ವಾರ ಭವಿಷ್ಯ: ಧನು ರಾಶಿಯವರಿಗೆ ಬಿಡುವಿಲ್ಲದ ಕೆಲಸಗಳಿಂದ ಮಾನಸಿಕ ಒತ್ತಡ ಹೆಚ್ಚಾಗುತ್ತೆ, ಮಕರ ರಾಶಿಯವರ ಜೀವನದಲ್ಲಿ ಸಂತೋಷ ಇರಲಿದೆ
ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ರಾಶಿಯವರಿಗೆ ಏನು ಫಲ? ಧನು, ಮಕರ, ಕುಂಭ, ಮೀನ ರಾಶಿಯವರ ವಾರ ಭವಿಷ್ಯ ಇಲ್ಲಿದೆ.

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಜೂನ್ 8ರ ಭಾನುವಾರದಿಂದ 14ರ ಶನಿವಾರದವರಿಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ವಾರ ಭವಿಷ್ಯ ಇಲ್ಲಿದೆ.
ಧನು ರಾಶಿ
ಬಿಡುವಿಲ್ಲದ ಕೆಲಸ ಕಾರ್ಯದ ಕಾರಣ ಮಾನಸಿಕ ಒತ್ತಡಕ್ಕೆ ಒಳಗಾಗುವಿರಿ. ಕುಟುಂಬದ ಹೆಚ್ಚಿನ ಜವಾಬ್ದಾರಿಯು ನಿಮ್ಮದಾಗುತ್ತದೆ. ಆರೋಗ್ಯದಲ್ಲಿ ಏರಿಳಿತ ಕಂಡುಬರುತ್ತದೆ. ಕೆಲಸದ ನಡುವೆ ವಿಶ್ರಾಂತಿ ಬಯಸುವಿರಿ. ಬುದ್ಧಿವಂತಿಕೆಯಿಂದ ವಿವಿದ ಯೋಜನೆಯಲ್ಲಿ ಹಣವನ್ನು ತೊಡಗಿಸುವಿರಿ. ಮನೆತನದ ಭೂವಿವಾದದಲ್ಲಿ ನಿಮ್ಮ ಸಂಧಾನವು ಫಲಪ್ರದವಾಗುತ್ತದೆ. ಬೇರೆಯವರ ಮನದ ಇಂಗಿತವನ್ನು ಅರ್ಥಮಾಡಿಕೊಳ್ಳುವಿರಿ. ಆದ್ದರಿಂದ, ನಿಮ್ಮ ಪ್ರಯತ್ನಕ್ಕೆ ದೊಡ್ಡ ಪ್ರಮಾಣದ ಯಶಸ್ಸು ದೊರೆಯುತ್ತದೆ. ಕಠಿಣ ಪರಿಶ್ರಮದಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಉನ್ನತ ಮಟ್ಟ ತಲುಪುತ್ತಾರೆ. ಉತ್ತಮ ಸಂಪಾದನೆ ಇದ್ದರೂ ಹಣ ಉಳಿಸುವಲ್ಲಿ ವಿಫಲರಾಗುವಿರಿ. ಬೇರೆಯವರನ್ನು ಸುಲಭವಾಗಿ ನಂಬುವುದಿಲ್ಲ. ಕುಟುಂಬದ ಹಿರಿಯ ವ್ಯಕ್ತಿಯ ಅನುಭವದ ಉಪಯೋಗ ನಿಮ್ಮದಾಗುತ್ತದೆ. ಸೋದರರಿಗೆ ಹಣದ ಸಹಾಯ ಮಾಡಬೇಕಾಗುತ್ತದೆ. ನಿಮ್ಮ ಕಾರ್ಯ ನೈಪುಣ್ಯತೆಯನ್ನು ಸಹೋದ್ಯೋಗಿಗಳು ಮೆಚ್ಚುತ್ತಾರೆ. ಉದ್ಯೋಗದಲ್ಲಿ ಬಡ್ತಿ ದೊರೆಯಲಿದೆ. ಹೊಗಳಿಕೆಗೆ ಮರುಳಾಗಿ ಹಣಕಾಸಿನ ವಿಚಾರದಲ್ಲಿ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವಿರಿ. ನಿಮ್ಮಿಂದಾಗಿ ಕುಟುಂಬದ ಗೌರವವು ಹೆಚ್ಚಾಗುತ್ತದೆ.
