ವಾರ ಭವಿಷ್ಯ: ತುಲಾ ರಾಶಿಯವರಿಗೆ ದಾಂಪತ್ಯದಲ್ಲಿ ಎದುರಾಗಿದ್ದ ಮನಸ್ತಾಪಗಳು ದೂರವಾಗುತ್ತವೆ, ವೃಶ್ಚಿಕ ರಾಶಿಯವರು ಕೆಲಸದಲ್ಲಿ ಜಯ ಪಡೆಯುತ್ತಾರೆ
ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ರಾಶಿಯವರಿಗೆ ಏನು ಫಲ? ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ವಾರ ಭವಿಷ್ಯ ಇಲ್ಲಿದೆ.

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಜೂನ್ 15ರ ಭಾನುವಾರದಿಂದ 21ರ ಶನಿವಾರದವರಿಗೆ ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ವಾರ ಭವಿಷ್ಯ ಇಲ್ಲಿದೆ.
ಸಿಂಹ ರಾಶಿ
ನಿಮ್ಮಲ್ಲಿನ ನೇರವಾದ ನಡೆ ನುಡಿ ಎಲ್ಲರ ಬೇಸರಕ್ಕೆ ಕಾರಣವಾಗುತ್ತದೆ. ಸ್ನೇಹ ಪೀತಿಯಿಂದ ಸಹೋದ್ಯೋಗಿಗಳ ವಿಶ್ವಾಸವನ್ನು ಗಳಿಸುವಿರಿ. ಹಣಕಾಸಿನ ವಿಚಾರದಲ್ಲಿ ಕುಟುಂಬದವರ ಸಹಕಾರ ಲಭಿಸುತ್ತದೆ. ಉದ್ಯೋಗದಲ್ಲಿ ಹೊಸ ಅವಕಾಶಗಳು ನಿಮ್ಮದಾಗುತ್ತದೆ. ಜೀವನದಲ್ಲಿ ಒಂಟಿಯಾಗಿ ಯಶಸ್ಸು ಕಾಣಲು ಸಾಧ್ಯವಾಗದೆಂಬ ಸತ್ಯವನ್ನು ಅರಿಯುವಿರಿ. ವಿದ್ಯಾರ್ಥಿಗಳು ತದೇಕ ಚಿತ್ತದಿಂದ ವಿದ್ಯಾಭ್ಯಾಸದಲ್ಲಿ ಮುಂದುವರೆಯುತ್ತಾರೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ಅನಾವಶ್ಯಕವಾದ ಒತ್ತಡದಿಂದ ದೂರವಿದ್ದು ಸುಖ ಸಂತೋಷದಿಂದ ಬಾಳುವಿರಿ. ತಂದೆ ಅಥವಾ ತಾಯಿಯವರ ಸಹಯೋಗದೊಂದಿಗೆ ಹೊಸ ವ್ಯಾಪಾರವನ್ನು ಆರಂಭಿಸುವಿರಿ. ಹಣಕಾಸಿನ ವ್ಯವಹಾರವು ಲಾಭದಾಯಕವಾಗಿರುತ್ತದೆ. ಧಾರ್ಮಿಕ ಕೇಂದ್ರಕ್ಕೆ ಹಣಕಾಸಿನ ಸಹಾಯ ಮಾಡುವಿರಿ. ಹೊಸ ವಾಹನವನ್ನು ಕೊಳ್ಳುವ ಸಾಧ್ಯತೆಗಳಿವೆ. ನಿಮ್ಮ ಮಕ್ಕಳಿಗೆ ಉದ್ಯೋಗ ದೊರೆಯುತ್ತದೆ. ಮನೆತನದ ಹಿರಿಯರನ್ನು ಭೇಟಿಮಾಡುವಿರಿ.
ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 1
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಬೂದು ಬಣ್ಣ
ಕನ್ಯಾ ರಾಶಿ
ಸುಲಭದ ಕೆಲಸ ಕಾರ್ಯಗಳನ್ನು ಸಹ ಹೆಚ್ಚಿನ ಪರಿಶ್ರಮದಿಂದ ಮಾಡಬೇಕಾಗುತ್ತದೆ. ತಪ್ಪಿಲ್ಲದಿದ್ದರೂ ಅನಾವಶ್ಯಕವಾಗಿ ಬೇರೆಯವರನ್ನು ಟೀಕಿಸುವಿರಿ. ಆತ್ಮವಿಶ್ವಾಸದಿಂದ ನಿಮ್ಮ ಸ್ವಂತ ಕೆಲಸ ಕಾಯಗಳನ್ನು ಆರಂಭಿಸುವಿರಿ. ಉದ್ಯೋಗದಲ್ಲಿ ತೆಗೆದುಕೊಳ್ಳುವ ನಿಮ್ಮ ನಿರ್ಧಾರ ಮನಸ್ತಾಪವನ್ನು ಕಡಿಮೆ ಮಾಡುತ್ತದೆ. ಉತ್ತಮ ಚಿಕಿತ್ಸೆಯಿಂದ ಅನಾರೋಗ್ಯದ ತೊಂದರೆಯಿಂದ ಪಾರಾಗುವಿರಿ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ಕೊರತೆ ಕಂಡು ಬರಲಿದೆ. ಉದ್ಯೋಗದಲ್ಲಿ ನಿಧಾನಗತಿಯ ಪ್ರಗತಿ ಕಂಡು ಬರದು. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಬಂಡವಾಳವನ್ನು ಹೂಡದಿರಿ. ಪಾಲುಗಾರಿಕೆಯ ವ್ಯವಹಾರದಲ್ಲಿ ನಿರೀಕ್ಷಿತ ಲಾಭವಿರುತ್ತದೆ. ಧಾರ್ಮಿಕ ಕೇಂದ್ರಗಳ ಹೊಣೆಗಾರಿಕೆ ನಿಮ್ಮದಾಗುತ್ತದೆ. ಕುಟುಂಬದವರಿಗೆ ಸಂಬಂಧಿಸಿದ ಕೆಲಸ ಕಾರ್ಯದಲ್ಲಿ ಹೆಚ್ಚಿನ ಆಸಕ್ತಿ ತೋರುವಿರಿ. ಖರ್ಚು ವೆಚ್ಚಗಳು ನಿಮ್ಮ ಹತೋಟಿಗೆ ಸಿಲುಕುವುದಿಲ್ಲ. ವಿದ್ಯಾಥಿಗಳು ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳುವುದು ಸೂಕ್ತ.
ಪರಿಹಾರ: ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 5
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಕಂದು ಬಣ್ಣ
ತುಲಾ ರಾಶಿ
ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ ಧ್ಯಾನವನ್ನು ಅವಲಂಭಿಸುವಿರಿ. ಬೇರೆಯವರ ವಿರೋಧವನ್ನು ಲೆಕ್ಕಿಸದೆ ನಿಮ್ಮ ಸ್ವಂತ ನಿರ್ಣಯಗಳಿಗೆ ಬದ್ಧರಾಗುವಿರಿ. ಚುರುಕಿನಿಂದ ದೈನಂದಿನ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿರಿ. ದಾಂಪತ್ಯ ಜೀವನದಲ್ಲಿ ಎದುರಾಗಿದ್ದ ಮನಸ್ತಾಪವು ದೂರವಾಗುತ್ತವೆ. ಸಹೋದ್ಯೋಗಿಗಳ ಜೊತೆ ಹೊಂದಾಣಿಕೆಯಿಂದ ವರ್ತಿಸುವಿರಿ. ಉತ್ತಮ ಆದಾಯ ಇದ್ದರೂ ಹಣಕಾಸಿನ ಕೊರತೆ ಕಂಡುಬರುತ್ತದೆ. ಉದ್ಯೋಗದಲ್ಲಿ ಅಧಿಕಾರಿಗಳ ಸಹಾಯ ನಿಮಗೆ ದೊರೆಯುತ್ತದೆ. ಸತತ ಪಯತ್ನದಿಂದ ನಿಮ್ಮ ಮನದ ಯೋಜನೆಗಳನ್ನು ಕಾರ್ಯಗತಗೊಳಿಸುವಿರಿ. ಕುಟುಂಬದಲ್ಲಿ ಒಮ್ಮತ ಇಲ್ಲದೆ ಮಾನಸಿಕ ಒತ್ತಡ ಎದುರಾಗುತ್ತದೆ. ಮನೆತನದ ಹಳೆಯ ಮನೆಯನ್ನು ನಿಮ್ಮದಾಗಿಸಿಕೊಳ್ಳುವಿರಿ. ನಿಮ್ಮ ವಾಹನದ ದುರಸ್ತಿಗಾಗಿ ಹೆಚ್ಚು ಹಣವನ್ನು ಖರ್ಚು ಮಾಡುವಿರಿ. ಅನಾವಶ್ಯಕ ಖರ್ಚು ವೆಚ್ಚಗಳಿಂದ ಬೇಸರಗೊಳ್ಳುವಿರಿ. ನವವಿವಾಹಿತರಿಗೆ ಶುಭ ಸುದ್ದಿಯೊಂದು ಬರಲಿದೆ. ವಿದ್ಯಾರ್ಥಿಗಳು ದೊಡ್ಡ ಮಟ್ಟದ ಯಶಸ್ಸನ್ನು ಪಡೆಯುತ್ತಾರೆ. ವಿದೇಶ ಪ್ರಯಾಣದ ಸೂಚನೆಗಳಿವೆ.
