ಸ್ತ್ರೀ ವಾರ ಭವಿಷ್ಯ: ಸಿಂಹ ರಾಶಿಯವರು ಹೊಸ ವಾಹನ ಖರೀದಿಸುವ ಸಾಧ್ಯತೆ, ಕನ್ಯಾ ರಾಶಿಯವರಿಗೆ ಸ್ವಂತ ವ್ಯಾಪಾರದಲ್ಲಿ ಪ್ರಗತಿ ಇರುತ್ತೆ
ಸ್ತ್ರೀ ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ಮಹಿಳಾ ರಾಶಿಯವರಿಗೆ ಏನು ಫಲ? 1 ವಾರ ಭವಿಷ್ಯದ ವಿವರ ಇಲ್ಲಿದೆ.

Women Weekly Horoscope: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಏಪ್ರಿಲ್ 11 ರ ಶುಕ್ರವಾರದಿಂದ ಏಪ್ರಿಲ್ 17ರ ಗುರುವಾರದವರೆಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಸಿಂಹ ರಾಶಿ
ಉತ್ತಮ ಆದಾಯವಿದ್ದರೂ ಕುಟುಂಬದಲ್ಲಿ ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗುತ್ತವೆ. ಹಣಕಾಸಿನ ನಿರ್ವಹಣೆಯ ಜವಾಬ್ದಾರಿಯು ನಿಮ್ಮದಾಗುತ್ತದೆ. ಉದ್ಯೋಗಸ್ಥರಿಗೆ ಸಹೋದ್ಯೋಗಿಗಳ ಸಹಕಾರ ದೊರೆಯುವುದಿಲ್ಲ. ಹಠದ ಗುಣದಿಂದ ತಮ್ಮ ಗುರಿಯನ್ನು ಸುಲಭವಾಗಿ ತಲುಪುತ್ತಾರೆ. ಬಂಧು-ಬಳಗದವರಿಂದ ದೂರ ಉಳಿಯುವಿರಿ. ಕುಟುಂಬದಲ್ಲಿ ಉತ್ತಮ ಹೊಂದಾಣಿಕೆ ಕಂಡು ಬರುತ್ತದೆ. ರಕ್ತಕ್ಕೆ ಸಂಬಂಧಪಟ್ಟ ದೋಷದಿಂದ ಬಳಲುವಿರಿ. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಇರಲಿ. ಮನದಲ್ಲಿ ತಪ್ಪು ಮಾಡಬಹುದು ಎಂಬ ಭಯವಿರುತ್ತದೆ. ಹೊಸ ವಾಹನ ಕೊಳ್ಳುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳ ಜೊತೆಯಲ್ಲಿ ವಾದ ವಿವಾದಗಳು ಎದುರಾಗುತ್ತದೆ. ಸಿಡುಕಿನ ಗುಣದಿಂದ ಕುಟುಂಬದ ಬೇಸರಕ್ಕೆ ಕಾರಣರಾಗುವಿರಿ. ಕೋಪವನ್ನು ಕಡಿಮೆ ಮಾಡಿಕೊಂಡಲ್ಲಿ ಜೀವನದಲ್ಲಿ ಮುಂದುವರೆಯಬಹುದು.
ಪರಿಹಾರ: ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಹಳದಿ ಬಣ್ಣ
ಕನ್ಯಾ ರಾಶಿ
ಪತಿಯ ಜೊತೆಯಲ್ಲಿ ಅನಾವಶ್ಯಕವಾದ ವಾದ ವಿವಾದಗಳು ಕಂಡುಬರುತ್ತದೆ. ನಿಮ್ಮದೇ ತಪ್ಪಿನಿಂದ ಮನಸ್ಸಿನ ಮೇಲೆ ಹತೋಟಿ ಕಳೆದುಕೊಳ್ಳುವಿರಿ. ಕುಟುಂಬದಲ್ಲಿ ಬೇಸರದ ಛಾಯೆ ವ್ಯಾಪಿಸಿರುತ್ತದೆ. ಅನಾವಶ್ಯಕವಾಗಿ ಕೋಪಗೊಳ್ಳುವಿರಿ. ಮಕ್ಕಳ ಜೊತೆಯಲ್ಲಿ ಪ್ರೀತಿ ವಿಶ್ವಾಸದಿಂದ ವರ್ತಿಸುವಿರಿ. ಉದ್ಯೋಗದಲ್ಲಿ ಆತ್ಮೀಯರ ಸಹಾಯ ಸಹಕಾರ ದೊರೆಯುತ್ತದೆ. ಸ್ವಂತ ವ್ಯಾಪಾರ ವ್ಯವಹಾರ ಇದ್ದಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ಯಾರನ್ನು ಅವಲಂಬಿಸುವುದಿಲ್ಲ. ನಿಮ್ಮ ಮನಸ್ಸಿಗೆ ಸರಿ ಎನಿಸುವ ಕೆಲಸ ಕಾರ್ಯಗಳನ್ನು ಆಯ್ಕೆ ಮಾಡುವಿರಿ. ಕಫದ ತೊಂದರೆ ಇರುತ್ತದೆ. ಚರ್ಮದ ಸೌಂದರ್ಯ ಉಳಿಸಿಕೊಳ್ಳಲು ಪ್ರಯತ್ನಿಸಿ. ಆತ್ಮೀಯರ ಜೊತೆಗೂಡಿ ಸಣ್ಣ ಉದ್ದಿಮೆಯನ್ನು ಪ್ರಾರಂಭಿಸುವ ಯೋಜನೆ ರೂಪಿಸುವಿರಿ. ಸುಲಭವಾಗಿ ಬೇರೆಯವರ ಮಾತನ್ನು ಒಪ್ಪಿಕೊಳ್ಳುವುದಿಲ್ಲ.
