ವಾರ ಭವಿಷ್ಯ: ಧನು ರಾಶಿಯವರಿಗೆ ಸ್ವಂತ ವ್ಯಾಪಾರದಲ್ಲಿ ಲಾಭವಿದೆ, ಮಕರ ರಾಶಿಯವರು ಉತ್ತಮ ಆದಾಯ ಕಾಣಲಿದ್ದಾರೆ
ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ರಾಶಿಯವರಿಗೆ ಏನು ಫಲ? ಒಂದು ವಾರ ಭವಿಷ್ಯ ಇದೆ.

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಏಪ್ರಿಲ್ 27 ರ ಭಾನುವಾರದಿಂದ ಮೇ 3 ರ ಶನಿವಾರದವರಿಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ವಾರ ಭವಿಷ್ಯ
ಧನು ರಾಶಿ
ದೃಢವಾದ ನಿರ್ಧಾರಗಳಿಂದ ಉತ್ತಮ ಆರೋಗ್ಯವನ್ನು ಗಳಿಸುವಿರಿ. ಬಹುದಿನಗಳಿಂದ ಇದ್ದ ಅನಾರೋಗ್ಯಕ್ಕೆ ಸೂಕ್ತ ಪರಿಹಾರ ದೊರೆಯಲಿದೆ. ಬಹು ದಿನಗಳ ಹಿಂದಿನಿಂದ ನಿಮಗೆ ಸಂದಾಯವಾಗಬೇಕಿದ್ದ ಹಣವು ಈ ವಾರದಲ್ಲಿ ನಿಮ್ಮ ಕೈ ಸೇರಲಿದೆ. ಹಣಕಾಸಿನ ಪರಿಸ್ಥಿತಿಯಲ್ಲಿ ಯಾವುದೇ ತೊಂದರೆ ಇರುವುದಿಲ್ಲ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ ಗಳಿಸುವುವಿರಿ. ರಕ್ತಕ್ಕೆ ಸಂಬಂಧಿಸಿದ ದೋಷವಿದ್ದರೆ ಎಚ್ಚರಿಕೆ ಇರಲಿ. ಕುಟುಂಬದ ಜವಾಬ್ದಾರಿಗಳಿಂದ ಹೊರಬರುವಿರಿ. ಮೇಲಧಿಕಾರಿಗಳಿಗೆ ನಿಮ್ಮ ಕೆಲಸ ಕಾರ್ಯಗಳು ಇಷ್ಟವೆನಿಸುತ್ತವೆ. ಉದ್ಯೋಗದಲ್ಲಿ ನಿರೀಕ್ಷಿತ ಬದಲಾವಣೆಗಳು ಕಂಡುಬರುತ್ತವೆ. ವಿದ್ಯಾರ್ಥಿಗಳು ತಮ್ಮ ಕಷ್ಟಕ್ಕೆ ತಕ್ಕಂತಹ ಪ್ರತಿಫಲವನ್ನು ಪಡೆಯುತ್ತಾರೆ. ಉತ್ತಮ ಪ್ರಯತ್ನವಿದ್ದರೂ ಸ್ವಂತ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ .
ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೆಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ
ಮಕರ ರಾಶಿ
ಧೈರ್ಯ ಸಾಹಸದ ಗುಣವನ್ನು ತೋರುವರಿ. ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಕಂಡು ಬರುವುದಿಲ್ಲ. ದೈಹಿಕ ವ್ಯಾಯಾಮದಿಂದ ಆರೋಗ್ಯವನ್ನು ಉಳಿಸಿಕೊಳ್ಳುವಿರಿ. ಉತ್ತಮ ಆದಾಯ ಇರುತ್ತದೆ. ಆದಾಯವನ್ನು ಹೆಚ್ಚಿಸಿಕೊಳ್ಳಲು ಹೆಚ್ಚಿನ ಪ್ರಯತ್ನ ಮಾಡುವಿರಿ. ಯಾವುದೇ ಕೆಲಸ ಕಾರ್ಯಗಳನ್ನು ಆಸಕ್ತಿಯಿಂದ ಮಾಡುವುದಿಲ್ಲ. ನಿಮ್ಮ ಪಾಲಿನ ಕರ್ತವ್ಯವನ್ನು ಮರೆಯುವುದಿಲ್ಲ. ಕುಟುಂಬದ ಸದಸ್ಯರು ಹಣ ಉಳಿಸಲು ಸಹಾಯ ಮಾಡುತ್ತಾರೆ. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉನ್ನತ ಮಟ್ಟವನ್ನು ತಲುಪುತ್ತಾರೆ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭವಿರುತ್ತದೆ. ಆತ್ಮೀಯರ ನೆರವಿಗೆ ಸದಾ ಮುಂದಾಗುವಿರಿ. ನಿಮ್ಮನ್ನು ಹೊಗಳಿ ಸ್ವಾರ್ಥ ಸಾಧಿಸಿಕೊಳ್ಳುವ ಜನರಿರುತ್ತಾರೆ ಎಚ್ಚರಿಕೆ ಇರಲಿ. ಉದ್ಯೋಗ ಬದಲಾಯಿಸಿದರು ನಿಮ್ಮ ಮನಸ್ಸಿಗೆ ನೆಮ್ಮದಿ ಇರುವುದಿಲ್ಲ.
ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ ಬಣ್ಣ
ಕುಂಭ ರಾಶಿ
ಆರೋಗ್ಯದಲ್ಲಿ ಸಣ್ಣಪುಟ್ಟ ದೋಷಗಳು ಕಂಡು ಬರಲಿವೆ. ನಿಮ್ಮ ಜೀವನದಲ್ಲಿ ಹಲವಾರು ಬದಲಾವಣೆಗಳು ಕಾಣಲಿದ್ದು ಹೊಂದಿಕೊಂಡು ಬಾಳಬೇಕಾಗುತ್ತದೆ. ನಿಧಾನ ಗತಿಯಲ್ಲಿ ಹಣ ಗಳಿಸುವಿರಿ. ಉದ್ಯೋಗದಲ್ಲಿ ನಿಮ್ಮ ನವಿರಾದ ಮಾತುಕತೆಯಿಂದ ಕೆಲಸ ಸಾಧಿಸುವಿರಿ. ಅನಾವಶ್ಯಕ ಖರ್ಚು ವೆಚ್ಚಗಳು ನಿಮ್ಮನ್ನು ಕಾಡಲಿವೆ. ಎದುರಾಗುವ ಯಾವುದೇ ಸಂದಿಗ್ದ ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸುವಿರಿ. ಕುಟುಂಬದಲ್ಲಿ ನಿಮ್ಮ ಮಾತಿಗೆ ಪೂರ್ಣ ಮನ್ನಣೆ ದೊರೆಯಲಿದೆ. ಅನಿರೀಕ್ಷಿತ ಧನ ಲಾಭ ಕಂಡುಬರುತ್ತದೆ. ಮಾತಿನ ಮೇಲೆ ಹತೋಟಿ ಸಾಧಿಸಲು ಪ್ರಯತ್ನಿಸಿ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ವರಮಾನ ವಿರುತ್ತದೆ. ಕುಟುಂಬದಲ್ಲಿ ಧಾರ್ಮಿಕ ಕೆಲಸಗಳನ್ನು ನಿರ್ವಹಿಸುವಿರಿ. ವಿದ್ಯಾರ್ಥಿಗಳಿಗೆ ಅವರ ನಿರೀಕ್ಷೆಯಂತೆ ಉತ್ತಮ ಬದಲಾವಣೆಗಳು ಕಂಡು ಬರಲಿವೆ.
ಪರಿಹಾರ: ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಹಾಲಿನ ಬಣ್ಣ
ಮೀನ ರಾಶಿ
ಗರ್ಭಿಣಿಯರು ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಗುರು-ಹಿರಿಯರ ಮಾತಿಗೆ ಗೌರವ ನೀಡುವಿರಿ. ಕುಟುಂಬದ ಹಿರಿಯರ ಮಾರ್ಗದರ್ಶನದಂತೆ ನಡೆಯುವ ಕಾರಣ ಯಾವುದೇ ಸಮಸ್ಯೆ ಎದುರಾಗದು. ಉತ್ತಮ ಆದಾಯ ಇರುತ್ತದೆ. ಆದರೆ ಖರ್ಚು ವೆಚ್ಚಗಳನ್ನು ನಿಯಂತ್ರಿಸಲು ವಿಫಲರಾಗುವಿರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಉತ್ತಮ ಮಾರ್ಗದರ್ಶನದ ಅಗತ್ಯವಿದೆ. ಬಂಧು-ಬಳಗದವರ ಪ್ರೀತಿ ವಿಶ್ವಾಸವನ್ನು ಗಳಿಳಿಸುವಿರಿ. ಸಾಮಾಜಿಕ ಸಭೆ ಸಮಾರಂಭಗಳಲ್ಲಿ ನಿಮ್ಮ ಪಾತ್ರವು ಅತಿ ಮುಖ್ಯವಾಗುತ್ತದೆ. ಣಕಾಸಿನ ವಿಚಾರದಲ್ಲಿ ಗೊಂದಲದ ವಾತಾವರಣ ಉಂಟಾಗಲಿದೆ. ಆತ್ಮವಿಶ್ವಾಸದ ಕೊರತೆ ಕಂಡು ಬರಲಿದೆ. ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ತೆರಳುವ ಆಸೆ ನೆರವೇರಲಿದೆ. ಸಾಲದ ವ್ಯವಹಾರದಿಂದ ಆತ್ಮೀಯರು ದೂರವಾಗಬಹುದು ಎಚ್ಚರಿಕೆ ಇರಲಿ.
ಪರಿಹಾರ: ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಹೊಗೆಯ ಬಣ್ಣ
ಬರಹ: ಹೆಚ್. ಸತೀಶ್, ಜ್ಯೋತಿಷಿ, ಬೆಂಗಳೂರು
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
ವಿಭಾಗ