ಉನ್ನತ ಅಧ್ಯಯನಕ್ಕೆ ವಿದೇಶಕ್ಕೆ ತೆರಳಲಿದ್ದೀರಿ, ಮೌನದಿಂದ ಸಮಸ್ಯೆಗಳು ಹೆಚ್ಚಲಿವೆ; ಸಿಂಹದಿಂದ ವೃಶ್ಚಿಕದವರೆಗೆ ವಾರ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಉನ್ನತ ಅಧ್ಯಯನಕ್ಕೆ ವಿದೇಶಕ್ಕೆ ತೆರಳಲಿದ್ದೀರಿ, ಮೌನದಿಂದ ಸಮಸ್ಯೆಗಳು ಹೆಚ್ಚಲಿವೆ; ಸಿಂಹದಿಂದ ವೃಶ್ಚಿಕದವರೆಗೆ ವಾರ ಭವಿಷ್ಯ

ಉನ್ನತ ಅಧ್ಯಯನಕ್ಕೆ ವಿದೇಶಕ್ಕೆ ತೆರಳಲಿದ್ದೀರಿ, ಮೌನದಿಂದ ಸಮಸ್ಯೆಗಳು ಹೆಚ್ಚಲಿವೆ; ಸಿಂಹದಿಂದ ವೃಶ್ಚಿಕದವರೆಗೆ ವಾರ ಭವಿಷ್ಯ

ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ರಾಶಿಯವರಿಗೆ ಏನು ಫಲ? ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ವಾರ ಭವಿಷ್ಯ ಇಲ್ಲಿದೆ.

ಉನ್ನತ ಅಧ್ಯಯನಕ್ಕೆ ವಿದೇಶಕ್ಕೆ ತೆರಳಲಿದ್ದೀರಿ, ಮೌನದಿಂದ ಸಮಸ್ಯೆಗಳು ಹೆಚ್ಚಲಿವೆ; ಸಿಂಹದಿಂದ ವೃಶ್ಚಿಕದವರೆಗೆ ವಾರ ಭವಿಷ್ಯ
ಉನ್ನತ ಅಧ್ಯಯನಕ್ಕೆ ವಿದೇಶಕ್ಕೆ ತೆರಳಲಿದ್ದೀರಿ, ಮೌನದಿಂದ ಸಮಸ್ಯೆಗಳು ಹೆಚ್ಚಲಿವೆ; ಸಿಂಹದಿಂದ ವೃಶ್ಚಿಕದವರೆಗೆ ವಾರ ಭವಿಷ್ಯ

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಜೂನ್ 22ರ ಭಾನುವಾರದಿಂದ 28ರ ಶನಿವಾರದವರಿಗೆ ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ವಾರ ಭವಿಷ್ಯ ಇಲ್ಲಿದೆ.

ಸಿಂಹ ರಾಶಿ

ಸೋಮಾರಿತನದ ಕಾರಣ ಉತ್ತಮ ಅವಕಾಶವನ್ನು ಕಳೆದುಕೊಳ್ಳುವಿರಿ. ಮನಸ್ಸಿಗೆ ನೆಮ್ಮದಿ ಇರದು. ನಿಮ್ಮಲ್ಲಿನ ಆತ್ಮವಿಶ್ವಾಸ ಹೆಚ್ಚಲಿದೆ. ನಿಮಗೆ ಒಳ್ಳೆಯ ಮನಸ್ಸು ಗುಣಗಳಿದ್ದರೂ ಅತಿಯಾದ ಕೋಪ ಅದನ್ನುಮರೆ ಮಾಚುತ್ತದೆ. ಉನ್ನತ ಅಧಿಕಾರಿಗಳಿಗೆ ವಿಶೇಷ ಸವಲತ್ತುಗಳು ದೊರೆಯಲಿವೆ. ನಿಮ್ಮಲ್ಲಿ ಆವಿಷ್ಕಾರ ಮನೋಭಾವನೆ ಹೆಚ್ಚಾಗಿರುತ್ತದೆ. ಈ ಕಾರಣದಿಂದಾಗಿ ಉದ್ಯೋಗ ಸಂಸ್ಥೆಯ ಮೂಲಕ ಹೆಚ್ಚಿನ ಅಧ್ಯಯನಕ್ಕಾಗಿ ವಿದೇಶಕ್ಕೆ ತೆರಳುವಿರಿ. ವಿದ್ಯಾರ್ಥಿಗಳು ಮನರಂಜನೆಯನ್ನು ತೊರೆದು ವ್ಯಾಸಂಗದಲ್ಲಿ ತೊಡಗುತ್ತಾರೆ. ವ್ಯಾಪಾರ ವ್ಯವಹಾರಗಳಲ್ಲಿ ಆದಾಯ ವ್ಯಯ ಸರಿಸಮನಾಗಿರುತ್ತದೆ. ರಕ್ತದ ಒತ್ತಡ ಬಹುವಾಗಿ ಕಾಡುತ್ತದೆ. ಮನೆತನಕ್ಕೆ ಸೇರಿದ ಆಸ್ತಿಯ ಪಾಲಿಗಾಗಿ ಸಣ್ಣ ಹೋರಾಟ ಮಾಡುವಿರಿ. ಮನೆತನದ ಅಭಿವೃದ್ಧಿಗಾಗಿ ಹಿರಿಯರ ಸಲಹೆ ಪಾಲಿಸುವುದು ಒಳ್ಳೆಯದು. ನಿಮ್ಮ ಮನಸ್ಸನ್ನು ಸುಲಭವಾಗಿ ಗೆಲ್ಲಲು ಸಾಧ್ಯವಾಗುವುದಿಲ್ಲ. ಹಿರಿಯರು ಸಹ ನಿಮ್ಮನ್ನು ಶ್ಲಾಘಿಸುತ್ತಾರೆ.

