ನಿಮ್ಮ ಮನೆಯ ಈ ದಿಕ್ಕಿಗೆ ಸಿಸಿಟಿವಿ ಅಳವಡಿಸಿ: ಭವಿಷ್ಯದಲ್ಲಿ ಎದುರಾಗಬಹುದಾದ ಆರ್ಥಿಕ ನಷ್ಟ ತಪ್ಪಿಸಿ
ವಾಸ್ತುವನ್ನು ಅನುಸರಿಸುವುದರಿಂದ ಜೀವನದಲ್ಲಿ ಸಕಾರಾತ್ಮಕ ಶಕ್ತಿಯು ಹರಿಯುತ್ತದೆ ಮತ್ತು ನಕಾರಾತ್ಮಕ ಶಕ್ತಿ ದೂರವಾಗುತ್ತದೆ. ಮನೆಯಲ್ಲಿ ಕೆಲವು ವಸ್ತುಗಳನ್ನು ಸರಿಯಾದ ಜಾಗದಲ್ಲಿ ಇಡುವುದರಿಂದ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚುತ್ತದೆ. ವಾಸ್ತು ಪ್ರಕಾರ ಮನೆಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಇರಿಸಲು ಉತ್ತಮ ದಿಕ್ಕು ಯಾವುದು? ಅದರ ಬಗ್ಗೆ ತಿಳಿದುಕೊಳ್ಳೋಣ.

ನಮ್ಮಲ್ಲಿ ಬಹಳಷ್ಟು ಜನರು ವಾಸ್ತು ಶಾಸ್ತ್ರದ ನಿಯಮಗಳನ್ನು ಪಾಲಿಸುತ್ತಾರೆ. ಈ ವಿಜ್ಞಾನಯುಗದಲ್ಲಿ, ಜನರು ವೇದ ಜ್ಯೋತಿಷ್ಯ, ವಾಸ್ತು ಶಾಸ್ತ್ರ ಮತ್ತು ಸಮುದ್ರಿಕ್ ಶಾಸ್ತ್ರದಂತಹ ಪ್ರಾಚೀನ ಗ್ರಂಥಗಳ ತತ್ವಗಳಲ್ಲಿ ನಂಬಿಕೆಯನ್ನು ಕಳೆದುಕೊಂಡಿಲ್ಲ. ಹೊಸ ಜಾಗ ಖರೀದಿಸುವಾಗ, ಮನೆ ಕಟ್ಟುವಾಗ ಮತ್ತು ಮುಂತಾದ ಸಂದರ್ಭಗಳಲ್ಲಿ ವಾಸ್ತುವನ್ನು ಅನುಸರಿಸುತ್ತಾರೆ. ಇದರಿಂದ ಸಕಾರಾತ್ಮಕ ಶಕ್ತಿಯು ಹರಿಯುತ್ತದೆ ಮತ್ತು ನಕಾರಾತ್ಮಕ ಶಕ್ತಿಯು ದೂರವಾಗುತ್ತದೆ.
ವಾಸ್ತುವನ್ನು ಅನುಸರಿಸುವುದರಿಂದ, ಯಾವುದೇ ಸಮಸ್ಯೆಗಳು ತಲೆದೂರುವುದಿಲ್ಲ. ಎಲ್ಲವೂ ಶಾಂತಿಯುತವಾಗಿ ನಡೆಯುತ್ತದೆ ಮತ್ತು ಅದೃಷ್ಟವೂ ಸಹ ಬರುತ್ತದೆ. ಅನೇಕ ಜನರು ತಮ್ಮ ಮನೆಗಳಲ್ಲಿ ವಾಸ್ತು ನಿಯಮಗಳನ್ನು ಪಾಲಿಸುತ್ತಾರೆ. ಇದರಿಂದಾಗಿ, ಸಕಾರಾತ್ಮಕ ಶಕ್ತಿ ಹರಡುತ್ತದೆ ಮತ್ತು ಕುಟುಂಬದವರೆಲ್ಲರು ಸಂತೋಷದಿಂದ ಬದುಕಬಹುದು. ಈ ಕಾರಣದಿಂದಲೇ ಜನರು ತಮ್ಮ ಮನೆಗಳನ್ನು ನಿರ್ಮಿಸುವಾಗ ವಾಸ್ತು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ.
ವಾಸ್ತು ಪ್ರಕಾರ ಮನೆ ಕಟ್ಟುವುದರಿಂದ ಯಾವುದೇ ತೊಂದರೆಗಳು ಬರುವುದಿಲ್ಲ ಮತ್ತು ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹರಿಯುತ್ತದೆ ಎಂದು ನಂಬಲಾಗಿದೆ. ಆದರೂ ಮನೆಯಲ್ಲಿ ಕೆಲವು ವಸ್ತುಗಳನ್ನು ತಪ್ಪಾಗಿ ಇರಿಸುವುದರಿಂದ ಅನೇಕ ತೊಂದರೆಗಳನ್ನು ಎದುರಿಸಬೇಕಾಗಬಹುದು. ಅದರಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವುದು ಒಂದಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಇಡಲು ಉತ್ತಮ ದಿಕ್ಕು ಯಾವುದು ಎಂಬುದರ ಬಗ್ಗೆ ತಿಳಿದುಕೊಳ್ಳೋಣ.
