ವಾರ ಭವಿಷ್ಯ: ಸಿಂಹ ರಾಶಿಯವರು ಉದ್ಯೋಗ ಸಮಸ್ಯೆಗಳಿಂದ ಪಾರಾಗುತ್ತಾರೆ, ಕನ್ಯಾ ರಾಶಿಯವರಿಗೆ ಸ್ವಂತ ವ್ಯಾಪಾರದಲ್ಲಿ ಲಾಭವಿದೆ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ವಾರ ಭವಿಷ್ಯ: ಸಿಂಹ ರಾಶಿಯವರು ಉದ್ಯೋಗ ಸಮಸ್ಯೆಗಳಿಂದ ಪಾರಾಗುತ್ತಾರೆ, ಕನ್ಯಾ ರಾಶಿಯವರಿಗೆ ಸ್ವಂತ ವ್ಯಾಪಾರದಲ್ಲಿ ಲಾಭವಿದೆ

ವಾರ ಭವಿಷ್ಯ: ಸಿಂಹ ರಾಶಿಯವರು ಉದ್ಯೋಗ ಸಮಸ್ಯೆಗಳಿಂದ ಪಾರಾಗುತ್ತಾರೆ, ಕನ್ಯಾ ರಾಶಿಯವರಿಗೆ ಸ್ವಂತ ವ್ಯಾಪಾರದಲ್ಲಿ ಲಾಭವಿದೆ

ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ರಾಶಿಯವರಿಗೆ ಏನು ಫಲ? ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ವಾರ ಭವಿಷ್ಯ ಇಲ್ಲಿದೆ.

ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ವಾರ ಭವಿಷ್ಯ
ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ವಾರ ಭವಿಷ್ಯ

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಜೂನ್ 8ರ ಭಾನುವಾರದಿಂದ 14ರ ಶನಿವಾರದವರಿಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ವಾರ ಭವಿಷ್ಯ ಇಲ್ಲಿದೆ.

ಸಿಂಹ ರಾಶಿ

ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸದೆ ಭಾವುಕತೆಯಿಂದ ವರ್ತಿಸುವಿರಿ. ಇದರಿಂದ ಇಕ್ಕಟ್ಟಿನ ಪರಿಸ್ಥಿತಿಯನ್ನು ಎದುರಿಸುವಿರಿ. ಕೆಲವೊಮ್ಮೆ ಕೋಪದಿಂದ ವರ್ತಿಸುವಿರಿ. ಕುಟುಂಬದಲ್ಲಿ ಬೇಸರದ ಸನ್ನಿವೇಶಗಳು ಎದುರಾಗುತ್ತವೆ. ನಿಮಗೆ ಅರಿವಿಲ್ಲದಂತೆ ಹಣ ಕಾಸಿನ ವಿವಾದದಲ್ಲಿ ಸಿಲುಕುವಿರಿ. ಆತ್ಮವಿಶ್ವಾಸದಿಂದ ಉದ್ಯೋಗದಲ್ಲಿನ ಸಮಸ್ಯೆಗಳಿಂದ ಪಾರಾಗುವಿರಿ. ಆತ್ಮೀಯರ ಸಹಾಯದಿಂದ ಆಪತ್ತಿನಿಂದ ಪಾರಾಗುವಿರಿ. ಹಣಕಾಸಿನ ವಿಚಾರದಲ್ಲಿ ಯಾವುದೇ ತೊಂದರೆ ಇರುವುದಿಲ್ಲ. ಸಭೆ ಸಮಾರಂಭಗಳಲ್ಲಿ ಮುಖ್ಯ ಸ್ಥಾನವನ್ನು ಪಡೆಯುವಿರಿ. ಸಮಾಜದಲ್ಲಿ ಗೌರವಯುತ ಸ್ಥಾನಮಾನ ದೊರೆಯುತ್ತದೆ. ನಿಮಗೆ ವೃತ್ತಿ ಕ್ಷೇತ್ರದಲ್ಲಿ ನಿರೀಕ್ಷಿತವಾದ ಯಶಸ್ಸು ದೊರೆಯುತ್ತದೆ. ಹಿರಿಯರ ಮಾರ್ಗದರ್ಶನದಲ್ಲಿ ಹೊಸ ವ್ಯಾಪಾರ ವ್ಯವಹಾರವನ್ನು ಆರಂಭಿಸುವಿರಿ. ವಿದ್ಯಾರ್ಥಿಗಳು ಉನ್ನತ ಅಧ್ಯಯನಕ್ಕಾಗಿ ವಿದೇಶಕ್ಕೆ ತೆರಳುತ್ತಾರೆ. ಸಮಯ ಸಂದರ್ಭಕ್ಕೆ ಅನುಗುಣವಾಗಿ ನಿಮ್ಮ ತಿರ್ಮಾನಗಳನ್ನು ಬದಲಿಸುವಿರಿ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.

ಪರಿಹಾರ: ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 6
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ಕನ್ಯಾ ರಾಶಿ

ನಿಮ್ಮ ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ಸಾಗಲಿವೆ. ಯಾವುದೇ ಕೆಲಸವನ್ನು ತುಂಬು ಮನಸ್ಸಿನಿಂದ ಮಾಡುವುದಿಲ್ಲ. ಮನದ ವಿಚಾರವನ್ನು ಎಲ್ಲರಿಗೂ ತಿಳಿಸುವುದಿಲ್ಲ. ನಿಮ್ಮ ತಪ್ಪು ಕಲ್ಪನೆಯಿಂದ ಸಂದಿಗ್ದ ಪರಿಸ್ಥಿತಿಯನ್ನು ಎದುರಿಸುವಿರಿ. ಅನಾವಶ್ಯಕವಾದ ಖರ್ಚುವೆಚ್ಚಗಳು ಇರಲಿವೆ. ಬೇರೆಯವರ ಒತ್ತಡಕ್ಕೆ ಮಣಿಯದೆ ಸ್ವಂತ ನಿರ್ಣಯಗಳಿಗೆ ಬದ್ದರಾಗುವಿರಿ. ದುಬಾರಿ ಬೆಲೆಯ ಪದಾರ್ಥಗಳನ್ನು ಕೊಳ್ಳುವಿರಿ. ಸ್ತ್ರೀಯರು ಚಿನ್ನ ಬೆಳ್ಳಿಯ ಒಡವೆಗಳಿಗೆ ಹೆಚ್ಚಿನ ಹಣ ಖರ್ಚುಮಾಡುತ್ತಾರೆ. ಸ್ವಂತ ಭೂಮಿ ಅಥವಾ ಮನೆಯನ್ನು ಕೊಳ್ಳುವ ಯೋಜನೆ ರೂಪಿಸುವಿರಿ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಅನಾವಶ್ಯಕವಾಗಿ ವಾದ ವಿವಾದಗಳು ಇರಲಿವೆ. ಒಮ್ಮೆ ತೆಗೆದುಕೊಂಡ ತೀರ್ಮಾನಗಳಿಗೆ ಬದ್ಧರಾಗುವುದಿಲ್ಲ. ವಿದ್ಯಾರ್ಥಿಗಳು ಸಹಪಾಠಿಗಳ ಜೊತೆ ವ್ಯಾಸಂಗದಲ್ಲಿ ಮುಂದುವರೆಯುತ್ತಾರೆ. ಹೊಸತನಕ್ಕೆ ಹೊಂದಿಕೊಂಡು ಬಾಳುವಿರಿ.

ಪರಿಹಾರ: ತಾಯಿಯವರಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಆಕಾಶ ನೀಲಿ

ತುಲಾ ರಾಶಿ

ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ ಧ್ಯಾನವನ್ನು ಅಭ್ಯಾಸ ಮಾಡುವಿರಿ. ಬೇರೆಯವರ ವಿರೋಧವನ್ನು ಲೆಕ್ಕಿಸದೆ ನಿಮ್ಮ ಸ್ವಂತ ನಿರ್ಣಯಗಳಿಗೆ ಬದ್ಧರಾಗುವಿರಿ. ಸದಾಕಾಲ ಯಾವುದಾದರೊಂದು ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿರಿ. ದಾಂಪತ್ಯ ಜೀವನದಲ್ಲಿ ಪರಸ್ಪರ ಹೊಂದಾಣಿಕೆಯ ಕೊರತೆ ಕಂಡುಬರುತ್ತದೆ. ಉದ್ಯೋಗದಲ್ಲಿ ಅಧಿಕಾರಿಗಳ ಸಹಾಯದಿಂದ ನಿಮ್ಮ ಮನದ ಯೋಜನೆಗಳನ್ನು ಕಾರ್ಯಗತಗೊಳಿಸುವಿರಿ. ಕುಟುಂಬದ ವಿಚಾರದಲ್ಲಿ ಮಾನಸಿಕ ಒತ್ತಡ ಎದುರಾಗುತ್ತದೆ. ಮನೆತನದ ಹಳೆಯ ಮನೆಯ ನವೀಕರಣ ಅಥವಾ ದುರಸ್ತಿಗಾಗಿ ಹೆಚ್ಚು ಹಣವನ್ನು ಖರ್ಚು ಮಾಡುವಿರಿ. ಅನಾವಶ್ಯಕ ಖರ್ಚು ವೆಚ್ಚಗಳಿಂದ ಆರ್ಥಿಕ ಬಿಕ್ಕಟ್ಟನ್ನು ಎದುರಿಸುವಿರಿ. ನವವಿವಾಹಿತರಿಗೆ ಶುಭ ಸುದ್ದಿಯೊಂದು ಬರಲಿದೆ. ಉದ್ಯೋಗಸ್ಥರು ದೊಡ್ಡ ಮಟ್ಟದ ಯಶಸ್ಸನ್ನು ಪಡೆಯುತ್ತಾರೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸನ್ನು ಪಡೆಯುತ್ತಾರೆ. ವಿದೇಶ ಪ್ರಯಾಣದ ಸೂಚನೆಗಳಿವೆ.

ಪರಿಹಾರ: ಪಕ್ಷಿಗಳಿಗೆ ಆಹಾರವನ್ನು ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ರಕ್ತದ ಬಣ್ಣ

ವೃಶ್ಚಿಕ ರಾಶಿ

ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆ ಇರುತ್ತದೆ. ಅತಿಯಾದ ಕೋಪದಿಂದ ಆತ್ಮೀಯರ ವಿರೋಧವನ್ನು ಎದುರಿಸುವಿರಿ. ಸ್ವಪ್ರಯತ್ನದಿಂದ ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವಿರಿ. ಶಾಂತಿ ಸಂಯಮದಿಂದ ವರ್ತಿಸಿದಲ್ಲಿ ಮಾನಸಿಕ ನೆಮ್ಮದಿ ದೊರೆಯುತ್ತದೆ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ. ನಿಮ್ಮ ತಪ್ಪು ನಿರ್ಧಾರಗಳಿಂದ ಆರ್ಥಿಕ ಬಿಕ್ಕಟ್ಟನ್ನು ಎದುರಿಸುವಿರಿ. ಉದ್ಯೋಗದಲ್ಲಿ ಎದುರಾಗುವ ಕ್ಲಿಷ್ಟಕರ ಪರಿಸ್ಥಿತಿಯನ್ನು ತಿಳಿಗೊಳಿಸುವಿರಿ. ಉತ್ತಮ ಆದಾಯ ಇರುತ್ತದೆ. ಕಡಿಮೆ ಖರ್ಚು ಮಾಡಿದಲ್ಲಿ ದೊಡ್ಡ ಮೊಟ್ಟದ ಹಣವನ್ನು ಉಳಿಸಬಹುದು. ಆತ್ಮೀಯರಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಸಹಾಯ ಸಹಕಾರ ದೊರೆಯುತ್ತದೆ. ಬೇರೆಯವರ ಸಲಹೆಗಳನ್ನು ಒಪ್ಪುವುದಿಲ್ಲ. ನಿಮ್ಮ ವೃತ್ತಿ ಜೀವನದಲ್ಲಿ ಬೇಸರದ ಸನ್ನಿವೇಶ ಎದುರಾಗುತ್ತದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸರವು ಉಂಟಾಗಲಿದೆ. ವಿದ್ಯಾಭ್ಯಾಸ ಮುಗಿವ ಮುನ್ನವೇ ನಿಮಗೆ ಉದ್ಯೋಗ ದೊರೆಯುತ್ತದೆ. ನಿಮ್ಮ ತಪ್ಪುಗಳಿಗೆ ಬೇರೆಯವರನ್ನು ದೂರುವಿರಿ.

ಪರಿಹಾರ: ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 6
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ : ಎಲೆ ಹಸಿರು

ಬರಹ: ಹೆಚ್‌. ಸತೀಶ್‌, ಜ್ಯೋತಿಷಿ, ಬೆಂಗಳೂರು

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.