ವಾರ ಭವಿಷ್ಯ: ಮಿಥುನ ರಾಶಿಯವರಿಗೆ ಅನಿರೀಕ್ಷಿತ ಖರ್ಚುಗಳಿವೆ, ಕಟಕ ರಾಶಿಯವರ ಕುಟುಂಬದಲ್ಲಿ ಗಂಭೀರ ವಾತಾವರಣ ಇರುತ್ತೆ
ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ರಾಶಿಯವರಿಗೆ ಏನು ಫಲ? ಒಂದು ವಾರ ಭವಿಷ್ಯ ಇದೆ.

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರಿಗೆ 2025ರ ಮಾರ್ಚ್ 30 ರಿಂದ ಏಪ್ರಿಲ್ 5 ರವರೆಗಿನ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಮೇಷ ರಾಶಿ
ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವುದು ಒಳ್ಳೆಯದು. ಸಣ್ಣಪುಟ್ಟ ಸಮಸ್ಯೆಗಳು ದೊಡ್ಡದಾಗಬಹುದು. ಉದ್ಯೋಗದಲ್ಲಿ ಎದುರಾಗುವ ಸಮಸ್ಯೆಯನ್ನು ಆತ್ಮೀಯರ ಸಹಾಯದಿಂದ ಗೆಲ್ಲುವಿರಿ. ಮನಸ್ಸಿಲ್ಲದೆ ಹೋದರು ಕುಟುಂಬದ ಒಳಿತಿಗಾಗಿ ಪ್ರಯಾಣ ಕೈಗೊಳ್ಳುವಿರಿ. ಶಾಂತಿ ನೆಮ್ಮದಿಯಿಂದ ಜೀವನ ನಡೆಸುವಿರಿ. ಹಣಕಾಸಿನ ವಿಚಾರದಲ್ಲಿ ಮಾನಸಿಕ ಒತ್ತಡವಿರುತ್ತದೆ. ಅನಪೇಕ್ಷಿತ ವಿಚಾರಗಳಿಗೆ ಹಣವನ್ನು ಖರ್ಚು ಮಾಡುವಿರಿ. ಹಣದ ತೊಂದರೆ ಇರುವುದಿಲ್ಲ. ಸ್ವಂತ ಕೆಲಸ ಕಾರ್ಯಗಳಿಗೆ ಸಮಯದ ಅಭಾವವಿರುತ್ತದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅನುಕೂಲತೆಗಳು ದೊರೆಯುತ್ತವೆ. ಕುಟುಂಬದ ಸದಸ್ಯರಲ್ಲಿ ಪರಸ್ಪರ ಹೊಂದಾಣಿಕೆ ಇರಲಿದೆ. ನಿಮ್ಮ ಕೋಪವನ್ನು ಕಡಿಮೆ ಮಾಡಿಕೊಂಡಷ್ಟು ಒಳ್ಳೆಯದು. ಸತತ ಪ್ರಯತ್ನದ ನಡುವೆಯೂ ಉದ್ಯೋಗದಲ್ಲಿ ಯಾವುದೇ ಪ್ರಗತಿ ಕಾಣುವುದಿಲ್ಲ.
ಪರಿಹಾರ: ಪಕ್ಷಿಗಳಿಗೆ ಆಹಾರವನ್ನು ನೀಡಿ ದಿನದ ಕೆಲಸ ಆರಂಭಿಸಿ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಬಿಳಿ ಬಣ್ಣ
ವೃಷಭ ರಾಶಿ
ಸಣ್ಣಪುಟ್ಟ ಆರೋಗ್ಯದ ಸಮಸ್ಯೆಗಳಿರುತ್ತವೆ. ಕಲುಷಿತ ಆಹಾರ ಸೇವನೆಯಿಂದ ತೊಂದರೆ ಅನುಭವಿಸುವಿರಿ. ದೈಹಿಕ ವ್ಯಾಯಾಮದಿಂದ ದೈಹಿಕ ಶಕ್ತಿಯು ಹೆಚ್ಚುತ್ತದೆ. ಜೀವನದಲ್ಲಿ ಸದಾಕಾಲ ಶಾಂತಿ ನೆಮ್ಮದಿ ನೆರೆಸಿರುತ್ತದೆ. ಮನರಂಜನೆಗೆ ಹಣವನ್ನು ಖರ್ಚು ಮಾಡುವಿರಿ. ಕುಟುಂಬದವರು ನಿಮ್ಮ ಸ್ವಂತ ನಿರ್ಧಾರಗಳನ್ನು ಒಪ್ಪುವಂತೆ ಓಲೈಸುವಿರಿ. ತಾಳ್ಮೆಯಿಂದ ಉದ್ಯೋಗದಲ್ಲಿನ ಸಮಸ್ಯೆಗಳನ್ನು ಪರಿಹರಿಸುವಿರಿ. ಹಿರಿಯ ಅಧಿಕಾರಿಗಳ ಬೇಸರಕ್ಕೆ ಕಾರಣರಾಗುವಿರಿ. ವಿದ್ಯಾರ್ಥಿಗಳು ಆತಂಕದ ಭಾವನೆಯಲ್ಲಿ ಇರುತ್ತಾರೆ. ಆತುರದ ನಿರ್ಧಾರಗಳಿಂದ ಜೀವನದಲ್ಲಿ ಹಿನ್ನಡೆ ಉಂಟಾಗುತ್ತದೆ. ಪರಿಸ್ಥಿತಿಯ ಒತ್ತಡದಿಂದ ಕೋಪಕ್ಕೆ ಒಳಗಾಗುವಿರಿ. ದಾಂಪತ್ಯ ಜೀವನದಲ್ಲಿ ಬೇಸರದ ಸನ್ನಿವೇಶಗಳು ಎದುರಾಗಲಿವೆ. ಆತ್ಮೀಯರ ಸಲಹೆಯಂತೆ ನಡೆದುಕೊಂಡರೆ ನಿರೀಕ್ಷಿತ ಧನಾತ್ಮಕ ಫಲಿತಾಂಶಗಳು ದೊರೆಯುತ್ತವೆ.
