ಸ್ತ್ರೀ ವಾರ ಭವಿಷ್ಯ: ಮೇಷ ರಾಶಿಯವರಿಗೆ ತವರು ಮನೆಯಿಂದ ಸಹಾಯ ಸಿಗುತ್ತೆ, ವೃಷಭ ರಾಶಿಯವರು ಕೆಲಸಗಳಲ್ಲಿ ಯಶಸ್ಸು ಪಡೆಯುತ್ತಾರೆ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಸ್ತ್ರೀ ವಾರ ಭವಿಷ್ಯ: ಮೇಷ ರಾಶಿಯವರಿಗೆ ತವರು ಮನೆಯಿಂದ ಸಹಾಯ ಸಿಗುತ್ತೆ, ವೃಷಭ ರಾಶಿಯವರು ಕೆಲಸಗಳಲ್ಲಿ ಯಶಸ್ಸು ಪಡೆಯುತ್ತಾರೆ

ಸ್ತ್ರೀ ವಾರ ಭವಿಷ್ಯ: ಮೇಷ ರಾಶಿಯವರಿಗೆ ತವರು ಮನೆಯಿಂದ ಸಹಾಯ ಸಿಗುತ್ತೆ, ವೃಷಭ ರಾಶಿಯವರು ಕೆಲಸಗಳಲ್ಲಿ ಯಶಸ್ಸು ಪಡೆಯುತ್ತಾರೆ

ಸ್ತ್ರೀ ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ಮಹಿಳಾ ರಾಶಿಯವರಿಗೆ ಏನು ಫಲ? 1 ವಾರ ಭವಿಷ್ಯದ ವಿವರ ಇಲ್ಲಿದೆ.

ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ಸ್ತ್ರೀ ವಾರ ಭವಿಷ್ಯ
ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ಸ್ತ್ರೀ ವಾರ ಭವಿಷ್ಯ

ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಜೂನ್ 13 ರ ಶುಕ್ರವಾರದಿಂದ 19ರ ಗುರುವಾರದವರೆಗೆ ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಮೇಷ ರಾಶಿ

ಸಮಯಕ್ಕೆ ತಕ್ಕಂತೆ ಹೊಂದಿಕೊಂಡು ನಿಮ್ಮ ಕೆಲಸ ಸಾಧಿಸುವಿರಿ. ಅನಿರೀಕ್ಷಿತವಾದ ಬದಲಾವಣೆಗಳು ಜೀವನದಲ್ಲಿ ಎದುರಾಗುತ್ತದೆ. ಹೊಸ ರೀತಿಯ ಜೀವನಕ್ಕೆ ಹೊಂದಿಕೊಂಡು ಬಾಳುವಿರಿ. ಕುಟುಂಬದ ಕೆಲಸ ಕಾರ್ಯಗಳನ್ನು ನಿಷ್ಠೆಯಿಂದ ಪೂರ್ಣಗೊಳಿಸುವಿರಿ. ತವರುಮನೆಯವರ ಸಹಾಯ ನಿಮಗೆ ದೊರೆಯುತ್ತದೆ. ವಿರಸ ಮರೆತು ಪತಿಯೊಂದಿಗೆ ವಿಶ್ವಾಸದಿಂದ ಜೀವನ ನಡೆಸುವಿರಿ. ನಿಮ್ಮ ಮಕ್ಕಳ ಸಾಧನೆಯು ಮನಸ್ಸಿಗೆ ಸಂತಸವನ್ನು ನೀಡುತ್ತದೆ. ಆತುರದಿಂದ ಯಾವುದೇ ಕೆಲಸವನ್ನು ಮಾಡಿದರೂ ತೊಂದರೆ ಉಂಟಾಗುತ್ತದೆ. ಮೇಲ್ಮಟ್ಟದ ಅನುಕೂಲತೆಗಳು ಇದ್ದರೂ ಸರಳವಾದ ಜೀವನ ಇಷ್ಟಪಡುವಿರಿ. ಅನಿರೀಕ್ಷಿತ ಧನಲಾಭವಿದೆ. ನಿಮ್ಮೆದುರು ವಿರೋಧಿಗಳು ಸೋಲೊಪ್ಪುತ್ತಾರೆ. ನೆರೆಹೊರೆಯವರ ಜೊತೆ ಸ್ನೇಹವನ್ನು ಬೆಳೆಸುವಿರಿ. ಕುಟುಂಬದ ಹಣಕಾಸಿನ ಜವಾಬ್ದಾರಿ ನಿಮ್ಮ ಪಾಲಾಗುತ್ತದೆ. ಪತಿಯು ನಿಮಗೆ ಇಷ್ಟವೆನಿಸುವ ವಸ್ತುವೊಂದು ಉಡುಗೊರೆಯಾಗಿ ನೀಡಲಿದ್ದಾರೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ವೃಷಭ ರಾಶಿ

ಕೊಂಚ ತಡವಾಗಿ ಆರಂಭಿಸಿದ ಕೆಲಸಕಾರ್ಯಗಳಲ್ಲಿ ಯಶಸ್ಸನ್ನು ಗಳಿಸುವಿರಿ. ಹಠದ ಮನಸ್ಥಿತಿಯನ್ನು ತೊರೆದರೆ ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸುತ್ತದೆ. ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಇದ್ದರೂ ಪತಿಯೊಂದಿಗೆ ಸಂತಸದಿಂದ ಬಾಳುವಿರಿ. ಸೋದರನಿಗೆ ಹಣದ ಸಹಾಯ ಮಾಡುವಿರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಾಣಲಿವೆ. ಉದ್ಯೋಗಸ್ಥರಿಗೆ ಹೊಸ ಅವಕಾಶಗಳು ದೊರೆಯಲಿವೆ. ಉದ್ಯೋಗ ಬದಲಿಸುವ ಸಾಧ್ಯತೆಗಳಿವೆ. ಸಂಧಾನದ ಮಾತುಕತೆಯಿಂದ ಹಣಕಾಸಿನ ವಿವಾದಗಳನ್ನು ಬಗೆಹರಿಸುವಿರಿ. ಬದಲಾವಣೆಗಳನ್ನು ನಿರೀಕ್ಷಿಸಿ ಕುಟುಂಬದವರೊಂದಿಗೆ ಪ್ರವಾಸ ಕೈಗೊಳ್ಳುವಿರಿ. ಕಣ್ಣಿನ ತೊಂದರೆ ಇರಲಿದೆ. ಕುಟುಂಬದ ಹಿರಿಯರ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ. ಕೂಡಿಟ್ಟ ಹಣವನ್ನು ಖರ್ಚು ಮಾಡುವಿರಿ. ಒಮ್ಮೆ ತೆಗೆದುಕೊಂಡ ನಿರ್ಧಾರಗಳನ್ನು ಬದಲಿಸುವುದಿಲ್ಲ. ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸದಲ್ಲಿ ನಿರತರಾಗುತ್ತಾರೆ. ಸಾಮಾಜಿಕ ಕೆಲಸಗಳನ್ನು ಆಸಕ್ತಿ ಮೂಡಲಿದೆ.

ಪರಿಹಾರ: ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 2
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಆಕಾಶ ನೀಲಿ ಬಣ್ಣ

ಮಿಥುನ ರಾಶಿ

ಕುಟುಂಬದ ವಿಚಾರವನ್ನು ಗಂಭೀರವಾಗಿ ಪರಿಗಣಿಸುವಿರಿ. ಅನಾವಶ್ಯಕವಾದ ವಿಷಯಗಳ ಬಗ್ಗೆ ಚಿಂತೆ ಮಾಡುವಿರಿ. ನಿಮ್ಮ ಕೆಲಸ ಕಾರ್ಯಗಳಲ್ಲಿ ದೃಢವಾದ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಬುದ್ಧಿವಂತಿಕೆಯಿಂದ ಹೇರಳ ಹಣವನ್ನು ಸಂಪಾದಿಸುವಿರಿ. ಪತಿಯಿಂದ ನಿಮಗೆ ಉತ್ತಮ ಸಹಕಾರ ದೊರೆಯುತ್ತದೆ. ಕುಟುಂಬಕ್ಕೆ ಸಂಬಂಧಿಸಿದ ಜವಾಬ್ದಾರಿಗಳನ್ನು ಗಂಭೀರವಾಗಿ ಪರಿಗಣಿಸುವಿರಿ. ಅವಿರತ ಪ್ರಯತ್ನದಿಂದ ಮಾತ್ರ ವಿದ್ಯಾರ್ಥಿಗಳಿಗೆ ಉನ್ನತ ಸ್ಥಾನ ದೊರೆಯುತ್ತದೆ. ಉದ್ಯೋಗದ ಸಲುವಾಗಿ ವಿದೇಶಕ್ಕೆ ತೆರಳುವ ಅವಕಾಶ ದೊರೆಯುತ್ತದೆ. ನವವಿವಾಹಿತರಿಗೆ ಸಂತಾನ ಯೋಗವಿದೆ. ತವರಿಗೆ ಸಂಬಂಧಿಸಿದಂತೆ ಅನಾವಶ್ಯಕ ವಾದ ವಿವಾದಗಳಿಗೆ ಕಾರಣರಾಗುವಿರಿ. ಗೃಹ ಕೈಗಾರಿಕೆಯಲ್ಲಿ ಆಸಕ್ತಿ ಇದ್ದು ವ್ಯಾಪಾರವೊಂದನ್ನು ಆರಂಭಿಸುವಿರಿ. ಅತಿಯಾದ ಆಹಾರದ ಸೇವನೆಯ ಕಾರಣ ಆರೋಗ್ಯದಲ್ಲಿ ತೊಂದರೆ ಉಂಟಾಗಲಿದೆ. ಗಳಿಸಿದ ಹಣವನ್ನೆಲ್ಲ ಖರ್ಚು ಮಾಡುವಿರಿ. ಮನದಲ್ಲಿ ವೈರಾಗ್ಯದ ಮನೋಭಾವನೆ ಬರಲಿದೆ.

