ವಾರ ಭವಿಷ್ಯ: ಕಟಕ ರಾಶಿಯವರ ಕುಟುಂಬದಲ್ಲಿ ಶಾಂತಿ ನೆಮ್ಮದಿ ಇರುತ್ತೆ, ಮಿಥುನ ರಾಶಿಯವರಿಗೆ ಹಣದ ಕೊರತೆ ಎದುರಾಗಲಿದೆ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ವಾರ ಭವಿಷ್ಯ: ಕಟಕ ರಾಶಿಯವರ ಕುಟುಂಬದಲ್ಲಿ ಶಾಂತಿ ನೆಮ್ಮದಿ ಇರುತ್ತೆ, ಮಿಥುನ ರಾಶಿಯವರಿಗೆ ಹಣದ ಕೊರತೆ ಎದುರಾಗಲಿದೆ

ವಾರ ಭವಿಷ್ಯ: ಕಟಕ ರಾಶಿಯವರ ಕುಟುಂಬದಲ್ಲಿ ಶಾಂತಿ ನೆಮ್ಮದಿ ಇರುತ್ತೆ, ಮಿಥುನ ರಾಶಿಯವರಿಗೆ ಹಣದ ಕೊರತೆ ಎದುರಾಗಲಿದೆ

ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ರಾಶಿಯವರಿಗೆ ಏನು ಫಲ? ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ವಾರ ಭವಿಷ್ಯ ಇಲ್ಲಿದೆ.

ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ವಾರ ಭವಿಷ್ಯ
ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ವಾರ ಭವಿಷ್ಯ

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 18ರ ಭಾನುವಾರದಿಂದ 24ರ ಶನಿವಾರದವರಿಗೆ ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ವಾರ ಭವಿಷ್ಯ ಇಲ್ಲಿದೆ.

ಮೇಷ ರಾಶಿ

ಆರೋಗ್ಯದಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಎದುರಾಗುತ್ತವೆ. ಕುಟುಂಬದ ಸದಸ್ಯರ ಆರೋಗ್ಯದಲ್ಲಿಯೂ ಸಮಸ್ಯೆ ಉಂಟಾಗುತ್ತದೆ. ಅನಾವಶ್ಯಕ ಖರ್ಚು ವೆಚ್ಚಗಳು ಬೇಸರಕ್ಕೆ ಕಾರಣವಾಗುತ್ತದೆ. ಲೋಹದಿಂದ ಕೈಕಾಲುಗಳಿಗೆ ಪೆಟ್ಟಾಗುವ ಸಾಧ್ಯತೆಗಳಿವೆ. ಹಣಕಾಸಿನ ಕೊರತೆ ಉಂಟಾಗುವ ಕಾರಣ ಮಾನಸಿಕ ನೆಮ್ಮದಿ ಇರುವುದಿಲ್ಲ. ಆತುರದ ತೀರ್ಮಾನ ತೆಗೆದುಕೊಳ್ಳುವ ಕಾರಣ ಬೇರೆಯವರ ಅಸಮಾಧಾನವನ್ನು ಎದುರಿಸಬೇಕಾಗುತ್ತದೆ. ಕೋಪವನ್ನು ತೊರೆದು ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ಬೇರೆಯಲು ಪ್ರಯತ್ನಿಸುವಿರಿ. ಆತ್ಮೀಯರಿಂದ ಹಣದ ಸಹಾಯ ದೊರೆಯುತ್ತದೆ. ಕುಟುಂಬದೊಂದಿಗೆ ಮನರಂಜನಾ ತಾಣಕ್ಕೆ ತೆರಳುವಿರಿ. ಉದ್ಯೋಗದಲ್ಲಿ ನಿಮ್ಮ ನಿರೀಕ್ಷೆಯಂತೆ ಫಲಿತಾಂಶಗಳು ದೊರೆಯುತ್ತವೆ. ವಿದ್ಯಾರ್ಥಿಗಳು ಸಹಪಾಠಿಗಳ ಸಹಕಾರದಿಂದ ಉನ್ನತ ಸ್ಥಾನವನ್ನು ತಲುಪುತ್ತಾರೆ. ಕೇವಲ ಸತತ ಪ್ರಯತ್ನದಿಂದ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಗಳಿಸಲು ಸಫಲರಾಗುತ್ತಾರೆ.

ಪರಿಹಾರ: ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ರಕ್ತದ ಬಣ್ಣ

ವೃಷಭ ರಾಶಿ

ಯಾವುದೇ ಕೆಲಸ ಕಾರ್ಯಗಳನ್ನು ಮಾಡಲು ಹಿಂಜರಿಯುವುದಿಲ್ಲ. ನಿಮ್ಮ ಮನಸ್ಸಿನಲ್ಲಿ ಉತ್ಸಾಹಕ್ಕಿಂತಲೂ ಹೆಚ್ಚಿನ ಕುತೂಹಲವಿರುತ್ತದೆ. ಗುರು ಹಿರಿಯರ ಬಗ್ಗೆ ಗೌರವ ತೋರುವಿರಿ. ಸಮಯ ವ್ಯರ್ಥ ಮಾಡದೆ ಕೆಲಸ ಕಾರ್ಯಗಳಲ್ಲಿ ಆಸಕ್ತಿ ವಹಿಸುವಿರಿ. ಸ್ವಂತ ಉದ್ಯಮವಿದ್ದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಅನಿರೀಕ್ಷಿತ ಧನ ಲಾಭವಿರುತ್ತದೆ. ಕುಟುಂಬದ ಸಂತೋಷಕ್ಕಾಗಿ ಅಮೂಲ್ಯವಾದ ಸಮಯವನ್ನು ಮೀಸಲಿಡುವಿರಿ. ನಿಮ್ಮ ಸ್ವಂತ ಜವಾಬ್ದಾರಿಗಳನ್ನು ನಿರ್ವಹಿಸುವಲ್ಲಿ ಯಶಸ್ಸು ಕಾಣುವಿರಿ. ದಾಂಪತ್ಯ ಜೀವನದಲ್ಲಿ ಅನಗತ್ಯ ಭಿನ್ನಾಭಿಪ್ರಾಯ ಉಂಟಾಗುತ್ತದೆ. ಉತ್ತಮ ಅವಕಾಶ ದೊರೆತು ಉದ್ಯೋಗವನ್ನು ಬದಲಿಸುವಿರಿ. ಆತ್ಮೀಯರಿಗೆ ಹಣದ ಸಹಾಯ ಮಾಡುವಿರಿ. ಆತ್ಮ ಬಲವನ್ನು ಹೆಚ್ಚಿಸುವ ಸನ್ನಿವೇಶವು ಕುಟುಂಬದಲ್ಲಿ ಉಂಟಾಗುತ್ತದೆ.

ಪರಿಹಾರ: ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಎಲೆಹಸಿರು ಬಣ್ಣ

ಮಿಥುನ ರಾಶಿ

ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ಸಾಗಲಿವೆ. ಕುಟುಂಬದಲ್ಲಿ ಶುಭ ಕಾರ್ಯಕ್ರಮಗಳು ನಡೆಯಲಿವೆ. ಹೆಚ್ಚಿನ ಖರ್ಚು ವೆಚ್ಚಗಳ ಕಾರಣ ಹಣದ ಕೊರತೆ ಉಂಟಾಗುತ್ತದೆ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಇರಲಿ. ತಪ್ಪು ಒಪ್ಪುಗಳನ್ನು ಪರಿಶೀಲಿಸಿ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ತಪ್ಪು ಮಾಡಿದವರನ್ನು ತಿದ್ದುವಲ್ಲಿ ಸಂತಸ ಪಡುವಿರಿ. ಮಕ್ಕಳ ಮನಸ್ಸನ್ನು ಅರಿತುಕೊಂಡು ನಡೆದುಕೊಳ್ಳುವಿರಿ. ಕುಟುಂಬದಲ್ಲಿ ಸಂತೋಷದ ವಾತಾವರಣವು ನಿಮ್ಮಿಂದ ಉಂಟಾಗುತ್ತದೆ. ಉದ್ಯೋಗದಲ್ಲಿ ಎದುರಾಗುವ ಸಮಸ್ಯೆಗಳನ್ನು ಸುಲಭವಾಗಿ ಬಗೆಹರಿಸುವಿರಿ. ವಯಸ್ಸಿನ ಅಂತರ ತೋರದೆ ಪ್ರತಿಯೊಬ್ಬರ ಸಲಹೆಯನ್ನು ಒಪ್ಪುವಿರಿ. ವಿದ್ಯಾರ್ಥಿಗಳು ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬೇಕು. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆಯಿಂದ ವ್ಯವಹರಿಸುವಿರಿ. ಕುಟುಂಬದ ಹಿರಿಯರಿಂದ ಉಡುಗೊರೆಯ ರೂಪದಲ್ಲಿ ಹಣವು ದೊರೆಯುತ್ತದೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಕೇಸರಿ ಬಣ್ಣ

ಕಟಕ ರಾಶಿ

ಎಲ್ಲರೊಡನೆ ಮನ ಬಿಚ್ಚಿ ಮಾತನಾಡುವಿರಿ. ಮನಸ್ಸಿನಲ್ಲಿ ಸಂತೋಷ ಸಂತೃಪ್ತಿ ನೆಲೆಸಿರುತ್ತದೆ. ಉತ್ತಮ ಆದಾಯವಿದ್ದರೂ ಖರ್ಚು ವೆಚ್ಚಗಳು ಸಮನಾಗಿರುತ್ತದೆ. ಹಣವನ್ನು ಉಳಿಸಲು ಬುದ್ಧಿವಂತಿಕೆಯಿಂದ ಹೊಸ ಯೋಜನೆಯನ್ನು ರೂಪಿಸುವಿರಿ. ಕುಟುಂಬದ ಜವಾಬ್ದಾರಿಯು ನಿಮ್ಮ ಪಾಲಾಗುತ್ತದೆ. ಹೆಚ್ಚಿನ ನಿರೀಕ್ಷೆಯಲ್ಲಿ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವ ಆತುರದಲ್ಲಿ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಬಾಳ ಸಂಗಾತಿಯ ಆರೋಗ್ಯ ಸುಧಾರಿಸಲು ಹೆಚ್ಚಿನ ಹಣದ ಅವಶ್ಯಕತೆ ಇರುತ್ತದೆ. ಉದ್ಯೋಗದಲ್ಲಿ ನಿರೀಕ್ಷಿತ ರೀತಿಯಲ್ಲಿ ಪ್ರಗತಿ ಕಂಡುಬರುತ್ತದೆ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಉಂಟಾಗುತ್ತದೆ. ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ಅನಾವಶ್ಯಕವಾದ ಪ್ರಯಾಣಗಳಿಂದ ದೈಹಿಕವಾಗಿ ಬಳಲುವಿರಿ. ಹಣಕಾಸಿನ ವ್ಯವಹಾರದಲ್ಲಿ ಆಸಕ್ತಿ ತೋರುವುದಿಲ್ಲ.

ಪರಿಹಾರ: ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಬರಹ: ಹೆಚ್‌. ಸತೀಶ್‌, ಜ್ಯೋತಿಷಿ, ಬೆಂಗಳೂರು

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.