ಪರಿಹಾರ: ಬಲಗೈಯಲ್ಲಿ ಬೆಳ್ಳಿಯ ಕೈಖಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಕಪ್ಪು ಬಣ್ಣ
ವೃಶ್ಚಿಕ ರಾಶಿ
ಪ್ರತಿ ವಿಚಾರಗಳನ್ನು ಪರಿಶೀಲಿಸಿ ನಂತರ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ತಪ್ಪು ಅಭಿಪ್ರಾಯದ ಕಾರಣ ಯಾರನ್ನೂ ನಂಬುವುದಿಲ್ಲ. ಸರಿಯಾದ ಮಾರ್ಗದಲ್ಲಿ ನಡೆಯುವ ಕಾರಣ ಸಮಾಜದಲ್ಲಿ ಗೌರವ ಪಡೆಯುವಿರಿ. ಆರಂಭಿಸಿದ ಕೆಲಸ ಕಾರ್ಯ ಗಳಲ್ಲಿ ಸುಲಭದ ಜಯ ಲಭಿಸುತ್ತದೆ. ಉದ್ಯೋಗದಲ್ಲಿ ಅನುಕೂಲಕರ ಬದಲಾವಣೆಗಳು ಕಂಡುಬರುತ್ತವೆ. ವಿದ್ಯಾರ್ಥಿಗಳು ಉತ್ತಮ ಅಭ್ಯಾಸದ ಫಲದಿಂದ ತಮ್ಮ ಗುರಿ ತಲುಪುತ್ತಾರೆ. ಸ್ವತಂತ್ರವಾಗಿ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ಗಳಿಸುವಿರಿ. ಮನೆತನಕ್ಕೆ ಸಂಬಂಧಿಸಿದ ಭೂ ವಿವಾದವನ್ನು ಸಂಧಾನದಿಂದ ಪರಿಹಾರಗೊಳಿಸುವಿರಿ. ಪೂರ್ವ ಯೋಜನೆಯಿಲ್ಲದೆ ಅಧಿಕವಾಗಿ ಖರ್ಚು ಮಾಡದಿರಿ. ಅಶಕ್ತರ ವಿವಾಹ ಕಾರ್ಯದಲ್ಲಿ ಸಹಾಯ ಮಾಡುವಿರಿ. ಒಮ್ಮೆ ತೆಗೆದುಕೊಂಡ ತೀರ್ಮಾನಗಳನ್ನು ಬದಲಿಸುವುದಿಲ್ಲ. ಉಷ್ಣದ ತೊಂದರೆಯಿಂದ ಬಳಲುವಿರಿ. ಯಾತ್ರಾ ಸ್ಥಳಗಳಿಗೆ ಕುಟುಂಬದ ಹಿರಿಯರ ಜೊತೆ ತೆರಳುವಿರಿ.
ಪರಿಹಾರ: ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 2
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ತಿಳಿಹಸಿರು ಬಣ್ಣ
ಬರಹ: ಹೆಚ್. ಸತೀಶ್, ಜ್ಯೋತಿಷಿ, ಬೆಂಗಳೂರು
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).