ಸ್ತ್ರೀ ವಾರ ಭವಿಷ್ಯ ಸಿಂಹದಿಂದ ವೃಶ್ಚಿಕದವರೆಗೆ: ಅನಿರೀಕ್ಷಿತ ಧನಲಾಭವಿರುತ್ತದೆ, ನಿರ್ಧಾರಗಳಿಗೆ ಬದ್ಧರಾಗಿರುತ್ತೀರಿ
ಸ್ತ್ರೀ ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಸಿಂಹದಿಂದ ವೃಶ್ಚಿಕ ರಾಶಿವರೆಗಿನ ಮಹಿಳೆಯರಿಗೆ ಏನು ಫಲ? ಇಲ್ಲಿದೆ ವಿವರ.

ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 30 ರ ಶುಕ್ರವಾರದಿಂದ ಜೂನ್ ರ ಗುರುವಾರದವರೆಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಸಿಂಹ ರಾಶಿ
ಮನಸ್ಸಿನಲ್ಲಿ ತಪ್ಪು ಕಲ್ಪನೆ ಇರುತ್ತದೆ. ಕುಟುಂಬದ ಸಮಸ್ಯೆಯು ಕ್ರಮೇಣವಾಗಿ ದೂರವಾಗುತ್ತದೆ. ಹೊಸ ವಾಹನವನ್ನು ಕೊಳ್ಳುವಿರಿ. ಉದರವ್ಯಾಧಿ ಇರುತ್ತದೆ. ದೈವಿಕ ಕಾರ್ಯದಲ್ಲಿ ಹೆಚ್ಚಿನ ನಂಬಿಕೆ ಮತ್ತು ಆಸಕ್ತಿ ಇರುತ್ತದೆ. ಮನಸ್ಸಿನಲ್ಲಿ ವೈರಾಗ್ಯದ ಭಾವನೆ ಇರುತ್ತದೆ. ಪತಿಯ ಜೊತೆಯಲ್ಲಿ ಅನಾವಶ್ಯಕವಾದ ವಾದ ವಿವಾದಗಳು ಇರುತ್ತವೆ. ಸಾಂಪ್ರದಾಯಿಕ ಕಲೆಗಳಲ್ಲಿ ಆಸಕ್ತಿ ಮೂಡುತ್ತದೆ. ತಂದೆಯವರ ಆರೋಗ್ಯದಲ್ಲಿ ತೊಂದರೆ ಇರುತ್ತದೆ. ಹೆಚ್ಚಿನ ಪ್ರಯತ್ನದಿಂದ ವಿದೇಶಕ್ಕೆ ತೆರಳುವ ಅವಕಾಶ ದೊರೆಯುತ್ತದೆ. ಮಕ್ಕಳ ಆರೋಗ್ಯದಲ್ಲಿ ತೊಂದರೆ ಇರುತ್ತದೆ. ನೆಲದ ಮೇಲೆ ಬಿದ್ದು ಕೈಕಾಲುಗಳಲ್ಲಿ ತೊಂದರೆ ಉಂಟಾಗಬಹುದು. ಆತ್ಮವಿಶ್ವಾಸದ ಕೊರತೆ ಇರುತ್ತದೆ. ವಿದ್ಯಾರ್ಥಿಗಳಿಗೆ ತಮ್ಮ ಮಾರ್ಗದರ್ಶನದಿಂದ ಉನ್ನತ ಮಟ್ಟ ತಲುಪಲು ಸಾಧ್ಯವಾಗುತ್ತದೆ. ಅನಿರೀಕ್ಷಿತ ಧನಲಾಭ ಇರುತ್ತದೆ. ಅತಿಯಾದ ಆತ್ಮವಿಶ್ವಾಸದಿಂದ ತಪ್ಪು ನಿರ್ಧಾರ ತೆಗೆದುಕೊಳ್ಳುವಿರಿ.
ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 9
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ : ಆಕಾಶ ನೀಲಿ ಬಣ್ಣ
ಕನ್ಯಾ ರಾಶಿ
ನಿಮ್ಮಲ್ಲಿ ಆತಂಕದ ಮನೋಭಾವನೆ ಇರುತ್ತದೆ. ಕುಟುಂಬದಲ್ಲಿ ವಿಶೇಷವಾದ ಕೆಲಸ ಒಂದನ್ನು ಪೂರ್ಣಗೊಳಿಸುವುವಿರಿ. ಪತಿಗೆ ಮನೆಯನ್ನು ಕಟ್ಟುವ ಅಥವಾ ಕೊಳ್ಳುವ ಯೋಜನೆಗೆ ಸಹಾಯ ಮಾಡುವಿರಿ. ಹಣಕಾಸಿನ ತೊಂದರೆ ಇರುವುದಿಲ್ಲ. ಉದ್ಯೋಗದಲ್ಲಿ ನಿಮ್ಮ ಮನದ ಆಸೆಯು ಸುಲಭವಾಗಿ ಕೈಗೂಡುತ್ತದೆ. ಸ್ಥಿರವಾದ ಮನಸ್ಸಿರುವುದಿಲ್ಲ. ಸಣ್ಣಪುಟ್ಟ ಕೆಲಸ ಕಾರ್ಯಗಳಿಗೂ ಹೆಚ್ಚಿನ ಪ್ರಯತ್ನ ಬೇಕಾಗುತ್ತದೆ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನವಿರಲಿ. ಗರ್ಭಿಣಿಯರು ಎಚ್ಚರಿಕೆಯಿಂದ ಇರಬೇಕು. ಸೋದರ ಸೋದರಿಯರ ಸಹಾಯದಿಂದ ದೊಡ್ಡ ಮಟ್ಟದ ಕೆಲಸವನ್ನು ಮಾಡುವಿರಿ. ಆತ್ಮೀಯರೊಬ್ಬರನ್ನು ಭೇಟಿ ಮಾಡುವಿರಿ. ಮಕ್ಕಳ ಭವಿಷ್ಯದ ಬಗ್ಗೆ ಹೆಚ್ಚಿನ ಕಾಳಜಿ ಇರುತ್ತದೆ. ಕೇವಲ ಕುಟುಂಬವಲ್ಲದೆ ಸಮಾಜದಲ್ಲಿಯೂ ಗೌರವಯುತ ಸ್ಥಾನಮಾನ ದೊರೆಯುತ್ತದೆ. ಪತಿ ಮತ್ತು ಮಕ್ಕಳ ಜೊತೆ ಯಾತ್ರಾ ಸ್ಥಳಕ್ಕೆ ಭೇಟಿ ನೀಡುವಿರಿ. ಗಂಟಲಿಗೆ ಸಂಬಂಧಿಸಿದ ದೋಷದಿಂದ ಬಳಲುವಿರಿ.
ಪರಿಹಾರ: ತಾಯಿಯವರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ರಕ್ತದ ಬಣ್ಣ
ತುಲಾ ರಾಶಿ
ಬಿಡುವಿಲ್ಲದ ಕೆಲಸ ಕಾರ್ಯಗಳು ಇರಲಿವೆ. ಇದರಿಂದ ನಿಮ್ಮ ಆರೋಗ್ಯದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ತೆರೆದೋರಲಿವೆ. ಸೋದರಿಯ ಜೊತೆಯಲ್ಲಿ ಹಣಕಾಸಿನ ವಿಚಾರವಾಗಿ ಮನಸ್ತಾಪವಿರುತ್ತದೆ. ಕೌಟುಂಬಿಕ ವಿಚಾರದಲ್ಲಿಯೂ ಆಸಕ್ತಿ ಇರುವುದಿಲ್ಲ. ಪತಿಯ ಜೊತೆಯಲ್ಲಿ ಉತ್ತಮ ಅನುಬಂಧ ಮೂಡುತ್ತದೆ. ಉದ್ಯೋಗದಲ್ಲಿ ಉನ್ನತ ಅಧಿಕಾರ ದೊರೆಯುತ್ತದೆ. ಸಹಾಯ ಪಡೆದವರು ನಿಮ್ಮ ಉನ್ನತಿಗೆ ಅಡ್ಡಗಾಲಾಗುತ್ತಾರೆ. ನಿಮಗೆ ರಕ್ತಕ್ಕೆ ಸಂಬಂಧಪಟ್ಟ ದೋಷವಿರುತ್ತದೆ. ನರಕ್ಕೆ ಸಂಬಂಧಿಸಿದ ದೋಷ ಇರುವವರು ಎಚ್ಚರಿಕೆ ವಹಿಸಬೇಕು. ಬೇರೆಯವರಿಗೆ ತೊಂದರೆ ನೀಡುವುದಿಲ್ಲ. ಉತ್ತಮ ಆತ್ಮವಿಶ್ವಾಸವಿರುತ್ತದೆ. ಮನೆತನದ ಮನೆ ಅಥವಾ ದೇವಾಲಯದ ನವೀಕರಣಕ್ಕೆ ಸಹಾಯ ಮಾಡುವಿರಿ. ಆತ್ಮೀಯ‘ರೊಂದಿಗೆ ಹಣಕಾಸಿನ ವಿಚಾರವಾಗಿ ವಿವಾದ ಉಂಟಾಗುತ್ತದೆ. ಮೌನವಾಗಿ ನಿಮ್ಮ ಕೆಲಸ ಸಾಧಿಸುವಿರಿ. ಉದ್ಯೋಗ ಬದಲಾವಣೆ ಮಾಡುವಿರಿ. ಅನಿರೀಕ್ಷಿತ ಧನ ಲಾಭವಿರುತ್ತದೆ. ಯಾತ್ರಾ ಸ್ಥಳಕ್ಕೆ ಭೇಟಿ ನೀಡುವಿರಿ. ಕುಟುಂಬದಲ್ಲಿ ನಿಮ್ಮ ಸಹಭಾಗಿತ್ವದಲ್ಲಿ ಮಂಗಳ ಕಾರ್ಯ ಒಂದು ನಡೆಯುತ್ತದೆ. ದೊಡ್ಡ ವಿದ್ವಾಂಸರನ್ನುಭೇಟಿ ಮಾಡುವಿರಿ. ನೆರೆಹೊರೆಯವರ ಪ್ರೀತಿ-ವಿಶ್ವಾಸ ಗಳಿಸುವಿರಿ.