ಪರಿಹಾರ: ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 3
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಹಸಿರು ಬಣ್ಣ
ತುಲಾ ರಾಶಿ
ಬುದ್ದಿವಂತಿಕೆಯಿಂದ ನಿಮ್ಮ ಕೆಲಸ ಕಾರ್ಯಗಳನ್ನು ಸಾಧಿಸುವಿರಿ. ಸಣ್ಣ ಪುಟ್ಟ ಲೋಪಗಳನ್ನು ದೊಡ್ಡದು ಮಾಡುವಿರಿ. ವಿರೋಧಿಗಳ ಆಟ ನಿಮ್ಮ ಬಳಿ ನಡೆಯುವುದಿಲ್ಲ. ಸತತ ಪ್ರಯತ್ನದಿಂದ ಬೇರೆಯವರ ಕೆಲಸದ ಲಾಭವನ್ನು ಪಡೆದುಕೊಳ್ಳುವಿರಿ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವಿರಿ. ಕುಟುಂಬದಲ್ಲಿನ ಹೆಚ್ಚಿನ ಜವಾಬ್ದಾರಿ ನಿಮ್ಮ ಪಾಲಾಗುತ್ತದೆ. ಮಂಗಳ ಕಾರ್ಯಗಳ ಜವಾಬ್ದಾರಿ ನಿಮ್ಮದಾಗುತ್ತದೆ. ನಿರೀಕ್ಷೆಯಂತೆ ಸ್ವಂತ ಕೆಲಸ ಕಾರ್ಯಗಳು ಮುಂದುವರೆಯಲಿವೆ. ನಗು ಮೊಗದಿಂದ ಎಲ್ಲರ ಮನಸ್ಸನ್ನು ಗೆಲ್ಲುವಿರಿ. ಮಕ್ಕಳ ಯಶಸ್ಸಿನಲ್ಲಿ ನಿಮ್ಮ ಸಂತೋಷವನ್ನು ಕಂಡುಕೊಳ್ಳುವಿರಿ. ಆರೋಗ್ಯವನ್ನು ಉಳಿಸಿಕೊಳ್ಳಲು ಇತಿಮಿತಿಯ ಆಹಾರ ಸೇವಿಸುವಿರಿ. ಇದರಿಂದ ದೈಹಿಕವಾಗಿ ನಿತ್ರಾಣಗೊಳ್ಳುವಿರಿ. ಉದ್ಯೋಗಸ್ಥರಿಗೆ ಮಧ್ಯಮಗತಿಯ ಫಲಿತಾಂಶಗಳು ದೊರೆಯುತ್ತವೆ.
ಪರಿಹಾರ: ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ನೀಲಿ ಬಣ್ಣ
ವೃಶ್ಚಿಕ ರಾಶಿ
ಮಧ್ಯ ವಯಸ್ಸಿನ ದಂಪತಿಗೆ ಸಂತಾನ ಲಾಭವಿದೆ. ಅನಿರೀಕ್ಷಿತವಾಗಿ ಅವಿವಾಹಿತರಿಗೆ ವಿವಾಹ ನಿಶ್ಚಯವಾಗುತ್ತದೆ. ಕಷ್ಟ ನಷ್ಟದ ಸಂದರ್ಭದಲ್ಲಿ ಪತಿಯಿಂದ ಪೂರ್ಣ ಸಹಕಾರ ದೊರೆಯುತ್ತದೆ. ನಿಮ್ಮ ಮಾತುಗಾರಿಕೆಯಿಂದ ಎಲ್ಲರ ಮನ ಗೆಲ್ಲುವಿರಿ. ಪಾಲುಗಾರಿಕೆಯ ವ್ಯಾಪಾರ ವ್ಯವಹಾರದಲ್ಲಿ ನಿಮ್ಮ ಪಾಲು ಹೆಚ್ಚಾಗುತ್ತದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ತಮ್ಮ ಗುರಿ ತಲುಪುತ್ತಾರೆ. ಉನ್ನತ ವಿದ್ಯಾಭ್ಯಾಸದ ಸೂಚನೆಗಳಿವೆ. ಎಲ್ಲರ ಮೇಲು ಅಧಿಕಾರ ಸಾಧಿಸಲು ಪ್ರಯತ್ನಿಸುವಿರಿ. ಶಾಸ್ತ್ರ ಸಂಪ್ರದಾಯಗಳಲ್ಲಿ ಆಸಕ್ತಿ ತೋರುವುದಿಲ್ಲ. ತಂದೆ ತಾಯಿಯ ಸುಖ ಜೀವನಕ್ಕೆ ಸಹಾಯ ಮಾಡುವಿರಿ. ಸಮಾಜದಲ್ಲಿ ಗೌರವಯುತ ಸ್ಥಾನಮಾನ ದೊರೆಯುತ್ತದೆ. ನಿಮ್ಮ ಒಪ್ಪಿಗೆ ಇಲ್ಲದೆ ಕುಟುಂಬದಲ್ಲಿ ಯಾವುದೇ ಕೆಲಸವು ನಡೆಯುವುದಿಲ್ಲ. ಉತ್ತಮ ಆರೋಗ್ಯವಿರುತ್ತದೆ.
ಪರಿಹಾರ: ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ನೇರಳೆ ಬಣ್ಣ
ಬರಹ: ಹೆಚ್. ಸತೀಶ್, ಜ್ಯೋತಿಷಿ, ಬೆಂಗಳೂರು
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ಸ್ತ್ರೀ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ವಿಭಾಗ