ಉದ್ಯೋಗ ಬದಲಿಸಲಿದ್ದೀರಿ, ಜೀವನದಲ್ಲಿ ಅನಿರೀಕ್ಷಿತ ಶುಭಫಲಗಳು ಸಿಗಲಿವೆ; ಮೇಷದಿಂದ ಕಟಕ ರಾಶಿವರೆಗೆ ವಾರ ಭವಿಷ್ಯ
ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ರಾಶಿಯವರಿಗೆ ಏನು ಫಲ? ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ವಾರ ಭವಿಷ್ಯ ಇಲ್ಲಿದೆ.

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 25ರ ಭಾನುವಾರದಿಂದ 31ರ ಶನಿವಾರದವರಿಗೆ ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ವಾರ ಭವಿಷ್ಯ ಇಲ್ಲಿದೆ.
ಮೇಷ
ಮಾನಸಿಕ ಒತ್ತಡದಿಂದ ಆರೋಗ್ಯದ ತೊಂದರೆ ಇರುತ್ತದೆ. ಒಳ್ಳೆಯ ಅಭ್ಯಾಸದಿಂದ ಮಾತ್ರ ಉತ್ತಮ ಆರೋಗ್ಯ ಗಳಿಸಲು ಸಾಧ್ಯ. ಮನಸಿನ ಯೋಚನೆಗಳನ್ನು ಕಾರ್ಯರೂಪಕ್ಕೆ ತರುವಿರಿ. ದಿನನಿತ್ಯದ ಜೀವನದಲ್ಲಿನ ಬದಲಾವಣೆಗೆ ಹೊಂದಿಕೊಳ್ಳಲಿದ್ದೀರಿ. ಕೇವಲ ಉತ್ತಮ ಪ್ರಯತ್ನದಿಂದ ಹೆಚ್ಚಿನ ವರಮಾನ ಗಳಿಸಲಿದ್ದೀರಿ. ಐಷಾರಾಮಿ ವಾಹನವನ್ನು ಕೊಳ್ಳುವ ಸಾಧ್ಯತೆಗಳಿವೆ. ಮಕ್ಕಳ ಆಸೆ ಆಕಾಂಕ್ಷೆಗಳನ್ನು ಪೂರೈಸಲು ಪ್ರಯತ್ನಿಸುವಿರಿ. ಹಿರಿಯರ ಸಮ್ಮುಖದಲ್ಲಿ ನಿಮ್ಮ ಕೆಲಸ ಕಾರ್ಯಗಳನ್ನು ಆರಂಭಿಸುವಿರಿ. ಸಣ್ಣ ಪುಟ್ಟ ವಿಚಾರಗಳಿಗೂ ಬೇರೆಯವರನ್ನು ಆಶ್ರಯಿಸುವಿರಿ. ಉದ್ಯೋಗವನ್ನು ಬದಲಿಸುವ ಮನಸ್ಸು ಇರುತ್ತದೆ. ಬಿಡುವಿನ ವೇಳೆಯಲ್ಲಿ ಸಮಾಜಸೇವೆಯಲ್ಲಿ ತೊಡಗಿಸಿಕೊಳ್ಳುವಿರಿ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ಇರುತ್ತದೆ. ನಿಮ್ಮ ಯಶಸ್ಸಿನಲ್ಲಿ ಸಂಗಾತಿ ಪಾತ್ರ ಮುಖ್ಯವಾಗಿರುತ್ತದೆ. ಉದ್ಯೋಗದಲ್ಲಿ ನಿಧಾನಗತಿಯ ಪ್ರಗತಿ ಕಂಡುಬರುತ್ತದೆ.
