ವಾರ ಭವಿಷ್ಯ: ಧನು ರಾಶಿಯವರಿಗೆ ಉತ್ತಮ ಆದಾಯ ಇರುತ್ತೆ, ಮಕರ ರಾಶಿಯವರು ವಿವಾಹ ವಿಚಾರದಲ್ಲಿ ಆತುರದ ನಿರ್ಧಾರ ಕೈಗೊಳ್ಳಬೇಡಿ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ವಾರ ಭವಿಷ್ಯ: ಧನು ರಾಶಿಯವರಿಗೆ ಉತ್ತಮ ಆದಾಯ ಇರುತ್ತೆ, ಮಕರ ರಾಶಿಯವರು ವಿವಾಹ ವಿಚಾರದಲ್ಲಿ ಆತುರದ ನಿರ್ಧಾರ ಕೈಗೊಳ್ಳಬೇಡಿ

ವಾರ ಭವಿಷ್ಯ: ಧನು ರಾಶಿಯವರಿಗೆ ಉತ್ತಮ ಆದಾಯ ಇರುತ್ತೆ, ಮಕರ ರಾಶಿಯವರು ವಿವಾಹ ವಿಚಾರದಲ್ಲಿ ಆತುರದ ನಿರ್ಧಾರ ಕೈಗೊಳ್ಳಬೇಡಿ

ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ರಾಶಿಯವರಿಗೆ ಏನು ಫಲ? 2025ರ ಏಪ್ರಿಲ್ 13 ರಿಂದ 19 ರವರೆಗಿನ ವಾರ ಭವಿಷ್ಯ ಇಲ್ಲಿದೆ.

ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ವಾರ ಭವಿಷ್ಯ
ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ವಾರ ಭವಿಷ್ಯ

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಏಪ್ರಿಲ್ 13ರ ಭಾನುವಾರದಿಂದ 19ರ ಶನಿವಾರದವರೆಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ವಾರ ಭವಿಷ್ಯ ಇಲ್ಲಿದೆ.

ಧನು ರಾಶಿ

ವಾದವಿಲ್ಲದೆ ಯಾವುದೇ ಕೆಲಸವನ್ನು ಒಪ್ಪುವುದಿಲ್ಲ. ಅತಿಯಾದ ಆತ್ಮವಿಶ್ವಾಸದಿಂದ ಸಂದಿಗ್ಧ ಪರಿಸ್ಥಿತಿ ಎದುರಿಸುವಿರಿ. ನಿಮ್ಮ ಮನದ ಸಂಶಯವನ್ನು ಆ ಕ್ಷಣವೇ ಬಗೆಹರಿಸಿಕೊಳ್ಳುವಿರಿ. ಸೋಲನ್ನು ಒಪ್ಪುವುದಿಲ್ಲ. ಸತ್ಯವನ್ನು ನುಡಿಯಲು ಹಿಂಜರಿಯುವುದಿಲ್ಲ. ಒಳ್ಳೆಯ ಸ್ನೇಹಿತರು ಇರುತ್ತಾರೆ. ಬಂಧು-ಬಳಗದವರಿಂದ ದೂರ ಉಳಿಯುವಿರಿ. ಕಲಾವಿದರಿಗೆ ಉತ್ತಮ ಅವಕಾಶ ದೊರೆಯುತ್ತದೆ. ಮಾನಸಿಕವಾಗಿ ಸದೃಢರಾಗುವಿರಿ. ವಿರೋಧಿಗಳ ಜೊತೆಯಲ್ಲಿಯೂ ಸ್ನೇಹ ಬೆಳೆಸಬಲ್ಲಿರಿ. ಉತ್ತಮ ಆದಾಯ ಇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಬದಲಾವಣೆಗಳು ಕಂಡುಬರುತ್ತವೆ. ಕಮಿಷನ್ ಆಧಾರಿತ ವ್ಯಾಪಾರವನ್ನು ಆರಂಭಿಸುವಿರಿ. ಆತ್ಮೀಯರ ಹಣಕಾಸಿನ ವಿವಾದಗಳನ್ನು ಬಗೆಹರಿಸುವಿರಿ. ಜನಸೇವೆ ಮಾಡುವ ಇಂಗಿತ ನಿಮ್ಮಲ್ಲಿರುತ್ತದೆ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ. ಚಿಕ್ಕ ಮಕ್ಕಳಿದ್ದಲ್ಲಿ ಅವರ ಆರೋಗ್ಯದಲ್ಲಿ ತೊಂದರೆ ಉಂಟಾಗುತ್ತದೆ.

