ವಾರ ಭವಿಷ್ಯ: ಸಿಂಹ ರಾಶಿಯವರಿಗೆ ಸಂತಾನ ಲಾಭವಿದೆ, ಕನ್ಯಾ ರಾಶಿಯವರು ಅತಿಯಾದ ಖರ್ಚುಗಳನ್ನು ತಪ್ಪಿಸಬೇಕು
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ವಾರ ಭವಿಷ್ಯ: ಸಿಂಹ ರಾಶಿಯವರಿಗೆ ಸಂತಾನ ಲಾಭವಿದೆ, ಕನ್ಯಾ ರಾಶಿಯವರು ಅತಿಯಾದ ಖರ್ಚುಗಳನ್ನು ತಪ್ಪಿಸಬೇಕು

ವಾರ ಭವಿಷ್ಯ: ಸಿಂಹ ರಾಶಿಯವರಿಗೆ ಸಂತಾನ ಲಾಭವಿದೆ, ಕನ್ಯಾ ರಾಶಿಯವರು ಅತಿಯಾದ ಖರ್ಚುಗಳನ್ನು ತಪ್ಪಿಸಬೇಕು

ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ರಾಶಿಯವರಿಗೆ ಏನು ಫಲ? 2025ರ ಏಪ್ರಿಲ್ 13 ರಿಂದ 19 ರವರೆಗಿನ ವಾರ ಭವಿಷ್ಯ ಇಲ್ಲಿದೆ.

ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ವಾರ ಭವಿಷ್ಯ
ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ವಾರ ಭವಿಷ್ಯ

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಏಪ್ರಿಲ್ 13ರ ಭಾನುವಾರದಿಂದ 19ರ ಶನಿವಾರದವರೆಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ವಾರ ಭವಿಷ್ಯ ಇಲ್ಲಿದೆ.

ಸಿಂಹ ರಾಶಿ

ಸಂಗಾತಿಯ ಆರೋಗ್ಯದಲ್ಲಿ ತೊಂದರೆ ಕಂಡುಬರುತ್ತದೆ. ಸ್ನೇಹಿತರು ಅನೇಕರಿದ್ದರು ಎಲ್ಲರನ್ನೂ ಒಂದೇ ಭಾವನೆಯಿಂದ ಕಾಣುವುದಿಲ್ಲ. ಬೇಗನೆ ಕೋಪಗೊಳ್ಳುವಿರಿ. ನಿಮ್ಮ ಮಾತಿನ ಮೇಲೆ ನಿಮಗೆ ನಂಬಿಕೆ ಕಡಿಮೆ ಇರುತ್ತದೆ. ತಪ್ಪು ನಿರ್ಧಾರಗಳಿಂದ ತೊಂದರೆಗೆ ಒಳಗಾಗುವಿರಿ. ಸಂತಾನ ಲಾಭವಿದೆ. ಕುಟುಂಬದವರ ಜೊತೆಯಲ್ಲಿ ಉತ್ತಮ ಹೊಂದಾಣಿಕೆ ಕಂಡು ಬರುವುದಿಲ್ಲ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ತೊಡಗುವಿರಿ. ತಪ್ಪು ನಿಮ್ಮದಿದ್ದರೂ ಬೇರೆಯವರಿಗೆ ಬುದ್ಧಿವಾದ ಹೇಳುವಿರಿ. ಕಡಿಮೆ ಅವಧಿಯಲ್ಲಿ ಹೆಚ್ಚಿನ ಕೆಲಸಗಳನ್ನು ಮಾಡಬೇಕಾಗುತ್ತದೆ. ಆತ್ಮೀಯರ ವಿವಾಹ ಕಾರ್ಯಕ್ಕೆ ಹಣದ ಸಹಾಯ ಮಾಡುವಿರಿ. ಕಲುಷಿತ ಆಹಾರ ಸೇವನೆಯಿಂದ ಆರೋಗ್ಯದಲ್ಲಿ ತೊಂದರೆ ಉಂಟಾಗುತ್ತದೆ. ಎತ್ತರದ ಸ್ಥಳದಿಂದ ಬಿದ್ದು ಕಾಲಿಗೆ ಪೆಟ್ಟಾಗುವ ಸಂಭವವಿದೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ನೇರಳೆ ಬಣ್ಣ