ಪರಿಹಾರ: ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಬಿಸಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಹಳದಿ ಬಣ್ಣ

ಕನ್ಯಾ ರಾಶಿ

ಅನಿರೀಕ್ಷಿತ ಫಲಿತಾಂಶಗಳ ಕಾರಣ ಗಲಿಬಿಲಿಗೆ ಒಳಗಾಗುವಿರಿ. ಸತತವಾಗಿ ದೂರದ ಸ್ಥಳಗಳಿಗೆ ಪ್ರವಾಸಕ್ಕೆ ತೆರಳಬೇಕಾಗುತ್ತದೆ. ಎದುರಾಗಲಿವೆ. ಉದ್ಯೋಗದಲ್ಲಿ ನಿಮ್ಮ ನಿರೀಕ್ಷೆಯು ದೂರೆಯಲಾರದು. ಮಕ್ಕಳ ವಿದ್ಯಾಭ್ಯಾಸಕ್ಕೆ ಅನಿವಾರ್ಯವಾದ ಅನುಕೂಲತೆಗಳನ್ನು ಒದಗಿಸುವಿರಿ. ಹಣಕಾಸಿನ ವ್ಯವಾಹರದಲ್ಲಿ ದೃಢವಾದ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಮನಬಿಚ್ಚಿ ಮಾತನಾಡದೆ ಮೌನವಾದರೆ ತೊಂದರೆಗಳು ಹೆಚ್ಚಾಗಲಿವೆ. ಕುಟುಂಬದವರು ಮತ್ತು ನೆರೆಹೊರೆಯವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಿರಿ. ದಾಂಪತ್ಯದಲ್ಲಿ ಬೇಸರದ ಘಳಿಗೆ ಎದುರಾಗುತ್ತದೆ. ಅನಿವಾರ್ಯವಾಗಿ ನಿಶ್ಚಯವಾದ ವಿವಾಹವನ್ನು ಮುಂದೂಡಬೇಕಾಗುತ್ತದೆ. ಜೀವನದಲ್ಲಿ ಹೆಚ್ಚಿನ ಬದಲಾವಣೆ ಕಂಡು ಬರದು. ವ್ಯಾಪಾರ ವ್ಯವಹಾರಗಳಲ್ಲಿ ಜೀವನ ನಿರ್ವಹಣೆಗೆ ಸಾಕಾಗುವಷ್ಟು ವರಮಾನ ದೊರೆಯುತ್ತದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಕಲಿಕೆಯಲ್ಲಿ ಮುಂದುವರೆಯುತ್ತಾರೆದುಡುಕುತನದ ಮಾತಿನಿಂದಾಗಿ ಭೂ ವಿವಾದ ಒಂದು ಎದುರಾಗುತ್ತದೆ. ನಿಮ್ಮ ತಪ್ಪಗೆ ಬೇರೆಯವರನು ದೂರುವಿರಿ. ಗಂಟಲಿನ ಸೋಂಕು ಉಂಟಾಗುತ್ತದೆ.

ಪರಿಹಾರ: ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವದರಿಂದ ಶುಭವಿರುತ್ತದೆ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಹಸಿರು ಬಣ್ಣ