ಮನೆಯಲ್ಲಿ ಸಿಸಿಟಿವಿ ಕ್ಯಾಮೆರಾ ಯಾವ ದಿಕ್ಕಿನಲ್ಲಿ ಇಡಬೇಕು?
ಇತ್ತೀಚಿನ ದಿನಗಳಲ್ಲಿ, ಅನೇಕ ಜನರು ಭದ್ರತೆಗಾಗಿ ತಮ್ಮ ಮನೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುತ್ತಿದ್ದಾರೆ. ವಾಸ್ತು ತಜ್ಞರು ಸಿಸಿಟಿವಿ ಕ್ಯಾಮೆರಾಗಳನ್ನು ಇರಿಸಲು ಉತ್ತಮ ದಿಕ್ಕು ಯಾವುದು ಎಂದು ಸಲಹೆ ನೀಡಿದ್ದಾರೆ. ಇವುಗಳನ್ನು ಸರಿಯಾದ ದಿಕ್ಕಿನಲ್ಲಿ ಇರಿಸಿದರೆ, ಸಕಾರಾತ್ಮಕ ಶಕ್ತಿ ಹರಡುತ್ತದೆ ಮತ್ತು ಸಮಸ್ಯೆಗಳನ್ನು ತಪ್ಪಿಸಬಹುದು.
ಈ ದಿಕ್ಕಿನಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಇಡುವುದು ಸೂಕ್ತವಲ್ಲ
ಮನೆಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಾಗ, ಅನೇಕ ಜನರು ಅವುಗಳನ್ನು ಪೂರ್ವ, ಆಗ್ನೆಯ, ನೈಋತ್ಯ, ವಾಯುವ್ಯ ಮತ್ತು ದಕ್ಷಿಣ ದಿಕ್ಕುಗಳಲ್ಲಿ ಇಡುತ್ತಾರೆ. ಇದು ಸಣ್ಣಪುಟ್ಟ ಸಮಸ್ಯೆಗಳನ್ನು ಉಂಟುಮಾಡಬಹುದು. ಈ ದಿಕ್ಕುಗಳಲ್ಲಿ ಸಿಸಿಟಿವಿ ಕ್ಯಾಮೆರಾವನ್ನು ಹೊಂದಿರುವುದು ಆರ್ಥಿಕ ನಷ್ಟಕ್ಕೂ ಕಾರಣವಾಗಬಹುದು. ಈ ದಿಕ್ಕಿನಲ್ಲಿ ಸಿಸಿಟಿವಿ ಕ್ಯಾಮೆರಾಗಳ ಜೊತೆಗೆ ನಿಮ್ಮ ಮಕ್ಕಳ ಫೋಟೋಗಳನ್ನು ಇಡುವುದು ಒಳ್ಳೆಯದಲ್ಲ.
ಸಿಸಿಟಿವಿ ಕ್ಯಾಮೆರಾಗಳನ್ನು ಯಾವ ದಿಕ್ಕಿನಲ್ಲಿ ಇಡಬೇಕು?
ವಾಸ್ತು ಪ್ರಕಾರ ಮನೆಯ ಈಶಾನ್ಯ ದಿಕ್ಕಿನಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಇಡುವುದು ಉತ್ತಮ. ದಕ್ಷಿಣ ಅಥವಾ ನೈಋತ್ಯ ದಿಕ್ಕಿನಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಇಡಬೇಡಿ. ಇದು ನಕಾರಾತ್ಮಕ ಶಕ್ತಿಯನ್ನು ಉಂಟುಮಾಡಬಹುದು.
(ಗಮನಿಸಿ: ಈ ಮಾಹಿತಿಯು ಸಾಮಾನ್ಯಜ್ಞಾನ ಹಾಗೂ ಅಂತರ್ಜಾಲದಲ್ಲಿ ಸಿಕ್ಕ ಮಾಹಿತಿಯನ್ನ ಆಧರಿಸಿದೆ. ಈ ವಿಚಾರ ಸಂಪೂರ್ಣ ನಿಖರವಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ಕನ್ನಡ (ಎಚ್‌ಟಿ ಕನ್ನಡ) ಪ್ರತಿಪಾದಿಸುವುದಿಲ್ಲ. ಈ ವಿಷಯದ ಕುರಿತ ನಿಖರ ಮಾಹಿತಿಗಾಗಿ ಸಂಬಂಧಪಟ್ಟ ಕ್ಷೇತ್ರದ ತಜ್ಞರನ್ನು ಸಂಪರ್ಕಿಸಿ)