ಸ್ತ್ರೀ ವಾರ ಭವಿಷ್ಯ: ಕನ್ಯಾ ರಾಶಿಯವರಿಗೆ ವಿವಾಹ ಕಾರ್ಯ ನೆರವೇರಲಿದೆ, ಸಿಂಹ ರಾಶಿಯವರ ಹಣಕಾಸಿನ ವಿವಾದ ಬಗೆಹರಿಯುತ್ತೆ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಸ್ತ್ರೀ ವಾರ ಭವಿಷ್ಯ: ಕನ್ಯಾ ರಾಶಿಯವರಿಗೆ ವಿವಾಹ ಕಾರ್ಯ ನೆರವೇರಲಿದೆ, ಸಿಂಹ ರಾಶಿಯವರ ಹಣಕಾಸಿನ ವಿವಾದ ಬಗೆಹರಿಯುತ್ತೆ

ಸ್ತ್ರೀ ವಾರ ಭವಿಷ್ಯ: ಕನ್ಯಾ ರಾಶಿಯವರಿಗೆ ವಿವಾಹ ಕಾರ್ಯ ನೆರವೇರಲಿದೆ, ಸಿಂಹ ರಾಶಿಯವರ ಹಣಕಾಸಿನ ವಿವಾದ ಬಗೆಹರಿಯುತ್ತೆ

ಸ್ತ್ರೀ ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ಮಹಿಳಾ ರಾಶಿಯವರಿಗೆ ಏನು ಫಲ? 1 ವಾರ ಭವಿಷ್ಯದ ವಿವರ ಇಲ್ಲಿದೆ.

ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಸ್ತ್ರೀ ವಾರ ಭವಿಷ್ಯ
ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಸ್ತ್ರೀ ವಾರ ಭವಿಷ್ಯ

ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಜೂನ್ 6 ರ ಶುಕ್ರವಾರದಿಂದ 12ರ ಗುರುವಾರದವರೆಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಸಿಂಹ ರಾಶಿ

ಧೈರ್ಯದಿಂದ ಜವಾಬ್ದಾರಿಯನ್ನು ನಿರ್ವಹಿಸುವಿರಿ. ಸಾಹಸದ ಗುಣದಿಂದ ಸಮಸ್ಯೆಗಳನ್ನು ಪರಿಹರಿಸುವಿರಿ. ಸದಾ ನಿಮ್ಮ ತೀರ್ಮಾನಗಳನ್ನು ಒಪ್ಪಲು ಎಲ್ಲರನ್ನೂ ಓಲೈಸುವಿರಿ. ಆತ್ಮವಿಶ್ವಾಸ ನಿಮ್ಮನ್ನು ಹಣಕಾಸಿನ ವಿವಾದದಿಂದ ಕಾಪಾಡುತ್ತದೆ. ನಿಮ್ಮಲ್ಲಿನ ಹಠದ ಗುಣ ಕುಟುಂಬದಲ್ಲಿ ಬೇಸರವನ್ನು ಉಂಟುಮಾಡುತ್ತದೆ. ಕುಟುಂಬದ ಹಿರಿಯರೊಂದಿಗೆ ವಾದ ವಿವಾದಗಳು ಇರಲಿವೆ. ಪತಿಯ ಸಲಹೆ ಸೂಚನೆಯನ್ನು ಒಲ್ಲದ ಮನಸ್ಸಿನಿಂದ ಒಪ್ಪುವಿರಿ. ಸೋದರರ ಜೀವನದಲ್ಲಿ ಎದುರಾಗುವ ದೊಡ್ಡ ಸಮಸ್ಯೆಗೆ ಪರಿಹಾರ ಸೂಚಿಸುವಿರಿ. ಉದ್ಯೋಗದಲ್ಲಿ ಉನ್ನತ ಅಧಿಕಾರ ದೊರೆಯಲಿದೆ. ಮಕ್ಕಳ ವಿಚಾರದಲ್ಲಿ ನಿಮ್ಮ ಮಾತೆ ಅಂತಿಮವಾಗುತ್ತದೆ. ವಿವಾಹದ ಮಾತುಕತೆ ವಿಫಲವಾಗುತ್ತದೆ. ವಿದ್ಯಾರ್ಥಿಗಳು ಸತತ ಪರಿಶ್ರಮದಿಂದ ಗುರಿ ಸಾಧಿಸುತ್ತಾರೆ. ಸ್ವಂತ ಉದ್ದಿಮೆ ಆರಂಭಿಸುವ ಗುರಿ ಈಡೇರುತ್ತದೆ. ಆರೋಗ್ಯದ ಬಗ್ಗೆ ಗಮನ ಕೊಡಿ. ಮನೆಯ ಒಳಗೂ ಹೊರಗೂ ನಿಮ್ಮ ಮಾತಿಗೆ ಮನ್ನಣೆ ದೊರೆಯುತ್ತದೆ.

