ಬುದ್ಧಿವಂತಿಕೆಯು ಕುಟುಂಬದ ಸಮಸ್ಯೆಗಳಿಗೆ ಪರಿಹಾರ ನೀಡಲಿದೆ, ಅನಾವಶ್ಯಕ ಹಣ ಖರ್ಚಾಗಲಿದೆ; ಸಿಂಹದಿಂದ ವೃಶ್ಚಿಕ ರಾಶಿವರೆಗೆ ವಾರ ಭವಿಷ್ಯ
ವಾರ ಭವಿಷ್ಯ: ಪ್ರತಿ ರಾಶಿಗೂ ಅದರದ್ದೇ ಆದರ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗ ನೀಡುತ್ತವೆ. ಮಾ 23 ರಿಂದ ಮಾ 29ರವರೆಗೆ, ಸಿಂಹದಿಂದ ವೃಶ್ಚಿಕ ರಾಶಿವರೆಗೆ ಏನೆಲ್ಲಾ ಪರಿಣಾಮಗಳಿವೆ ಎಂಬ ವಿವರ ಇಲ್ಲಿದೆ.

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮಾರ್ಚ್ 23ರ ಭಾನುವಾರದಿಂದ ಮಾರ್ಚ್ 29ರ ಶನಿವಾರದವರೆಗಿನ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಸಿಂಹ
ಎಲ್ಲರನ್ನೂ ಸಮಾನ ಭಾವನೆಯಿಂದ ಕಾಣುವಿರಿ. ಮನಸ್ಸಿನಲ್ಲಿ ಯಾವುದೇ ರೀತಿಯ ಕಲ್ಮಶ ಇರುವುದಿಲ್ಲ. ಆರಂಭಿಸುವ ಕೆಲಸ ಕಾರ್ಯಗಳು ಸಣ್ಣಮಟ್ಟದಲ್ಲಿದ್ದರೂ ಶ್ರದ್ಧೆಯಿಂದ ನಿರ್ವಹಿಸುವಿರಿ. ಬುದ್ಧಿವಂತಿಕೆಯಿಂದ ಕುಟುಂಬದ ಸಮಸ್ಯೆಗಳನ್ನು ಪರಿಹರಿಸುವಿರಿ. ಸಮಯವನ್ನು ವ್ಯರ್ಥ ಮಾಡಿಕೊಳ್ಳದೇ ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಿರಿ. ಕುಟುಂಬ ಮಾತ್ರವಲ್ಲದೆ ಸಮಾಜದಲ್ಲಿಯೂ ವಿಶೇಷವಾದ ಗೌರವ ದೊರೆಯುತ್ತದೆ. ಹಣಕಾಸಿನ ತೊಂದರೆ ಇರುವುದಿಲ್ಲ. ಹಣವನ್ನು ಉಳಿಸುವ ಸಲುವಾಗಿ ಯೋಜನೆಯೊಂದನ್ನು ರೂಪಿಸುವಿರಿ. ಕುಟುಂಬದ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವಿರಿ. ಉದ್ಯೋಗದಲ್ಲಿ ಮೇಲಾಧಿಕಾರಿಗಳು ಮತ್ತು ಸಹೋದ್ಯೋಗಿಗಳ ಮೆಚ್ಚುಗೆ ದೊರೆಯುತ್ತದೆ. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸ್ಫೂರ್ತಿದಾಯಕ ಕೆಲಸಗಳನ್ನು ಮಾಡುತ್ತಾರೆ. ವಿದ್ಯಾರ್ಥಿಗಳಿಗೆ ಉನ್ನತಮಟ್ಟದ ಉದ್ಯೋಗ ದೊರೆಯುವ ಸಾಧ್ಯತೆಗಳಿವೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಮತ್ತು ಇಲಾಖಾ ಪರೀಕ್ಷೆಗಳಲ್ಲಿ ಯಶಸ್ಸನ್ನು ಗಳಿಸುವಿರಿ.
