ಯುಗಾದಿ ಹಣಕಾಸು ಭವಿಷ್ಯ: ಮಕರ ರಾಶಿಯವರು ಆದಾಯ ಹೆಚ್ಚಿಸಿಕೊಳ್ಳುತ್ತಾರೆ, ಮೀನ ರಾಶಿಯವರಿಗೆ ಹಣದ ನಿರೀಕ್ಷೆಗಳು ಹುಸಿಯಾಗುತ್ತವೆ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಯುಗಾದಿ ಹಣಕಾಸು ಭವಿಷ್ಯ: ಮಕರ ರಾಶಿಯವರು ಆದಾಯ ಹೆಚ್ಚಿಸಿಕೊಳ್ಳುತ್ತಾರೆ, ಮೀನ ರಾಶಿಯವರಿಗೆ ಹಣದ ನಿರೀಕ್ಷೆಗಳು ಹುಸಿಯಾಗುತ್ತವೆ

ಯುಗಾದಿ ಹಣಕಾಸು ಭವಿಷ್ಯ: ಮಕರ ರಾಶಿಯವರು ಆದಾಯ ಹೆಚ್ಚಿಸಿಕೊಳ್ಳುತ್ತಾರೆ, ಮೀನ ರಾಶಿಯವರಿಗೆ ಹಣದ ನಿರೀಕ್ಷೆಗಳು ಹುಸಿಯಾಗುತ್ತವೆ

Ugadi Finance Horoscope: ಯುಗಾದಿ ಹಣಕಾಸು ವರ್ಷ ಭವಿಷ್ಯ 2025. ಮಕರ ರಾಶಿಯವರು ಆದಾಯ ಹೆಚ್ಚಿಸಿಕೊಳ್ಳುತ್ತಾರೆ, ಮೀನ ರಾಶಿಯವರಿಗೆ ಹಣದ ನಿರೀಕ್ಷೆಗಳು ಹುಸಿಯಾಗುತ್ತವೆ.(ಬರಹ: ಎಚ್‌.ಸತೀಶ್, ಜ್ಯೋತಿಷಿ)

ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ಹಣಕಾಸು ಯುಗಾದಿ ವರ್ಷ ಭವಿಷ್ಯ
ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ಹಣಕಾಸು ಯುಗಾದಿ ವರ್ಷ ಭವಿಷ್ಯ

ಯುಗಾದಿ ಹಣಕಾಸು ವರ್ಷ ಭವಿಷ್ಯ: ಪಂಚಾಂಗದ ಪ್ರಕಾರ ಕೆಲವೇ ದಿನಗಳಲ್ಲಿ ಹಳೆಯ ವರ್ಷ ಮುಗಿದು ಹೊಸ ವರ್ಷಕ್ಕೆ ಕಾಲಿಡುತ್ತೇವೆ. ಯುಗಾದಿ ಹಬ್ಬವು ಹೊಸ ವರ್ಷದ ಮೊದಲ ದಿನ. ಈ ಹೊಸ ವರ್ಷದಲ್ಲಿ ಸಂಕಷ್ಟಗಳು ಕಳೆದು ಸುಖ, ಶಾಂತಿ, ನೆಮ್ಮದಿ, ಉತ್ತಮ ಆರೋಗ್ಯ, ಹೊಸ ಅವಕಾಶ, ಸಂಪತ್ತು ಸಮೃದ್ಧಿಯನ್ನು ನಿರೀಕ್ಷಿಸುತ್ತ ಆಶಾವಾದಿಗಳಾಗಿ ಬದುಕುವುದು ಸಾಮಾನ್ಯ. ಬಹುತೇಕ ಸಂದರ್ಭದಲ್ಲಿ ಜನರು ತಮ್ಮ ರಾಶಿಗೆ ಅನುಗುಣವಾಗಿ ವರ್ಷ ಭವಿಷ್ಯವನ್ನು ಕಾತರದಿಂದ ವೀಕ್ಷಿಸುತ್ತಾರೆ. ತಮ್ಮ ಹಣಕಾಸು ಭವಿಷ್ಯ ಹೇಗಿರಲಿದೆ ಎಂದು ತಿಳಿದುಕೊಳ್ಳುವವರು ಇದ್ದಾರೆ. ಶ್ರೀ ವಿಶ್ವಾವಸು ಸಂವತ್ಸರದ ಮೇಷದಿಂದ ಕಟಕದವರಿಗೆ ನಾಲ್ಕು ರಾಶಿಯವರ ಹಣಕಾಸು ವರ್ಷ ಭವಿಷ್ಯ ಇಲ್ಲಿದೆ.

ಧನು ರಾಶಿ

ಹಣಕಾಸಿನ ವಿಚಾರದಲ್ಲಿ ಜವಾಬ್ದಾರಿಯಿಂದ ನಡೆದುಕೊಳ್ಳುವುದಿಲ್ಲ. ಅವಶ್ಯಕತೆ ಇಲ್ಲದ ವಿಚಾರಗಳಿಗೆ ಹಣವನ್ನು ಖರ್ಚು ಮಾಡುವಿರಿ. ಹಣದ ವಿಚಾರದಲ್ಲಿ ಮೋಸ ಹೋಗುವ ಸಾಧ್ಯತೆಗಳಿವೆ ಎಚ್ಚರಿಕೆ ಇರಲಿ. ಕಷ್ಟದಲ್ಲಿ ಇದ್ದವರಿಗೆ ಹಣ ಸಹಾಯ ಮಾಡುವಿರಿ. ಕೂಡಿಟ್ಟ ಹಣವನ್ನು ಉಳಿಸಿಕೊಳ್ಳಲು ಪ್ರಯತ್ನಿಸಿ. ಕುಟುಂಬದ ಜವಾಬ್ದಾರಿಯನ್ನು ನಿರ್ವಹಿಸಲು ಹೆಚ್ಚಿನ ಹಣ ಬೇಕಾಗುತ್ತದೆ. ಭೂ ವಿವಾದದ ಕಾರಣ ಹೆಚ್ಚಿನ ಹಣ ವೆಚ್ಚವಾಗುತ್ತದೆ. ಆರೋಗ್ಯದಲ್ಲಿ ತೊಂದರೆ ಕಂಡು ಬರುತ್ತದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಹಣದ ಕೊರತೆ ಕಂಡು ಬರುತ್ತದೆ. ನಿಮ್ಮ ನಿರೀಕ್ಷೆಯನ್ನು ಮೀರಿದ ಖರ್ಚು ವೆಚ್ಚಗಳು ಇರುತ್ತವೆ. ಉದ್ಯೋಗದಲ್ಲಿ ನಿರತರಾಗಿರುವವರಿಗೆ ಹಣದ ತೊಂದರೆ ಉಂಟಾಗುವುದಿಲ್ಲ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯಮ ಗತಿಯ ಲಾಭವಿರುತ್ತದೆ.

ಮಕರ ರಾಶಿ

ಹಣ ಸಂಪಾದನೆಯ ವಿಚಾರದಲ್ಲಿ ಉತ್ತಮ ಚಾತುರ್ಯತೆ ಇರುತ್ತದೆ. ಬುದ್ಧಿವಂತಿಕೆಯ ನಿರ್ಧಾರಗಳಿಂದ ಆದಾಯವನ್ನು ಹೆಚ್ಚಿಸಿಕೊಳ್ಳುವಿರಿ. ಕಡಿಮೆ ಆದಾಯವಿದ್ದರೂ ಹಣವನ್ನು ಉಳಿಸಬಲ್ಲಿರಿ. ಉದ್ಯೋಗದಲ್ಲಿನ ಸವಾಲುಗಳನ್ನು ಎದುರಿಸಿ ಉನ್ನತ ಮಟ್ಟ ತಲುಪುವಿರಿ. ಇದರಿಂದ ಹೆಚ್ಚಿನ ವೇತನ ದೊರೆಯುತ್ತದೆ. ವಾಸಸ್ಥಳವನ್ನು ಕೊಳ್ಳಲು ಹಣವಿಯೋಗಿಸುವಿರಿ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಲಾಭ ದೊರೆಯಲಿದೆ. ಹಿರಿಯರ ಸಲಹೆಯಂತೆ ಹಣಕಾಸಿನ ಯೋಜನೆಯಲ್ಲಿ ಹಣವನ್ನು ವಿನಿಯೋಗಿಸುವಿರಿ. ಕುಟುಂಬದ ಜವಾಬ್ದಾರಿಗಳಿಂದ ದೂರ ಉಳಿಯುವಿರಿ. ಪ್ರಯಾಣದಿಂದ ಉತ್ತಮ ಹಣವನ್ನು ಗಳಿಸುವಿರಿ. ಸ್ಟಾಕ್ ಮತ್ತು ಷೇರಿನ ವ್ಯವಹಾರದಲ್ಲಿ ನಿರ್ದಿಷ್ಟ ಮಟ್ಟದ ಗಳಿಕೆ ದೊರೆಯುತ್ತದೆ. ವಿದ್ಯಾರ್ಥಿ ದೆಸೆಯಲ್ಲಿಯೇ ಆದಾಯದ ಮೂಲ ದೊರೆಯುತ್ತದೆ