ಪರಿಹಾರ: ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ: 7
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಬೂದು ಬಣ್ಣ
ವೃಷಭ
ಆದಾಯದಲ್ಲಿ ಪ್ರಗತಿ ಕಂಡುಬರುತ್ತದೆ. ಆರೋಗ್ಯದಲ್ಲಿ ಚೇತರಿಕೆ ಇರುತ್ತದೆ. ಹೆಚ್ಚಿನ ಪ್ರಯತ್ನದಿಂದ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಜೀವನದಲ್ಲಿ ಅನಿರೀಕ್ಷಿತ ಶುಭ ಫಲಗಳು ದೊರೆಯುತ್ತವೆ. ಮನರಂಜನೆ ಮತ್ತು ಸಣ್ಣ ಪುಟ್ಟ ಪ್ರವಾಸಗಳಿಗೆ ಹೆಚ್ಚಿನ ಹಣ ಖರ್ಚು ಮಾಡಲಿದ್ದೀರಿ. ಉತ್ತಮ ಅವಕಾಶ ದೊರೆಯುವ ಕಾರಣ ಉದ್ಯೋಗ ಬದಲಿಸುವಿರಿ. ಖರ್ಚು ವೆಚ್ಚಗಳನ್ನು ನಿಯಂತ್ರಿಸಲು ವಿಫಲರಾಗುವಿರಿ. ಕುಟುಂಬದ ಜವಾಬ್ದಾರಿಗಳನ್ನು ಅರ್ಥಮಾಡಿಕೊಂಡು ಸರಿಯಾದ ಹಾದಿಯಲ್ಲಿ ಪೂರ್ಣಗೊಳಿಸುವಿರಿ. ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಕುಟುಂಬದ ಜವಾಬ್ದಾರಿಯನ್ನು ಆಯ್ಕೆ ಮಾಡುವಿರಿ. ಕುಟುಂಬ ಸದಸ್ಯರ ಮನಸ್ಸನ್ನು ಗೆಲ್ಲಲು ವಿಫಲರಾಗುವಿರಿ. ಕೋಪ ತಾಪಗಳನ್ನು ತೊರೆದಲ್ಲಿ ಶಾಂತಿ ನೆಮ್ಮದಿ ದೊರೆಯುತ್ತದೆ. ಉದ್ಯೋಗದಲ್ಲಿ ನಿಮ್ಮ ಸಾಮರ್ಥ್ಯವನ್ನು ಸಾಬೀತು ಮಾಡಲು ಯಶಸ್ವಿಯಾಗುವಿರಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶವನ್ನು ಪಡೆಯುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆಗೆ ಹೆಚ್ಚಿನ ತಯಾರಿ ಮಾಡುತ್ತಾರೆ.
ಪರಿಹಾರ: ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಕಂದು ಬಣ್ಣ
ಮಿಥುನ
ಹೆಚ್ಚಿನ ಮುತುವರ್ಜಿಯಿಂದ ಆರಂಭಿಸಿದ ಕೆಲಸ ಕಾರ್ಯಗಳಲ್ಲಿ ಯಶಸ್ವಿಯಾಗುವಿರಿ. ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ವಹಿಸುವಿರಿ. ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ ಇರುತ್ತದೆ. ಕುಟುಂಬದಲ್ಲಿ ಪರಸ್ಪರ ಹೊಂದಾಣಿಕೆ ಇರುತ್ತದೆ. ಆದಾಯಕ್ಕಿಂತ ಹೆಚ್ಚಿನ ಖರ್ಚು ವೆಚ್ಚಗಳು ಇರುತ್ತವೆ. ಆತ್ಮೀಯರ ಸಹಾಯದಿಂದ ಆರ್ಥಿಕ ಬಿಕಟ್ಟಿನಿಂದ ಪಾರಾಗುವಿರಿ. ನಿಮ್ಮ ಸ್ನೇಹಮಯ ವರ್ತನೆಯನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳುವ ಸಾಧ್ಯತೆಗಳು ಇರಲಿವೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭ ಗಳಿಸುವಿರಿ. ಬೇರೆಯವರ ಹಣದ ವ್ಯವಹಾರದಲ್ಲಿನ ಸಮಸ್ಯೆಯನ್ನು ಬಗೆಹರಿಸುವಿರಿ. ನಿಮ್ಮ ಮನದ ಭಾವನೆಗಳಿಗೆ ಗೌರವ ದೊರೆಯುತ್ತದೆ. ಕೌಟುಂಬಿಕ ಜೀವನದಲ್ಲಿ ಹೊಸ ರೀತಿಯ ಬದಲಾವಣೆಗಳು ಉಂಟಾಗಲಿವೆ. ಮಕ್ಕಳ ಜೀವನದ ಸಮಸ್ಯೆಗಳನ್ನು ಬಗೆಹರಿಸುವಿರಿ. ಅನಗತ್ಯವಾಗಿ ಅತಿ ಮುಖ್ಯವಾದ ಕೆಲಸವನ್ನು ಮುಂದೂಡುವಿರಿ. ಉದ್ಯೋಗದಲ್ಲಿ ಮೇಲಾಧಿಕಾರಿಗಳ ಅವಕೃಪೆಗೆ ಒಳಗಾಗುವಿರಿ. ಸಮಯ ವ್ಯರ್ಥ ಮಾಡದೆ ಯಾವುದಾದರೊಂದು ಚಟುವಟಿಕೆಯಲ್ಲಿ ಪಾಲ್ಗೊಳ್ಳುವಿರಿ.
