ಸ್ತ್ರೀ ವಾರ ಭವಿಷ್ಯ: ಮೇಷ ರಾಶಿಯವರು ಇಷ್ಟವಾದ ಆಭರಣಖರೀದಿಸುತ್ತಾರೆ, ಮಿಥುನ ರಾಶಿಯವರಿಗೆ ಆತ್ಮೀಯರೊಂದಿಗೆ ಮನಸ್ತಾಪ ಇರುತ್ತೆ
ಸ್ತ್ರೀ ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ಮಹಿಳಾ ರಾಶಿಯವರಿಗೆ ಏನು ಫಲ? 1 ವಾರ ಭವಿಷ್ಯದ ವಿವರ ಇಲ್ಲಿದೆ.

Women Weekly Horoscope: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಫೆಬ್ರವರಿ 14ರ ಶುಕ್ರವಾರದಿಂದ 20ರ ಗುರುವಾರದವರೆಗೆ ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಮೇಷ ರಾಶಿ
ಕುಟುಂಬದ ಆರ್ಥಿಕ ಪರಿಸ್ಥಿತಿಯ ನಿಯಂತ್ರಣವು ನಿಮ್ಮದಾಗುತ್ತದೆ. ಉದ್ಯೋಗಿಗಳಿಗೆ ನಿರೀಕ್ಷಿತ ಸ್ಥಾನಮಾನವು ದೊರೆಯುತ್ತದೆ. ಉದ್ಯಮಿಗಳಿಗೆ ಉತ್ತಮ ಆದಾಯ ದೊರೆಯಲಿದೆ. ನಿಮ್ಮ ಮನಸ್ಸಿಗೆ ಒಪ್ಪುವ ಆಭರಣವನ್ನು ಖರೀದಿ ಮಾಡುವಿರಿ. ನಿಮ್ಮಿಂದ ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ವಿರೋಧಿಗಳನ್ನು ಆತ್ಮೀಯರನ್ನಾಗಿ ಬದಲಿಸುವಿರಿ. ಆರೋಗ್ಯದಲ್ಲಿ ಏರುಪೇರು ಕಂಡು ಬರುತ್ತದೆ. ಕುಟುಂಬದವರೊಂದಿಗೆ ಕಿರು ಪ್ರವಾಸ ತೆರಳುವ ಸಾಧ್ಯತೆಗಳಿವೆ. ಎದುರಾಗುವ ಅಡ್ಡಿ ಆತಂಕಗಳನ್ನು ಗೆದ್ದು ಜೀವನದಲ್ಲಿ ಮುಂದುವರೆಯುವಿರಿ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಆಸಕ್ತಿ ಇರುತ್ತದೆ. ಖರ್ಚುವೆಚ್ಚದ ಬಗ್ಗೆ ಅನಾವಶ್ಯಕ ಮಾನಸಿಕ ಒತ್ತಡ ಇರಲಿದೆ. ಮಕ್ಕಳ ವಿಚಾರದಲ್ಲಿ ಬೇಸರ ಮೂಡಲಿದೆ. ಸುಲಭವಾಗಿ ಸೋಲುವುದಿಲ್ಲ. ಯಾವುದೇ ವಿಚಾರದಲ್ಲಿಯಾದರೂ ಆತ್ಮವಿಶ್ವಾಸದಿಂದ ಮುಂದುವರೆಯುವಿರಿ.
ಪರಿಹಾರ: ಬೆಳಗಿನ ವೇಳೆಯಲ್ಲಿ ಮನೆಯ ಬಳಿ ಇರುವ ಕೆಂಪು ಬಣ್ಣದ ಗಿಡಗಳಿಗೆ ನೀರನ್ನು ಹಾಕಿ.
ಅದೃಷ್ಟದ ಸಂಖ್ಯೆ: 5
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಕೆಂಪು ಬಣ್ಣ
ವೃಷಭ ರಾಶಿ
ಈ ವಾರ ಒತ್ತಾಯದಿಂದ ಮಾಡದ ತಪ್ಪನ್ನು ಒಪ್ಪಿಕೊಳ್ಳುವಿರಿ. ಕುಟುಂಬದ ಸದಸ್ಯರ ಪ್ರೀತಿ ವಿಶ್ವಾಸವು ನಿಮ್ಮದಾಗುತ್ತದೆ. ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗಲಿವೆ. ನೆರೆಹೊರೆಯವರೊಂದಿಗೆ ವಾದ ವಿವಾದಗಳು ಉಂಟಾಗಬಹುದು. ಆತ್ಮೀಯರಿಂದ ಪಡೆದ ಹಣವನ್ನು ಹಿಂತಿರುಗಿಸುವಿರಿ. ಸ್ವಂತ ವ್ಯಾಪಾರ ವ್ಯವಹಾರವಿದ್ದಲ್ಲಿ ಉತ್ತಮ ಆದಾಯ ಇರುತ್ತದೆ. ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯುತ್ತವೆ. ಉದ್ಯೋಗಿಗಳಿಗೆ ಕೆಲಸ ನಿರ್ವಹಿಸಲು ಅಡ್ಡಿ ಆತಂಕವು ಎದುರಾಗುತ್ತದೆ. ಆತಂಕದ ಪರಿಸ್ಥಿತಿ ಎದುರಾದರೂ ಧೈರ್ಯಗೆಡುವುದಿಲ್ಲ. ಕ್ರಮೇಣವಾಗಿ ಹಣಕಾಸಿನ ಪರಿಸ್ಥಿತಿಯು ಸುಧಾರಿಸುತ್ತದೆ. ಮಕ್ಕಳ ಮನಸ್ಸನ್ನು ಅರಿತು ಬಾಳುವಿರಿ. ಕುಟುಂಬದಲ್ಲಿ ಸದಾಕಾಲ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ಆರೋಗ್ಯದಲ್ಲಿ ಅಲ್ಪ ಪ್ರಮಾಣದ ಏರುಪೇರು ಕಂಡು ಬರುತ್ತದೆ. ಅಧಿಕಾರಿಗಳಿಗೆ ಹೆಚ್ಚಿನ ಜವಾಬ್ದಾರಿ ದೊರೆಯುತ್ತದೆ.
ಪರಿಹಾರ: ಬೆಳ್ಳಿಯ ಲೋಟದಲ್ಲಿ ನೀರು ಅಥವಾ ಹಾಲನ್ನು ಕುಡಿಯಿರಿ.
ಅದೃಷ್ಟದ ಸಂಖ್ಯೆ: 8
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ನೀಲಿ ಬಣ್ಣ
ಮಿಥುನ ರಾಶಿ
ಹಣಕಾಸಿನ ಕೊರತೆ ಕಂಡುಬರುವುದಿಲ್ಲ. ಮನದಲ್ಲಿ ಒಂದು ರೀತಿಯ ಆತಂಕದ ಮನೋಭಾವನೆ ಇರುತ್ತದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಆತ್ಮೀಯರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ದುಡುಕುತನ ತೋರದೆ ಸಹನೆಯಿಂದ ಬಾಳುವಿರಿ. ಮನೆಯಲ್ಲಿರುವ ಚಿಕ್ಕ ಮಕ್ಕಳಿಗೆ ಅನಾರೋಗ್ಯವಿರುತ್ತದೆ. ಮಾನಸಿಕ ಒತ್ತಡದಿಂದ ಬಳಲುವಿರಿ. ನಿರೀಕ್ಷಿಸಿದ ಸಮಯದಲ್ಲಿ ಆರಂಭಿಸುವ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ. ಮನೆಯಲ್ಲಿ ನಡೆಯಬೇಕಿದ್ದ ಮಂಗಳ ಕಾರ್ಯವೊಂದು ಅಪೂರ್ಣಗೊಳ್ಳುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ಕಿವಿಗೆ ಸಂಬಂಧಿಸಿದ ತೊಂದರೆ ಎದುರಾಗುತ್ತದೆ. ಯಾತ್ರಾಸಳಕ್ಕೆ ಭೇಟಿ ನೀಡುವಿರಿ. ಉದ್ಯೋಗದಲ್ಲಿನ ಅಡ್ಡಿ ಆತಂಕವು ದೂರವಾಗುತ್ತದೆ. ಬಿಡುವಿಲ್ಲದ ಕೆಲಸ ಕಾರ್ಯಗಳಿಂದ ಬೇಸರ ಮೂಡುತ್ತದೆ.
ಪರಿಹಾರ: ಹಿರಿಯರ ಕೆಲಸ ಕಾರ್ಯಗಳಲ್ಲಿ ಸಹಾಯ ಮಾಡಿ.
ಅದೃಷ್ಟದ ಸಂಖ್ಯೆ: 2
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಕೆಂಪು ಮಿಶ್ರಿತ ಬಿಳಿ ಬಣ್ಣ
ಕಟಕ ರಾಶಿ
ಉದ್ಯೋಗದಲ್ಲಿ ಉನ್ನತ ಅಧಿಕಾರ ದೊರಯುತ್ತದೆ. ಕ್ರಮೇಣವಾಗಿ ಹಣಕಾಸಿನ ವಿಚಾರದಲ್ಲಿ ಪ್ರಗತಿ ಕಂಡುಬರುತ್ತದೆ. ಮಕ್ಕಳೊಂದಿಗೆ ಸಂತಸದಿಂದ ಬಾಳುವಿರಿ. ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ಹಣಕಾಸಿನ ತೊಂದರೆ ಕಂಡುಬರುವುದಿಲ್ಲ. ಆರಂಭಿಸಿದ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುತ್ತದೆ. ಆತ್ಮೀಯರೊಬ್ಬರು ನಿಮ್ಮಿಂದ ದೂರವಾಗುತ್ತಾರೆ. ಆರಂಭಿಸುವ ಕೆಲಸ ಕಾರ್ಯಗಳಲ್ಲಿ ಆರಂಭದಲ್ಲಿ ಎರಡು ತೊಡರು ಇರುತ್ತದೆ. ಉತ್ತಮ ಆದಾಯವಿದ್ದರೂ ಹಣವನ್ನು ಉಳಿಸಲು ಸಾಧ್ಯವಾಗುವುದಿಲ್ಲ. ರಕ್ತಕ್ಕೆ ಸಂಬಂಧಿಸಿದ ಅನಾರೋಗ್ಯದಿಂದ ಬಳಲುವಿರಿ. ಸಹನೆಯಿಂದ ವರ್ತಿಸಿದಷ್ಟು ಒಳ್ಳೆಯದು. ಮಕ್ಕಳ ಬಗ್ಗೆ ಅನಾವಶ್ಯಕ ಯೋಚನೆ ಮಾಡುವಿರಿ. ಗೃಹಿಣಿಯರಿಗೆ ಬಿಡುವಿಲ್ಲದ ಕೆಲಸವಿರುತ್ತದೆ. ಆದ್ದರಿಂದ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಇರಬೇಕು. ಸದಸ್ಯರ ಜೊತೆಯಲ್ಲಿ ಯಾತ್ರಾ ಸ್ಥಳಕ್ಕೆ ಭೇಟಿ ನೀಡುವಿರಿ.
ಪರಿಹಾರ: ಹತ್ತು ವರ್ಷದ ಒಳಗಿನ ಹೆಣ್ಣುಮಕ್ಕಳಿಗೆ ಸಿಹಿತಿಂಡಿ ನೀಡಿರಿ.
ಅದೃಷ್ಟದ ಸಂಖ್ಯೆ: 5
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಹಾಲಿನ ಬಣ್ಣ
ಬರಹ: ಹೆಚ್. ಸತೀಶ್, ಜ್ಯೋತಿಷಿ, ಬೆಂಗಳೂರು
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ಸ್ತ್ರೀ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ವಿಭಾಗ