ವಾರ ಭವಿಷ್ಯ: ಮೇಷ ರಾಶಿಯವರಿಗೆ ಆತ್ಮವಿಶ್ವಾಸದ ಕೊರತೆ ಇರುತ್ತೆ, ವೃಷಭ ರಾಶಿಯವರು ಎಚ್ಚರಿಕೆಯ ನಿರ್ಧಾರ ಕೈಗೊಳ್ಳಿ
ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ರಾಶಿಯವರಿಗೆ ಏನು ಫಲ? 2025ರ ಏಪ್ರಿಲ್ 13 ರಿಂದ 19 ರವರೆಗಿನ ವಾರ ಭವಿಷ್ಯ ಇಲ್ಲಿದೆ.

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಏಪ್ರಿಲ್ 13ರ ಭಾನುವಾರದಿಂದ 19ರ ಶನಿವಾರದವರೆಗೆ ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ವಾರ ಭವಿಷ್ಯ ಇಲ್ಲಿದೆ.
ಮೇಷ ರಾಶಿ
ಬಿಡುವಿಲ್ಲದೆ ಕೆಲಸ ನಿರ್ವಹಿಸಬೇಕಾಗುತ್ತದೆ. ಇದರಿಂದಾಗಿ ಆರೋಗ್ಯದಲ್ಲಿ ಏರಿಳಿತ ಕಂಡುಬರುತ್ತದೆ. ಮಾನಸಿಕ ಖಿನ್ನತೆ ಇರುತ್ತದೆ. ಕುಟುಂಬದಲ್ಲಿ ಸಂತೋಷದ ಕ್ಷಣಗಳು ಇರಲಿವೆ. ಮಾನಸಿಕವಾಗಿ ಸದೃಢರಾಗಿರಾಗುತ್ತೀರಿ. ಉದ್ಯೋಗದ ವಿಷಯದಲ್ಲಿ ನಿಮ್ಮಲ್ಲಿರುವ ಪ್ರತಿಭೆಗೆ ತಕ್ಕ ಅವಕಾಶ ಮತ್ತು ಪ್ರತಿಫಲ ದೊರೆಯುತ್ತದೆ. ಮನದಲ್ಲಿಯೇ ಯೋಚಿಸಿದ ನಂತರ ಕೆಲಸ ಕಾರ್ಯಗಳಲ್ಲಿ ತೊಡಗುವಿರಿ. ಆತ್ಮೀಯರ ಸಲುವಾಗಿ ಹಣ ವೆಚ್ಚವಾಗುತ್ತದೆ. ನಿಮ್ಮ ನಿರ್ಧಾರಗಳನ್ನು ಅನ್ಯರ ಪ್ರಭಾವಕ್ಕೆ ಮಣಿದು ಬದಲಾಯಿಸುವಿರಿ. ಕುಟುಂಬದಲ್ಲಿ ನಲುಮೆಯ ವಾತಾವರಣ ಇರುತ್ತದೆ. ಆತುರದ ಕಾರಣ ಹಣಕಾಸಿನ ವಿಚಾರದಲ್ಲಿ ವಿವಾದವನ್ನು ಎದುರಿಸುವಿರಿ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ಇರುತ್ತದೆ. ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸದ ಕೊರತೆ ಇರುತ್ತದೆ. ನಿಮ್ಮ ಸಾಮರ್ಥ್ಯದ ಬಗ್ಗೆ ನಿಮಗೆ ನಂಬಿಕೆ ಇರುವುದಿಲ್ಲ. ಉತ್ತಮ ಆರೋಗ್ಯ ಇರುತ್ತದೆ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ಸ್ಥಿರತೆ ಕಂಡುಬರುತ್ತದೆ. ದೂರದ ಸ್ಥಳಕ್ಕೆ ಪ್ರಯಾಣ ಮಾಡುವುದನ್ನು ಮುಂದೂಡುವುದು ಒಳಿತು.
ಪರಿಹಾರ: ತಲೆಗೆ ಹಾಲಲ್ಲಿಟ್ಟು ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ
ಅದೃಷ್ಟದ ಸಂಖ್ಯೆ: 1
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ
ವೃಷಭ ರಾಶಿ
ಆರೋಗ್ಯ ಉಳಿಸಿಕೊಳ್ಳಲು ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ಯಾವುದೇ ಕೆಲಸವಾದರೂ ಎಚ್ಚರಿಕೆಯ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ಬುದ್ದಿವಂತಿಕೆಯ ನಿರ್ಧಾರಗಳ ಕಾರಣ ವಿವಾದಗಳಲ್ಲಿ ಸಿಲುಕುವುದಿಲ್ಲ. ಆದಾಯ ಕಡಿಮೆ ಇದ್ದರೂ ಹೆಚ್ಚಿನ ಖರ್ಚು ವೆಚ್ಚಗಳು ಇರಲಿವೆ. ಅನಿವಾರ್ಯವಾಗಿ ಆತ್ಮೀಯರಿಂದ ಹಣದ ಸಹಾಯವನ್ನು ನಿರೀಕ್ಷಿಸುವಿರಿ. ಮನೆತನಕ್ಕೆ ಸಂಬಂಧಪಟ್ಟಂತಹ ಧಾರ್ಮಿಕ ವಿಧಿ ವಿಧಾನಗಳನ್ನು ಅನುಸರಿಸುವಿರಿ. ಮನಸ್ಸಿನಲ್ಲಿ ನಕಾರಾತ್ಮಕ ಧೋರಣೆ ಕಂಡು ಬರುತ್ತದೆ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರುತ್ತದೆ. ಹೊಸ ರೀತಿಯ ಬದಲಾವಣೆಗಳಿಗೆ ಸಿದ್ಧರಾಗುವಿರಿ. ತಪ್ಪು ಮಾಡದೆ ಹೋದರು ಬೇರೆಯವರ ಅವಹೇಳನಕ್ಕೆ ಗುರಿಯಾಗುವಿರಿ. ಶಾಂತಿ, ಸಂಯಮದಿಂದ ವರ್ತಿಸುವ ಕಾರಣ ಯಾವುದೇ ತೊಂದರೆ ಎದುರಾಗದು. ಮೌನವಾಗಿದ್ದರು ಉತ್ತಮ ಪರಿಶ್ರಮದಿಂದ ನಿಮ್ಮ ಗುರಿಯನ್ನು ಸಾಧಿಸುವಿರಿ.
ಪರಿಹಾರ: ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಹಳದಿ ಬಣ್ಣ
ಮಿಥುನ ರಾಶಿ
ಹೆಚ್ಚಿನ ಜವಾಬ್ದಾರಿಯ ನಡುವೆಯೂ ವಿಶ್ರಾಂತಿಯನ್ನು ತೆಗೆದುಕೊಳ್ಳುವಿರಿ. ಇದರಿಂದ ಯಾವುದೇ ಹೊಸ ಕೆಲಸ ಕಾರ್ಯಗಳಲ್ಲಿ ಸುಲಭವಾಗಿ ಯಶಸ್ಸು ಸಾಧಿಸುವಿರಿ. ಕಷ್ಟವೆನಿಸಿದರು ಬುದ್ಧಿವಂತಿಕೆಯಿಂದ ದೊರೆಯುವ ಅವಕಾಶಗಳನ್ನು ಬಳಸಿಕೊಳ್ಳುವಿರಿ. ನಿಮಗೆ ಅನುಕೂಲವೆನಿಸುವ ಕೆಲಸ ಕಾರ್ಯಗಳನ್ನು ಆಯ್ಕೆ ಮಾಡುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಆಸಕ್ತಿ ತೋರುವುದಿಲ್ಲ. ಬಂಧು-ಬಳಗದವರಿಂದ ದೂರ ಉಳಿಯುವುವಿರಿ. ಒಂಟಿಯಾಗಿ ಎದುರಾಗುವ ಸಮಸ್ಯೆಗಳನ್ನು ಬಗೆಹರಿಸುವಿರಿ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ತಮ್ಮ ಗುರಿ ತಲುಪಲಿದ್ದಾರೆ. ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಆತ್ಮೀಯರ ಸಹಾಯವನ್ನು ಪಡೆಯುತ್ತಾರೆ. ಗುರು ಹಿರಿಯರ ಮೆಚ್ಚುಗೆಯನ್ನು ಗಳಿಸುವಿರಿ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಯಶಸ್ಸು ದೊರೆಯುತ್ತದೆ.
ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಹಸಿರು ಬಣ್ಣ
ಕಟಕ ರಾಶಿ
ಸಣ್ಣ ಪುಟ್ಟ ಸೋಲಿಗೂ ಉದ್ವೇಗದಿಂದ ವರ್ತಿಸುವಿರಿ. ನಿಮ್ಮದೇ ತಪ್ಪು ನಿರ್ಧಾರಗಳು ಸಮಸ್ಯೆಗಳನ್ನು ಉಂಟುಮಾಡುತ್ತವೆ. ವಿಶ್ರಾಂತಿ ಇಲ್ಲದೆ ದುಡಿಯುವ ಅವಶ್ಯಕತೆ ಕಂಡುಬರುತ್ತದೆ. ಹೊಗಳಿಕೆಗೆ ಮರುಳಾಗುವಿರಿ. ಹಣಕಾಸಿನ ವ್ಯವಹಾರದಲ್ಲಿ ಉತ್ತಮ ಲಾಭವಿರುತ್ತದೆ. ಮಕ್ಕಳಿಗೆ ಅನುಕೂಲತೆ ಕಲ್ಪಿಸಲು ಶಕ್ತರಾಗುವಿರಿ. ಉದ್ಯೋಗವನ್ನು ಬದಲಿಸುವ ಸಾಧ್ಯತೆಗಳಿವೆ. ಕುಟುಂಬದಲ್ಲಿ ಹೊಂದಾಣಿಕೆಯ ಗುಣವಿರುತ್ತದೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬರಲಿದೆ. ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಗೆ ಹೆದರದೆ ಮುನ್ನಡೆಯುವಿರಿ. ನಿಮ್ಮ ಮನದ ಆಸೆಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಅವಿವಾಹಿತರಿಗೆ ಬೇಸರದ ಸಂಗತಿಯೊಂದು ದೊರೆಯಲಿದೆ. ಆತ್ಮ ವಿಶ್ವಾಸದಿಂದ ನಡೆದುಕೊಳ್ಳಿರಿ. ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತಹ ಅವಕಾಶಗಳು ದೊರೆಯುವುದಿಲ್ಲ. ಉದ್ಯೋಗದಲ್ಲಿ ಪ್ರಗತಿಪರ ನಿರ್ಣಯಗಳನ್ನು ತೆಗೆದುಕೊಳ್ಳುವಿರಿ. ಹಣಕಾಸಿನ ಯೋಜನೆಗಳಲ್ಲಿ ಹಣವನ್ನು ತೊಡಗಿಸುವಿರಿ.
ಪರಿಹಾರ: ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿ ದಿನದ ಕೆಲಸ ಆರಂಭಿಸಿ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ನೀಲಿ ಬಣ್ಣ
ಬರಹ: ಹೆಚ್. ಸತೀಶ್, ಜ್ಯೋತಿಷಿ, ಬೆಂಗಳೂರು
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ)

ವಿಭಾಗ