ಪರಿಹಾರ: ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 12
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ
ಕನ್ಯಾ
ನಿಯಮಿತ ವ್ಯಾಯಾಮದಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವಿರಿ. ಕುಟುಂಬದ ಜವಾಬ್ದಾರಿಗಳಲ್ಲಿ ಹೆಚ್ಚಿನ ಕಾಳಜಿ ತೋರವಿರಿ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಕ್ರಮೇಣ ಜೀವನದಲ್ಲಿನ ಹಣಕಾಸಿನ ಸಮಸ್ಯೆಗಳು ಪರಿಹಾರಗೊಳ್ಳುತ್ತವೆ. ಮನೆಗೆ ಅವಶ್ಯಕತೆ ಇರುವ ಅಲಂಕಾರಿಕ ವಸ್ತುಗಳನ್ನು ಕೊಳ್ಳುವಿರಿ. ಕುಟುಂಬದಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಕಾಳಜಿ ವಹಿಸುವಿರಿ. ಸಮಾಜದಲ್ಲಿ ಪ್ರಭಾವಿ ವ್ಯಕ್ತಿಗಳಾಗಿ ಬಾಳುವಿರಿ. ನಿಮ್ಮ ಮನಸ್ಸನ್ನು ಅರಿಯದವರು ನಿಮ್ಮಿಂದ ದೂರವಾಗುತ್ತಾರೆ. ಯಾರೊಂದಿಗೂ ದ್ವೇಷ ಸಾಧಿಸದೆ ಸ್ನೇಹಿತರಾಗಿ ಬಾಳುವಿರಿ. ದುಡುಕಿ ಮಾತನಾಡುವುದರಿಂದ ತೊಂದರೆಯನ್ನು ಎದುರಿಸಬೇಕಾಗುತ್ತದೆ. ಮಕ್ಕಳಿಗೆ ಉತ್ತಮ ತಿಳುವಳಿಕೆ ನೀಡುವಿರಿ. ನಿಮ್ಮ ಸ್ವಂತ ಕೆಲಸ ಕಾರ್ಯಗಳಿಗೆ ಬೇರೆಯವರಿಂದ ಸಹಾಯ ದೊರೆಯುವುದಿಲ್ಲ. ಬೇರೆಯವರಿಗೆ ನೀಡುವ ಭರವಸೆಯನ್ನು ಕಷ್ಟವಾದರೂ ಪೂರೈಸುವಿರಿ.
ಪರಿಹಾರ: ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಕೆಂಪು ಬಣ್ಣ
ತುಲಾ
ಉತ್ತಮ ಆರೋಗ್ಯ ಇರುತ್ತದೆ. ದೈಹಿಕ ವ್ಯಾಯಾಮಕ್ಕಾಗಿ ಸಮಯವನ್ನು ಮೀಸಲಿಡುವುದು ಉತ್ತಮ. ಹಣಕಾಸಿನ ವ್ಯವಹಾರದಿಂದ ನಿಮಗೆ ಶುಭ ಉಂಟಾಗುತ್ತದೆ. ಕುಟುಂಬದಲ್ಲಿ ಸಮಸ್ಯೆಗಳು ಎದುರಾದರೂ ಹೆದರದೆ ಸಮಯಕ್ಕೆ ತಕ್ಕಂತಹ ತೀರ್ಮಾನವನ್ನು ತೆಗೆದುಕೊಳ್ಳುವಿರಿ. ಕುಟುಂಬದ ಹಿರಿಯರ ಸಹಾಯ ಸಹಕಾರ ನಿಮಗೆ ದೊರೆಯುತ್ತದೆ. ವಿದ್ಯಾರ್ಥಿಗಳು ವಿದೇಶಕ್ಕೆ ತೆರಳುತ್ತಾರೆ. ಉದ್ಯೋಗದಲ್ಲಿ ಉನ್ನತ ಮಟ್ಟವನ್ನು ತಲುಪುವಿರಿ. ನಿಮ್ಮ ಮನದ ಆಲೋಚನೆಯನ್ನು ಕಾರ್ಯರೂಪಕ್ಕೆ ತರುವಿರಿ. ಉದ್ಯೋಗವನ್ನು ಬದಲಿಸುವ ಸಾಧ್ಯತೆಗಳಿವೆ. ಸಮಾಜ ಸೇವೆ ಮಾಡುವ ಸಾಧ್ಯತೆಗಳು ಮತ್ತು ಅವಕಾಶ ನಿಮಗೆ ದೊರೆಯುತ್ತದೆ. ನಿಮಗೆ ಸಹಾಯ ಮಾಡಿದವರಿಗೆ ಪ್ರತ್ಯುಪಕಾರ ಮಾಡುವಿರಿ. ಮಕ್ಕಳ ಆರೋಗ್ಯದಲ್ಲಿ ಏರಿಳಿತ ಕಂಡು ಬರುತ್ತದೆ. ದಂಪತಿಗಳ ನಡುವೆ ಉತ್ತಮ ಹೊಂದಾಣಿಕೆ ಉಂಟಾಗುತ್ತದೆ. ಅನಾವಶ್ಯಕವಾದ ಖರ್ಚು ವೆಚ್ಚಗಳನ್ನು ನಿಯಂತ್ರಿಸುವುದು ಒಳ್ಳೆಯದು.
