ಸ್ತ್ರೀ ವಾರ ಭವಿಷ್ಯ: ಕನ್ಯಾ ರಾಶಿಯವರ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತೆ, ತುಲಾ ರಾಶಿಯವರಿಗೆ ಹಣಕಾಸಿನ ಕೊರತೆ ಎದುರಾಗಲಿದೆ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಸ್ತ್ರೀ ವಾರ ಭವಿಷ್ಯ: ಕನ್ಯಾ ರಾಶಿಯವರ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತೆ, ತುಲಾ ರಾಶಿಯವರಿಗೆ ಹಣಕಾಸಿನ ಕೊರತೆ ಎದುರಾಗಲಿದೆ

ಸ್ತ್ರೀ ವಾರ ಭವಿಷ್ಯ: ಕನ್ಯಾ ರಾಶಿಯವರ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತೆ, ತುಲಾ ರಾಶಿಯವರಿಗೆ ಹಣಕಾಸಿನ ಕೊರತೆ ಎದುರಾಗಲಿದೆ

ಸ್ತ್ರೀ ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ಮಹಿಳಾ ರಾಶಿಯವರಿಗೆ ಏನು ಫಲ? ಒಂದು ವಾರ ಭವಿಷ್ಯ ಇಲ್ಲಿದೆ.

Women Weekly Horoscope: ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ವಾರ ಭವಿಷ್ಯ ಇಲ್ಲಿದೆ.
Women Weekly Horoscope: ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ವಾರ ಭವಿಷ್ಯ ಇಲ್ಲಿದೆ.

Women Weekly Horoscope: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಫೆಬ್ರವರಿ 14ರ ಶುಕ್ರವಾರದಿಂದ 20ರ ಗುರುವಾರದವರೆಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಸಿಂಹ ರಾಶಿ

ಕೋಪ ಬರುವುದಿಲ್ಲ. ಆದರೆ ಕೋಪ ಬಂದಲ್ಲಿ ಉದ್ವೇಗದಿಂದ ವರ್ತಿಸುವಿರಿ. ಪ್ರತಿಯೊಂದು ವಿಚಾರಗಳಲ್ಲಿ ತಪ್ಪನ್ನು ಕಂಡುಹಿಡಿಯುವಿರಿ. ಇದರಿಂದಾಗಿ ಮಾನಸಿಕ ಒತ್ತಡಲಿಕ್ಕೆ ಒಳಗಾಗುವಿರಿ. ಉದ್ಯೋಗದಲ್ಲಿ ಅಧಿಕಾರಿಗಳ ಜೊತೆಯಲ್ಲಿ ವಾದ ವಿವಾದವಿರುತ್ತದೆ. ದಿನ ಕಳೆದಂತೆ ಸಹಜ ಸ್ಥಿತಿಗೆ ಮರಳುವಿರಿ. ರಕ್ತಕ್ಕೆ ಸಂಬಂಧಪಟ್ಟ ದೋಷವಿದ್ದಲ್ಲಿ ಎಚ್ಚರಿಕೆ ವಹಿಸಿ. ಮಕ್ಕಳಿಗೆ ಅವಶ್ಯಕವಾದ ಅನುಕೂಲತೆಯನ್ನು ಕಲ್ಪಿಸುವಿರಿ. ಉದ್ಯೋಗ ನಿಮಿತ್ತ ಅಥವಾ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ತೆರಳುವ ಅವಕಾಶ ದೊರೆಯುತ್ತದೆ. ದಾಂಪತ್ಯದಲ್ಲಿ ಬೇಸರದ ಸನ್ನಿವೇಶವಿರುತ್ತದೆ. ಬೇರೆಯವರ ಸಲಹೆಯನ್ನು ಸುಲಭವಾಗಿ ಒಪ್ಪುವುದಿಲ್ಲ. ಆದಾಯಕ್ಕಿಂತಲೂ ಖರ್ಚು ವೆಚ್ಚಗಳು ಅಧಿಕವಾಗಿರುತ್ತವೆ. ಗೃಹಿಣಿಯರು ನೆಮ್ಮದಿಯಿಂದ ಜೀವನ ನಡೆಸುತ್ತಾರೆ. ಕೂಡಿಟ್ಟ ಹಣವನ್ನು ಕುಟುಂಬಕ್ಕಾಗಿ ಖರ್ಚು ಮಾಡಬೇಕಾದ ಸಂದರ್ಭ ಬರಲಿದೆ.

ಪರಿಹಾರ: ಬೆಳಗಿನ ವೇಳೆಯಲ್ಲಿ ಗುರುಹಿರಿಯರ ಆಶೀರ್ವಾದ ಪಡೆಯಿರಿ.
ಅದೃಷ್ಟದ ಸಂಖ್ಯೆ: 1
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಹಳದಿ ಬಣ್ಣ

ಕನ್ಯಾ ರಾಶಿ

ಆರ್ಥಿಕ ಪರಿಸ್ಥಿತಿಯಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ. ಕುಟುಂಬದಲ್ಲಿ ಸಂತೋಷ ಸಂಭ್ರಮ ಇರುತ್ತದೆ. ಆರೋಗ್ಯದಲ್ಲಿ ಏರಿಳಿತ ಕಂಡು ಬರಲಿದೆ. ಉದ್ಯೋಗಸ್ಥರಿಗೆ ಉನ್ನತ ಅಧಿಕಾರ ದೊರೆತು ಸ್ಥಳ ಬದಲಾವಣೆ ಆಗಲಿದೆ. ಆರಂಭಿಸುವ ಕೆಲಸ ಕಾರ್ಯಗಳಿಗೆ ಆತ್ಮೀಯರ ನೆರವು ದೊರೆಯುತ್ತದೆ. ಸ್ವಂತ ವ್ಯಾಪಾರ ವ್ಯವಹಾರವಿದ್ದಲ್ಲಿ ಉತ್ತಮ ಲಾಭವಿರುತ್ತದೆ. ದಂಪತಿ ನಡುವೆ ಹೊಂದಾಣಿಕೆ ಕಂಡು ಬರುತ್ತದೆ. ಅನಾವಶ್ಯಕ ಪ್ರಯಾಣದಿಂದ ಬೇಸರ ಉಂಟಾಗುತ್ತದೆ. ಮನದಲ್ಲಿ ಯಾವುದಾದರೂ ಒಂದು ಯೋಚನೆ ಕಾಡಲಿದೆ. ಸ್ವಂತ ವ್ಯಾಪಾರ ವ್ಯವಹಾರ ಉಳ್ಳವರು ಅನಿರೀಕ್ಷಿತ ಲಾಭವನ್ನು ಗಳಿಸುತ್ತಾರೆ. ವಿದ್ಯಾರ್ಥಿಗಳು ಪ್ರಯತ್ನಕ್ಕೆ ತಕ್ಕಂತಹ ಫಲಗಳನ್ನು ಪಡೆಯುತ್ತಾರೆ. ಸಣ್ಣಪುಟ್ಟ ಕೆಲಸ ಕಾರ್ಯಗಳನ್ನು ಸಹ ಹೆಚ್ಚಿನ ಶ್ರದ್ಧೆಯಿಂದ ಪೂರ್ಣಗೊಳಿಸುವಿರಿ.

ಪರಿಹಾರ: ಮೊದಲು ಸಿಹಿ ತಿಂದು ನೀರು ಕುಡಿದು ನಂತರ ನಿಮ್ಮ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ: 3
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ನೀಲಿ ಬಣ್ಣ

ತುಲಾ ರಾಶಿ

ಉದರ ಸಂಬಂಧಿತ ದೋಷದಿಂದ ಬಳಲುವಿರಿ. ಬೇರೆಯವರನ್ನು ಸುಲಭವಾಗಿ ನಂಬುವುದಿಲ್ಲ. ಇದರಿಂದಾಗಿ ನಿಮ್ಮ ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ಸಾಗಲಿವೆ. ಬಂಧು ಬಳಗದವರಿಂದ ದೂರ ಉಳಿಯುವಿರಿ. ಸಭೆ ಸಮಾರಂಭಗಳಲ್ಲಿ ಗೌರವಯುತ ಸ್ಥಾನ ದೊರೆಯುತ್ತದೆ. ಕುಟುಂಬದ ಹಣಕಾಸಿನ ಕೊರತೆಗೆ ಪರಿಹಾರ ಕಂಡುಹಿಡಿಯುವಿರಿ. ನಿಮ್ಮಿಂದಾಗಿ ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ಅನಾವಶ್ಯಕವಾದ ಚಿಂತೆ ನಿಮ್ಮನ್ನು ಕಾಡುತ್ತದೆ. ಮಕ್ಕಳ ಬಗ್ಗೆ ಅನಾವಶ್ಯಕ ಯೋಚನೆ ಇರುತ್ತದೆ. ಉದ್ಯೋಗಸ್ಥರಿಗೆ ಸಹೋದ್ಯೋಗಿಗಳಿಂದ ಆತಂಕದ ಪರಿಸ್ಥಿತಿ ಎದುರಾಗಲಿದೆ. ಮಕ್ಕಳ ವಿಚಾರವಾಗಿ ಆತ್ಮೀಯರೊಂದಿಗೆ ಮನಸ್ತಾಪ ಉಂಟಾಗುತ್ತದೆ. ಆತುರದಿಂದ ಯಾವುದೇ ತೀರ್ಮಾನವನ್ನು ತೆಗೆದುಕೊಳ್ಳದಿರಿ. ದುಡುಕುತನದ ಮಾತುಕತೆಯಿಂದ ಹಣಕಾಸಿನ ವಿಚಾರದಲ್ಲಿ ವಿವಾದವು ಉಂಟಾಗುವ ಸಾಧ್ಯತೆಗಳಿವೆ.

ಪರಿಹಾರ: ಸೋದರನ ಕೆಲಸದಲ್ಲಿ ಬಾಗಿಯಾಗಿ ಅಥವ ಸೂಕ್ತ ಸಲಹೆಯನ್ನು ನೀಡುವುದು ಒಳ್ಳೆಯದು
ಅದೃಷ್ಟದ ಸಂಖ್ಯೆ: 6
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಕೆಂಪು ಮಿಶ್ರಿತ ಹಳದಿ ಬಣ್ಣ

ವೃಶ್ಚಿಕ ರಾಶಿ

ಅಗತ್ಯ ಇರುವಷ್ಟು ಹಣವನ್ನು ಸಂಪಾದಿಸಬಲ್ಲಿರಿ. ಹಣಕಾಸಿನ ತೊಂದರೆಯೂ ದೂರವಾಗುತ್ತದೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಕುಟುಂಬದಲ್ಲಿ ವಿವಾಹದ ಮಾತುಕತೆ ನಡೆಯುತ್ತದೆ. ಮಕ್ಕಳ ಜೊತೆಯಲ್ಲಿ ಸಂತಸದಿಂದ ಬಾಳುವಿರಿ. ವಿದ್ಯಾರ್ಥಿಗಳು ವಿಶೇಷವಾದ ಸಾಧನೆಯನ್ನು ಮಾಡಲಿದ್ದಾರೆ. ಸ್ವಂತ ಉದ್ದಿಮೆ ಇದ್ದಲ್ಲಿ ಹೆಚ್ಚಿನ ವರಮಾನವಿರುತ್ತದೆ. ಉದ್ಯೋಗಸ್ಥರಿಗೆ ಸಹೋದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯ ಇರುವುದಿಲ್ಲ. ಸ್ವಂತ ಕೆಲಸದ ಕಾರಣ ಕುಟುಂಬದಿಂದ ಕೆಲದಿನಗಳ ಕಾಲ ದೂರ ಉಳಿಯಬೇಕಾಗುತ್ತದೆ. ಆತ್ಮೀಯರಿಗೆ ಹಣದ ಸಹಾಯ ಮಾಡುವಿರಿ. ನಿಮಗೆ ಆತ್ಮೀಯರಿಂದ ತೊಂದರೆಯಾಗುವ ಸಾಧ್ಯತೆ ಇದೆ. ಉತ್ತಮ ಪ್ರಯತ್ನವಿದ್ದರೂ ನಿಮ್ಮ ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ಸಾಗಲಿವೆ. ಕುಟುಂಬದ ಹಿರಿಯರ ಜೊತೆಯಲ್ಲಿ ಅನಾವಶ್ಯಕ ವಾದ ವಿವಾದಗಳು ಇರುತ್ತವೆ.

ಪರಿಹಾರ: ಗುರುಗಳ ಆಶೀರ್ವಾದ ಪಡೆದು ದಿನದ ಕೆಲಸ ಕಾರ್ಯಗಳನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ: 11
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಕೆಂಪು ಬಣ್ಣ

ಬರಹ: ಹೆಚ್‌. ಸತೀಶ್‌, ಜ್ಯೋತಿಷಿ, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ಸ್ತ್ರೀ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Raghavendra M Y

TwittereMail
ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.