ಪರಿಹಾರ: ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಕೇಸರಿ
ಮಕರ ರಾಶಿ
ದಿಢೀರನೇ ಆರೋಗ್ಯದಲ್ಲಿ ಸಮಸ್ಯೆಯನ್ನು ಎದುರಿಸುವಿರಿ. ಪ್ರತಿಯೊಂದು ವಿಚಾರದಲ್ಲಿಯೂ ನಿಧಾನಗತಿಯ ತೀರ್ಮಾನವನ್ನು ಕೈಗೊಳ್ಳುವಿರಿ. ಹಣಕಾಸಿನ ತೊಂದರೆ ಎದುರಾಗುವುದಿಲ್ಲ. ಅನಿರೀಕ್ಷಿತ ಧನಲಾಭ ಇರುತ್ತದೆ. ನಿಮ್ಮ ಮಾತುಗಳಿಂದ ವಿವಾದಗಳು ಎದುರಾಗುತ್ತವೆ. ಮಾನಸಿಕ ಒತ್ತಡದಿಂದಲೇ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಕುಟುಂಬದಲ್ಲಿ ಬೇಸರದ ಸನ್ನಿವೇಶವು ಎದುರಾಗುತ್ತದೆ. ಕ್ರಮೇಣವಾಗಿ ನಿಮ್ಮ ತಪ್ಪನ್ನು ಅರ್ಥಮಾಡಿಕೊಳ್ಳುವಿರಿ. ದಾಂಪತ್ಯ ಜೀವನದಲ್ಲಿ ಸಂತಸ ಮನೆಮಾಡಿರುತ್ತದೆ. ದುಡುಕಿದಲ್ಲಿ ಹಣಕಾಸಿನ ಕೊರತೆಯನ್ನು ಎದುರಿಸಬೇಕಾಗುತ್ತದೆ. ಬಂದು ಬಳಗದವರಿಂದ ದೂರ ಉಳಿಯುವಿರಿ. ಭೂವಿವಾದವೊಂದು ಎದುರಾಗುತ್ತದೆ. ಅನಿವಾರ್ಯವಾಗಿ ಆತ್ಮೀಯರಿಂದ ಹಣದ ಸಹಾಯವನ್ನು ಪಡೆಯುವಿರಿ. ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ಹಿನ್ನೆಡೆ ಉಂಟಾಗುತ್ತದೆ. ವಿದ್ಯಾರ್ಥಿಗಳ ಆಶೋತ್ತರಗಳು ಆತ್ಮೀಯರ ಸಹಾಯದಿಂದ ಈಡೇರಲಿದೆ. ಸಂಗಾತಿ ಮತ್ತು ಮಕ್ಕಳ ಜೊತೆ ಯಾತ್ರಾಸ್ಥಳಕ್ಕೆ ಭೇಟಿ ನೀಡುವಿರಿ. ತಾಯಿಯವರಿಂದ ಹಣದ ಸಹಾಯ ದೊರೆಯುತ್ತದೆ.
ಪರಿಹಾರ: ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 3
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ
ಕುಂಭ ರಾಶಿ
ದೈಹಿಕ ವ್ಯಾಯಾಮದಿಂದ ಉತ್ತಮ ಆರೋಗ್ಯವನ್ನು ಗಳಿಸುವಿರಿ. ಉಸಿರಿಗೆ ಸಂಬಂಧಿಸಿದ ತೊಂದರೆ ಇರುತ್ತದೆ. ಸಮಯ ಸಂದರ್ಭಕ್ಕೆ ಹೊಂದಿಕೊಂಡು ಜೀವನ ನಡೆಸಬೇಕಾಗುತ್ತದೆ. ಹಣಕಾಸಿನ ತೊಂದರೆ ಇರುವುದಿಲ್ಲ. ಆದರೆ ನಿಧಾನಗತಿಯ ಆರ್ಥಿಕ ಪ್ರಗತಿ ಇರುತ್ತದೆ. ಬಂದು ಬಳಗದವರಿಗೆ ಹಣದ ಸಹಾಯವನ್ನು ಮಾಡಬೇಕಾಗುತ್ತದೆ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಆಸಕ್ತಿ ತೋರುವಿರಿ. ಕುಟುಂಬದೊಂದಿಗೆ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದೂರದ ಸ್ಥಳಕ್ಕೆ ತೆರಳುವಿರಿ. ಮನೆ ಮಂದಿಗಾಗಿ ಮನರಂಜನಾ ಕಾರ್ಯಕ್ರಮವನ್ನು ಆಯೋಜಿಸುವಿರಿ. ಕುಟುಂಬದ ಅನೇಕ ವಿಚಾರಗಳ ಬಗ್ಗೆ ನಿಮ್ಮ ನಿರ್ಧಾರವೇ ಮುಖ್ಯವಾಗುತ್ತದೆ. ಕುಟುಂಬ ಸದಸ್ಯರ ಜೊತೆಯಲ್ಲಿ ಶಾಂತಿ ನೆಮ್ಮದಿಯಿಂದ ವರ್ತಿಸುವಿರಿ. ಸದಾಕಾಲ ಮನದಲ್ಲಿ ಸಕಾರಾತ್ಮಕ ಆಲೋಚನೆಗಳು ಇರಲಿವೆ. ಪಾಲುಗಾರಿಕೆಯ ವ್ಯಾಪಾರವನ್ನು ಆರಂಭಿಸುವಿರಿ. ಉದ್ಯೋಗವನ್ನು ಬದಲಿಸುವ ಮನಸ್ಸಿದ್ದಲ್ಲಿ ಆತ್ಮೀಯರ ಸಹಾಯ ದೊಎಯುತ್ತದೆ. ಹಿರಿಯರ ಜವಾಬ್ದಾರಿ ನಿಮ್ಮದಾಗುತ್ತದೆ.
ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 7
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಕೆಂಪು ಬಣ್ಣ
ಮೀನ ರಾಶಿ
ಮನದಲ್ಲಿ ಅನಾವಶ್ಯಕವಾದ ಯೋಚನೆಗಳು ಇರುತ್ತವೆ. ಆತ್ಮವಿಶ್ವಾಸದ ಕೊರತೆ ಇರುತ್ತದೆ. ಯಾವುದೇ ಕೆಲಸ ಕಾರ್ಯಗಳಲ್ಲಿ ಆಸಕ್ತಿ ಇರುವುದಿಲ್ಲ. ದುಡುಕಿನ ನಡವಳಿಕೆಯಿಂದ ನಿಮ್ಮ ಸುತ್ತಲಿನವರೊಂದಿಗೆ ವಾದ ವಿವಾದದಲ್ಲಿ ತೊಡಗುವಿರಿ. ಆರೋಗ್ಯದಲ್ಲಿ ಸಣ್ಣ ಪ್ರಮಾಣದ ಸಮಸ್ಯೆ ಎದುರಾಗುತ್ತದೆ. ಸ್ಟಾಕ್ ಮತ್ತು ಷೇರು ಮಾರುಕಟ್ಟೆಯಲ್ಲಿ ಹಣವನ್ನು ಹೂಡುವಿರಿ. ಮನೆತನಕ್ಕೆ ಸಂಬಂಧಿಸಿದ ಯಾವುದೇ ಕೆಲಸ ಕಾರ್ಯಗಳಲ್ಲಿ ವಿಶೇಷ ಯಶಸ್ಸನ್ನು ದೊರೆಯುತ್ತದೆ. ನಿಮ್ಮ ದೊಡ್ಡ ಕನಸೊಂದು ಆತ್ಮೀಯರ ಸಹಾಯದಿಂದ ಪೂರೈಸಲಿದೆ. ಉತ್ತಮ ಆದಾಯ ಇರುತ್ತದೆ. ಆದರೆ ನಿಮ್ಮ ತಪ್ಪಾದ ನಿರ್ಧಾರಗಳಿಂದ ಹಣದ ಕೊರತೆಯನ್ನು ಎದುರಿಸುವಿರಿ. ಮನೆಯಲ್ಲಿ ಸಂತೋಷದ ವಾತಾವರಣವು ನಿಮ್ಮಿಂದ ಉಂಟಾಗುತ್ತದೆ. ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸುವಿರಿ. ಸಭೆ ಸಮಾರಂಭಗಳಲ್ಲಿ ಮೌನವಾಗಿರುವಿರಿ. ವಿದ್ಯಾರ್ಥಿಗಳು ಉನ್ನತ ಅಧ್ಯಯನದಲ್ಲಿ ನಿರತರಾಗುತ್ತಾರೆ. ಮಾನಸಿಕ ಒತ್ತಡದಿಂದ ಬಳಲುವಿರಿ.
ಪರಿಹಾರ: ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 11
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ
ಬರಹ: ಹೆಚ್. ಸತೀಶ್, ಜ್ಯೋತಿಷಿ, ಬೆಂಗಳೂರು
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).