ಸ್ತ್ರೀ ವಾರ ಭವಿಷ್ಯ: ಉದ್ಯೋಗಿಗಳಿಗೆ ಆದಾಯದಲ್ಲಿ ಹೆಚ್ಚಳ ಇರುತ್ತೆ, ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಸ್ತ್ರೀ ವಾರ ಭವಿಷ್ಯ: ಉದ್ಯೋಗಿಗಳಿಗೆ ಆದಾಯದಲ್ಲಿ ಹೆಚ್ಚಳ ಇರುತ್ತೆ, ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು

ಸ್ತ್ರೀ ವಾರ ಭವಿಷ್ಯ: ಉದ್ಯೋಗಿಗಳಿಗೆ ಆದಾಯದಲ್ಲಿ ಹೆಚ್ಚಳ ಇರುತ್ತೆ, ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು

ಸ್ತ್ರೀ ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ಮಹಿಳಾ ರಾಶಿಯವರಿಗೆ ಏನು ಫಲ? 1 ವಾರ ಭವಿಷ್ಯದ ವಿವರ ಇಲ್ಲಿದೆ.

ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ಸ್ತ್ರೀ ವಾರ ಭವಿಷ್ಯ
ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ಸ್ತ್ರೀ ವಾರ ಭವಿಷ್ಯ

Women Weekly Horoscope: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮಾರ್ಚ್ 28 ರ ಶುಕ್ರವಾರದಿಂದ ಏಪ್ರಿಲ್ 3ರ ಗುರುವಾರದವರೆಗೆ ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಮೇಷ ರಾಶಿ

ಉದ್ಯೋಗ ಮತ್ತು ಮನೆಯ ಜವಾಬ್ದಾರಿಯ ನಡುವೆ ಸ್ವಂತ ವಿಚಾರಗಳಿಗೆ ಸಮಯ ಇರುವುದಿಲ್ಲ. ಉತ್ತಮ ಆರೋಗ್ಯಕ್ಕಾಗಿ ವಿಶ್ರಾಂತಿ ತೆಗೆದುಕೊಳ್ಳುವುದು ಒಳ್ಳೆಯದು. ಮನೆಯ ಹಿರಿಯ ಮಹಿಳಾ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಸ್ವಾರ್ಥವಿಲ್ಲದೆ ಎಲ್ಲರ ಮನದ ಆಸೆಯನ್ನು ಪೂರೈಸುವಿರಿ. ಕುಟುಂಬದ ಯಾವುದೇ ಕೆಲಸವಾದರೂ ನಿಮ್ಮಿಂದ ಯಶಸ್ವನ್ನು ಕಾಣುತ್ತೀರಿ. ಹಣವನ್ನು ಉಳಿಸುವ ಕಾರಣ ಕುಟುಂಬದಲ್ಲಿನ ಹಣದ ಕೊರತೆ ಕಡಿಮೆ ಆಗುತ್ತದೆ. ಉದ್ಯೋಗಸ್ಥರಿಗೆ ಆದಾಯದಲ್ಲಿ ಹೆಚ್ಚಳ ಕಂಡುಬರುತ್ತದೆ. ಸದಾ ಕಾಲ ಕುಟುಂಬದ ಒಳಿತಿಗಾಗಿ ಶ್ರವಿಸುವಿರಿ. ಮಕ್ಕಳ ಕೆಲಸ ಕಾರ್ಯದಲ್ಲಿ ಸದಾ ಮಗ್ನರಾಗುವಿರಿ. ಕುಟುಂಬದ ಸಂತೋಷ ನೆಮ್ಮದಿ ನೆಲೆಸುವಂತೆ ನೋಡಿಕೊಳ್ಳುವಿರಿ. ಭೂವಿವಾದವೊಂದನ್ನು ಆತ್ಮವಿಶ್ವಾಸದಿಂದ ಅಂತಿಮ ಗೊಳಿಸುವಿರಿ. ಪತಿಯ ಜೊತೆಯಲ್ಲಿ ಪ್ರೀತಿ ಮತ್ತು ವಿಶ್ವಾಸದಿಂದ ಬಾಳುವಿರಿ. ತಿಳಿಯದೇ ತಪ್ಪು ಮಾಡಿದರೂ ಪಶ್ಚಾತಾಪ ಪಡುವಿರಿ. ಕುಟುಂಬದ ಒಳಿತಿಗಾಗಿ ಗುಟ್ಟಾಗಿ ