ಸ್ತ್ರೀ ವಾರ ಭವಿಷ್ಯ: ಸಿಂಹ ರಾಶಿಯವರಿಗೆ ಅನಾರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ, ಕನ್ಯಾ ರಾಶಿಯವರು ಕೆಲಸದಲ್ಲಿ ವಿಫಲವಾಗುವ ಸಾಧ್ಯತೆ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಸ್ತ್ರೀ ವಾರ ಭವಿಷ್ಯ: ಸಿಂಹ ರಾಶಿಯವರಿಗೆ ಅನಾರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ, ಕನ್ಯಾ ರಾಶಿಯವರು ಕೆಲಸದಲ್ಲಿ ವಿಫಲವಾಗುವ ಸಾಧ್ಯತೆ

ಸ್ತ್ರೀ ವಾರ ಭವಿಷ್ಯ: ಸಿಂಹ ರಾಶಿಯವರಿಗೆ ಅನಾರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ, ಕನ್ಯಾ ರಾಶಿಯವರು ಕೆಲಸದಲ್ಲಿ ವಿಫಲವಾಗುವ ಸಾಧ್ಯತೆ

ಸ್ತ್ರೀ ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ಮಹಿಳಾ ರಾಶಿಯವರಿಗೆ ಏನು ಫಲ? 1 ವಾರ ಭವಿಷ್ಯದ ವಿವರ ಇಲ್ಲಿದೆ.

ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಸ್ತ್ರೀ ವಾರ ಭವಿಷ್ಯ
ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಸ್ತ್ರೀ ವಾರ ಭವಿಷ್ಯ

ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಜೂನ್ 13 ರ ಶುಕ್ರವಾರದಿಂದ 19ರ ಗುರುವಾರದವರೆಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಸಿಂಹ ರಾಶಿ

ಹಠ ಮತ್ತು ಆತ್ಮವಿಶ್ವಾಸ ತಪ್ಪು ನಿರ್ಧಾರಗಳಿಗೆ ಕಾರಣವಾಗುತ್ತದೆ. ದುಡುಕಿನ ಬುದ್ಧಿಯಿಂದಾಗಿ ಕುಟುಂಬದಲ್ಲಿ ಬೇಸರ ನೆಲೆಸುತ್ತದೆ. ಪತಿಯು ಸಂದಿಗ್ಧ ಪರಿಸ್ಥಿತಿಯಲ್ಲಿ ಸಹಾಯ ಮಾಡುವಿರಿ. ಹಣದ ತೊಂದರೆ ಉಂಟಾದಲ್ಲಿ ಒತ್ತಡಕ್ಕೆ ಒಳಗಾಗುವಿರಿ. ಆತ್ಮೀಯರಿಗೆ ಹಣದ ಸಹಾಯ ಮಾಡುವಿರಿ. ಉದ್ಯೋಗಸ್ಥರಿಗೆ ನಿರೀಕ್ಷಿತ ಸ್ಥಾನ ಮಾನ ದೊರೆಯುತ್ತದೆ. ನೀವು ಮಾಡುವ ಕೆಲಸ ಕಾರ್ಯವೆಲ್ಲವೂ ಸರಿ ಎಂಬ ತಪ್ಪು ಕಲ್ಪನೆ ನಿಮ್ಮಲ್ಲಿರುತ್ತದೆ. ದೀರ್ಘ ಕಾಲದಿಂದ ಕಾಡುತ್ತಿದ್ದ ಅನಾರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ. ಸಮಾಜದ ಉನ್ನತಿಗೆ ಶ್ರಮಿಸುವಿರಿ. ಮಕ್ಕಳಿಗೆ ವಿದ್ಯಾಭ್ಯಾಸದಲ್ಲಿ ಉನ್ನತ ಮಟ್ಟದ ಗೌರವ ಲಭಿಸುತ್ತದೆ. ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಇರಲಿದೆ. ಅವಿವಾಹಿತರಿಗೆ ವಿವಾಹ ಯೋಗವಿದೆ. ಕಾರ್ಮಿಕ ಕ್ರಿಯಾವಿಧಿಗಳಲ್ಲಿ ಆಸಕ್ತಿ ಇರುತ್ತದೆ. ತಂದೆಗೆ ಸಂಬಂಧಿಸಿದ ವಿವಾದವು ದೂರವಾಗುತ್ತದೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ: 3
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಕೇಸರಿ ಬಣ್ಣ