ಪರಿಹಾರ: ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಕಿತ್ತಳೆಬಣ್ಣ
ವೃಶ್ಚಿಕ
ಬಹುಮುಖ ಪ್ರತಿಭೆಯ ನಿಮಗೆ ಸಮಾಜದಲ್ಲಿ ಉತ್ತಮ ಅವಕಾಶಗಳು ದೊರೆಯುತ್ತವೆ. ಸಂಪ್ರದಾಯವನ್ನು ಒಪ್ಪಿದ ಜೀವನವನ್ನು ನಡೆಸುವಿರಿ. ಅತಿಯಾದ ಆಸೆ ಇರದ ಕಾರಣ ನೆಮ್ಮದಿಯಿಂದ ಜೀವನ ನಡೆಸುವಿರಿ. ವದಂತಿಗಳನ್ನು ನಂಬುವಿರಿ. ನಿಮ್ಮ ಮನಸ್ಸಿಗೆ ಇಷ್ಟವೆನಿಸುವ ಕೆಲಸ ಕಾರ್ಯಗಳನ್ನು ಆಯ್ಕೆ ಮಾಡುವಿರಿ. ಸದಾ ಆತ್ಮೀಯ ಸ್ನೇಹಿತರ ಜೊತೆ ಸಮಯ ಕಳೆಯುವಿರಿ. ಉದ್ಯೋಗದಲ್ಲಿ ಉನ್ನತ ಸ್ಥಾನ ದೊರೆಯುವುದಲ್ಲದೆ ಆರ್ಥಿಕ ಪರಿಸ್ಥಿತಿಯು ಪ್ರಗತಿಗೊಳ್ಳುತ್ತದೆ. ಅನಾವಶ್ಯಕವಾಗಿ ಹಣವನ್ನು ಖರ್ಚು ಮಾಡುವಿರಿ. ಪ್ರತಿಯೊಂದು ವಿಚಾರದಲ್ಲಿಯೂ ನಿಮ್ಮ ಬಾಳ ಸಂಗಾತಿಯ ಸಹಾಯ ಸಹಕಾರ ದೊರೆಯುತ್ತದೆ. ಹೊಸತಾದ ಆಸೆ ಆಕಾಂಕ್ಷಿಗಳಿಂದ ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ದೊರೆಯಲಿದೆ. ಸೋಲುವ ಸಂದರ್ಭದಲ್ಲಿ ಮುಂಗೋಪದಿಂದ ವರ್ತಿಸುವಿರಿ. ಕಾದು ನೋಡುವ ತಂತ್ರವನ್ನು ಅನುಸರಿಸುವುದು ಒಳ್ಳೆಯದು.
ಪರಿಹಾರ: ಬೆಲ್ಲದಿಂದ ಮಾಡಿದ ಆಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 9
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಹಳದಿ ಬಣ್ಣ
ಬರಹ: ಎಚ್. ಸತೀಶ್, ಜ್ಯೋತಿಷಿ, ಬೆಂಗಳೂರು, ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ಸ್ತ್ರೀ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
