗಳನ್ನು ನೀಡುತ್ತಾರೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ. (ರಾಶಿಫಲ ವಿವರಣೆ: ಎಚ್. ಸತೀಶ್, ಜ್ಯೋತಿಷಿ).

'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ತ್ವ ಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವುದು ರೂಢಿ. ಅಂಥವರಿಗೆ ಕೈದೀವಿಗೆಯಾಗಬಲ್ಲ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (16th July 2024 Horoscope).
ನಾಳೆಯ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮಋತು, ಆಷಾಡ ಮಾಸ, ಶುಕ್ಲಪಕ್ಷ, ಬುಧವಾರ,
ತಿಥಿ : ಏಕಾದಶಿ ಸಾ. 05.37 ರವರೆಗು ಇರುತ್ತದೆ. ಆನಂತರ ದ್ವಾದಶಿ ಆರಂಭವಾಗುತ್ತದೆ.
ನಕ್ಷತ್ರ : ಅನೂರಾಧ ನಕ್ಷತ್ರವು ರಾ. 01.03 ರವರೆಗು ಇದ್ದು ಆನಂತರ ಜ್ಯೇಷ್ಠ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ ಬೆ.06.01
ಸೂರ್ಯಾಸ್ತ ಸ.06.49
ರಾಹುಕಾಲ : ಹ. 12.29 ರಿಂದ ಹ. 02.05
ದ್ವಾದಶ ರಾಶಿಗಳ ನಾಳೆಯ ರಾಶಿ ಭವಿಷ್ಯ
ಮೇಷ ರಾಶಿ; ನಿಮ್ಮಿಂದಾಗಿ ಕುಟುಂಬದಲ್ಲಿ ಸೌಹಾರ್ದಯುತ ವಾತಾವರಣ ಇರುತ್ತದೆ. ವಿದ್ಯಾರ್ಥಿಗಳು ಉನ್ನತ ವಿಧ್ಯಾಭ್ಯಾಸಕ್ಕಾಗಿ ಆತ್ಮೀಯರ ಸಹಾಯದಿಂದ ವಿದೇಶಕ್ಕೆ ತೆರಳುತ್ತಾರೆ. ಸ್ವಂತ ವ್ಯವಹಾರ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ವರಮಾನ ಕಂಡುಬರುತ್ತದೆ.
ಪರಿಹಾರ : ತಲೆಗೆ ಹಾಲಲ್ಲಿ ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ
ಅದೃಷ್ಟದ ಸಂಖ್ಯೆ 12
ಅದೃಷ್ಟದ ದಿಕ್ಕು : ನೈಋತ್ಯ
ಅದೃಷ್ಟದ ಬಣ್ಣ : ರಕ್ತದ ಬಣ್ಣ
ವೃಷಭ ರಾಶಿ; ಹಣಕಾಸಿಗೆ ಸಂಬಂಧಿಸಿದ ಸಂಸ್ಥೆಯ ಒಡೆಯರಾಗಿದ್ದಲ್ಲಿ ಎಚ್ಚರಿಕೆಯಿಂದ ವ್ಯವಹರಿಸಿ. ವಿದ್ಯಾರ್ಥಿಗಳಿಗೆ ಪ್ರತಿಭಾ ಪ್ರದರ್ಶನಕ್ಕೆ ಅಪರೂಪದ ಅವಕಾಶ ದೊರೆಯುತ್ತದೆ. ನಿಮ್ಮ ಮನಸ್ಸು ಬದಲಾಯಿಸದೆ ಆತ್ಮೀಯರ ಸಹಾಯ ಪಡೆಯುವಿರಿ.
ಪರಿಹಾರ : ಹಣೆಯಲ್ಲಿ ತಿಲಕವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಎಲೆಹಸಿರು ಬಣ್ಣ
ಮಿಥುನ ರಾಶಿ; ಉದ್ಯೋಗದಲ್ಲಿ ಆಸಕ್ತಿ ಇರದಿದ್ದರೂ ಕರ್ತವ್ಯ ನಿರ್ವಹಿಸುವಿರಿ. ಮಧ್ಯಮ ಮಟ್ಟದ ಪ್ರಗತಿಯು ಕಂಡುಬರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ನಿರೀಕ್ಷೆ ಇರುವುದಿಲ್ಲ. ವಿದ್ಯಾರ್ಥಿಗಳು ಓದಿನಲ್ಲಿ ವಿಶೇಷವಾದ ಆಸಕ್ತಿಯನ್ನು ತೋರುತ್ತಾರೆ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಕೇಸರಿ ಬಣ್ಣ
ಕಟಕ ರಾಶಿ; ಸಂಘ ಸಂಸ್ಥೆಯೊಂದರ ಹಣಕಾಸಿನ ಜವಾಬ್ದಾರಿ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ಹಣದ ಕೊರತೆ ಇರುವುದಿಲ್ಲ. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿಯೂ ಮುಂದಿರುತ್ತಾರೆ.
ಪರಿಹಾರ : ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿ ದಿನದ ಕೆಲಸ ಆರಂಭಿಸಿ. .
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ
ಸಿಂಹ ರಾಶಿ; ಉದ್ಯೋಗದಲ್ಲಿ ನಿಮ್ಮದೇ ಗುಂಪಿನ ನೇತೃತ್ವವನ್ನು ವಹಿಸುವಿರಿ. ಕುಟುಂಬದಲ್ಲಿನ ಏಕತೆ ಉಳಿಯಲು ಸಫಲರಾಗುವಿರಿ. ಆತ್ಮೀಯರು ಮತ್ತು ಬಂಧು ಬಳಗದವರಿಗೆ ಹಣದ ಸಹಾಯ ಮಾಡಬೇಕಾಗುತ್ತದೆ. ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸುವಿರಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ : ಕೆಂಪು ಬಣ್ಣ
ಕನ್ಯಾ ರಾಶಿ; ಮಕ್ಕಳ ಯಶಸ್ವೀ ಜೀವನಕ್ಕೆ ಕಾರಣರಾಗುವಿರಿ. ಒಮ್ಮೆ ತೆಗೆದುಕೊಂಡ ನಿರ್ಧಾರವನ್ನು ಬದಲಾಯಿಸಿದಲ್ಲಿ ತೊಂದರೆ ಎದುರಾಗುತ್ತದೆ. ಉದ್ಯೋಗದಲ್ಲಿ ಅಡಚಣೆಗಳು ಎದುರಾಗುವ ಕಾರಣ ಉದ್ಯೋಗದ ಬದಲಾಯಿಸುವಿರಿ.
ಪರಿಹಾರ : ತಾಯಿಯವರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು ನೈಋತ್ಯ
ಅದೃಷ್ಟದ ಬಣ್ಣ ಕಿತ್ತಳೆ ಬಣ್ಣ
ತುಲಾ ರಾಶಿ; ಮಕ್ಕಳ ಜೊತೆ ಇದ್ದರೆ ಸಂತೋಷದಿಂದ ಬಾಳುವಿರಿ. ಉದ್ಯೋಗದಲ್ಲಿ ಅನಿರೀಕ್ಷಿತ ಬದಲಾವಣೆಗಳು ಎದುರಾಗಲಿವೆ. ಮನದಲ್ಲಿ ಚಿಂತೆಯೊಂದು ಸದಾ ಇರಲಿದೆ.
ಪರಿಹಾರ : ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು ಪಶ್ಚಿಮ
ಅದೃಷ್ಟದ ಬಣ್ಣ ಹಳದಿ ಬಣ್ಣ
ವೃಶ್ಚಿಕ ರಾಶಿ; ಉದ್ಯೋಗದಲ್ಲಿ ನಿಮ್ಮ ಮನಸ್ಸಿಗೆ ಬೇಸರ ಉಂಟಾಗುವ ಸನ್ನಿವೇಶ ಎದುರಾಗುತ್ತದೆ. ಪ್ರೀತಿ ವಿಶ್ವಾಸದಿಂದ ಎಲ್ಲರ ಮನಸ್ಸನ್ನು ಗೆಲ್ಲಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥಮಾಡದೆ ಕಲಿಕೆಯಲ್ಲಿ ನಿರತರಾಗುತ್ತಾರೆ.
