ಸ್ತ್ರೀ ವಾರ ಭವಿಷ್ಯ: ಧನು ರಾಶಿಯವರ ಪತಿ ಆರ್ಥಿಕ ಸಮಸ್ಯೆಯಿಂದ ಹೊರ ಬರುತ್ತಾರೆ, ಮಕರ ರಾಶಿಯವರಿಗೆ ಮಾನಸಿಕ ಶಕ್ತಿ ಹೆಚ್ಚಾಗುತ್ತೆ
ಸ್ತ್ರೀ ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ಮಹಿಳಾ ರಾಶಿಯವರಿಗೆ ಏನು ಫಲ? 1 ವಾರ ಭವಿಷ್ಯದ ವಿವರ ಇಲ್ಲಿದೆ.

ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಜೂನ್ 6 ರ ಶುಕ್ರವಾರದಿಂದ 12ರ ಗುರುವಾರದವರೆಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಧನು ರಾಶಿ
ಕಷ್ಟ ನಷ್ಟಗಳನ್ನು ಭಯಪಡದೆ ದಿಟ್ಟತನದಿಂದ ಎದುರಿಸುವಿರಿ. ಕೆಲಸ ಕಾರ್ಯಗಳು ಸುಲಭವಾಗಿ ಯಶಸ್ಸನ್ನು ಕಾಣುತ್ತವೆ. ಕುಟುಂಬದಲ್ಲಿ ನೀವು ತೆಗೆದುಕೊಳ್ಳುವ ನಿರ್ಧಾರವನ್ನು ಯಾರೂ ಬದಲಾಯಿಸಲಾರರು. ನಿಮ್ಮ ಸಹಾಯದಿಂದ ಪತಿಯು ಆರ್ಥಿಕ ಸಮಸ್ಯೆಯಿಂದ ಹೊರಬರುವರು. ಸಮಾಜ ಸೇವೆ ಮಾಡುವ ನಿಮ್ಮ ಆಸೆ ಕೈಗೂಡುವ ಕಾಲ ಬಂದಿದೆ. ಹಣವನ್ನು ಸಂಪಾದಿಸುವ ಮತ್ತು ಉಳಿಸುವ ಕಲೆ ತಿಳಿದಿರುತ್ತದೆ. ವೃತ್ತಿ ಜೀವನದಲ್ಲಿ ನಿಮಗೆ ಅನುಕೂಲಕರ ಪರಿಸ್ಥಿತಿಯು ಉಂಟಾಗುತ್ತದೆ. ವಿದ್ಯಾರ್ಥಿಗಳು ಸತತ ಅಭ್ಯಾಸದಿಂದ ಉನ್ನತ ವಿದ್ಯಾಭ್ಯಾಸಕ್ಕೆ ಅವಕಾಶ ಪಡೆಯುತ್ತಾರೆ. ಪತಿಯ ಜೊತೆ ವಿದೇಶಕ್ಕೆ ತೆರಳುವಿರಿ. ಆತ್ಮೀಯರಿಗೆ ಅನಿವಾರ್ಯವಾಗಿ ಹಣದ ಸಹಾಯ ಮಾಡುವಿರಿ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ಏರಿಳಿತ ಉಂಟಾಗಬಹುದು. ಸಾಕುಪ್ರಾಣಿಗಳನ್ನು ಸಾಕುವ ಆಸೆ ಉಂಟಾಗುತ್ತದೆ. ಧಾರ್ಮಿಕ ಕ್ರಿಯಾವಿಧಿಗಳಲ್ಲಿ ಆಸಕ್ತಿ ಇರುತ್ತದೆ. ವಿವಾಹಯೋಗವಿದೆ.