ಕನ್ಯಾ ರಾಶಿ

ಉದಾರ ಗುಣದಿಂದಾಗಿ ಎಲ್ಲರ ಮನೆ ಗೆಲ್ಲುವಿರಿ. ಅತಿಯಾದ ಖರ್ಚು ವೆಚ್ಚಗಳಿರುತ್ತವೆ. ಹಣದ ಕೊರತೆಯಿಂದ ಬಾಳುವಿರಿ. ನಿಮ್ಮ ಬಗ್ಗೆ ಕುಟುಂಬದವರಿಗೆ ತಪ್ಪು ಭಾವನೆ ಮೂಡುತ್ತದೆ. ಬಾಳ ಸಂಗಾತಿಯ ಆರೋಗ್ಯದಲ್ಲಿ ತೊಂದರೆ ಕಂಡು ಬರುತ್ತದೆ. ಪ್ರೀತಿ ವಿಶ್ವಾಸದಿಂದ ಮಾತನಾಡಿದರೆ ಕುಟುಂಬದ ಸಮಸ್ಯೆಗಳು ದೂರವಾಗುತ್ತವೆ. ಗಣ್ಯ ವ್ಯಕ್ತಿಗಳ ಸಂಪರ್ಕ ಸಿಗಲಿದೆ. ಸಮಾಜದಲ್ಲಿ ಗೌರವದ ಸ್ಥಾನಮಾನ ದೊರೆಯುತ್ತದೆ. ಸ್ವಂತ ಕೆಲಸ ಕಾರ್ಯಗಳಲ್ಲಿ ಆಸಕ್ತಿ ವಹಿಸುವುದಿಲ್ಲ. ಆರೋಗ್ಯದ ಬಗ್ಗೆ ಗಮನ ವಹಿಸಿ. ಪ್ರಾಣಿಗಳಿಂದ ತೊಂದರೆ ಆಗುವ ಸಾಧ್ಯತೆಗಳಿವೆ. ಮುಂದಾಲೋಚನೆಯಿಂದ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಬಲ್ಲಿರಿ. ಭವಿಷ್ಯದ ಬಗ್ಗೆ ಚಿಂತನೆ ನಡೆಸುವಿರಿ. ಹಣಕಾಸಿನ ಯೋಜನೆಗಳಲ್ಲಿ ನೇರವಾಗಿ ಪಾಲ್ಗೊಳ್ಳುವಿರಿ.

ಪರಿಹಾರ: ತಾಯಿಯವರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ತುಲಾ ರಾಶಿ

ಪಾಲುಕಾರಿಕೆಯ ವ್ಯವಹಾರದಲ್ಲಿ ಹಣ ಹೂಡುವಿರಿ. ಎಲ್ಲರ ಮನ ಗೆಲ್ಲಲು ಪ್ರಯತ್ನಿಸುವಿರಿ. ಒಂದೇ ಬಾರಿ ಎರಡಕ್ಕಿಂತಲೂ ಹೆಚ್ಚಿನ ಕೆಲಸಗಳನ್ನು ನಿರ್ವಹಿಸಬಲ್ಲಿರಿ. ಸಮಾಜಸೇವೆಯನ್ನು ನಿರ್ವಹಿಸುವ ಮೂಲಕ ಸಮಾಜದಲ್ಲಿ ಉನ್ನತ ಮಟ್ಟ ತಲುಪಲು ಪ್ರಯತ್ನಿಸುವಿರಿ. ಉದ್ಯೋಗದಲ್ಲಿ ಎಲ್ಲರ ಮೆಚ್ಚುಗೆ ಗಳಿಸುವಿರಿ. ಸೋದರರ ಜೊತೆಯಲ್ಲಿ ಮನಸ್ತಾಪವಿರುತ್ತದೆ. ಹಠದ ಗುಣದಿಂದ ಆರಂಭಿಸಿದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಗಳಿಸುವುದು ಸಾಧ್ಯವಾಗಲಿದೆ. ದೇವತಾ ಕಾರ್ಯಗಳನ್ನು ಮಾಡಲಿರುವಿರಿ. ಅತಿಯಾದ ಆಸೆಯಿಂದ ಹಣದ ಸಮಸ್ಯೆಗೆ ಸಿಲುಕುವಿರಿ. ಆರೋಗ್ಯವನ್ನು ಕಾಪಾಡಿಕೊಳ್ಳುವುದು ಮುಖ್ಯ ಉದ್ದೇಶವಾಗಿರುತ್ತದೆ. ಭವಿಷ್ಯದ ಬಗ್ಗೆ ಚಿಂತಿಸಿ ಉತ್ತಮ ಯೋಜನೆ ರೂಪಿಸುವಿರಿ. ದುಡುಕುತನದಿಂದ ಹಣದ ವ್ಯವಹಾರದಲ್ಲಿ ಪಾಲ್ಗೊಳ್ಳುವಿರಿ. ಮಕ್ಕಳ ಅಬ್ಯುದಯಕ್ಕಾಗಿ ಯಾವುದೇ ತ್ಯಾಗಕ್ಕೂ ಸಿದ್ಧವಾಗುವಿರಿ.

