ವಾರ ಭವಿಷ್ಯ: ಕುಂಭ ರಾಶಿಯವರಿಗೆ ಆಸ್ತಿ ವ್ಯವಹಾರದಲ್ಲಿ ಯಶಸ್ಸು ಸಿಗಲಿದೆ, ಮೀನ ರಾಶಿಯವರು ಆರೋಗ್ಯದ ಬಗ್ಗೆ ಗಮನ ಹರಿಸಿ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ವಾರ ಭವಿಷ್ಯ: ಕುಂಭ ರಾಶಿಯವರಿಗೆ ಆಸ್ತಿ ವ್ಯವಹಾರದಲ್ಲಿ ಯಶಸ್ಸು ಸಿಗಲಿದೆ, ಮೀನ ರಾಶಿಯವರು ಆರೋಗ್ಯದ ಬಗ್ಗೆ ಗಮನ ಹರಿಸಿ

ವಾರ ಭವಿಷ್ಯ: ಕುಂಭ ರಾಶಿಯವರಿಗೆ ಆಸ್ತಿ ವ್ಯವಹಾರದಲ್ಲಿ ಯಶಸ್ಸು ಸಿಗಲಿದೆ, ಮೀನ ರಾಶಿಯವರು ಆರೋಗ್ಯದ ಬಗ್ಗೆ ಗಮನ ಹರಿಸಿ

ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ರಾಶಿಯವರಿಗೆ ಏನು ಫಲ? ಧನು, ಮಕರ, ಕುಂಭ, ಮೀನ ರಾಶಿಯವರ ವಾರ ಭವಿಷ್ಯ ಇಲ್ಲಿದೆ.

ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ವಾರ ಭವಿಷ್ಯ
ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ವಾರ ಭವಿಷ್ಯ

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 18ರ ಭಾನುವಾರದಿಂದ 24ರ ಶನಿವಾರದವರಿಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ವಾರ ಭವಿಷ್ಯ ಇಲ್ಲಿದೆ.

ಧನು ರಾಶಿ

ಕುಟುಂಬಕ್ಕೆ ಸೇರಿದ ಭೂ ವಿವಾದವೊಂದು ಪರಿಹಾರಗೊಳ್ಳಲಿದೆ. ದೊರೆಯುವ ಫಲಿತಾಂಶದ ಬಗ್ಗೆ ಯೋಚಿಸದೆ ಏಕಾಗ್ರತೆಯಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸುವಿರಿ. ಕುಟುಂಬದಲ್ಲಿ ಗಂಭೀರದ ವಾತಾವರಣ ಇರುತ್ತದೆ. ಉದ್ಯೋಗದಲ್ಲಿ ಕೆಲವೊಂದು ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ಆತ್ಮೀಯರಿಂದ ಹಣದ ಸಹಾಯ ದೊರೆಯಲಿದೆ. ಹಣಕಾಸಿನ ವ್ಯವಹಾರದಲ್ಲಿ ಉತ್ತಮ ಲಾಭ ಗಳಿಸುವಿರಿ. ಉದ್ಯೋಗದಲ್ಲಿ ಯಾವುದೇ ಸಮಸ್ಯೆ ಎದುರಾಗದು. ಹಾಗೆಯೇ ದೊರೆಯಬೇಕಿದ್ದ ಉನ್ನತ ಅಧಿಕಾರ ಕೈ ತಪ್ಪುತ್ತದೆ. ದುರಾಸೆಯ ಮನಸಿರುವುದಿಲ್ಲ. ದೊರೆಯುವ ಅವಕಾಶಗಳನ್ನು ಸರಿಯಾದ ಮಾರ್ಗದಲ್ಲಿ ಬಳಸಿಕೊಳ್ಳುವಿರಿ. ವಿವಾಹಕ್ಕೆ ಸಂಬಂಧಿಸಿದಂತೆ ಕುಟುಂಬದಲ್ಲಿ ವಾದ ವಿವಾದಗಳಿರುತ್ತವೆ. ಬಂಧು ಬಳಗದವರಿಂದ ದೂರ ಉಳಿಯಲು ಬಯಸುವಿರಿ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ.

