ಹಣಕಾಸಿನ ಸಮಸ್ಯೆ ಬಗೆಹರಿಯಲಿದೆ, ಸಂಗಾತಿಯ ಜೊತೆ ಅಸಮಾಧಾನ ಉಂಟಾಗಲಿದೆ; ಸಿಂಹ ವೃಶ್ಚಿಕ ರಾಶಿವರೆಗೆ ವಾರ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಹಣಕಾಸಿನ ಸಮಸ್ಯೆ ಬಗೆಹರಿಯಲಿದೆ, ಸಂಗಾತಿಯ ಜೊತೆ ಅಸಮಾಧಾನ ಉಂಟಾಗಲಿದೆ; ಸಿಂಹ ವೃಶ್ಚಿಕ ರಾಶಿವರೆಗೆ ವಾರ ಭವಿಷ್ಯ

ಹಣಕಾಸಿನ ಸಮಸ್ಯೆ ಬಗೆಹರಿಯಲಿದೆ, ಸಂಗಾತಿಯ ಜೊತೆ ಅಸಮಾಧಾನ ಉಂಟಾಗಲಿದೆ; ಸಿಂಹ ವೃಶ್ಚಿಕ ರಾಶಿವರೆಗೆ ವಾರ ಭವಿಷ್ಯ

ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ರಾಶಿಯವರಿಗೆ ಏನು ಫಲ? ಒಂದು ವಾರ ಭವಿಷ್ಯ ಇದೆ.

ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ವಾರ ಭವಿಷ್ಯ
ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ವಾರ ಭವಿಷ್ಯ

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 23ರ ಭಾನುವಾರದಿಂದ ಮೇ 31 ರ ಶನಿವಾರದವರಿಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ವಾರ ಭವಿಷ್ಯ.

ಸಿಂಹ

ಚರ್ಮದ ದೋಷ ಇದ್ದಲ್ಲಿ ಬೇಗ ಗುಣವಾಗಲಿದೆ. ಮಕ್ಕಳಿಗೆ ಗಂಟಲಿಗೆ ಸಂಬಂಧಿಸಿದ ತೊಂದರೆ ಇರುತ್ತದೆ. ಮನೆತನದ ಹಣಕಾಸಿನ ಸಮಸ್ಯೆಗಳನ್ನು ಬಗೆಹರಿಸುವಿರಿ. ಕುಟುಂಬದಲ್ಲಿ ಆತಂಕದ ಪರಿಸ್ಥಿತಿ ಎದುರಾಗುತ್ತದೆ. ಕಲುಷಿತ ಆಹಾರ ಸೇವನೆಯಿಂದ ಹೊಟ್ಟೆಗೆ ಸಂಬಂಧಿಸಿದ ತೊಂದರೆ ಉಂಟಾಗುತ್ತದೆ. ಕೈ ಕಾಲು ನೋವಿನಿಂದ ಬಳಲುವಿರಿ. ಮಕ್ಕಳ ಜೀವನದಲ್ಲಿಎದುರಾಗುವ ತೊಂದರೆ ತಪ್ಪಿಸಲು ಯಶಸ್ವಿಯಾಗುವಿರಿ. ಸ್ಟಾಕ್ ಮತ್ತು ಷೇರಿನ ಹೂಡಿಕೆಯಿಂದ ಉತ್ತಮ ಲಾಭ ಗಳಿಸುವಿರಿ. ಸಂಬಂಧಿಕರ ಕಾರಣದಿಂದಾಗಿ ಹಣ ಖರ್ಚಾಗುತ್ತದೆ. ಉದೋಗದಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಪ್ರಗತಿ ಕಾಣುವಿರಿ. ಅಗತ್ಯವಿರುವ ಸಮಯದಲ್ಲಿ ಆತ್ಮೀಯರು ದೂರವಾಗುತ್ತಾರೆ. ಕೌಟುಂಬಿಕ ಜೀವನದಲ್ಲಿ ಅನಗತ್ಯ ವಿಚಾರಗಳಿಗಾಗಿ ಪರಸ್ಪರ ಮನಸ್ತಾಪ ಉಂಟಾಗುತ್ತದೆ. ಹಣಕಾಸಿನ ವಿಚಾರವಾಗಿ ಬಾಳ ಸಂಗಾತಿಯ ಜೊತೆ ಅಸಮಾಧಾನ ಉಂಟಾಗುತ್ತದೆ. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸದ ಕೊರತೆ ಇರುತ್ತದೆ.