ಪರಿಹಾರ: ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಕಂದು ಬಣ್ಣ

ಮಕರ ರಾಶಿ

ವದಂತಿಗಳನ್ನು ನಂಬದೇ ಹೋದರು ಆನಂದಿಸುವಿರಿ. ಬುದ್ಧಿವಂತಿಕೆಯಿಂದ ಕುಟುಂಬದಲ್ಲಿ ಒಗ್ಗಟ್ಟು ಮೂಡಲು ಶ್ರಮಿಸುವಿರಿ. ನಿಮ್ಮ ರೀತಿ ನೀತಿಗಳನ್ನು ಎಲ್ಲರೂ ಒಪ್ಪಬೇಕೆಂಬ ಹಠವಿರುತ್ತದೆ. ಉತ್ತಮ ಅಭ್ಯಾಸಗಳಿಂದ ಉತ್ತಮ ಆರೋಗ್ಯವನ್ನು ಗಳಿಸುವಿರಿ. ಹಣಕಾಸಿನ ವಿಚಾರದಲ್ಲಿ ಸುಧಾರಣೆ ಕಂಡು ಬರುತ್ತದೆ. ವಿವಾಹದ ವಿಚಾರದಲ್ಲಿ ಆತುರದಿಂದ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಮಿತಿಮೀರಿದ ಖರ್ಚು ವೆಚ್ಚದಿಂದ ಮಾನಸಿಕ ಒತ್ತಡಕ್ಕೆ ಒಳಗಾಗುವಿರಿ. ಉತ್ತಮ ಯೋಜನೆ ಇಲ್ಲದೆ ಹಣದ ವ್ಯವಹಾರವನ್ನು ಆರಂಭಿಸುವುದಿಲ್ಲ. ಕುಟುಂಬದ ಹಿರಿಯರ ಮಾರ್ಗದರ್ಶನ ದೊರೆತು ಹಣದ ತೊಂದರೆಯಿಂದ ಪಾರಾಗುವಿರಿ. ಕುಟುಂಬದ ಕಷ್ಟದ ಸಮಯದಲ್ಲಿ ಆತ್ಮೀಯರ ಸಹಾಯ ದೊರೆಯುತ್ತದೆ. ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡುವಿರಿ. ವೃತ್ತಿಯನ್ನು ಬದಲಿಸುವ ತೀರ್ಮಾನ ಕೈಗೊಳ್ಳುವಿರಿ. ಕೃಷಿ ಕಾರ್ಯದಿಂದ ನೆಮ್ಮದಿ ಕಾಣುವಿರಿ.

ಪರಿಹಾರ: ಬೆಲ್ಲದಿಂದ ಮಾಡಿದ ಆಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಕಪ್ಪು ಬಣ್ಣ

ಕುಂಭ ರಾಶಿ

ಅನಿಯಮಿತ ಕೆಲಸದ ನಡುವೆ ಆರೋಗ್ಯದ ಬಗ್ಗೆ ಗಮನ ವಹಿಸುವುದಿಲ್ಲ. ಸ್ವಂತ ವ್ಯಾಪಾರ ವ್ಯವಹಾರದ ಆದಾಯದಲ್ಲಿ ಏರಿಳಿತ ಕಂಡು ಬರುತ್ತದೆ. ಸತತ ಪ್ರಯತ್ನದ ನಡುವೆಯೂ ಗಳಿಸಿದ ಹಣವನ್ನು ಉಳಿಸಲು ಸಾಧ್ಯವಾಗುವುದಿಲ್ಲ. ಆದರೆ ಹಣಕಾಸಿನ ಕೊರತೆ ಇರದು. ಆರಂಭಿಸಿದ ಕೆಲಸ ಕಾರ್ಯಗಳಲ್ಲಿ ನಿರೀಕ್ಷಿಸಿದ ಯಶಸ್ಸು ದೊರೆಯುತ್ತದೆ. ಹೊಸ ನಿರೀಕ್ಷಿಯಿಂದ ದಿನನಿತ್ಯದ ಕಾರ್ಯವನ್ನು ಆರಂಭಿಸುವಿರಿ. ಬೇರೆಯವರ ಸಹಾಯ ಸಹಕಾರದಿಂದ ಸುಲಭವಾಗಿ ನಿಮ್ಮ ಕೆಲಸಗಳನ್ನು ಪೂರ್ಣಗೊಳಿವುವಿರಿ. ಕುಟುಂಬದ ಸದಸ್ಯರ ಜೊತೆಯಲ್ಲಿ ದೀರ್ಘಕಾಲದ ಪ್ರವಾಸಕ್ಕೆ ತೆರಳುವಿರಿ. ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾರ್ಜನೆಗಾಗಿ ವಿದೇಶಕ್ಕೆ ತೆರಳುವಿರಿ. ಗೃಹಿಣಿಯರು ಶುಭಫಲಗಳನ್ನು ಗಳಿಸುವರು. ನಿಮ್ಮ ಕರ್ತವ್ಯನಿಷ್ಠೆ ಮತ್ತು ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ಬೇರೆಯವರ ಪ್ರಭಾವಕ್ಕೆ ಒಳಗಾಗುವಿರಿ. ಸಾಲದ ವ್ಯವಹಾರದಿಂದ ಸಮಸ್ಯೆ ಉದ್ಭವಿಸುತ್ತದೆ.