ಕನ್ಯಾ ರಾಶಿ

ನಿಮಗೆ ನಿರ್ಮಲವಾದ ಮನಸ್ಸು ಇರಲಿದೆ. ಆದರೆ ಆಡುವ ಮಾತಿನಲ್ಲಿ ಪ್ರೀತಿ ವಿಶ್ವಾಸ ವ್ಯಕ್ತಪಡಿಸುವುದಿಲ್ಲ. ಬೇರೆಯವರ ಸಣ್ಣಪುಟ್ಟ ತಪ್ಪನ್ನು ಟೀಕಿಸುವಿರಿ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ತೋರುವಿರಿ. ಕೊಂಚವೂ ಯೋಚಿಸದೆ ಬೇರೆಯವರ ವಾದವನ್ನು ಒಪ್ಪುವಿರಿ. ಸ್ಥಿರವಾದ ಮನಸ್ಸಿಲ್ಲದ ಕಾರಣ ಮುಖ್ಯ ಕೆಲಸದಲ್ಲಿ ವಿಫಲರಾಗುವಿರಿ. ಹಣಕಾಸಿನ ವಿವಾದದಲ್ಲಿ ಅಪಜಯ ಉಂಟಾಗಲಿದೆ. ಸಂಗಾತಿಯ ಆರೋಗ್ಯದಲ್ಲಿ ದಿಢೀರ್ ಸಮಸ್ಯೆ ಎದುರಾಗಲಿದೆ. ಆತ್ಮವಿಶ್ವಾಸದ ಕೊರತೆ ಸದಾ ಕಾಡುತ್ತದೆ. ಆತುರದಿಂದ ಕೆಲವೊಂದು ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ಕುಟುಂಬದ ಹಿರಿಯರ ಜವಾಬ್ದಾರಿಯನ್ನು ಒಪ್ಪಿಕೊಳ್ಳುವುದಿಲ್ಲ. ತಂದೆಯವರಿಗೆ ಹಣದ ಸಹಾಯ ಮಾಡುವಿರಿ. ಸ್ವಂತ ವ್ಯಾಪಾರ ವಹಿವಾಟಿನಲ್ಲಿ ನಿರ್ದಿಷ್ಟ ಆದಾಯ ಇರುವುದಿಲ್ಲ. ಅನಾವಶ್ಯಕ ಖರ್ಚುವೆಚ್ಚಗಳನ್ನು ಕಡಿಮೆ ಮಾಡಿರಿ. ಪತಿಯೊಂದಿಗೆ ಹಣಕಾಸಿನ ವ್ಯವಹಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗಲಿದೆ. ಆತ್ಮೀಯರ ಆಗಮನ ಮನಸ್ಸಿಗೆ ಸಂತೋಷವನ್ನು ನೀಡುತ್ತದೆ.

ಪರಿಹಾರ: ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ: 7
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ತುಲಾ ರಾಶಿ

ಪ್ರತಿ ವಿಚಾರದಲ್ಲಿಯೂ ಆತುರದ ನಿರ್ಧಾರ ಕೈಗೊಳ್ಳುವಿರಿ. ಆರಂಭಿಸಿದ ಕೆಲಸ ಕಾರ್ಯಗಳು ಯಶಸ್ವಿಯಾಗಲಿವೆ. ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸದೆ ವಿರಮಿಸುವುದಿಲ್ಲ. ಸಾಮಾನ್ಯವಾಗಿ ತಪ್ಪು ಮಾಡುವುದಿಲ್ಲ. ನಿಮ್ಮ ತಪ್ಪನ್ನು ಮರೆಮಾಚಿ ಬೇರೆಯವರ ತಪ್ಪನ್ನು ಟೀಕಿಸುವಿರಿ. ಕುಟುಂಬದ ಎಲ್ಲರನ್ನೂ ವಿಶ್ವಾಸದಿಂದ ಕಾಣುವಿರಿ. ಪತಿಯೊಂದಿಗೆ ಇದ್ದ ಮನಸ್ತಾಪವು ದೂರವಾಗಲಿದೆ. ಅವಿವಾಹಿತರಿಗೆ ವಿವಾಹ ಯೋಗವಿದೆ. ಕುಟುಂಬದ ಜವಾಬ್ದಾರಿಯನ್ನು ನಿರ್ವಹಿಸಲು ಉದ್ಯೋಗಕ್ಕೆ ಸೇರುವಿರಿ. ದುಬಾರಿಯ ಒಡವೆ ವಸ್ತ್ರಗಳನ್ನು ಕೊಳ್ಳುವಿರಿ. ಸಹೋದರರೊಂದಿಗೆ ಇದ್ದ ಮಾನಸ್ತಾಪವು ದೂರವಾಗುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಉತ್ತಮ ಜ್ಞಾನ ಇರುತ್ತದೆ. ಬಿಡುವಿಲ್ಲದ ದುಡಿಮೆಯ ಕಾರಣ ಆರೋಗ್ಯದಲ್ಲಿ ಏರಿಳಿತ ಕಂಡುಬರಲಿದೆ. ಅವಿರತ ಕೆಲಸ ಕಾರ್ಯದ ನಡುವೆ ವಿಶ್ರಾಂತಿಯನ್ನು ಬಯಸುವಿರಿ. ಆರೋಗ್ಯವನ್ನು ಸುಧಾರಿಸಿಕೊಳ್ಳಲು ದೈಹಿಕ ವ್ಯಾಯಾಮವನ್ನು ಅವಲಂಬಿಸುವಿರಿ. ವಿದ್ಯಾರ್ಥಿಗಳು ಉನ್ನತ ಕಲಿಕೆಯಲ್ಲಿ ಉನ್ನತ ಮಟ್ಟ ತಲುಪಲಿದ್ದಾರೆ.