ಪರಿಹಾರ: ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ. ಅದೃಷ್ಟದ ಸಂಖ್ಯೆ: 12

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ

ಕನ್ಯಾ

ಸಹೋದ್ಯೋಗಿಗಳ ಸಹಕಾರದಿಂದ ಉದ್ಯೋಗದಲ್ಲಿ ಉನ್ನತ ಮಟ್ಟ ತಲುಪುವಿರಿ. ಆರೋಗ್ಯದಲ್ಲಿ ಯಾವುದೇ ತೊಂದರೆ ಕಾಣದು. ಆತ್ಮವಿಶ್ವಾಸವನ್ನು ಗಳಿಸುವ ಪ್ರಯತ್ನ ಮಾಡಿರಿ. ಕುಟುಂಬದಲ್ಲಿನ ಆಂತರಿಕ ಸಮಸ್ಯೆಗಳಲ್ಲಿ ಸುಧಾರಣೆ ಉಂಟಾಗುತ್ತದೆ. ಮನೆಯನ್ನು ಬದಲಾಯಿಸುವ ಯೋಜನೆ ಸಾಕಾರಗೊಳ್ಳುತ್ತದೆ. ಆತಂಕದ ಪರಿಸ್ಥಿತಿಯಲ್ಲಿ ಸಹ ಬೇರೆಯವರ ಸಹಾಯ ಅಥವಾ ಸಲಹೆಯನ್ನು ಒಪ್ಪುವುದಿಲ್ಲ. ಸಮಯಕ್ಕೆ ತಕ್ಕಂತೆ ನಿಮ್ಮ ನಿರ್ಧಾರಗಳನ್ನು ಬದಲಿಸುವಿರಿ. ಮಾನಸಿಕ ಶಾಂತಿಯಿಲ್ಲದೆ ದಿನ ಕಳೆಯುವಿರಿ. ಮನೆ ಅಥವಾ ನಿವೇಶನವನ್ನು ಖರೀದಿಸಲು ಹಣದ ಕೊರತೆ ಎದುರಾಗುತ್ತದೆ. ಆರ್ಥಿಕ ಪರಿಸ್ಥಿತಿಯು ಕ್ರಮೇಣವಾಗಿ ಪ್ರಗತಿ ಕಾಣುತ್ತದೆ. ಗಂಭೀರ ಆರೋಗ್ಯ ಸಮಸ್ಯೆ ಎದುರಾಗುತ್ತದೆ. ಹಣಕಾಸಿನ ವಿಚಾರದಲ್ಲಿ ದೀರ್ಘಕಾಲದ ಹೂಡಿಕೆ ಮಾಡುವಿರಿ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಇರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಪಾಲುದಾರರೊಂದಿಗೆ ಮನಸ್ತಾಪ ಉಂಟಾಗುತ್ತದೆ. ಬೇರೆಯವರನ್ನು ಸುಲಭವಾಗಿ ನಂಬುವುದಲ್ಲ. ನಿಮ್ಮ ಕಾರ್ಯಕ್ಷೇತ್ರವನ್ನು ವಿಸ್ತರಿಸಲು ಪ್ರಯತ್ನಿಸುವಿರಿ.

ಪರಿಹಾರ: ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ. ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ ಬಣ್ಣ

ತುಲಾ

ಆರೋಗ್ಯದಲ್ಲಿ ದಿಢೀರನೆ ಸಮಸ್ಯೆ ಎದುರಾಗುತ್ತದೆ. ಅನಾವಶ್ಯಕ ವಿಚಾರಗಳಿಗೆ ಯೋಜನೆ ಮಾಡುವಿರಿ. ಉದ್ಯೋಗದಲ್ಲಿ ಕೆಲಸದ ಒತ್ತಡವು ಹೆಚ್ಚುತ್ತದೆ. ಸತತ ಪ್ರಯತ್ನದ ನಡುವೆಯೂ ಸ್ಥಿರವಾದ ಆದಾಯ ಗಳಿಸಲು ಸಾಧ್ಯವಾಗದು. ಆತ್ಮೀಯರಿಂದ ಹಣದ ಸಹಾಯ ದೊರೆಯುತ್ತದೆ. ಹಣಕಾಸಿನ ಯೋಜನೆಯಲ್ಲಿ ಹೂಡಿಕೆ ಮಾಡುವಿರಿ. ಕುಟುಂಬದಲ್ಲಿ ಹೊಂದಾಣಿಕೆಯ ವಾತಾವರಣ ಕಾಣುವುದಿಲ್ಲ. ನಿಮ್ಮ ಸ್ವಂತ ಹಣಕಾಸಿನ ವ್ಯವಹಾರಗಳಲ್ಲಿ ಬೇರೆಯವರ ಹಸ್ತಕ್ಷೇಪ ಇರುತ್ತದೆ. ಬಂದು ಬಳಗದವರ ಹಣಕಾಸಿನ ವಿವಾದವನ್ನು ನಿವಾರಿಸುವಿರಿ. ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳ ಮೆಚ್ಚುಗೆ ದೊರೆಯುತ್ತದೆ. ಅತಿಯಾಗಿ ಮಾತನಾಡದೆ ಮೌನಕ್ಕೆ ಜಾರುವಿರಿ. ವಿದ್ಯಾರ್ಥಿಗಳು ಉತ್ತಮ ಪ್ರಯತ್ನದಿಂದ ಕಲಿಕೆಯಲ್ಲಿ ಉನ್ನತ ಮಟ್ಟಕ್ಕೆ ತಲುಪುವರು. ಸದಾ ಕಾಲ ಚುರುಕುತನದಿಂದ ಕೆಲಸ ಕಾರ್ಯಗಳಲ್ಲಿ ಮುಂದುವರೆಯುವಿರಿ. ಬೇರೆಯವರ ಕೆಲಸ ಕಾರ್ಯಗಳಲ್ಲಿನ ಲೋಪ ದೋಷಗಳನ್ನು ಸರಿಪಡಿಸುವಿರಿ.

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಹಾಲಿನ ಬಣ್ಣ

ವೃಶ್ಚಿಕ

ನಿಮ್ಮ ಕೋಪದ ಗುಣದಿಂದಾಗಿ ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಇರುತ್ತದೆ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ಏರಿಳಿತ ಇರಲಿದೆ. ಹಣಕಾಸಿನ ವಿಚಾರದಲ್ಲಿ ದೃಢವಾದ ನಿಲುವು ತಾಳುವಿರಿ. ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಬಗೆಹರಿಸುವಿರಿ. ಕ್ರಮೇಣವಾಗಿ ನಿಮ್ಮ ಆರ್ಥಿಕ ಸ್ಥಿತಿ ಉತ್ತಮಗೊಳ್ಳುತ್ತದೆ. ನಿಮಗೆ ದೊರೆಯುವ ಯಶಸ್ಸಿನಲ್ಲಿ ಬಾಳ ಸಂಗಾತಿಯ ಸಹಾಯ ಇರುತ್ತದೆ. ನಿಮ್ಮ ಅನುಭವಕ್ಕೆ ತಕ್ಕಂತಹ ಉದ್ಯೋಗ ದೊರೆಯುತ್ತದೆ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭ ಗಳಿಸುವಿರಿ. ಆತ್ಮೀಯರ ಒತ್ತಡದ ನಡುವೆಯು ನಿಮ್ಮ ನಿರ್ಧಾರಗಳನ್ನು ಬದಲಿಸುವುದಿಲ್ಲ. ತಾಳ್ಮೆಯಿಂದ ಮಕ್ಕಳ ಜೊತೆಯಲ್ಲಿ ಬಾಳುವಿರಿ, ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡುವಿರಿ. ಮನೆತನದ ಆಸ್ತಿಯಲ್ಲಿ ಸಿಂಹ ಪಾಲು ನಿಮ್ಮದಾಗಲಿದೆ. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವಿರಿ. ಸೋದರರ ನಡುವೆ ಹಣಕಾಸಿನ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗಲಿದೆ.

ಪರಿಹಾರ: ಸಾಧು ಸಂತರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10 ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ಬರಹ: ಹೆಚ್‌. ಸತೀಶ್‌, ಜ್ಯೋತಿಷಿ, ಬೆಂಗಳೂರು

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Reshma

TwittereMail
ರೇಷ್ಮಾ ಶೆಟ್ಟಿ: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜೀವನಶೈಲಿ (ಲೈಫ್‌ಸ್ಟೈಲ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ ದಿನಪತ್ರಿಕೆಯ ವಿವಿಧ ವಿಭಾಗಗಳಲ್ಲಿ 9 ವರ್ಷಗಳ ಅನುಭವ. ಆರೋಗ್ಯ, ಆಹಾರ, ಸಿನಿಮಾ, ಕಿರುತೆರೆ ಆಸಕ್ತಿಯ ಕ್ಷೇತ್ರಗಳು. ಕುಂದಾಪುರ ತಾಲ್ಲೂಕಿನ ವಕ್ವಾಡಿ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.