ಪರಿಹಾರ: ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 8
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ತಿಳಿಹಸಿರು
ಮಕರ ರಾಶಿ
ಹಣಕಾಸಿನ ವಿಚಾರದಲ್ಲಿ ಸೋದರರ ಜೊತೆಯಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ಪ್ರತಿಯೊಂದು ವಿಚಾರದಲ್ಲಿಯೂ ಆತುರದ ತೀರ್ಮಾನವನ್ನು ತೆಗೆದುಕೊಳ್ಳುವಿರಿ. ಬುದ್ದಿವಂತಿಕೆಯಿಂದ ಕೌಟುಂಬಿಕ ಕಲಹಗಳಿಂದ ದೂರವಾಗುವಿರಿ. ಶಾಂತ ರೀತಿಯಲ್ಲಿ ಉದ್ಯೋಗದಲ್ಲಿ ಎಲ್ಲರ ಮನಸ್ಸನ್ನು ಗೆಲ್ಲುವಿರಿ. ಹಣಕಾಸಿನ ಕೊರತೆಯನ್ನು ಎದುರಿಸಬೇಕಾದ ಸನ್ನಿವೇಶ ಎದುರಾಗುತ್ತದೆ. ಅವಶ್ಯಕತೆಗೆ ತಕ್ಕಂತೆ ಹಣಗಳಿಸುವ ಸಾಮರ್ಥ್ಯ ತೋರುವಿರಿ. ಕುಟುಂಬದಲ್ಲಿ ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ವರ್ತಿಸುವಿರಿ. ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳ ವಿಶ್ವಾಸ ಗಳಿಸುವಿರಿ. ತಂದೆ ತಾಯಿಗಳ ಆಗಮನ ನಿಮ್ಮ ಸಂತೋಷವನ್ನು ಹೆಚ್ಚಿಸುತ್ತದೆ. ಮಾನಸಿಕ ಶಕ್ತಿ ಹೆಚ್ಚುತ್ತದೆ. ಮಕ್ಕಳ ಬಗ್ಗೆ ಇದ್ದ ತಪ್ಪು ಕಲ್ಪನೆ ದೂರವಾಗುತ್ತದೆ. ವಿದ್ಯಾರ್ಥಿಗಳು ಜವಾಬ್ದಾರಿಯನ್ನು ಅರಿತುಕೊಂಡು ಮುನ್ನಡೆಯುತ್ತಾರೆ. ಆರೋಗ್ಯದಲ್ಲಿ ತೊಂದರೆ ಕಂಡು ಬರುತ್ತದೆ.
ಪರಿಹಾರ: ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 12
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ನಸುಗೆಂಪು
ಕುಂಭ ರಾಶಿ
ಮನಸ್ಸನ್ನು ಸುಲಭವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ನಿಧಾನಗತಿಯಲ್ಲಿ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಏಕಾಂಗಿಯಾಗಿ ಸ್ವಂತ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಕಾಣುವಿರಿ. ಕುಟುಂಬದಲ್ಲಿ ಸಂತೋಷದ ಕ್ಷಣಗಳು ಎದುರಾಗಲಿವೆ. ಕರ್ತವ್ಯದಲ್ಲಿಯೇ ದೇವರನ್ನು ಕಾಣುವಿರಿ. ಆಪತ್ತಿನ ವೇಳೆ ನಿಮ್ಮ ಪತಿಯ ಸಹಾಯ ಸದಾ ದೊರೆಯುತ್ತದೆ. ವಿದ್ಯಾರ್ಥಿಗಳು ಉನ್ನತ ಅಧ್ಯಯನಕ್ಕಾಗಿ ವಿದೇಶಕ್ಕೆ ತೆರಳುವಿರಿ. ಆರಂಭಿಸಿದ ಕೆಲಸದಲ್ಲಿ ಯಶಸ್ಸು ದೊರೆಯುವವರೆಗೂ ನಿಮ್ಮ ಪ್ರಯತ್ನವನ್ನು ಬಿಡುವುದಿಲ್ಲ. ಉದ್ಯೋಗದಲ್ಲಿ ಸಾಧಾರಣ ಗತಿಯ ಪ್ರಗತಿ ಕಂಡುಬರುತ್ತದೆ. ವ್ಯಾಪಾರ ವ್ಯವಹಾರಗಳು ಲಾಭದಾಯಕವಾಗಿರುತ್ತವೆ. ಅನಿರೀಕ್ಷಿತ ಧನಲಾಭ ಇರುತ್ತದೆ. ಪ್ರಾಣಿಗಳನ್ನು ಸಾಕುವ ಆಸೆ ಈಡೇರುತ್ತದೆ. ಗುರು ಹಿರಿಯರನ್ನು ಭೇಟಿ ಮಾಡುವಿರಿ. ಸೋದರರ ಜೊತೆಯಲ್ಲಿ ಹಣಕಾಸಿನ ವಿಚಾರದಲ್ಲಿ ಭಿನಾಭಿಪ್ರಾಯ ಇರುತ್ತದೆ. ಪತಿ ಮತ್ತು ಮಕ್ಕಳ ಜೊತೆ ಕಿರು ಪ್ರವಾಸ ಕೈಗೊಳ್ಳುವಿರಿ.
