ಸ್ತ್ರೀ ವಾರ ಭವಿಷ್ಯ: ಧನು ರಾಶಿಯವರಿಗೆ ತಮ್ಮದೇ ತಪ್ಪಿನಿಂದ ನೆಮ್ಮದಿ ಇರಲ್ಲ, ಮೀನ ರಾಶಿಯವರು ಬೇರೆಯವರ ಸಹಾಯ ಪಡೆಯುವುದಿಲ್ಲ
ಸ್ತ್ರೀ ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ಮಹಿಳಾ ರಾಶಿಯವರಿಗೆ ಏನು ಫಲ? 1 ವಾರ ಭವಿಷ್ಯದ ವಿವರ ಇಲ್ಲಿದೆ.

Women Weekly Horoscope: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಏಪ್ರಿಲ್ 11 ರ ಶುಕ್ರವಾರದಿಂದ ಏಪ್ರಿಲ್ 17ರ ಗುರುವಾರದವರೆಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಧನು ರಾಶಿ
ಕುಟುಂಬದ ಜವಾಬ್ದಾರಿಯು ನಿಮ್ಮದಾಗುತ್ತದೆ. ಬಿಡುವಿಲ್ಲದೆ ಕರ್ತವ್ಯ ಪಾಲನೆ ಮಾಡಬೇಕಾಗುತ್ತದೆ. ಇದರಿಂದ ಮಾನಸಿಕವಾಗಿ ಧೃಡತೆ ಇರುವುದಿಲ್ಲ. ಕುಟುಂಬದಲ್ಲಿ ಗಂಭೀರದ ಪರಿಸರ ಉಂಟಾಗುತ್ತದೆ. ನಿಮ್ಮದೇ ಆದ ತಪ್ಪಿನಿಂದಾಗಿ ನೆಮ್ಮದಿಯನ್ನು ಕಳೆದುಕೊಳ್ಳುವಿರಿ. ಅನಾವಶ್ಯಕವಾಗಿ ಪ್ರತಿಯೊಬ್ಬರನ್ನು ದ್ವೇಷಿಸುವಿರಿ. ಇದರಿಂದಾಗಿ ಮನಸ್ಸಿಗೆ ಶಾಂತಿ ನೆಮ್ಮದಿ ಇರುವುದಿಲ್ಲ. ಬೇರೆಯವರಿಗೆ ಸಹಾಯ ಮಾಡಲು ಹೋಗಿ ನೀವು ಕಷ್ಟಕ್ಕೆ ಸಿಲುಕುವಿರಿ. ಹಣಕಾಸಿನ ವಿಚಾರದಲ್ಲಿ ಸ್ವಂತ ನಿರ್ಧಾರಕ್ಕೆ ಬದ್ಧರಾಗುವಿರಿ. ಬೇರೆಯವರ ಬುದ್ಧಿ ಮಾತುಗಳನ್ನು ಒಪ್ಪುವುದಿಲ್ಲ. ಯಾವುದೇ ವಿಚಾರದಲ್ಲಿಯೂ ದೃಢವಾದ ನಿಲವು ತಾಳಲು ವಿಫಲರಾಗುವಿರಿ. ಕೋಪದಿಂದ ವರ್ತಿಸುವ ಕಾರಣ ಜನರಿಂದ ದೂರ ಉಳಿಯಬೇಕಾಗುತ್ತದೆ. ಅಜೀರ್ಣದ ತೊಂದರೆಯಿಂದ ಬಳಲುವಿರಿ. ಉದ್ಯೋಗದಲ್ಲಿ ನೀರಸ ವಾತಾವರಣ ಇರಲಿದೆ.