ಪರಿಹಾರ : ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಹಸಿರುಬಣ್ಣ
ಧನಸ್ಸು ರಾಶಿ; ಉದ್ಯೋಗಕ್ಷೇತ್ರದಲ್ಲಿ ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಅನಾವಶ್ಯಕವಾಗಿ ಹಿರಿಯ ಅಧಿಕಾರಿಗಳ ಜೊತೆಯಲ್ಲಿ ವಾದ ವಿವಾದ ಉಂಟಾಗಬಹುದು. ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಮುಂದುವರೆಯುತ್ತಾರೆ.
ಪರಿಹಾರ : ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ನೀಲಿ ಬಣ್ಣ
ಮಕರ ರಾಶಿ; ವಿದ್ಯಾರ್ಥಿಗಳು ಸ್ವಪ್ರಯತ್ನದಿಂದ ಗೆಲುವನ್ನು ಸಾಧಿಸುವರು. ವಾದ ವಿವಾದಗಳಿಂದ ದೂರ ಉಳಿಯುವುದು ಒಳಿತು. ಹೆಚ್ಚಿನ ಪರಿಶ್ರಮದಿಂದ ಹಣದ ವಿವಾದದಿಂದ ದೂರ ಉಳಿಯುವಿರಿ. ಆರೋಗ್ಯ ಉಳಿಸಿಕೊಳ್ಳಲು ದೈಹಿಕ ವ್ಯಾಯಾಮವನ್ನು ಅವಲಂಭಿಸುವಿರಿ.
ಪರಿಹಾರ : ಬೆಲ್ಲದಿಂದ ಮಾಡಿದ ಆಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಹಾಲಿನ ಬಣ್ಣ
ಕುಂಭ ರಾಶಿ; ನಿಮ್ಮ ಸಮಸ್ಯೆಗಳಿಗೆ ಆತ್ಮೀಯರ ಸಹಾಯದಿಂದ ಪರಿಹಾರ ದೊರೆಯಬಹುದು. ಕುಟುಂಬದಲ್ಲಿ ನೆಮ್ಮದಿಯ ಪರಿಸ್ಥಿತಿ ಇರುತ್ತದೆ. ನಿಮ್ಮ ಮಾತಿಗೆ ಎಲ್ಲರಿಂದಲೂ ಗೌರವ ಲಭಿಸುತ್ತದೆ. ಉದ್ಯೋಗದಲ್ಲಿ ಅತಿ ಮುಖ್ಯ ಬದಲಾವಣೆ ಉಂಟಾಗಲಿದೆ.
ಪರಿಹಾರ : ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಹೊಗೆಯ ಬಣ್ಣ
ಮೀನ ರಾಶಿ; ಉದ್ಯೋಗದಲ್ಲಿ ಮೇಲ್ಮಟ್ಟದ ಅಧಿಕಾರ ದೊರೆಯುತ್ತದೆ. ವಿದ್ಯಾರ್ಥಿಗಳು ಸಹಪಾಠಿಗಳ ಜೊತೆ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಮಕ್ಕಳ ಜೀವನದಲ್ಲಿ ಉನ್ನತ ಮಟ್ಟದ ಯಶಸ್ಸು ದೊರೆಯುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭ ದೊರೆಯಲಿದೆ.
ಪರಿಹಾರ : ಮಕ್ಕಳಿಗೆ ಗೋಧಿಯಿಂದ ತಯಾರಿಸಿದ ಸಿಹಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ 9
ಅದೃಷ್ಟದ ದಿಕ್ಕು : ನೈಋತ್ಯ
ಅದೃಷ್ಟದ ಬಣ್ಣ : ಹೊಗೆಯ ಬಣ್ಣ
ಗಮನಿಸಿ: ಇದು ವೈದಿಕ ಜ್ಯೋತಿಷ್ಯದ ಪದ್ಧತಿಯಲ್ಲಿ ಗೋಚಾರ ಆಧರಿಸಿದ ಬರಹ. ನಿಖರ ವಿವರ ಮತ್ತು ಸಮರ್ಪಕ ಪರಿಹಾರಗಳಿಗಾಗಿ ಓದುಗರು ತಮ್ಮ ಜನ್ಮಜಾತಕವನ್ನು ಸಹ ಪರಿಗಣಿಸಬೇಕು. ನಿಮ್ಮ ಕುಲಗುರುಗಳು ಅಥವಾ ಜ್ಯೋತಿಷಿಗಳ ಸಲಹೆ ಪಡೆಯಬೇಕು. ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.

ವಿಭಾಗ