ಪರಿಹಾರ: ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 1
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ
ಮೀನ ರಾಶಿ
ಒಮ್ಮೆ ತೆಗೆದುಕೊಂಡ ನಿರ್ಧಾರಗಳಿಗೆ ಬದ್ಧರಾಗುವುದಿಲ್ಲ. ಸಮಯ ಸಂದರ್ಭಕ್ಕೆ ಹೊಂದಿಕೊಂಡು ಬಾಳ್ವೆ ನಡೆಸುವಿರಿ. ಸದಾ ಸ್ನೇಹಿತರು ಅಥವಾ ಬಂಧು ಬಳಗದವರ ಜೊತೆ ಸಂತಸದಿಂದ ಬಾಳುವಿರಿ. ಶೀತದ ತೊಂದರೆ ಬಹುವಾಗಿ ಕಾಡುತ್ತದೆ. ಆಕರ್ಷವಾದ ಮಾತು ಕತೆಗೆ ಎಲ್ಲರೂ ಮನಸೋಲುತ್ತಾರೆ. ಮೌನದಿಂದ ನಿಮ್ಮ ಜವಾಬ್ದಾರಿಯನ್ನು ನಿರ್ವಹಿಸುವಿರಿ. ದಾಂಪತ್ಯ ಜೀವನದಲ್ಲಿ ವಾದ ವಿವಾದಗಳು ಎದುರಾದರೂ ಯಾವುದೇ ತೊಂದರೆ ಕಾಣದು. ನಯವಾದ ಮಾತಿನಿಂದ ಕೆಲಸವನ್ನು ಸಾಧಿಸುವಿರಿ. ಉದ್ಯೋಗದಲ್ಲಿ ನಿರೀಕ್ಷೆಗಳು ಕಾರ್ಯರೂಪಕ್ಕೆ ಬರಲಿವೆ. ಉತ್ತಮ ಅವಕಾಶ ದೊರೆಯುವ ಕಾರಣ, ಉದ್ಯೋಗವನ್ನು ಬದಲಿಸುವಿರಿ. ಖರ್ಚು ವೆಚ್ಚಗಳನ್ನು ನಿಯಂತ್ರಿಸುವಿರಿ. ಹಣದ ಕೊರತೆಯಿಂದ ಕುಟುಂಬವನ್ನು ಪಾರುಮಾಡುವಿರಿ. ವಿದ್ಯಾರ್ಥಿಗಳಿಗೆ ಶುಭ ವರ್ತಮಾನವೊಂದು ಬರಲಿದೆ. ಶುಭ ಸಮಾರಂಭಗಳನ್ನು ಆಯೋಜಿಸುವಿರಿ. ಹೊಸ ವಾಹನ ಕೊಳ್ಳುವಿರಿ.
ಪರಿಹಾರ: ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 5
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಹಾಲಿನ ಬಣ್ಣ
ಬರಹ: ಹೆಚ್. ಸತೀಶ್, ಜ್ಯೋತಿಷಿ, ಬೆಂಗಳೂರು
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ಸ್ತ್ರೀ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).