ಪರಿಹಾರ: ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 8
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಬಿಳಿ ಬಣ್ಣ

ಕನ್ಯಾ ರಾಶಿ

ಅತಿಯಾದ ಮಾತಿನಿಂದ ಬೇರೆಯವರಿಗೆ ಬೇಸರ ಉಂಟಾಗಲಿದೆ. ಮಾನಸಿಕ ಒತ್ತಡದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುತ್ತದೆ. ಕುಟುಂಬದ ಜನರೊಂದಿಗೆ ದೇವತಾಕಾರ್ಯವನ್ನು ನಿರ್ವಹಿಸುವಿರಿ. ಮನರಂಜನಾ ಕಾರ್ಯಕ್ರಮಗಳಿಗೆ ಹೆಚ್ಚಿನ ಹಣ ವೆಚ್ಚವಾಗುತ್ತದೆ. ಪತಿಯ ಜೊತೆ ವಿದೇಶಕ್ಕೆ ತೆರಳುವ ಸಾಧ್ಯತೆ ಇದೆ. ಯಾವುದೇ ವಿಚಾರದಲ್ಲಿಯೂ ದೃಢ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಕುಟುಂಬವನ್ನು ಹಣದ ತೊಂದರೆಯಿಂದ ಪಾರು ಮಾಡುವಿರಿ. ಆತ್ಮೀಯರ ಭೂ ವಿವಾದದಲ್ಲಿ ಮಧ್ಯವರ್ತಿಯಾಗಿ ಸಮಸ್ಯೆ ಬಗೆಹರಿಸುವಿರಿ. ಸ್ವಂತ ಕೆಲಸ ಕಾಯಗಳಿಗೆ ಸಮಯದ ಅಭಾವ ಎದುರಾಗುತ್ತದೆ. ಉದ್ಯೋಗದಲ್ಲಿ ತೊಂದರೆ ಬಾರದು. ತವರಿನಲ್ಲಿ ವಿವಾಹ ಕಾರ್ಯ ನೆರವೇರುತ್ತದೆ. ಮನೆತನದ ಭೂಮಿಯನ್ನು ಮಾರಾಟ ಮಾಡಿ ಹೊಸ ಮನೆಯನ್ನು ಕೊಳ್ಳುವ ಆಸೆ ಸಾಕಾರಗೊಳ್ಳಲಿದೆ. ತಪ್ಪು ಮಾಡಿದವರನ್ನು ಟೀಕಿಸುವಿರಿ. ಮಕ್ಕಳ ಜೀವನವು ನಿಮ್ಮ ನಿರ್ಧಾರಗಳನ್ನು ಅವಲಂಭಿಸಿದೆ.

ಪರಿಹಾರ: ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 12
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಬೂದು ಬಣ್ಣ

ತುಲಾ ರಾಶಿ

ಗೆಲ್ಲುವ ಆಸೆಯಿಂದ ದೃಢವಾದ ಮನಸ್ಸಿನಿಂದ ಕೆಲಸ ಕಾರ್ಯಗಳಲ್ಲಿ ಮುನ್ನುಗ್ಗುವಿರಿ. ಸ್ವತಂತ್ರವಾಗಿ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಬಲ್ಲಿರಿ. ಕುಟುಂಬದಲ್ಲಿ ಎಲ್ಲರ ಜೊತೆ ಹೊಂದಿಕೊಂಡು ಬಾಳುವಿರಿ. ನಿಮ್ಮ ಜವಾಬ್ದಾರಿಯನ್ನು ನಿರ್ವಹಿಸಲು ಪತಿಯ ಸಹಕಾರವಿರುತ್ತದೆ. ಉದ್ಯೋಗದಲ್ಲಿ ಯಾವುದೇ ತೊಂದರೆ ಉಂಟಾಗದು. ಹಿರಿಯ ಅಧಿಕಾರಿಗಳ ಮನ ಗೆಲ್ಲುವಿರಿ. ಇದರಿಂದ ಹೆಚ್ಚಿನ ಜವಾಬ್ದಾರಿ ನಿಮ್ಮದಾಗಲಿದೆ. ವಿದ್ಯಾರ್ಥಿಗಳು ವಿಷಯಗಳ ಕಲಿಕೆಯಲ್ಲಿ ಹಿಂದೆ ಉಳಿಯಬೇಕಾಗುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಸ್ವಂತ ನಿರ್ಧಾರಗಳಿಗೆ ಬದ್ಧರಾಗುವಿರಿ. ಅನಿರೀಕ್ಷಿತ ಧನ ಲಾಭವಿರುತ್ತದೆ. ಸಮಾಜದ ಗಣ್ಯ ವ್ಯಕ್ತಿಯಾಗಿ ಬಾಳುವಿರಿ. ನೂತನ ದಂಪತಿಗೆ ಸಂತಾನಲಾಭವಿದೆ. ಪಾಲುಗಾರಿಕೆಯ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭಾಂಶ ದೊರೆಯುತ್ತದೆ. ಎಲ್ಲರಿಗೂ ನ್ಯಾಯ ನೀತಿಯ ಪಾಠ ಮಾಡುವಿರಿ. ಕಾದು ನೋಡುವ ತಂತ್ರದಿಂದ ಲಾಭವಿದೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 1
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಕಂದು ಬಣ್ಣ

ವೃಶ್ಚಿಕ ರಾಶಿ

ಅತಿಯಾದ ಆತ್ಮವಿಶ್ವಾಸ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಅಪ್ರಯೋಜಕ ವಿಚಾರಗಳಿಂದ ಬೇಸರ ಉಂಟಾಗುತ್ತದೆ. ಕೋಪದ ಮಾತುಕತೆ ಕುಟುಂಬದ ಸ್ವಾಸ್ಥ್ಯವನ್ನು ಕೆಡಿಸುತ್ತದೆ. ಏಕಾಂಗಿಯಾಗಿ ಕೆಲಸ ನಿರ್ವಹಿಸಲು ಬಯಸುವಿರಿ. ಸಹನೆಯಿಂದ ಮಾಡುವ ಕೆಲಸ ಕಾರ್ಯದಲ್ಲಿ ಯಶಸ್ಸು ಲಭಿಸುತ್ತದೆ. ದ್ವೇಷ ಸಾಧಿಸುವ ಬದಲು ವಿರೋಧಿಗಳ ಸ್ನೇಹವನ್ನು ಬೆಳೆಸುವಿರಿ. ತಪ್ಪನ್ನು ಸರಿಪಡಿಸಿಕೊಂಡು ಕುಟುಂಬದಲ್ಲಿ ನೆಮ್ಮದಿ ನೆಲೆಸುವಂತೆ ಮಾಡುವಿರಿ. ಮಕ್ಕಳ ಜೀವನದ ವಿಚಾರದಲ್ಲಿ ಪತಿಯ ಜೊತೆ ಒಮ್ಮತದ ನಿರ್ಧಾರ ತೆಗೆದುಕೊಳ್ಳುವಿರಿ. ಉದ್ಯೋಗದಲ್ಲಿ ಗಂಭೀರವಾದ ಸನ್ನಿವೇಶ ಎದುರಾಗುತ್ತದೆ. ಹೊಟ್ಟೆಗೆ ಸಂಬಂಧಿಸಿದ ಅನಾರೋಗ್ಯವಿರುತ್ತದೆ. ಸ್ನೇಹಿತರ ಸಹಾಯದಿಂದ ಹಣದ ತೊಂದರೆ ದೂರವಾಗುತ್ತದೆ. ಆಪತ್ತಿನಲ್ಲಿ ಇರುವವರಿಗೆ ಉತ್ತಮ ಮಾರ್ಗದರ್ಶನ ನೀಡುವಿರಿ. ವಿದ್ಯಾರ್ಥಿಗಳು ಸಾಧಾರಣ ಮಟ್ಟದ ಯಶಸ್ಸನ್ನು ಕಾಣುತ್ತಾರೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಮಂದಗತಿಯ ಅಭಿವೃದ್ಧಿ ಇರುತ್ತದೆ. ನಿಮಗೆ ಇಷ್ಟವೆನೆಸುವ ಒಡವೆ ವಸ್ತ್ರಗಳನ್ನು ಕೊಳ್ಳುವಿರಿ.

ಪರಿಹಾರ: ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಕಪ್ಪು

ಬರಹ: ಹೆಚ್‌. ಸತೀಶ್‌, ಜ್ಯೋತಿಷಿ, ಬೆಂಗಳೂರು

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ಸ್ತ್ರೀ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Raghavendra M Y

TwittereMail
ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.