ಪರಿಹಾರ: ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ನೀಲಿ ಬಣ್ಣ

ಮಕರ ರಾಶಿ

ಉತ್ತಮ ಆರೋಗ್ಯ ಇರುತ್ತದೆ. ಆದರೆ ಮನದಲ್ಲಿ ಹಲವು ವಿಚಾರಗಳ ಬಗ್ಗೆ ಗೊಂದಲವಿರುತ್ತದೆ. ಆತ್ಮವಿಶ್ವಾಸವನ್ನು ಬೆಳೆಸಿಕೊಂಡಷ್ಟು ಒಳ್ಳೆಯದಾಗುತ್ತದೆ. ಯಾವುದೇ ಕೆಲಸ ಕಾರ್ಯಗಳನ್ನು ಆರಂಭ ಮಾಡುವ ಮೊದಲು ಸಕಾರಾತ್ಮಕ ಭಾವನೆಯನ್ನು ಬೆಳೆಸಿಕೊಳ್ಳಿ. ಕುಟುಂಬದ ಸದಸ್ಯರಲ್ಲಿ ಹಣಕಾಸಿನ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗುತ್ತದೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿಸಿದ ಆದಾಯ ದೊರೆಯಲಿದೆ. ಉದ್ಯೋಗದಲ್ಲಿ ಅನಾವಶ್ಯಕವಾದ ಜವಾಬ್ದಾರಿಗಳು ನಿಮ್ಮ ಪಾಲಾಗುತ್ತದೆ. ಕೌಟುಂಬಿಕ ಜೀವನದಲ್ಲಿ ಹೊಂದಾಣಿಕೆಯು ಬಲು ಮುಖ್ಯವಾಗುತ್ತದೆ. ನಿರೀಕ್ಷೆಗಳು ಹುಸಿಯಾಗುವ ಸಂಭವವಿದೆ. ಒತ್ತಡದ ಸನ್ನಿವೇಶದಲ್ಲಿ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ನಾನೆಂಬ ಭಾವನೆಯಿಂದ ಹೊರ ಬಂದಲ್ಲಿ ಆತ್ಮೀಯರ ಸಹಾಯ ದೊರೆಯುತ್ತದೆ. ಆತುರದ ತೀರ್ಮಾನಗಳು ನಿಮಗೆ ಉತ್ತಮ ಫಲಿತಾಂಶವನ್ನೇ ನೀಡುತ್ತದೆ. ಆದರೆ ಎಚ್ಚರಿಕೆ ಇರಲಿ.