ಪರಿಹಾರ: ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಎಲೆ ಹಸಿರು ಬಣ್ಣ
ವೃಶ್ಚಿಕ ರಾಶಿ
ಉಸಿರಿಗೆ ಸಂಬಂಧಿಸಿದ ದೋಷವಿರುತ್ತದೆ. ನಿಮ್ಮ ವಿರೋಧಿಗಳಿಗೂ ಒಳಿತನ್ನೇ ಬಯಸುವಿರಿ. ಕೇವಲ ಕುಟುಂಬವಲ್ಲದೆ ಸಮಾಜದಲ್ಲಿಯೂ ಉನ್ನತ ಸ್ಥಾನಮಾನ ದೊರೆಯುತ್ತದೆ. ಧಾರ್ಮಿಕ ಕೆಲಸ ಕಾರ್ಯಗಳನ್ನು ಮಾಡುವಿರಿ. ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ. ಆತ್ಮವಿಶ್ವಾಸದಿಂದ ಎದುರಾಗುವ ಕಷ್ಟ ನಷ್ಟಗಳಿಂದ ಕುಟುಂಬವನ್ನು ಪಾರು ಮಾಡುವಿರಿ. ಉದ್ಯೋಗದಲ್ಲಿ ನಿಮ್ಮ ಕಾರ್ಯದಕ್ಷತೆಗೆ ಎಲ್ಲರ ಮೆಚ್ಚುಗೆ ದೊರೆಯುತ್ತದೆ. ಗರ್ಭಿಣಿಯರ ಆರೋಗ್ಯದಲ್ಲಿ ಏರಿಳಿತ ಇರುತ್ತದೆ. ನೇರವಾದ ನಡೆ ನುಡಿ ಇರುವ ಕಾರಣವಿರೋಧಿಗಳು ಹೆಚ್ಚುತ್ತಾರೆ. ಬೇಗನೆ ಕೋಪಕ್ಕೆ ಒಳಗಾಗುವಿರಿ. ಧೈರ್ಯ ಸಾಹಸದ ಬುದ್ದಿ ಇರುತ್ತದೆ. ಸುಂದರವಾದ ಮನೆಯು, ನಿಮ್ಮ ಪಾಲಾಗುತ್ತದೆ. ಉದ್ಯೋಗದಲ್ಲಿ ಉನ್ನತ ಮಟ್ಟದ ಅಭಿವೃದ್ಧಿ ಕಂಡುಬರುತ್ತದೆ. ಕುಟುಂಬದ ಹಿರಿಯರಿಗೆ ಸಂಬಂಧಿಸಿದ ಭೂ ವಿವಾದಕ್ಕೆ ಪರಿಹಾರ ಸೂಚಿಸುವಿರಿ. ಯಾವುದೇ ನಷ್ಟಗಳು ಎದುರಾದರು ಆರಂಭಿಸಿದ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಒಮ್ಮೆ ತೆಗೆದುಕೊಂಡ ನಿರ್ಧಾರಗಳನ್ನು ಬದಲಿಸುವುದಿಲ್ಲ.
ಪರಿಹಾರ: ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಕೇಸರಿ ಬಣ್ಣ
ಬರಹ: ಹೆಚ್. ಸತೀಶ್, ಜ್ಯೋತಿಷಿ, ಬೆಂಗಳೂರು
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ಸ್ತ್ರೀ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ)