ಸ್ತ್ರೀ ವಾರ ಭವಿಷ್ಯ: ಧನು ರಾಶಿಯವರು ಆತ್ಮೀಯರಿಂದ ಹಣದ ಸಹಾಯ ಪಡೆಯುತ್ತಾರೆ, ಮಕರ ರಾಶಿಯವರಿಗೆ ನೆಮ್ಮದಿ ಇರುತ್ತೆ
ಸ್ತ್ರೀ ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ಮಹಿಳಾ ರಾಶಿಯವರಿಗೆ ಏನು ಫಲ? ಒಂದು ವಾರ ಭವಿಷ್ಯ ಇಲ್ಲಿದೆ.

Women Weekly Horoscope: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಫೆಬ್ರವರಿ 14ರ ಶುಕ್ರವಾರದಿಂದ 20ರ ಗುರುವಾರದವರೆಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಧನು ರಾಶಿ
ಯಾವುದೇ ವಿಚಾರದಲ್ಲಿಯೂ ದೃಢವಾದ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ. ಮಾತುಕತೆ ಅಥವಾ ಸಂಧಾನದಿಂದ ಕುಟುಂಬದ ಸಮಸ್ಯೆಯು ದೂರವಾಗುತ್ತದೆ. ಆರೋಗ್ಯದಲ್ಲಿ ಸಣ್ಣಪುಟ್ಟ ತೊಂದರೆ ಎದುರಾಗುತ್ತದೆ. ಆತ್ಮೀಯರಿಂದ ಹಣದ ಸಹಾಯ ಪಡೆಯುವಿರಿ. ಸಮಾಜ ಸೇವೆ ಮಾಡುವ ಇಂಗಿತ ಇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭವಿರುತ್ತದೆ. ಉದ್ಯೋಗದಲ್ಲಿ ನಿರೀಕ್ಷಿತ ಅನುಕೂಲತೆ ಕಂಡು ಬರುತ್ತದೆ. ಆಕಸ್ಮಿಕ ಧನ ಲಾಭವಿರುತ್ತದೆ. ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ಸಾಗಲಿವೆ. ಸೋದರ ಅಥವಾ ಸೋದರಿಯಿಂದ ಹಣದ ಸಹಾಯ ದೊರೆಯುತ್ತದೆ. ಕುಟುಂಬ ನಿರ್ವಹಣೆಯ ಸಂಪೂರ್ಣ ಜವಾಬ್ದಾರಿಯನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ. ತಡವಾದ ನಿರ್ಧಾರಗಳಿಂದ ಕೆಲವೊಂದು ಅವಕಾಶಗಳು ದೂರವಾಗುತ್ತವೆ. ಹೆಚ್ಚಿನ ಪ್ರಯತ್ನದಿಂದ ಮಾತ್ರ ಉದ್ಯೋಗ ಬದಲಿಸಲು ಸಾಧ್ಯವಾಗುತ್ತದೆ
ಪರಿಹಾರ: ನಿಮ್ಮ ತಾಯಿಯವರ ಆಶೀರ್ವಾದ ಪಡೆದು ದಿನದ ಕೆಲಸ ಕಾರ್ಯಗಳನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ: 1
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಕೇಸರಿ ಬಣ್ಣ
ಮಕರ ರಾಶಿ
ಆಡುವ ಮಾತಿನಲ್ಲಿ ಎಲ್ಲರ ಮನ ಗೆಲ್ಲುವಿರಿ. ಸಮಯಕ್ಕೆ ಅನುಸಾರವಾಗಿ ನಡೆಯುವ ಕಾರಣ ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ಆರಂಭಿಸಿದ ಕೆಲಸ ಕಾರ್ಯಗಳಲ್ಲಿ ಸುಲಭವಾಗಿ ಜಯ ಲಭಿಸುತ್ತದೆ. ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ದಾಂಪತ್ಯ ಜೀವನದಲ್ಲಿ ನೆಮ್ಮದಿ ನೆಲೆಸಿರುತ್ತದೆ. ಕುಟುಂಬದ ಜವಾಬ್ದಾರಿಗಳಿಂದ ದೂರ ಉಳಿಯುವಿರಿ. ಬೇರೆಯವರ ಸಹಾಯವಿಲ್ಲದೆ ಸ್ವತಂತ್ರವಾಗಿ ಯಾವುದೇ ಕೆಲಸ ಕಾರ್ಯಗಳನ್ನು ನಿರ್ವಹಿಸಲಾರಿರಿ. ಹಣಕಾಸಿನ ವಿಚಾರದಲ್ಲಿ ಬೇರೆಯವರನ್ನು ನಂಬುವುದಿಲ್ಲ. ಉತ್ತಮ ಆರೋಗ್ಯವಿರುತ್ತದೆ. ಉದ್ಯೋಗದಲ್ಲಿ ನಿಧಾನಗತಿಯ ಪ್ರಗತಿ ಕಂಡು ಬರುತ್ತದೆ. ಸಂಚಾರದಿಂದ ಲಾಭವಿದೆ. ನಿಮಗೆ ಇಷ್ಟವೆನಿಸುವ ಒಡವೆ ವಸ್ತ್ರವನ್ನು ಕೊಳ್ಳುವಿರಿ. ಅವಿವಾಹಿತರಿಗೆ ವಿವಾಹ ಯೋಗವಿದೆ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.
ಪರಿಹಾರ: ದಿನ ನಿತ್ಯ ಬಳಸುವ ವಾಹನವನ್ನು ಶುಚಿಗೊಳಿಸಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ: 12
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ತಿಳಿಹಸಿರು ಬಣ್ಣ
ಕುಂಭ ರಾಶಿ
ಸ್ವಂತ ಪ್ರಯತ್ನದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಗಳಿಸುವಿರಿ. ನಿಮ್ಮ ಮನಸ್ಸಿನಲ್ಲಿರುವ ವಿಚಾರವನ್ನು ಬೇರೆಯವರಿಗೆ ತಿಳಿಸುವುದಿಲ್ಲ. ಒಳ್ಳೆಯ ಮನಸ್ಸಿದ್ದರೂ ಆಡುವ ಮಾತು ಬೇರೆಯವರಲ್ಲಿ ಬೇಸರ ಮೂಡಿಸುತ್ತದೆ. ಕುಟುಂಬದ ಭೂವಿವಾದವನ್ನು ಬಗೆಹರಿಸುವಿರಿ. ಉದ್ಯೋಗದಲ್ಲಿ ನಿಧಾನಗತಿಯ ಪ್ರಗತಿ ಕಂಡು ಬರುತ್ತದೆ. ಕುಟುಂಬದ ಹಿರಿಯ ಸದಸ್ಯರಲ್ಲಿ ಅನಾರೋಗ್ಯವಿರುತ್ತದೆ. ಕ್ಷಮಾ ಗುಣ ಇರುವ ಕಾರಣ ಕುಟುಂಬದಲ್ಲಿ ಶಾಂತಿ ನೆಮ್ಮದಿ ನಡೆಸುತ್ತದೆ. ಕೈ ಕಾಲುಗಳಿಗೆ ಪೆಟ್ಟಾಗಬಹುದು ಅಥವಾ ಕೈಕಾಲುಗಳಲ್ಲಿ ನೋವು ಕಂಡು ಬರುತ್ತದೆ. ಹೊಸ ವಾಹನವನ್ನು ಕೊಳ್ಳುವ ಯೋಜನೆ ಕೈಗೂಡಲಿದೆ. ಆತ್ಮೀಯರ ಸಹಾಯದಿಂದ ಖ್ಯಾತ ಕಂಪನಿಯಲ್ಲಿ ಉದ್ಯೋಗ ದೊರೆಯುತ್ತದೆ. ಅನಿರೀಕ್ಷಿತ ಧನ ಲಾಭವಿರುತ್ತದೆ. ನಿಮ್ಮ ತಪ್ಪಿಗೆ ಬೇರೆಯವರನ್ನು ಹೊಣೆ ಮಾಡುವಿರಿ. ಮನೆಯನ್ನು ಆಕರ್ಷಕ ವಸ್ತುಗಳಿಂದ ಸಿಂಗಾರಗೊಳಿಸುವಿರಿ.
ಪರಿಹಾರ: ಹಳದಿ ಬಣ್ಣದ ಬಟ್ಟೆಯನ್ನು ಧರಿಸದಿರಿ.
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಬಿಳಿ ಬಣ್ಣ
ಮೀನ ರಾಶಿ
ಒಮ್ಮೆ ತೆಗೆದುಕೊಂಡ ನಿರ್ಧಾರಗಳನ್ನು ಅನಾವಶ್ಯಕವಾಗಿ ಬದಲಿಸುವಿರಿ. ಆತ್ಮೀಯರೊಂದಿಗೆ ಮನಸ್ತಾಪ ಉಂಟಾಗುತ್ತದೆ. ಮನದಲ್ಲಿ ಯಾವುದಾದರೂ ಒಂದು ವಿಚಾರಕ್ಕೆ ಯೋಚನೆ ಇರುತ್ತದೆ. ಉದ್ಯೋಗವನ್ನು ಬದಲಿಸುವಿರಿ. ಸಣ್ಣ ಪ್ರಮಾಣದ ವ್ಯಾಪಾರವನ್ನು ಆರಂಭಿಸುವಿರಿ. ಅನಾವಶ್ಯಕವಾದ ಖರ್ಚು ವೆಚ್ಚಗಳಿರುತ್ತವೆ. ಆದಾಯಕ್ಕೆ ತಕ್ಕಂತಹ ಖರ್ಚು ವೆಚ್ಚಗಳಿರುತ್ತವೆ. ಬಂಧು-ಬಳಗದವರ ಜೊತೆಯಲ್ಲಿ ಉತ್ತಮ ಬಾಂಧವ್ಯ ಇರುವುದಿಲ್ಲ. ಉದ್ಯೋಗದಲ್ಲಿ ನಿರೀಕ್ಷಿಸಿದ ಮಟ್ಟದ ಯಶಸ್ಸು ದೊರೆಯುತ್ತದೆ. ಅನಾರೋಗ್ಯ ಇರುತ್ತದೆ. ದಂಪತಿ ನಡುವೆ ವಾದ ವಿವಾದಗಳಿದ್ದರೂ ಯಾವುದೇ ತೊಂದರೆ ಆಗುವುದಿಲ್ಲ. ಪ್ರಯತ್ನ ಮಾಡಿದ ಕೆಲಸ ಕಾರ್ಯಗಳಲ್ಲಿ ಸೋಲನ್ನು ಒಪ್ಪಿಕೊಳ್ಳುವುದಿಲ್ಲ. ಮಕ್ಕಳಿಗೆ ಬೇಕಾದಂತಹ ಅನುಕೂಲತೆಗಳನ್ನು ಪೂರೈಸುವಿರಿ. ಸ್ವಂತ ಉದ್ದಿಮೆ ಇದ್ದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಹಣವನ್ನು ಉಳಿಸುವಲ್ಲಿ ವಿಫಲರಾಗುವಿರಿ.
ಪರಿಹಾರ: ಸೋದರ ಸೋದರಿಯರ ಕೆಲಸದಲ್ಲಿ ಸಹಾಯಮಾಡಿದಲ್ಲು ಶುಭ ಉಂಟಾಗುತ್ತದೆ.
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿಕ್ಕು: ಈಶಾನ್ಯ
ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ
ಬರಹ: ಹೆಚ್. ಸತೀಶ್, ಜ್ಯೋತಿಷಿ, ಬೆಂಗಳೂರು
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ಸ್ತ್ರೀ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ವಿಭಾಗ