ಪರಿಹಾರ: ಬಲಗೈಯಲ್ಲಿ ಬೆಳ್ಳಿಯ ಕೈಖಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ದಿಕ್ಕು: ಉತ್ತಮ
ಅದೃಷ್ಟದ ಬಣ್ಣ: ರಕ್ತದ ಬಣ್ಣ

ಕಟಕ ರಾಶಿ

ಸ್ವಂತ ಕೆಲಸ ಕಾರ್ಯಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಿರಿ. ಗುರು ಹಿರಿಯರ ಆದೇಶದಂತೆ ನಡೆಯಬೇಕೆಂಬ ಗುರಿ ಇರುತ್ತದೆ. ವಯೋವೃದ್ಧರೂ ಸಹ ಯುವಕರು ಮಕ್ಕಳು ನಾಚುವಂತೆ ಚುರುಕುತನದಿಂದ ಕಾರ್ಯನಿರ್ವಹಿಸುವರು. ಸಣ್ಣ ಪುಟ್ಟ ವಿಚಾರಗಳಿಗೂ ಮಾನಸಿಕ ಒತ್ತಡಕ್ಕೆ ಒಳಗಾಗುವಿರಿ. ಮಕ್ಕಳ ವಿಚಾರದಲ್ಲಿ ಯಾವುದೆ ತೊಂದರೆ ಕಾಣದು. ಆದರೂ ಅವರ ಬಗ್ಗೆ ಇರುವ ಹೆಚ್ಚಿನ ನಿರೀಕ್ಷೆ ಚಿಂತೆಗೆ ಕಾರಣವಾಗುತ್ತದೆ. ಪತಿ ಮತ್ತು ಮಕ್ಕಳ ಜೊತೆ ಸುದೀರ್ಘಪ್ರವಾಸಕ್ಕೆ ತೆರಳುವಿರಿ. ಉದ್ಯೋಗಸ್ಥಗರಿಗೆ ಬಡ್ತಿ ದೊರೆಯುವ ಸೂಚನೆಗಳಿವೆ. ಹಣಕಾಸಿನ ವ್ಯವಹಾರದಲ್ಲಿ ಶಾಂತಿಯಿಂದ ವರ್ತಿಸುವಿರಿ. ಕುಟುಂಬದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಿರಿ. ಪತಿಯ ಆರೋಗ್ಯದ ಬಗ್ಗೆ ಎಚ್ಚರಿಕೆ ತೋರುವಿರಿ. ಅತಿಯಾದ ಆತ್ಮವಿಶ್ವಾಸದಿಂದ ಸಮಸ್ಯೆಗಳನ್ನು ಎದುರಿಸುವಿರಿ. ಕ್ರೀಡಾಪಟುಗಳಿಗೆ ಉತ್ತಮ ಅವಕಾಶ ದೊರೆಯುತ್ತದೆ. ಯಾತ್ರಾಸ್ಥಳಗಳಿಗೆ ಪತಿ ಮತ್ತು ಮಕ್ಕಳ ಜೊತೆ ಭೇಟಿ ನೀಡುವಿರಿ.

ಪರಿಹಾರ: ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 10
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಎಲೆಹಸಿರು ಬಣ್ಣ

ಬರಹ: ಹೆಚ್‌. ಸತೀಶ್‌, ಜ್ಯೋತಿಷಿ, ಬೆಂಗಳೂರು

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ಸ್ತ್ರೀ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.