ಸ್ತ್ರೀ ವಾರ ಭವಿಷ್ಯ: ಧನು ರಾಶಿಯವರು ಮಾತಿನಲ್ಲಿ ಮೋಡಿ ಮಾಡುತ್ತಾರೆ, ಮಕರ ರಾಶಿಯವರಿಗೆ ವಾಹನದ ಲಾಭವಿದೆ
ಸ್ತ್ರೀ ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ಮಹಿಳಾ ರಾಶಿಯವರಿಗೆ ಏನು ಫಲ? 1 ವಾರ ಭವಿಷ್ಯದ ವಿವರ ಇಲ್ಲಿದೆ.

Women Weekly Horoscope: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮಾರ್ಚ್ 14 ರ ಶುಕ್ರವಾರದಿಂದ 20ರ ಗುರುವಾರದವರೆಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಧನು ರಾಶಿ
ಚರ್ಮದೋಷವಿದ್ದಲ್ಲಿ ಪರಿಹಾರಗೊಳ್ಳುತ್ತದೆ. ಕೈಕಾಲುಗಳಲ್ಲಿ ಊತ ಇರಲಿದೆ. ದೀರ್ಘಕಾಲದ ಪ್ರವಾಸಕ್ಕೆ ಕುಟುಂಬದವರ ಜೊತೆಯಲ್ಲಿ ತೆರಳುವಿರಿ. ಶಾಸ್ತ್ರ ಸಂಪ್ರದಾಯಗಳಲ್ಲಿ ನಂಬಿಕೆ ಇರುತ್ತದೆ. ಸಮಾಜದ ನಾಯಕತ್ವ ನಿಮಗೆ ಲಭಿಸುತ್ತದೆ. ಮಾತಿನಲ್ಲಿ ಮೋಡಿ ಮಾಡ ಬಲ್ಲಿರಿ. ಯೋಚಿಸದೆ ಮಾತನಾಡುವುದಿಲ್ಲ. ಕಷ್ಟ ನಷ್ಟದಲ್ಲಿ ಇದ್ದವರಿಗೆ ಸಹಾಯ ಮಾಡುವಿರಿ. ಉತ್ತಮ ಅನುಕೂಲತೆ ಇದ್ದರೂ ಮನದಲ್ಲಿ ಯಾವುದೋ ಯೋಚನೆ ಇರುತ್ತದೆ. ಸ್ವತಂತ್ರವಾಗಿ ಯಾವುದೇ ಕೆಲಸವನ್ನು ನಿರ್ವಹಿಸಬಲ್ಲಿರಿ. ಸತತ ಪ್ರಯತ್ನದಿಂದ ದಿನದ ವಹಿವಾಟಿನಲ್ಲಿ ಗೆಲುವು ಸಾಧಿಸುವಿರಿ. ವಿಶಾಲದ ಮನಸ್ಸಿನ ಕಾರಣ ಎಲ್ಲರನ್ನೂ ಪ್ರೀತಿಯಿಂದ ಕಾಣುವಿರಿ. ಸೋದರರ ಜೀವನದಲ್ಲಿ ನಿಧಾನಗತಿಯ ಪ್ರಗತಿ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಆಸಕ್ತಿ ಇರುವುದಿಲ್ಲ. ತಾಯಿಯ ಜೊತೆ ಕೆಲದಿನ ಮನಸ್ತಾಪ ಇರಲಿದೆ.
ಪರಿಹಾರ: ಪಕ್ಷಿಗಳಿಗೆ ಆಹಾರವನ್ನು ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ
ಮಕರ ರಾಶಿ
ಒಳ್ಳೆಯತನದಿಂದ ಎಲ್ಲರ ವಿಶ್ವಾಸ ಗಳಿಸುವಿರಿ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭವಿರುತ್ತದೆ. ಉದ್ಯೋಗದಲ್ಲಿ ಉನ್ನತ ಅಧಿಕಾರ ದೊರೆಯಲಿದೆ. ತಾಯಿಯವರ ಆರೋಗ್ಯದಲ್ಲಿ ಏರುಪೇರು ಕಂಡು ಬರುತ್ತದೆ. ಜೀವನದಲ್ಲಿ ಯಾವುದೇ ತೊಂದರೆ ಎದುರಾಗುವುದಿಲ್ಲ. ವಾಹನ ಲಾಭವಿದೆ. ಹಣಕಾಸಿನ ವಿಚಾರದಲ್ಲಿ ಚಂಚಲದ ಮನಸ್ಸಿರುತ್ತದೆ. ತೊಂದರೆಯಲ್ಲಿ ಇದ್ದರೂ ಬೇರೆಯವರಿಗೆ ಸಹಾಯ ಮಾಡುವಿರಿ. ದೇವರಲ್ಲಿ ವಿಶೇಷ ನಂಬಿಕೆ ಇರುತ್ತದೆ. ಗೃಹಿಣಿಯರಿಗೆ ಜೀವನದಲ್ಲಿ ಅನಿರೀಕ್ಷಿತವಾದ ಬದಲಾವಣೆಗಳು ಉಂಟಾಗಲಿವೆ. ಮಕ್ಕಳ ಬಗ್ಗೆ ವಿಶೇಷ ಅಕ್ಕರೆ ಇರುತ್ತದೆ. ಸಹೋದ್ಯೋಗಿಗಳ ಮನಸ್ಸನ್ನು ಗೆಲ್ಲುವಿರಲಿ. ವಿದ್ಯಾರ್ಥಿಗಳು ಆತಂಕವಿಲ್ಲದೆ ಕಲಿಕೆಯಲ್ಲಿ ಮೊದಲಿಗರಾಗುತ್ತಾರೆ. ಒಮ್ಮೆ ತೆಗೆದುಕೊಂಡ ತೀರ್ಮಾನಗಳನ್ನು ಬದಲಿಸುವುದಿಲ್ಲ. ಗೌರವ ಘನತೆಯನ್ನು ಉಳಿಸಿಕೊಳ್ಳಲು ಯಾವುದೇ ತ್ಯಾಗಕ್ಕೆ ಸಿದ್ದರಾಗುವಿರಿ. ಶೀತದ ತೊಂದರೆ ನಿಮ್ಮನ್ನು ಕಾಡುತ್ತದೆ.
ಪರಿಹಾರ: ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 2
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ ಬಣ್ಣ
ಕುಂಭ ರಾಶಿ
ಖರ್ಚು ವೆಚ್ಚಗಳನ್ನು ನಿಯಂತ್ರಿಸದೆ ಹೋದಲ್ಲಿ ತೊಂದರೆಗೆ ಸಿಲುಕುವಿರಿ. ಹಳೆಯ ಮಿತ್ರರೊಬ್ಬರನ್ನು ಭೇಟಿ ಮಾಡುವಿರಿ. ನೆರೆಹೊರೆಯವರ ಜೊತೆ ಉತ್ತಮ ಬಾಂಧವ್ಯ ಇರುವುದಿಲ್ಲ. ಅನಾರೋಗ್ಯವಿರುತ್ತದೆ. ಸಾಮಾಜಿಕ ಕಾರ್ಯಕರ್ತರಾಗಿ ಒಳ್ಳೆಯ ಹೆಸರು ಗಳಿಸುವಿರಿ. ಆಯ್ದ ಜನರಿಗೆ ನಿಮ್ಮ ಮನದ ವಿಚಾರವನ್ನು ತಿಳಿಸುವಿರಿ. ಗೃಹಿಣಿಯರು ಕಷ್ಟವೆನಿಸಿದರು ಹಣವನ್ನು ಉಳಿಸುವಲ್ಲಿ ಸಫಲರಾಗುತ್ತಾರೆ. ಬೇರೆಯವರಿಗೆ ಬೇಸರವಾಗದಂತೆ ಮಾತನಾಡುವಿರಿ. ಹಾರ್ಮೋನ್ ನ ತೊಂದರೆ ಇರುವವರು ಎಚ್ಚರಿಕೆ ವಹಿಸಿ. ಭವಿಷ್ಯದ ಜೀವನಕ್ಕಾಗಿ ಹಣ ಸಂಗ್ರಹ ಮಾಡುವಿರಿ. ಹಣದ ಬಗ್ಗೆ ಅತಿಯಾದ ಆಸೆ ಇರುವುದಿಲ್ಲ. ಬಂಧು-ಬಳಗದವರಿಂದ ದೂರ ಉಳಿಯುವಿರಿ. ಮಕ್ಕಳ ಬಗ್ಗೆ ಚಿಂತೆ ಇರುತ್ತದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಅಡ್ಡಿ ಉಂಟಾಗುತ್ತದೆ.
ಪರಿಹಾರ: ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 3
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಹಾಲಿನ ಬಣ್ಣ
ಮೀನ ರಾಶಿ
ವಾಹನದ ಅಪಘಾತ ಆಗುವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ನಿಮಗೆ ಅರಿವಿಲ್ಲದಂತೆ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವಿರಿ. ದಂಪತಿ ನಡುವೆ ಉತ್ತಮ ಒಡನಾಟ ಇರುವುದಿಲ್ಲ. ಬೇರೆಯವರ ಸಹಾಯವಿಲ್ಲದೆ ಯಾವುದೇ ಕೆಲಸವನ್ನು ಮಾಡಲಾರಿರಿ. ಶಾಸ್ತ್ರ ಸಂಪ್ರದಾಯದಲ್ಲಿ ಆಸಕ್ತಿ ಮೂಡುತ್ತದೆ. ತಡವಾದರೂ ಆರಂಭಿಸಿದ ಕೆಲಸ ಕಾರ್ಯಗಳನ್ನು ಮನಸ್ಸಿಟ್ಟು ಪೂರ್ಣಗೊಳಿಸುವಿರಿ. ವಿದ್ಯಾರ್ಥಿಗಳಿಗೆ ಹೊಸ ವಿಚಾರಗಳಲ್ಲಿ ಆಸಕ್ತಿ ಮೂಡುತ್ತದೆ. ಪಿತ್ತದ ತೊಂದರೆ ನಿಮ್ಮನ್ನು ಕಾಡಲಿದೆ. ಜೀವನದಲ್ಲಿ ವೈರಾಗ್ಯ ಭಾವನೆ ಮೂಡುತ್ತದೆ. ಆತ್ಮೀಯರಿಗೆ ಹಣದ ಸಹಾಯ ಮಾಡುವಿರಿ. ವಿಶೇಷ ಪ್ರೀತಿ ಗಳಿಸುವಿರಿ. ಪ್ರಯೋಜನವಿಲ್ಲದ ಪ್ರಯಾಣ ಬೇಸರ ಮೂಡಿಸುತ್ತದೆ. ದೇಹದ ತೂಕವು ಹೆಚ್ಚಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಬೇರೆಯವರನ್ನು ನಂಬುವುದಿಲ್ಲ. ಸಾಲದ ವ್ಯವಹಾರವನ್ನು ಮಾಡುವುದಿಲ್ಲ. ಭೂವಿವಾದದಿಂದ ಪಾರಾಗುವಿರಿ.
ಪರಿಹಾರ: ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಹೊಗೆಯ ಬಣ್ಣ
ಬರಹ: ಹೆಚ್. ಸತೀಶ್, ಜ್ಯೋತಿಷಿ, ಬೆಂಗಳೂರು
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ಸ್ತ್ರೀ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