ಪರಿಹಾರ: ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಕೆಂಪು ಬಣ್ಣ

ವೃಶ್ಚಿಕ ರಾಶಿ

ಕುಟುಂಬದಲ್ಲಿನ ಸಣ್ಣಪುಟ್ಟ ವ್ಯಾಜ್ಯಗಳನ್ನು ದೊಡ್ಡದು ಮಾಡುವಿರಿ. ಅತಿಯಾದ ಆತ್ಮವಿಶ್ವಾಸದಿಂದ ಜೀವನದಲ್ಲಿ ಹಿನ್ನೆಡೆ ಉಂಟಾಗುತ್ತದೆ. ಮನಸ್ಸನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಾಗುವುದಿಲ್ಲ. ಅತಿಯಾದ ಕೋಪ ತಪ್ಪು ಮಾಡಲು ನಿಮ್ಮನ್ನು ಪ್ರೇರೇಪಿಸುತ್ತದೆ. ನಿಮ್ಮಲ್ಲಿ ಹೊಂದಾಣಿಕೆಯ ಮನಸ್ಥಿತಿ ಇರುವುದಿಲ್ಲ. ನಿಮ್ಮ ಪತಿ ಸಹನೆಯಿಂದ ಪ್ರಸಕ್ತ ಪರಿಸ್ಥಿತಿಗೆ ಹೊಂದಿಕೊಂಡು ಬಾಳುವಿರಿ. ಕೊಂಚ ತಡವಾಗಿ ನಿಮ್ಮ ಮನಸ್ಸಿನ ಆಸೆಗಳು ಈಡೇರಲಿವೆ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ತೋರುವಿರಿ. ಮನೆತನದ ಹಣಕಾಸಿನ ವಿಚಾರವನ್ನು ಸೂಕ್ಷ್ಮವಾಗಿ ಗಮನಿಸುವಿರಿ. ಉಸಿರಿಗೆ ಸಂಬಂಧಪಟ್ಟ ದೋಷ ಇರುತ್ತದೆ. ವಾಹನ ಚಾಲನೆಯ ವೇಳೆಯಲ್ಲಿ ಎಚ್ಚರವಿರಲಿ. ಉದ್ಯೋಗಸ್ಥರಿಗೆ ನಿರೀಕ್ಷಿತ ಗೌರವ ದೊರೆಯಲಿದೆ. ಹಣಕಾಸಿನ ವ್ಯವಹಾರದಲ್ಲಿ ಆಸಕ್ತಿ ಇರುವುದಿಲ್ಲ. ಮಕ್ಕಳ ಭವಿಷ್ಯದ ಬಗ್ಗೆ ದುಡುಕಿನ ನಿರ್ಧಾರ ತೆಗೆದುಕೊಳ್ಳುವಿರಿ. ಸಂಸಾರದ ಗುರುತರ ಹೊಣೆ ನಿಮ್ಮದಾಗುತ್ತದೆ.

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 5
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಬರಹ: ಹೆಚ್‌. ಸತೀಶ್‌, ಜ್ಯೋತಿಷಿ, ಬೆಂಗಳೂರು

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ಸ್ತ್ರೀ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.