ಕುಂಭ ರಾಶಿ

ನಿಮ್ಮ ಬಳಿ ಇರುವ ಹಣಕ್ಕೆ ತಕ್ಕಂತಹ ಖರ್ಚು ವೆಚ್ಚಗಳನ್ನು ನಿರ್ವಹಿಸುವಿರಿ. ನಿರೀಕ್ಷೆಗೂ ಮೀರಿದ ಆದಾಯ ನಿಮಗಿರುತ್ತದೆ. ಹಣಕಾಸಿನ ವ್ಯವಹಾರದ ಬಗ್ಗೆ ಗೋಪ್ಯತೆ ಕಾಪಾಡಿಕೊಳ್ಳುವಿರಿ. ಖರ್ಚು ವೆಚ್ಚಗಳನ್ನು ನಿಯಂತ್ರಿಸಲು ವಿಫಲರಾಗುವಿರಿ. ಕುಟುಂಬದ ಸದಸ್ಯರ ಒತ್ತಡಕ್ಕೆ ಮಣಿದು ಹಣವನ್ನು ಖರ್ಚು ಮಾಡಬೇಕಾಗುತ್ತದೆ. ಯಾವುದೇ ವ್ಯಾಪಾರ ವ್ಯವಹಾರಗಳಲ್ಲಿ ಹಣವನ್ನು ತೊಡಗಿಸುವ ಮುನ್ನ ಯೋಚಿಸುವುದು ಒಳ್ಳೆಯದು. ನಿಧಾನ ಗತಿಯಲ್ಲಿ ಹಣ ಸಂಪಾದಿಸುವಿರಿ. ಬೇರೆಯವರ ವ್ಯಾಪಾರ ವ್ಯವಹಾರದ ನಿರ್ವಹಣೆಯ ಜವಾಬ್ದಾರಿ ನಿಮ್ಮದಾಗುತ್ತದೆ. ಪಾಲುಗಾರಿಕೆಯ ವ್ಯಾಪಾರವು ಹೆಚ್ಚಿನ ಲಾಭವನ್ನು ನೀಡಲಿದೆ. ಬೇರೆಯವರ ಹಣಕಾಸಿನ ವ್ಯವಹಾರದಲ್ಲಿ ಮಧ್ಯವರ್ತಿ ಆದಲ್ಲಿ ತೊಂದರೆಗೆ ಸಿಲುಕುವಿರಿ. ಕಂತಿನ ವ್ಯಾಪಾರದಲ್ಲಿ ಉತ್ತಮ ಲಾಭ ಇರುತ್ತದೆ.

ಮೀನ ರಾಶಿ

ಹಣಕಾಸಿನ ವಿಚಾರದಲ್ಲಿ ನಿಮ್ಮ ನಿರೀಕ್ಷೆಗಳು ಹುಸಿಯಾಗುತ್ತವೆ. ಉತ್ತಮ ಆದಾಯ ಇರುತ್ತದೆ. ಆದರೆ ನಿಮ್ಮ ಅರಿವಿಗೆ ಬಾರದಂತೆ ಹಣವು ಖರ್ಚಾಗುತ್ತದೆ. ಐಷಾರಾಮಿ ಜೀವನವು ನಿಮಗೆ ಇಷ್ಟವಾಗುತ್ತದೆ. ಉತ್ತಮ ಆದಾಯವಿದ್ದರೂ ಹಣದ ಕೊರತೆ ಕಂಡು ಬರುತ್ತದೆ. ಕುಟುಂಬದ ಸದಸ್ಯರ ಒತ್ತಡದಿಂದಾಗಿ ಆಸ್ತಿ ಕೊಳ್ಳುವ ನಿರ್ಧಾರಕ್ಕೆ ಬರುವಿರಿ. ಇದರಿಂದಾಗಿ ಆತ್ಮೀಯರಿಂದ ಹಣದ ಸಹಾಯವನ್ನು ಪಡೆಯುವಿರಿ. ಸಹ ವೃತ್ತಿಯನ್ನು ಆರಂಭಿಸುವ ಮೂಲಕ ಆದಾಯವನ್ನು ಹೆಚ್ಚಿಸಿಕೊಳ್ಳುವಿರಿ. ಭೂ ವ್ಯವಹಾರದಲ್ಲಿ ಹೆಚ್ಚಿನ ಆದಾಯ ದೊರೆಯುತ್ತದೆ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಆಸಕ್ತಿ ಇರುವುದಿಲ್ಲ. ಕ್ರಮೇಣವಾಗಿ ಹಣಕಾಸಿನ ಕಷ್ಟ ನಷ್ಟದಿಂದ ಪಾರಾಗುವಿರಿ. ಹಿರಿಯರಿಂದ ಮಕ್ಕಳಿಂದ ಹಣದ ಸಹಾಯ ಸಿಗುತ್ತದೆ.

ಬರಹ: ಎಚ್‌. ಸತೀಶ್, ಜ್ಯೋತಿಷಿ.

ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.

Raghavendra M Y

TwittereMail
ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.