ತುಲಾ ರಾಶಿ

ಕುಟುಂಬದಲ್ಲಿ ಸ್ನೇಹಮಯ ವಾತಾವರಣ ನೆಲೆಸಿರುತ್ತದೆ. ನೀವು ಮೆಚ್ಚಿದವರೊಂದಿಗೆ ವಿವಾಹವಾಗುವಿರಿ. ದ ಆತುರದಿಂದ ಆರಂಭಿಸುವ ಅಥವ ಮಾಡುವ ಕೆಲಸ ಪ್ರಯೋಜನಕ್ಕೆ ಬಾರದು. ನಿಮ್ಮ ಕಾರ್ಯವೈಖರಿಯನ್ನು ಮೇಲಾಧಿಕಾರಿಗಳು ಒಪ್ಪುತ್ತಾರೆ. ನಿಮ್ಮ ಕುಟುಂಬದ ಹಿರಿಯರು ನಿಮಗೆ ಹೆಚ್ಚಿನ ಜವಾಬ್ದಾರಿಯನ್ನು ನೀಡುತ್ತಾರೆ. ತಂದೆಯ ಸಂಬಂಧಿಸಿದಂತೆ ಹೆಚ್ಚಿನ ಹಣ ವೆಚ್ಚವಾಗುತ್ತದೆ. ಖರ್ಚು ವೆಚ್ಚಗಳ ಬಗ್ಗೆ ಗಮನ ಹರಿಸುವಿರಿ. ಕೌಟುಂಬಿಕ ವಿಚಾರಗಳಿಗಾಗಿ ಮಾನಸಿಕ ವೇದನೆಗೆ ಒಳಗಾಗುವಿರಿ. ಸಮಾಜ ಸೇವೆಯಲ್ಲಿ ತೊಡಗಿ ಎಲ್ಲರ ಮನಸೆಳೆಯುವಿರಿ. ಕಲಾವಿದರಿಗೆ ಸಮಾಜದಲ್ಲಿ ಉನ್ನತ ಗೌರವಾದರಗಳು ದೊರೆಯಲಿವೆ. ಆತ್ಮೀಯರ ಸಹಾಯದಿಂದ ಸ್ವಂತ ಮನೆಯ ಕನಸು ನನಸಾಗುತ್ತದೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಆದಾಯದ ಕೊರತೆ ಇರುತ್ತದೆ. ಮನೆಯಲ್ಲಿ ಸಾಕಿರುವ ಸಾಕು ಪ್ರಾಣಿಗಳಿಂದ ತೊಂದರೆ ಉಂಟಾಗಬಹುದು. ಮಕ್ಕಳ ಜೊತೆಯಲ್ಲಿ ಯಾತ್ರ ಸ್ಥಳಕ್ಕೆ ಭೇಟಿ ನೀಡುವಿರಿ.

ಪರಿಹಾರ: ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ನೀಲಿ ಬಣ್ಣ

ವೃಶ್ಚಿಕ ರಾಶಿ

ನಿಮ್ಮ ಮನಸ್ಸನ್ನು ಬದಲಾಯಿಸಲು ಯಾರಿಗೂ ಸಾಧ್ಯವಾಗದು. ಆತ್ಮವಿಶ್ವಾಸದ ಕಾರಣ ಕಠಿಣವಾದ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಆತ್ಮೀಯರ ವಿಶ್ವಾಸ ಗಳಿಸಿ ಪಾಲುಗಾರಿಕೆಯ ವ್ಯಾಪಾರವನ್ನು ಆರಂಭಿಸುವಿರಿ. ಕುಟುಂಬದಲ್ಲಿನ ಮಂಗಳ ಕೆಲಸ ಕಾರ್ಯಗಳು ಸುಗಮವಾಗಿ ಸಾಗುತ್ತವೆ. ಆದರೆ ಹಠದಿಂದ ಹಣದ ಕೊರತೆ ಎದುರಿಸುವಿರಿ. ಉದ್ಯೋಗದಲ್ಲಿ ಏಕಾಂಗಿತನ ನಿಮ್ಮನ್ನು ಕಾಡತ್ತದೆ. ನಿಮ್ಮಿಂದ ಸಹಾಯ ಪಡೆದವರು ನಿಮಗೆ ಸಹಕಾರ ನೀಡುವುದಿಲ್ಲ. ಆತಂತಕದ ಮನೋಭಾವನೆ ಇರದು . ಗೆಲ್ಲಲೇ ಬೇಕೆಂಬ ಹಥ ನಿಲ್ಲಿಇರುತ್ತದೆ. ಸ್ವಂತ ವ್ಯಾಪಾರ ವಹಿವಾಹಿಟಗಳ ಸಲುವಾಗಿ ಹೊಸ ವಾಹನಗಳನ್ನು ಕೊಳ್ಳುವಿರಿ. ಖರ್ಚು ವೆಚ್ಚಗಳನ್ನು ನಿಯಂತ್ರಿಸುವ ಕಾರಣ ಹಣದ ತೊಂದರೆ ಇರುವುದಿಲ್ಲ. ಮನೆತನಕ್ಕೆ ಸಂಬಂಧಿಸಿದ ಕೆಲಸ ಅಥವಾ ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಲಾಭ ದೊರೆಯುತ್ತದೆ. ಆರೋಗ್ಯದಲ್ಲಿ ಚೇತರಿಕೆ ಕಾಣಲಿದೆ. ತಂದೆಯಿಂದ ಹಣದ ಸಹಾಯ ದೊರೆಯುತ್ತದೆ

ಪರಿಹಾರ: ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ನೇರಳೆ ಬಣ್ಣ

ಬರಹ: ಎಚ್‌. ಸತೀಶ್‌, ಜ್ಯೋತಿಷಿ, ಬೆಂಗಳೂರು

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.