ಪರಿಹಾರ: ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 3
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಬಿಳಿ ಬಣ್ಣ

ವೃಶ್ಚಿಕ ರಾಶಿ

ಪ್ರತಿಯೊಬ್ಬರನ್ನು ಗೌರವ ಭಾವದಿಂದ ಕಾಣುವಿರಿ. ಆತ್ಮವಿಶ್ವಾಸದ ಕಾರಣ ಸೋಲಿನ ಭಯವಿರುವುದಿಲ್ಲ. ಪ್ರತಿಯೊಂದು ಕೆಲಸದಲ್ಲಿಯೂ ಉನ್ನತ ಮಟ್ಟ ತಲುಪಲು ಪ್ರಯತ್ನ ಪಡುವಿರಿ. ಕಷ್ಟ ನಷ್ಟದಲ್ಲಿ ಇದ್ದವರಿಗೆ ಸಹಾಯ ಮಾಡುವಿರಿ. ಅಡ್ಡಿ ಆತಂಕದ ನಡುವೆಯೂ ಆರಂಭಿಸಿದ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಪ್ರತಿಯೊಂದು ವಿಚಾರವನ್ನು ಸಂಪೂರ್ಣವಾಗಿ ಅರಿತುಕೊಳ್ಳುವಿರಿ. ನಿಮ್ಮ ಮನದ ಭಾವನೆಯನ್ನು ಯಾರಿಗೂ ತಿಳಿಸುವುದಿಲ್ಲ. ಬೇರೆಯವರ ಮನಸ್ಸಿಗೆ ನೋವಾಗದಂತೆ ಮಾತನಾಡುವಿರಿ. ಪೂರ್ವ ಯೋಜನೆ ಇಲ್ಲದೆ ಯಾವುದೇ ಕೆಲಸ ಮಾಡುವುದಿಲ್ಲ. ಅನಾವಶ್ಯಕವಾಗಿ ಬೇರೆಯವರ ವಿಚಾರಗಳಲ್ಲಿ ಮಧ್ಯಸ್ಥಿಕೆ ವಹಿಸುವುದಿಲ್ಲ. ಸುಲಭವಾಗಿ ಬೇರೆಯವರನ್ನು ನಂಬುವುದಿಲ್ಲ. ನಿಮ್ಮ ಬಳಿ ಹಣವಿದ್ದರೂ ಸ್ವಂತ ಖರ್ಚು ವೆಚ್ಚಗಳನ್ನು ನಿಯಂತ್ರಿಸುವಿರಿ. ಸಣ್ಣಪುಟ್ಟ ಕೆಲಸ ಕಾರ್ಯಗಳನ್ನು ನಿಷ್ಠೆಯಿಂದ ಮಾಡುವಿರಿ.

ಪರಿಹಾರ: ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಬೂದು ಬಣ್ಣ

ಬರಹ: ಹೆಚ್‌. ಸತೀಶ್‌, ಜ್ಯೋತಿಷಿ, ಬೆಂಗಳೂರು

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ)

Raghavendra M Y

TwittereMail
ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.