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ನೇರಳೆ ಬಣ್ಣ

ಕುಂಭ ರಾಶಿ

ಶಾಂತರಾಗಿ ಕಂಡು ಬಂದರು ಮನದಲ್ಲಿ ಹೆಚ್ಚಿನ ಮಟ್ಟದ ಕೋಪವಿರುತ್ತದೆ. ಏಕಾಂಗಿಯಾಗಿ ಉಳಿಯಲು ಬಯಸುವಿರಿ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಜೊತೆಯಲ್ಲಿ ಅನಾವಶ್ಯಕವಾದ ವಾದ ವಿವಾದಗಳಿರುತ್ತವೆ. ಉದ್ಯೋಗವನ್ನು ಬದಲಿಸಲು ಪ್ರಯತ್ನಿಸುವಿರಿ. ಕುಟುಂಬದಲ್ಲಿ ನಿಮ್ಮ ಮನಸ್ಸಿಗೆ ಬೇಸರ ಉಂಟಾಗುವ ಸನ್ನಿವೇಶ ಎದುರಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಗಲಿಬಿಲಿಯ ಕಾರಣ ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡುವಿರಿ. ಶಾಂತಿ ನೆಮ್ಮದಿಯನ್ನು ಅರಸಿ ಲಘು ಪ್ರವಾಸಕ್ಕೆ ತೆರಳುವಿರಿ. ವಿದ್ಯಾರ್ಥಿಗಳು ನಿರೀಕ್ಷಿತ ಹಂತ ತಲುಪಲು ಹೆಚ್ಚಿನ ಪ್ರಯತ್ನ ತೋರಬೇಕು. ಮನೆತನಕ್ಕೆ ಸಂಬಂಧಪಟ್ಟ ಆಸ್ತಿಯ ವ್ಯವಹಾರದಲ್ಲಿ ಯಶಸ್ಸು ಗಳಿಸುವಿರಿ. ವಿದೇಶ ಪ್ರಯಾಣ ಮಾಡುವ ಸಾಧ್ಯತೆಗಳಿವೆ. ಬೇರೆಯವರಿಂದ ಸಹಾಯವನ್ನು ನಿರೀಕ್ಷಿಸುವುದಿಲ್ಲ.

ಪರಿಹಾರ: ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 1
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ಮೀನ ರಾಶಿ

ನಿಮ್ಮ ಮನಸ್ಸಿನಲ್ಲಿ ಬಗೆಹರಿಯದ ಯೋಚನೆಗಳು ಇರುತ್ತವೆ. ಬಂಧು-ಬಳಗದವರ ಜೊತೆ ಭಾವನಾತ್ಮಕ ಸಂಬಂಧ ಇರುತ್ತದೆ. ಕುಟುಂಬದ ಮುಖ್ಯವಾದ ವಿಚಾರಗಳಲ್ಲಿ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳುವಿರಿ. ಉತ್ತಮ ಆದಾಯ ಇರುತ್ತದೆ. ಅತಿಯಾದ ಖರ್ಚು ವೆಚ್ಚದಿಂದ ಹಣ ಉಳಿಸಲು ಸಾಧ್ಯವಾಗುವುದಿಲ್ಲ. ನಾಳಿನ ದಿನಗಳ ಬಗ್ಗೆ ಯೋಚನೆ ಇರುವುದಿಲ್ಲ. ಆತುರದಲ್ಲಿ ತಪ್ಪು ನಿರ್ಧಾರಗಳನ್ನು ತೆಗೆದುಕೊಂಡು ಸಮಸ್ಯೆಗೆ ಸಿಲುಕುವಿರಿ. ಉದ್ಯೋಗ ಕ್ಷೇತ್ರದಲ್ಲಿ ಬೇಸರದ ಸನ್ನಿವೇಶವು ಎದುರಾಗುತ್ತದೆ. ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತಹ ಅವಕಾಶಗಳು ದೊರೆಯಲಿದೆ. ಕುಟುಂಬದಲ್ಲಿ ಎಲ್ಲರ ಸಹಾಯ ಸಹಕಾರ ದೊರೆಯುತ್ತದೆ. ಉದ್ಯೋಗದಲ್ಲಿ ಆತ್ಮೀಯ ಭಾವದಿಂದ ಸಹೋದ್ಯೋಗಿಗಳ ಜೊತೆ ವರ್ತಿಸುವಿರಿ. ವಿದ್ಯಾರ್ಥಿಗಳು ನಿರೀಕ್ಷಿತ ಮಟ್ಟವನ್ನು ಸುಲಭವಾಗಿ ತಲುಪಲಿದ್ದಾರೆ. ಆರೋಗ್ಯದ ಬಗ್ಗೆ ಗಮನವಹಿಸಿ.

ಪರಿಹಾರ: ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಬಿಳಿ ಬಣ್ಣ

ಬರಹ: ಹೆಚ್‌. ಸತೀಶ್‌, ಜ್ಯೋತಿಷಿ, ಬೆಂಗಳೂರು

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.