ಪರಿಹಾರ: ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ತಿಳಿಹಸಿರು ಬಣ್ಣ

ಮೀನ ರಾಶಿ

ಸಣ್ಣ ಪುಟ್ಟ ವಿರೋಧಭಾಸಗಳ ನಡುವೆಯೂ ಉದ್ಯೋಗದಲ್ಲಿ ಯಶಸ್ಸನ್ನು ಸಾಧಿಸುವಿರಿ. ಹಠದ ಸ್ವಭಾವವನ್ನು ಬಿಟ್ಟರೆ ಯಾವುದೇ ತೊಂದರೆಯೂ ಎದುರಾಗುವುದಿಲ್ಲ. ಆಗೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಯಶಸ್ವಿಯಾಗುವಿರಿ. ಹಣ ಕಾಸಿನ ವಿಚಾರದಲ್ಲಿ ಚೇತರಿಕೆ ಉಂಟಾಗುತ್ತದೆ. ಆದರೆ ಮಕ್ಕಳ ವಿದ್ಯಾಭ್ಯಾಸದಲ್ಲಿ ಕೊಂಚ ಹಿನ್ನೆಡೆ ಉಂಟಾಗಬಹುದು. ವಯೋವೃದ್ದರ ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ. ಹೆಚ್ಚಿನ ಪರಿಶ್ರಮದಿಂದ ಮಾತ್ರ ನಿರೀಕ್ಷಿಸಿದ ಕೆಲಸ ಸಾಧಿಸುವಿರಿ. ಉತ್ತಮ ಆದಾಯವಿರುತ್ತದೆ. ಆದರೆ ಹಣವನ್ನು ಉಳಿಸಲು ಪ್ರಯತ್ನಿಸುವುದಿಲ್ಲ. ಆತ್ಮೀಯರೊಂದಿಗೆ ಪ್ರೀತಿ ವಿಶ್ವಾಸ ಹೆಚ್ಚುತ್ತದೆ. ಮಕ್ಕಳಿಗೆ ಬಂಧುವೊಬ್ಬರಿಂದ ಅವಶ್ಯಕತೆಗೆ ತಕ್ಕ ಸಹಾಯ ದೊರೆಯಲಿದೆ. ವಿಶ್ರಾಂತಿ ಇಲ್ಲದೆ ಕಷ್ಟದಿಂದ ದುಡಿಯಬೇಕಾಗುತ್ತದೆ. ದೈಹಿಕವಾಗಿ ಸದೃಢಗೊಳ್ಳುವಿರಿ. ನಿಮ್ಮ ನೇತೃತ್ವದಲ್ಲಿ ಮಂಗಳ ಕಾರ್ಯವೊಂದು ನೆರವೇರಲಿದೆ. ನೀರಿರುವ ಸ್ಥಳದಲ್ಲಿ ಎಚ್ಚರಿಕೆಯಿಂದ ವರ್ತಿಸಿ. ತೊಂದರೆ ಆಗಬಹುದು.

ಪರಿಹಾರ: ಮಕ್ಕಳಿಗೆ ಗೋಧಿಯಿಂದ ತಯಾರಿಸಿದ ಸಿಹಿ ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ

ಬರಹ: ಹೆಚ್‌. ಸತೀಶ್‌, ಜ್ಯೋತಿಷಿ, ಬೆಂಗಳೂರು

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ)

Raghavendra M Y

TwittereMail
ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.