ಪರಿಹಾರ: ತಲೆಗೆ ಹಾಲಲ್ಲಿಟ್ಟು ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಗುಲಾಬಿ ಬಣ್ಣ
ಮಕರ ರಾಶಿ
ಸುಖ ಸಂತೋಷದಿಂದ ಜೀವನವನ್ನು ನಡೆಸುವಿರಿ. ಕುಟುಂಬದಲ್ಲಿ ಎಲ್ಲರೊಂದಿಗೆ ನೆಮ್ಮದಿಯಿಂದ ಬಾಳುವಿರಿ. ಉತ್ತಮ ಆರೋಗ್ಯ ಇರುತ್ತದೆ. ಆರೋಗ್ಯವನ್ನು ಉಳಿಸಿಕೊಳ್ಳುವ ಪರಿಯನ್ನು ಎಲ್ಲರಿಗೂ ತಿಳಿಸುವಿರಿ. ನಿಮ್ಮ ಮನಸ್ಸಿನಲ್ಲಿ ವಿಶಾಲವಾದಂತಹ ಮನೋಭಾವನೆ ನೆಲೆಸಿರುತ್ತದೆ. ಸಮಯವನ್ನು ವ್ಯರ್ಥ ಮಾಡದೆ ಯಾವುದೇ ಕೆಲಸ ಕಾರ್ಯಗಳನ್ನು ಆರಂಭಿಸಲು ಮುಂದಾಗುವಿರಿ. ಸೋದರ ಅಥವಾ ಸೋದರಿಯರ ಜೀವನದಲ್ಲಿ ನಿಮ್ಮ ಪಾತ್ರವು ಅತಿ ಮುಖ್ಯವಾಗುತ್ತದೆ. ಉದ್ಯೋಗಸ್ಥರದಲ್ಲಿ ಅತಿಯಾದ ಜವಾಬ್ದಾರಿಯು ನಿಮ್ಮದಾಗುತ್ತದೆ. ಯಾವುದೇ ಯೋಚನೆ ಇಲ್ಲದೆ ಮನಸ್ಸಿಗೆ ಬಂದ ವಿಚಾರವನ್ನು ನೇರವಾಗಿ ತಿಳಿಸುವಿರಿ. ಇದರಿಂದಾಗಿ ನಿಮಗೆ ವಿರೋಧಿಗಳು ಅಧಿಕವಾಗಿ ಇರುತ್ತಾರೆ. ಉದ್ಯೋಗವನ್ನು ಆತ್ಮೀಯರ ನೆರವಿನಿಂದ ಬದಲಿಸುವಿರಿ. ಸಾಂಪ್ರದಾಯಿಕ ಕಲೆಗಳಲ್ಲಿ ಹೆಚ್ಚಿನ ಆಸಕ್ತಿ ಉಂಟಾಗುತ್ತದೆ.
ಪರಿಹಾರ: ಹಣೆಯಲ್ಲಿ ತಿಲಕವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಬಿಳಿ ಬಣ್ಣ
ಕುಂಭ ರಾಶಿ
ಹಣಕಾಸಿನ ವಿಚಾರದಲ್ಲಿ ಯಾರ ಮಾತನ್ನು ಒಪ್ಪುವುದಿಲ್ಲ. ಉತ್ತಮ ಆದಾಯ ಇರುತ್ತದೆ. ಉದ್ಯೋಗದಲ್ಲಿ ಉನ್ನತ ಅಧಿಕಾರ ನಿಮ್ಮದಾಗುತ್ತದೆ. ಕೂಡಿಟ್ಟ ಹಣವನ್ನು ಮಕ್ಕಳಿಗಾಗಿ ಖರ್ಚು ಮಾಡುವಿರಿ. ನಿಮ್ಮ ಮನದ ವಿಚಾರವನ್ನು ಬೇರೆಯವರಿಗೆ ತಿಳಿಸುವುದಿಲ್ಲ. ಯಾವುದೇ ಯೋಜನೆ ಇಲ್ಲದೆ ಕೆಲಸ ಕಾರ್ಯಗಳನ್ನು ಆರಂಭಿಸುವುದಿಲ್ಲ. ನಿಮ್ಮ ಕೆಲಸ ಕಾರ್ಯಗಳನ್ನು ಎಲ್ಲರೂ ಇಷ್ಟಪಡುತ್ತಾರೆ. ಬಡ ವಿದ್ಯಾರ್ಥಿಗಳ ಅಧ್ಯಯನಕ್ಕಾಗಿ ಹಣದ ಸಹಾಯ ಮಾಡುವಿರಿ. ನಿಮ್ಮ ಜೀವನದಲ್ಲಿ ದಿಢೀರನೇ ಅನೇಕ ಬದಲಾವಣೆಗಳು ಕಂಡುಬರಲಿವೆ. ಅನಾವಶ್ಯಕವಾಗಿ ಉಂಟಾಗುವ ಖರ್ಚು ವೆಚ್ಚಗಳಿಗೆ ಭಯಪಡುವುದಿಲ್ಲ. ಉತ್ತಮ ಹಣಕಾಸಿನ ನೆರವು ನಿಮಗಿರುತ್ತದೆ. ಕುಟುಂಬದ ಉನ್ನತಿಗಾಗಿ ಕೆಲಸ ಮಾಡುವಿರಿ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಆಸಕ್ತಿ ಇರುವುದಿಲ್ಲ. ನಿಮ್ಮ ತಪ್ಪಿಗೆ ಬೇರೆಯವರನ್ನು ದೂರುವಿರಿ.
ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಬೂದು ಬಣ್ಣ
ಮೀನ ರಾಶಿ
ನಿಮ್ಮಲ್ಲಿ ಹಠದ ಗುಣವಿರುತ್ತದೆ. ಆದರೆ ನೀವು ಮಾಡುವ ಕೆಲಸದ ಮೇಲೆ ಅಭಿಮಾನವಿರುತ್ತದೆ. ಯಾವುದೇ ವಿಚಾರದಲ್ಲಿ ದೃಢವಾದ ತೀರ್ಮಾನವನ್ನು ತೆಗೆದುಕೊಳ್ಳುವುದಿಲ್ಲ. ನೋಡಲು ಶಾಂತವಾಗಿ ಕಂಡರೂ ಸಿಡುಕಿನಿಂದ ವರ್ತಿಸುವಿರಿ. ದೈಹಿಕ ದೌರ್ಬಲ್ಯ ನಿಮ್ಮನ್ನು ಕಾಡುತ್ತದೆ. ಬೇರೆಯವರಿಂದ ಸಹಾಯ ಪಡೆಯಲು ಮನಸ್ಸು ಒಪ್ಪುವುದಿಲ್ಲ. ಉಷ್ಣ ವಾಯುವಿನ ದೋಷ ನಿಮ್ಮನ್ನು ಕಾಡುತ್ತದೆ. ಉತ್ತಮ ಆದಾಯ ಇರಲಿದೆ. ಸೋದರನ ಪಾಲುಗಾರಿಕೆಯ ವ್ಯಾಪಾರ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡುವಿರಿ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವಿರಿ. ಕೈ ಕಾಲುಗಳ ನೋವಿನಿಂದ ಬಳಲುವಿರಿ. ಉದ್ಯೋಗದಲ್ಲಿ ಅನಿರೀಕ್ಷಿತ ಬದಲಾವಣೆಗಳು ಕಂಡು ಬರಲಿದೆ. ಪತಿಯೊಂದಿಗೆ ಸಂತೋಷದಿಂದ ಜೀವನ ನಡೆಸುವಿರಿ. ಮಕ್ಕಳ ಯಶಸ್ಸು ನಿಮಗೆ ಆತ್ಮಶಕ್ತಿಯನ್ನು ಹೆಚ್ಚಿಸುತ್ತದೆ. ಕುಟುಂಬದ ಹಿರಿಯರ ಸಮ್ಮುಖದಲ್ಲಿ ಮಂಗಳ ಕಾರ್ಯವನ್ನು ಮಾಡುವಿರಿ.
ಪರಿಹಾರ: ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿ ದಿನದ ಕೆಲಸ ಆರಂಭಿಸಿ
ಅದೃಷ್ಟದ ಸಂಖ್ಯೆ: 1
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಕಂದು ಬಣ್ಣ
ಬರಹ: ಹೆಚ್. ಸತೀಶ್, ಜ್ಯೋತಿಷಿ, ಬೆಂಗಳೂರು
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ಸ್ತ್ರೀ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ವಿಭಾಗ