ವಾರ ಭವಿಷ್ಯ: ಮೇಷ ರಾಶಿಯವರು ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಾರೆ, ವೃಷಭ ರಾಶಿಯವರಿಗೆ ಪ್ರತಿ ಹಂತದಲ್ಲೂ ಸುಲಭ ಯಶಸ್ಸು ಸಿಗುತ್ತೆ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ವಾರ ಭವಿಷ್ಯ: ಮೇಷ ರಾಶಿಯವರು ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಾರೆ, ವೃಷಭ ರಾಶಿಯವರಿಗೆ ಪ್ರತಿ ಹಂತದಲ್ಲೂ ಸುಲಭ ಯಶಸ್ಸು ಸಿಗುತ್ತೆ

ವಾರ ಭವಿಷ್ಯ: ಮೇಷ ರಾಶಿಯವರು ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಾರೆ, ವೃಷಭ ರಾಶಿಯವರಿಗೆ ಪ್ರತಿ ಹಂತದಲ್ಲೂ ಸುಲಭ ಯಶಸ್ಸು ಸಿಗುತ್ತೆ

ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ರಾಶಿಯವರಿಗೆ ಏನು ಫಲ? ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ವಾರ ಭವಿಷ್ಯ ಇಲ್ಲಿದೆ.

ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ವಾರ ಭವಿಷ್ಯ
ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ವಾರ ಭವಿಷ್ಯ

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಜೂನ್ 8ರ ಭಾನುವಾರದಿಂದ 14ರ ಶನಿವಾರದವರಿಗೆ ಮೇಷ, ವೃಶಭ, ಮಿಥುನ ಹಾಗೂ ಕಟಕ ರಾಶಿಯವರ ವಾರ ಭವಿಷ್ಯ ಇಲ್ಲಿದೆ.

ಮೇಷ ರಾಶಿ

ಕುಟುಂಬದ ಹಿರಿಯರ ಆರೋಗ್ಯದಲ್ಲಿ ಏರಿಳಿತ ಕಾಣಲಿದೆ. ನಿಮ್ಮ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ. ನಿಮ್ಮಲ್ಲಿನ ಆತ್ಮವಿಶ್ವಾಸ ಮಾನಸಿಕ ಒತ್ತಡವನ್ನು ದೂರ ಮಾಡುತ್ತದೆ. ದೈಹಿಕ ವ್ಯಾಯಾಮದ ಅವಶ್ಯಕತೆ ಬಹಳಷ್ಟಿದೆ. ಅನಿರೀಕ್ಷಿತ ಧನಲಾಭ ಇರುತ್ತದೆ. ಕೌಟುಂಬಿಕ ವಿಚಾರಗಳಿಗೆ ಹೆಚ್ಚಿನ ಹಣ ಖರ್ಚಾಗುತ್ತದೆ. ವಾಹನ ಚಾಲನೆಯ ವೇಳೆ ಜಾಗರೂಕತೆ ಇರಲಿ. ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಿರಿ. ನಿಮ್ಮ ಸ್ವಾರ್ಥರಹಿತ ಭಾವನೆಯಿಂದ ಕುಟುಂಬ ಸದಸ್ಯರ ಗಮನವನ್ನು ಸೆಳೆಯಲು ಯಶಸ್ವಿಯಾಗುವಿರಿ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಏರಿಳಿತ ಇದ್ದರೂ ಕಮೇಣವಾಗಿ ಲಾಭ ಗಳಿಸುವಿರಿ. ಕೇವಲ ಹೆಚ್ಚಿನ ಪರಿಶ್ರಮದಿಂದ ವಿದ್ಯಾರ್ಥಿಗಳು ನಿರೀಕ್ಷಿತ ಗುರಿ ತಲುಪಲಿದ್ದಾರೆ. ಸ್ವಂತ ಮನೆ ಕೊಳ್ಳಲು ಸೋದರಿಯ ಸಹಾಯ ದೊರೆಯಲಿದೆ. ಉದ್ಯೋಗದಲ್ಲಿನ ಸಮಸ್ಯೆಗಳು ಕ್ಷಣಮಾತ್ರದಲ್ಲಿ ಬಗೆಹರಿಯುತ್ತವೆ. ಉನ್ನತ ಅಧಿಕಾರಿಗಳು ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಬಹುದು.

