ಮನಸ್ಸಿನಲ್ಲಿ ಅಸಹಜ ಚಿಂತೆ ಕಾಡಲಿದೆ, ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಲಿದ್ದೀರಿ; ಮೇಷದಿಂದ ಕಟಕದವರೆಗೆ ವಾರ ಭವಿಷ್ಯ
ವಾರ ಭವಿಷ್ಯ: ಪ್ರತಿ ರಾಶಿಗೂ ಅದರದ್ದೇ ಆದರ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗ ನೀಡುತ್ತವೆ. ಮಾ 23 ರಿಂದ ಮಾ 29 ರವರೆಗೆ, ಮೇಷದಿಂದ ಕಟಕ ರಾಶಿವರೆಗೆ ಏನೆಲ್ಲಾ ಪರಿಣಾಮಗಳಿವೆ ಎಂಬ ವಿವರ ಇಲ್ಲಿದೆ.

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮಾರ್ಚ್ 23ರ ಭಾನುವಾರದಿಂದ ಮಾರ್ಚ್ 29ರ ಶನಿವಾರದವರೆಗಿನ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಮೇಷ
ಆತ್ಮವಿಶ್ವಾಸ ಮತ್ತು ಕುಟುಂಬದವರ ಸಹಕಾರದಿಂದ ಉತ್ತಮ ಆರೋಗ್ಯ ಗಳಿಸುವಿರಿ. ಆದರೆ ಮನಸ್ಸಿನಲ್ಲಿ ಒಂದು ರೀತಿಯ ವ್ಯಾಕುಲತೆ ಉಂಟಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಯಾವುದೇ ತೊಂದರೆ ಇರುವುದಿಲ್ಲ. ಬಹುದಿನದಿಂದ ಬಾಕಿ ಇರುವ ದೊಡ್ಡ ಮೊತ್ತ ನಿಮ್ಮ ಕೈ ಸೇರುತ್ತದೆ. ನಿಮ್ಮ ಖರ್ಚು ವೆಚ್ಚಗಳನ್ನು ನಿಯಂತ್ರಿಸದೆ ಹೋದಲ್ಲಿ ತೊಂದರೆಯಲ್ಲಿ ಸಿಲುಕುವಿರಿ. ಕುಟುಂಬದಲ್ಲಿ ದೇವತಾ ಕಾರ್ಯಗಳು ನಿಮ್ಮ ನೆರವಿನಿಂದ ನೆರವೇರುತ್ತದೆ. ನಿಮ್ಮ ಮನಸ್ಸಿನಲ್ಲಿ ಒಳ್ಳೆಯ ಯೋಜನೆಗಳು ಮೂಡುವುದಲ್ಲದೆ ಸರಳ ಮಾರ್ಗದಲ್ಲಿ ಕಾರ್ಯಗತಗೊಳಿಸುವಿರಿ. ಉದ್ಯೋಗದಲ್ಲಿ ನಿಮ್ಮ ಕಾರ್ಯ ಶ್ರದ್ಧೆಗೆ ಎಲ್ಲರ ಮೆಚ್ಚುಗೆ ದೊರೆಯುತ್ತದೆ. ನಿಮ್ಮ ನಿರೀಕ್ಷೆಯಂತೆ ಉನ್ನತ ಹುದ್ದೆ ದೊರೆಯುವ ಸಾಧ್ಯತೆ ಇದೆ. ಅಧ್ಯಯನದಲ್ಲಿ ಆಸಕ್ತಿ ಮೂಡುತ್ತದೆ. ಚುರುಕುತನದಿಂದ ನಿಮ್ಮ ಜವಾಬ್ದಾರಿಯನ್ನು ಪೂರ್ಣಗೊಳಿಸುವಿರಿ.
ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ಪೂರ್ವ ಅದೃಷ್ಟದ ಬಣ್ಣ: ಆಕಾಶನೀಲಿ ಬಣ್ಣ
ವೃಷಭ
ಎದುರಾಗುವ ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸಬಲ್ಲಿರಿ. ಬೇರೆಯವರ ಅವಕಾಶವನ್ನು ನಿಮ್ಮದಾಗಿಸಿಕೊಳ್ಳುವಿರಿ. ಅನಿರೀಕ್ಷಿತವಾಗಿ ದೂರದ ಸ್ಥಳಕ್ಕೆ ಪ್ರಯಾಣ ಬೆಳೆಸಬೇಕಾಗುತ್ತದೆ. ಉತ್ತಮ ಆದಾಯವಿದ್ದರೂ ಹಣದ ಕೊರತೆ ನಿಮ್ಮನ್ನು ಕಾಡುತ್ತದೆ. ಕಷ್ಟವೆನಿಸಿದರು ನಿಮ್ಮ ಸ್ವಂತ ಕೆಲಸ ಕಾಯಗಳಿಗೆ ಮೂಲ ಆದ್ಯತೆ ನೀಡುವಿರಿ. ಗಂಭೀರದ ಪರಿಸ್ಥಿತಿಯಲ್ಲಿಯು ಹಾಸ್ಯದಿಂದ ಎಲ್ಲರ ಮನ ಗೆಲ್ಲುವಿರಿ. ನಿರೀಕ್ಷೆಯಂತೆ ಆರಂಭಿಸುವ ಎಲ್ಲಾ ಕೆಲಸ ಕಾರ್ಯಗಳು ಪೂರ್ಣಗೊಳ್ಳುತ್ತವೆ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ದೊರೆಯಲಿದ್ದು ಅದನ್ನು ಸರಿಯಾದ ಮಾರ್ಗದಲ್ಲಿ ಬಳಸಿಕೊಳ್ಳುತ್ತಾರೆ. ಕುಟುಂಬದಲ್ಲಿ ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ಬಾಳುವಿರಿ. ಆರೋಗ್ಯದ ಸಮಸ್ಯೆ ಇರುವುದಿಲ್ಲ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಉನ್ನತ ಮಟ್ಟದ ಯಶಸ್ಸು ದೊರೆಯುತ್ತದೆ. ಯಾರೊಂದಿಗೂ ಅನಾವಶ್ಯಕವಾಗಿ ವಾದ ವಿವಾದದಲ್ಲಿ ತೊಡಗುವುದಿಲ್ಲ.
ಪರಿಹಾರ: ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ರಕ್ತದ ಬಣ್ಣ
ಮಿಥುನ
ದೈಹಿಕವಾಗಿ ಸದೃಢರಾಗಿರುವಿರಿ. ಧಾರ್ಮಿಕತೆಯ ಬಗ್ಗೆ ಹೆಚ್ಚಿನ ಒಲವು ಮೂಡುತ್ತದೆ. ದೇವತಾ ಕಾರ್ಯಗಳನ್ನು ಮಾಡುವಿರಿ. ನಿಮ್ಮಲ್ಲಿರುವ ವಿದ್ಯೆಯನ್ನು ಎಲ್ಲರೊಂದಿಗೆ ಹಂಚಿಕೊಳ್ಳುವಿರಿ. ಯಾವುದೇ ಕೆಲಸ ಕಾರ್ಯಗಳನ್ನು ಆರಂಭಿಸಲು ಬೇರೆಯವರ ಸಲಹೆ ಸೂಚನೆ ಬೇಕಾಗುತ್ತದೆ. ನಿದ್ದೆ ಮಾಡುವ ಹವ್ಯಾಸ ಅತಿಯಾಗಿರುತ್ತದೆ. ಇದರಿಂದಾಗಿ ಆರೋಗ್ಯದಲ್ಲಿ ಸಮಸ್ಯೆಗಳು ಕಂಡುಬರುತ್ತವೆ. ಅನಾವಶ್ಯಕವಾಗಿ ಹಣ ಖರ್ಚು ಮಾಡುವುದಿಲ್ಲ. ಹಣದ ಕೊರತೆ ಇದ್ದರೂ ಹಣ ಸಂಪಾದಿಸುವ ಯುಕ್ತಿ ನಿಮಗೆ ತಿಳಿದಿರುತ್ತದೆ. ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ಯಾವುದೇ ತೊಂದರೆ ಇರುವುದಿಲ್ಲ. ಮಾಡುವ ತಪ್ಪನ್ನು ಒಪ್ಪಿಕೊಂಡು ಅದನ್ನು ಸರಿಪಡಿಸಿಕೊಳ್ಳುವಿರಿ. ಉನ್ನತ ವಿದ್ಯಾಭ್ಯಾಸಕ್ಕೆ ಅವಕಾಶವನ್ನು ಪಡೆಯುವಿರಿ. ಸದಾಕಾಲ ಅನುಕೂಲಕರ ವಾತಾವರಣದಲ್ಲಿ ಇರುವಿರಿ. ಉದ್ಯೋಗದಲ್ಲಿ ನಿಗದಿತ ವೇಳೆಯಲ್ಲಿ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲು ವಿಫಲರಾಗುವಿರಿ.
ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಎಲೆಹಸಿರು ಬಣ್ಣ
ಕಟಕ
ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸಾಧನೆಯನ್ನು ಸರಿಗಟ್ಟಲು ಬೇರೆಯವರಿಂದ ಸಾಧ್ಯವಾಗುವುದಿಲ್ಲ. ಅಧಿಕಾರಿಗಳಿಂದ ಪ್ರಶಂಸೆ ದೊರೆಯುವುದಲ್ಲದೇ ಉನ್ನತ ಅಧಿಕಾರವೂ ನಿಮ್ಮದಾಗುತ್ತದೆ. ನಿಮ್ಮ ಬಗ್ಗೆ ತಪ್ಪು ವದಂತಿಗಳನ್ನು ಹರಡುವ ಜನರಿರುತ್ತಾರೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಪರಿಪಕ್ವ ತೆಗೆದುಕೊಳ್ಳಬಲ್ಲಿರಿ. ಅನಿವಾರ್ಯವಾಗಿ ಉದ್ಯೋಗವನ್ನು ಬದಲಿಸುವ ನಿರ್ಧಾರವನ್ನು ಮಾಡುವಿರಿ. ಕಷ್ಟಪಟ್ಟು ದುಡಿವ ಜನರಿಗೆ ಸಹಾಯ ಮಾಡುವಿರಿ. ಉತ್ತಮ ಭವಿಷ್ಯಕ್ಕಾಗಿ ಕುಟುಂಬದ ಹಿರಿಯರ ಸಹಾಯ ಸಹಕಾರ ದೊರೆಯುತ್ತದೆ. ಕುಟುಂಬದ ವಿಚಾರದಲ್ಲಿ ಮಾನಸಿಕ ಒತ್ತಡವಿರುತ್ತದೆ. ಕೆಲವೊಂದು ಬದಲಾವಣೆಗಳು ನಿಮ್ಮ ಬಾಳಿನ ಶೈಲಿಯನ್ನು ಬದಲಿಸುತ್ತದೆ. ನಿಮ್ಮ ಕರ್ತವ್ಯ ನಿಷ್ಠೆಗೆ ತಕ್ಕ ಪ್ರತಿಫಲವು ದೊರೆಯುತ್ತದೆ. ಬೇರೆಯವರ ಯಶಸ್ಸಿನಲ್ಲಿ ಸಂತೋಷದಿಂದ ಪಾಲ್ಗೊಳ್ಳುವಿರಿ.
ಪರಿಹಾರ: ತಾಯಿಯವರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 8
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಕೇಸರಿ ಬಣ್ಣ
ಬರಹ: ಎಚ್. ಸತೀಶ್, ಜ್ಯೋತಿಷಿ, ಬೆಂಗಳೂರು, ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ಸ್ತ್ರೀ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
