ಸ್ತ್ರೀ ವಾರ ಭವಿಷ್ಯ: ಧನು ರಾಶಿಯವರಿಗೆ ಹಣದ ಸಹಾಯ ದೊರೆಯುತ್ತೆ, ಮಕರ ರಾಶಿಯವರು ತವರು ಮನೆಯಿಂದ ಉಡುಗೊರೆ ಪಡೆಯುತ್ತಾರೆ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಸ್ತ್ರೀ ವಾರ ಭವಿಷ್ಯ: ಧನು ರಾಶಿಯವರಿಗೆ ಹಣದ ಸಹಾಯ ದೊರೆಯುತ್ತೆ, ಮಕರ ರಾಶಿಯವರು ತವರು ಮನೆಯಿಂದ ಉಡುಗೊರೆ ಪಡೆಯುತ್ತಾರೆ

ಸ್ತ್ರೀ ವಾರ ಭವಿಷ್ಯ: ಧನು ರಾಶಿಯವರಿಗೆ ಹಣದ ಸಹಾಯ ದೊರೆಯುತ್ತೆ, ಮಕರ ರಾಶಿಯವರು ತವರು ಮನೆಯಿಂದ ಉಡುಗೊರೆ ಪಡೆಯುತ್ತಾರೆ

ಸ್ತ್ರೀ ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ಮಹಿಳಾ ರಾಶಿಯವರಿಗೆ ಏನು ಫಲ? 1 ವಾರ ಭವಿಷ್ಯದ ವಿವರ ಇಲ್ಲಿದೆ.

ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ಸ್ತ್ರೀ ವಾರ ಭವಿಷ್ಯ
ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ಸ್ತ್ರೀ ವಾರ ಭವಿಷ್ಯ

ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಜೂನ್ 13 ರ ಶುಕ್ರವಾರದಿಂದ 19ರ ಗುರುವಾರದವರೆಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಧನು ರಾಶಿ

ಆತುರದ ಸ್ವಭಾವ ಇರುತ್ತದೆ, ಸಮಯಕ್ಕೆ ತಕ್ಕಂತೆ ಹೊಂದಿಕೊಂಡು ಬಾಳುವಿರಿ. ನಿಮ್ಮಲ್ಲಿ ವಿಶೇಷವಾದ ಬುದ್ಧಿ ಚಾತುರ್ಯ ಇರುತ್ತದೆ. ನಿಮ್ಮಲ್ಲಿನ ಕೋಪವನ್ನು ಮರೆಮಾಚಿ ಶಾಂತಿಯಿಂದ ವರ್ತಿಸುವಿರಿ. ಆತುರ ತೋರದೆ ಬುದ್ಧಿವಂತಿಕೆಯಿಂದ ಕುಟುಂಬದ ಸಮಸ್ಯೆಗಳಿಗೆ ಪರಿಹಾರ ಸೂಚಿಸುವಿರಿ. ತಪ್ಪು ಕಲ್ಪನೆಯಿಂದ ಸ್ವಂತ ಕೆಲಸ ಕಾರ್ಯಗಳನ್ನು ಮುಂದೂಡುವಿರಿ. ಆತ್ಮವಿಶ್ವಾಸದಿಂದ ದೊರೆಯುವ ಜವಾಬ್ದಾರಿಯನ್ನು ನಿರ್ವಹಿಸುವಿರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಉತ್ತಮ ಬದಲಾವಣೆಗಳು ಉಂಟಾಗಲಿವೆ. ಉದ್ಯೋಗಸ್ಥರು ವಿದೇಶದಲ್ಲಿ ಕಾರ್ಯ ನಿರ್ವಹಿಸುವ ಅವಕಾಶ ಪಡೆಯಲಿದ್ದಾರೆ. ಅಜೀರ್ಣದ ತೊಂದರೆ ನಿಮ್ಮನ್ನು ಕಾಡಲಿದೆ. ಸ್ನೇಹಿತರಿಂದ ಹಣದ ಸಹಾಯ ದೊರೆಯಲಿದೆ. ಬಂಧು ಬಳಗದವರಲ್ಲಿ ಹಣಕಾಸಿನ ವ್ಯವಹಾರದಲ್ಲಿ ಮನಸ್ತಾಪ ಉಂಟಾಗಲಿದೆ. ನಿಧಾನಗತಿಯ ತೀರ್ಮಾನದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನೆಡೆ ಕಾಣಲಿದೆ. ಜೀವನದಲ್ಲಿನ ಬದಲಾವಣೆಗಳಿಗೆ ಹೊಂದಿಕೊಂಡು ಬಾಳುವುದಿಲ್ಲ.

ಪರಿಹಾರ: ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಹಳದಿ ಬಣ್ಣ

ಮಕರ ರಾಶಿ

ಆತ್ಮವಿಶ್ವಾಸದ ಕೊರತೆ ನಿಮ್ಮನ್ನು ಕಾಡುತ್ತದೆ. ಆದ್ದರಿಂದ ಬೇರೆಯವರನ್ನು ಸುಲಭವಾಗಿ ನಂಬುವುದಿಲ್ಲ. ಸ್ವಂತ ಕೆಲಸ ಕಾರ್ಯಗಳನ್ನು ಏಕಾಂಗಿಯಾಗಿ ಪೂರ್ಣಗೊಳಿಸಬಲ್ಲಿರಿ. ಶ್ರಮದಿಂದ ದುಡಿಯುವ ಕಾರಣ ಎಲ್ಲರ ಮನ ಗೆಲ್ಲುವಿರಿ. ಗಂಟಲು ಅಥವಾ ಮೂಗಿನ ತೊಂದರೆ ಉಂಟಾಗಲಿದೆ. ತಂದೆಯ ಮೇಲೆ ವಿಶೇಷ ಪ್ರೀತಿ ವಿಶ್ವಾಸ ಇರುತ್ತದೆ. ತವರು ಮನೆಯಿಂದ ಉಡುಗೊರೆಯೊಂದು ದೊರೆಯಲಿದೆ. ಕುಟುಂಬದವರ ಸಮಸ್ಯೆಗಳನ್ನು ಸುಲಭವಾಗಿ ಬಗೆಹರಿಸಬಲ್ಲಿರಿ. ಸ್ವಂತ ಬಳಕೆಗಾಗಿ ಹೊಸ ವಾಹನವನ್ನು ಕೊಳ್ಳುವಿರಿ. ಕೈಕಾಲಿನಲ್ಲಿ ಊತದ ತೊಂದರೆ ಇರುತ್ತದೆ. ಪತಿಯೊಂದಿಗೆ ವಿದೇಶಕ್ಕೆ ಪ್ರಯಾಣ ಬೆಳೆಸುವಿರಿ. ಸೋದರಿಯ ವಿವಾಹಕ್ಕೆ ಹಣದ ಸಹಾಯ ಮಾಡುವಿರಿ. ಉದ್ಯೋಗದಲ್ಲಿನ ನಿಮ್ಮ ಕಾರ್ಯದಕ್ಷತೆ ಎಲ್ಲರ ಮನ ಗೆಲ್ಲುತ್ತದೆ. ನಿಮ್ಮ ಮಾತಿಗೆ ಕೊನೆ ಇರುವುದಿಲ್ಲ. ನಿಮಗೆ ತಿಳಿಯದ ವಿಚಾರದಲ್ಲಿಯು ವಾದ ಮಾಡುವಿರಿ. ವಿದೇಶಿ ಭಾಷೆ ಕಲಿಯುವ ಆಸೆ ಈಡೇರಲಿದೆ.

ಪರಿಹಾರ: ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 2
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಹಸಿರು ಬಣ್ಣ

ಕುಂಭ ರಾಶಿ

ನಿಮ್ಮ ಮನಸ್ಸಿಗೆ ಸರಿ ಎನಿಸುವ ಕೆಲಸವನ್ನು ಒಪ್ಪುವಿರಿ. ಸುಲಭವಾಗಿ ಬೇರೆಯವರನ್ನು ನಂಬುವುದಿಲ್ಲ. ತಪ್ಪಿದ್ದರೂ ನಿಮ್ಮ ನಿರ್ಧಾರವನ್ನು ಬದಲಿಸುವುದಿಲ್ಲ. ನಿಮ್ಮಿಂದಾಗುವ ತಪ್ಪಿಗೆ ಬೇರೆಯವರನ್ನು ದೂರುವಿರಿ. ಮಾತು ಕಡಿಮೆ. ನಿಮ್ಮ ಮನದ ಭಾವನೆಗಳನ್ನು ಬೇರೆಯವರಿಗೆ ತಿಳಿಸುವುದಿಲ್ಲ. ಗೋಪ್ಯವಾಗಿ ಸ್ವಂತ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಸಾಧಿಸುವಿರಿ. ಪತಿಯೊಂದಿಗೆ ಹಣಕಾಸಿನ ವಿಚಾರದಲ್ಲಿ ಮನಸ್ತಾಪ ಉಂಟಾಗಲಿದೆ. ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಯಶಸ್ವಿಯಾಗುವಿರಿ. ಮನೆತನದ ಆಸ್ತಿಯಲ್ಲಿ ಸಿಂಹ ಪಾಲು ನಿಮಗೆ ದೊರೆಯುತ್ತದೆ. ಅನಾವಶ್ಯಕವಾಗಿ ನಿಮ್ಮಲ್ಲಿರುವ ಹಣವನ್ನು ಖರ್ಚು ಮಾಡುವುದಿಲ್ಲ. ಹಣಕಾಸಿನ ಮೇಲೆ ಅತಿಯಾದ ಆಸೆ ಇರುವುದಿಲ್ಲ. ಪತಿಯೊಂದಿಗೆ ಕಿರು ಪ್ರವಾಸಕ್ಕೆ ತೆರಳುವಿರಿ. ಉದ್ಯೋಗದಲ್ಲಿ ನಿಮ್ಮ ಆಶೋತ್ತರಗಳು ಈಡೇರಲಿವೆ. ಬೇರೆಯವರ ಹಣಕಾಸಿನ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸಿದಲ್ಲಿ ತೊಂದರೆ ಇರುತ್ತದೆ.

ಪರಿಹಾರ: ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ: 6
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ನೀಲಿ ಬಣ್ಣ

ಮೀನ ರಾಶಿ

ಸ್ವಾರ್ಥದ ಬಾವನೆ ಇರುವುದಿಲ್ಲ. ಎಲ್ಲರನ್ನು ಪ್ರೀತಿ ವಿಶ್ವಾಸದಿಂದ ಕಾಣುವಿರಿ. ನಿಮ್ಮ ಒಳ್ಳೆಯ ನಡೆ ನುಡಿಗೆ ವಿರೋಧಿಗಳು ಸಹ ನಿಮ್ಮ ಸ್ನೇಹ ಬಯಸುತ್ತಾರೆ. ಗೆಳೆಯರ ಜೀವನದಲ್ಲಿನ ಸಮಸ್ಯೆಗಳನ್ನು ಬಗೆಹರಿಸುವಿರಿ. ಸೋಲನ್ನು ಗೆಲುವನ್ನಾಗಿ ಪರಿವರ್ತಿಸುವ ಚತುರತೆ ನಿಮ್ಮಲ್ಲಿ ಇರುತ್ತದೆ. ಯಾವುದರೊಂದು ವಿಚಾರಕ್ಕೆ ಯೋಚನೆಗೆ ಒಳಗಾಗುವಿರಿ. ಮೃದುವಾದ ಮಾತಿನಿಂದ ಕುಟುಂಬದ ಮನಸ್ತಾಪವನ್ನು ಬಗೆಹರಿಸುವಿರಿ. ಉದ್ಯೋಗದಲ್ಲಿ ಎಲ್ಲರ ಮನಸ್ಸನ್ನು ಗೆಲ್ಲುವಿರಿ. ನಿಮ್ಮ ಪ್ರಯತ್ನದಿಂದ ಕುಟುಂಬದಲ್ಲಿ ಹಣದ ತೊಂದರೆ ಕಾಣುವುದಿಲ್ಲ. ಪತಿಗೆ ಹಣದ ಸಹಾಯ ಮಾಡುವಿರಿ. ಮಕ್ಕಳ ಜವಾಬ್ದಾರಿ ನಿಮ್ಮದಾಗಲಿದೆ. ತಲೆಗೆ ಪೆಟ್ಟು ಬೀಳಬಹುದು ಎಚ್ಚರಿಕೆ ಇರಲಿ. ಒಮ್ಮೆ ತೆಗೆದುಕೊಂಡ ನಿರ್ಧಾರಗಳಿಗೆ ಬದ್ಧರಾಗುವುದಿಲ್ಲ. ಬೇರೆಯವರು ಮಾಡಿದ ತಪ್ಪನ್ನು ಸರಿಪಡಿಸುವಿರಿ. ಸಮಾಜದಲ್ಲಿ ಗೌರವಯುತ ಸ್ಥಾನಮಾನ ಗಳಿಸುವಿರಿ. ಸ್ವಂತ ಮನೆ ಅಥವಾ ಜಮೀನು ಕೊಳ್ಳುವ ಕನಸು ನನಸಾಗಲಿದೆ.

ಪರಿಹಾರ: ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ನೇರಳೆ ಬಣ್ಣ

ಬರಹ: ಹೆಚ್‌. ಸತೀಶ್‌, ಜ್ಯೋತಿಷಿ, ಬೆಂಗಳೂರು

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ಸ್ತ್ರೀ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.