ಪರಿಹಾರ: ಪುಟ್ಟ ಮಕ್ಕಳಿಗೆ ಬೆಣ್ಣೆ ನೀಡಿ ಇಂದಿನ ಕೆಲಸವನ್ನು ಆರಂಬಿಸಿ.
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಕಪ್ಪು ಬಣ್ಣ
ಕಟಕ
ಬಿಡುವಿಲ್ಲದ ಕೆಲಸ ಕಾರ್ಯಗಳಿಂದ ಬೇಸರ ಉಂಟಾಗುತ್ತದೆ. ವಿಶ್ರಾಂತಿ ಇಲ್ಲದ ಕಾರಣ ಆರೋಗ್ಯದಲ್ಲಿ ತೊಂದರೆ ಉಂಟಾಗುತ್ತದೆ. ಉದ್ಯೋಗದಲ್ಲಿ ಮಾನಸಿಕ ಒತ್ತಡ ಇರುತ್ತದೆ. ಕುಟುಂಬದಲ್ಲಿನ ಹೊಸ ರೀತಿಯ ಬದಲಾವಣೆಗಳಿಗೆ ಹೊಂದಿಕೊಂಡು ಬಾಳುವಿರಿ. ಧಾರ್ಮಿಕ ಕೆಲಸ ಕಾರ್ಯಗಳಿಗೆ ಹಣ ಖರ್ಚುಮಾಡುವಿರಿ. ಉತ್ತಮ ಆದಾಯ ಇದ್ದರೂ ತೊಂದರೆಗೆ ಸಿಲುಕುವಿರಿ. ಕಷ್ಟದ ಸನ್ನಿವೇಶದಲ್ಲಿಯೂ ಬಂದು ಬಳಗದವರಿಗೆ ಹಣದ ಸಹಾಯ ಮಾಡಬೇಕಾಗುತ್ತದೆ. ಆತ್ಮೀಯರನ್ನು ಭೇಟಿ ಮಾಡುವಿರಿ. ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ಸ್ವಂತ ಪ್ರತಿಭೆಯ ಬಗ್ಗೆ ಹೆಚ್ಚಿನ ನಂಬಿಕೆ ಇರುತ್ತದೆ. ಆತ್ಮೀಯರಿಗೆ ನೀಡಿದ ಭರವಸೆಯನ್ನು ಉಳಿಸಿಕೊಳ್ಳಲು ಯಶಸ್ವಿಯಾಗುವಿರಿ. ಕುಟುಂಬದ ಹೆಚ್ಚಿನ ಜವಾಬ್ದಾರಿಯನ್ನು ವಹಿಸಿಕೊಳ್ಳುವಿರಿ. ನಿಮ್ಮ ಬಾಳ ಸಂಗಾತಿಯ ಸಹಾಯದಿಂದ ಹಣದ ಸಮಸ್ಯೆಯು ಬಗೆಹರಿಯುತ್ತದೆ. ವಿದ್ಯಾರ್ಥಿಗಳು ಗುರುಹಿರಿಯರ ಬೆಂಬಲವನ್ನು ಪಡೆಯುತ್ತಾರೆ.
ಪರಿಹಾರ: ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವುದರಿಂದ ಶುಭವಿರುತ್ತದೆ.
ಅದೃಷ್ಟದ ಸಂಖ್ಯೆ: 8
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ತಿಳಿಹಸಿರು ಬಣ್ಣ
ಬರಹ: ಹೆಚ್. ಸತೀಶ್, ಜ್ಯೋತಿಷಿ, ಬೆಂಗಳೂರು
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).