ಪರಿಹಾರ: ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ.
ಅದೃಷ್ಟದ ಸಂಖ್ಯ: 1
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ತಿಳಿ ಹಸಿರು

ವೃಷಭ ರಾಶಿ

ಬಹುದಿನದಿಂದ ಕಾಡುತ್ತಿದ್ದ ಸಮಸ್ಯೆಯು ಬಗೆಹರಿದು ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ. ನಿಮ್ಮ ಜೀವನದ ಪ್ರತಿ ಹಂತದಲ್ಲಿಯೂ ಸುಲಭವಾದ ಯಶಸ್ಸು ದೊರೆಯುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ತೀಮಾನಗಳನ್ನು ಎಲ್ಲರೂ ಗೌರವಿಸುತ್ತಾರೆ. ನಿಮ್ಮ ಮಾತಿನ ಬಲದಿಂದ ಅದ್ಭುತವಾದ ವಾತಾವರಣವನ್ನು ಕುಟುಂಬದಲ್ಲಿ ನಿರ್ಮಿಸುವಿರಿ. ಬೇರೆಯವರಿಗೆ ಅಸಾಧ್ಯವಾದ ಕೆಲಸ ಕಾರ್ಯಗಳನ್ನು ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಪೂರ್ಣಗೊಳಿಸಬಲ್ಲಿರಿ. ವೇತನದಲ್ಲಿ ಹೆಚ್ಚಳ ಕಂಡುಬರುತ್ತದೆ. ಆತ್ಮೀಯರ ತೊಂದರೆಯನ್ನುದೂರಮಾಡುವಿರಿ. ಕುಟುಂಬಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಸ್ವತಂತ್ರವಾಗಿ ತೆಗೆದುಕೊಳ್ಳಬಲ್ಲಿರಿ. ನಿತ್ಯ ಜೀವನಕ್ಕೆ ಅವಶ್ಯಕವಾದಷ್ಟು ಹಣ ಸಂಪಾದಿಸಲುವಲ್ಲಿ ಯಶಸ್ವಿಯಾಗುವಿರಿ. ಉದ್ಯೋಗ ಬದಲಿಸುವ ಸಾಧ್ಯತೆಗಳು ಇರಲಿವೆ. ಹಣಕಾಸಿನ ವ್ಯವಹಾರದಲ್ಲಿ ಜಾಗರೂಕತೆ ವಹಿಸುವಿರಿ. ಪಾಲುಗಾರಿಕೆಯ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭವನ್ನು ಪಡೆದುಕೊಳ್ಳುವಿರಿ. ವಿವಿಧ ಮೂಲಗಳಿಂದ ಉತ್ತಮ ಹಣವನ್ನು ಗಳಿಸುವಿರಿ. ಉನ್ನತ ಅಧ್ಯಯನದಲ್ಲಿ ತೊಡಗಿರುವ ವಿದ್ಯಾರ್ಥಿಗಳು ಯಶಸ್ಸನ್ನು ಕಾಣುವಿರಿ.

ಪರಿಹಾರ: ಬೆಲ್ಲದಿಂದ ಮಾಡಿದ ಆಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ: 5
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ನಸುಗೆಂಪು

ಮಿಥುನ ರಾಶಿ

ಕೈ ಕಾಲುಗಳ ನೋವು ಮನಸ್ಸಿನ ಸಂತೋಷವನ್ನು ದೂರಮಾಡುತ್ತದೆ. ಕುಟುಂಬದ ಹಿರಿಯರಿಗೆ ಕೀಲು ನೋವಿನ ಸಮಸ್ಯೆ ಉಂಟಾಗಲಿದೆ. ಹಿರಿಯರ ಮಾರ್ಗದರ್ಶನದಲ್ಲಿ ಕೆಲಸ ಕಾರ್ಯಗಳನ್ನು ನಿರ್ವಹಿಸುವಿರಿ. ಹಿರಿಯ ವಯಸ್ಸಿನ ಜನರ ಒತ್ತಡಕ್ಕೆ ಮಣಿದು ಹಣಕಾಸಿನ ವಿಚಾರದಲ್ಲಿ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಉದ್ಯೋಗದಲ್ಲಿನ ಸಮಸ್ಯೆಗಳಿಗೆ ನಿಮ್ಮಿಂದ ಸೂಕ್ತ ಪರಿಹಾರ ದೊರೆಯುತ್ತದೆ. ಈ ಕಾರಣದಿಂದ ವಿಶೇಷವಾದ ಗೌರವಕ್ಕೆ ಪಾತ್ರರಾಗುವಿರಿ. ಪರಿಸ್ಥಿತಿಯ ಒತ್ತಡಕ್ಕೆ ಮಣಿದು ಸಂಬಂಧಿಕರಿಗೆ ಹಣದ ಸಹಾಯ ಮಾಡುವಿರಿ. ದಿನನಿತ್ಯದ ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳುವಿರಿ. ಉದ್ಯೋಗದಲ್ಲಿ ಕೆಲಸದ ಒತ್ತಡವು ಹೆಚ್ಚಾಗುವುದರಿಂದ ನಿಮ್ಮ ಸಹನೆಯು ದೂರವಾಗುತ್ತದೆ. ಆತ್ಮೀಯರಿಗಾಗಿ ಅಮೂಲ್ಯವಾದ ಸಮಯವನ್ನು ಮೀಸಲಿಡುವಿರಿ. ಕೆಲಸಕ್ಕೆ ಸಂಬಂಧಿಸಿದ ಪ್ರಯಾಣದಲ್ಲಿ ಅನಿರೀಕ್ಷಿತ ಲಾಭದೊರೆಯುತ್ತದೆ. ದೊರೆಯುವ ಹೊಸ ಅವಕಾಶಗಳನ್ನು ಬಳಸಿಕೊಂಡು ಉದ್ಯೋಗ ಬದಲಿಸುವಿರಿ. ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಉತ್ತಮ ಪಲಿತಾಂಶ ಗಳಿಸುತ್ತಾರೆ.