ಪರಿಹಾರ: ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 1
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಬೂದು ಬಣ್ಣ
ಮಿಥುನ ರಾಶಿ
ಹೆಚ್ಚಿನ ಸಮಯವನ್ನು ನಿಮ್ಮ ಉದ್ಯೋಗದಲ್ಲಿ ಕಳೆಯುವಿರಿ. ನಿಮ್ಮ ನೀತಿಗಳು ಕುಟುಂಬದಲ್ಲಿ ಬೇಸರವನ್ನು ಉಂಟುಮಾಡುತ್ತದೆ. ಹಣಕಾಸಿನ ವಿಚಾರದಲ್ಲಿ ಮಾನಸಿಕ ಒತ್ತಡದಿಂದ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಸ್ವಂತ ವ್ಯಾಪಾರ ವ್ಯವಹಾರವಿದ್ದಲ್ಲಿ ನಿಮ್ಮ ಕಾರ್ಯ ವ್ಯಾಪ್ತಿಯನ್ನು ವಿಸ್ತರಿಸುವಿರಿ. ಅನಿವಾರ್ಯವಾಗಿ ಬೇರೆಯವರಿಂದ ಹಣವನ್ನು ಪಡೆಯುವಿರಿ. ಸ್ವಂತ ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ಶ್ರದ್ಧೆಯನ್ನು ತೋರುವಿರಿ. ಹಿರಿಯರ ಅವಶ್ಯಕತೆಗಳನ್ನು ಪೂರೈಸುವಲ್ಲಿ ಯಶಸ್ವಿಯಾಗುವಿರಿ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿಯನ್ನು ತೋರುತ್ತಾರೆ. ಆತ್ಮೀಯರ ಜೊತೆಗೂಡಿ ವಿದೇಶ ಪ್ರವಾಸ ಕೈಗೊಳ್ಳುವಿರಿ. ಅನಿರೀಕ್ಷಿತ ಖರ್ಚು ವೆಚ್ಚಗಳಿಂದ ಬೇಸರಗೊಳ್ಳುವಿರಿ. ಮಧ್ಯ ವಯಸ್ಕರುಗಳು ಕ್ರಮೇಣವಾಗಿ ಪೂರ್ಣಗೊಳ್ಳಲಿವೆ. ಆತುರದಲ್ಲಿ ಯಾವುದೇ ಕೆಲಸ ಕಾರ್ಯಗಳನ್ನು ಆರಂಭಿಸುವುದು ಯೋಗ್ಯವಲ್ಲ.
ಪರಿಹಾರ: ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಕಂದು ಬಣ್ಣ
ಕಟಕ ರಾಶಿ
ಸುಖ ದುಃಖಗಳನ್ನು ಒಂದೇ ದೃಷ್ಟಿಯಿಂದ ನೋಡುವಿರಿ. ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರಲು ಪ್ರಯತ್ನಿಸುವಿರಿ. ಕುಟುಂಬದ ಕೆಲಸಕಾರ್ಯಗಳಲ್ಲಿ ನಿಧಾನತೆ ಕಂಡು ಬರುತ್ತದೆ. ಯಾವುದೇ ವಿಚಾರದಲ್ಲಿಯೂ ಪೂರ್ಣಮಟ್ಟದ ಫಲಿತಾಂಶಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಕುಟುಂಬದಲ್ಲಿ ಗಂಭೀರವಾದ ವಾತಾವರಣವಿರುತ್ತದೆ. ಆತ್ಮಸ್ಥೈರ್ಯದ ಕೊರತೆ ತಪ್ಪು ನಿರ್ಧಾರ ತೆಗೆದುಕೊಳ್ಳಲು ಪ್ರೇರೇಪಿಸುತ್ತದೆ. ಆತುರದ ಗುಣದಿಂದ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುವಿರಿ. ಮನದಲ್ಲಿ ಸ್ವಾರ್ಥದ ಭಾವನೆ ಇರುತ್ತದೆ. ಹಣಕಾಸಿನ ಕೊರತೆ ಇರುವುದಿಲ್ಲ. ಆದರೆ ಖರ್ಚು ವೆಚ್ಚಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಮಾತ್ರ ದೊಡ್ಡ ಪ್ರಮಾಣದ ಯಶಸ್ಸನ್ನು ಗಳಿಸುತ್ತಾರೆ. ಶಾಂತಿ ಸಹನೆಯಿಂದ ವರ್ತಿಸಿದಷ್ಟು ಜೀವನದಲ್ಲಿ ಯಶಸ್ಸನ್ನು ಗಳಿಸಬಹುದು.
ಪರಿಹಾರ: ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 12
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಕಪ್ಪು ಬಣ್ಣ
ಬರಹ: ಹೆಚ್. ಸತೀಶ್, ಜ್ಯೋತಿಷಿ, ಬೆಂಗಳೂರು
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ)