ಪರಿಹಾರ: ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ಕಟಕ ರಾಶಿ

ಆರೋಗ್ಯವನ್ನು ಕಾಪಾಡಿಕೊಳ್ಳಲು ದೈಹಿಕ ವ್ಯಾಯಾಮವನ್ನು ಅನುಸರಿಸುವಿರಿ. ಉದ್ಯೋಗದಲ್ಲಿ ಯಾವುದೇ ಸಮಸ್ಯೆಯು ಎದುರಾಗದು. ಉನ್ನತ ಅಧಿಕಾರಿಗಳ ಜೊತೆಯಲ್ಲಿ ಉತ್ತಮ ಅನುಬಂಧ ಇರುತ್ತದೆ. ಮಾನಸಿಕವಾಗಿ ಸದೃಢಗೊಳ್ಳುವಿರಿ. ಕುಟುಂಬದಲ್ಲಿ ನಿಮ್ಮ ಹಾಸ್ಯದ ಮನೋಭಾವನೆ ಶಾಂತಿ ನೆಲೆಸುವಂತೆ ಮಾಡಲಿದೆ. ಕಠಿಣ ಪರಿಶ್ರಮದಿಂದ ಉದ್ಯೋಗದಲ್ಲಿ ಉನ್ನತ ಅಧಿಕಾರ ಗಳಿಸುವಿರಿ. ನಿರೀಕ್ಷಿತ ಮಟ್ಟದಲ್ಲಿ ಹಣ ಗಳಿಸುವಲ್ಲಿ ಯಶ ಕಾಣುವಿರಿ. ವಿದ್ಯಾರ್ಥಿಗಳು ದೊರೆಯುವ ಅವಕಾಶಗಳನ್ನು ಸಮರ್ಪಕವಾಗಿ ಉಪಯೋಗಿಸಿಕೊಳ್ಳುತ್ತಾರೆ. ಭವಿಷ್ಯದ ಜೀವನಕ್ಕಾಗಿ ಹಣಕಾಸಿನ ಯೋಜನೆಯಲ್ಲಿ ಹಣವನ್ನು ಹೂಡುವಿರಿ. ಕುಟುಂಬದ ಸಮಸ್ಯೆಗಳನ್ನು ನಿವಾರಿಸಲು ದಿಟ್ಟ ಕ್ರಮಗಳನ್ನು ತೆಗೆದುಕೊಳ್ಳುವಿರಿ. ಕೆಲಸ ಕಾರ್ಯಗಳಲ್ಲಿನ ನಿಮ್ಮ ಸಮರ್ಪಣಾ ಮನೋಭಾವನೆಯನ್ನು ಎಲ್ಲರೂ ಮೆಚ್ಚುತ್ತಾರೆ. ನಿಧಾನಗತಿಯ ಪ್ರಗತಿ ನಿಮಗೆ ದೊರೆಯುತ್ತದೆ. ಮನದ ಭಾವನೆಗಳನ್ನು ನಿಯಂತ್ರಿಸಿ ಎಲ್ಲರ ಜೊತೆ ಹೊಂದಿಕೊಂಡು ಬಾಳುವಿರಿ.

ಪರಿಹಾರ: ಮಕ್ಕಳಿಗೆ ಗೋಧಿಯಿಂದ ತಯಾರಿಸಿದ ಸಿಹಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 2
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಹಾಲಿನ ಬಣ್ಣ

ಬರಹ: ಹೆಚ್‌. ಸತೀಶ್‌, ಜ್ಯೋತಿಷಿ, ಬೆಂಗಳೂರು

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Raghavendra M Y

TwittereMail
ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.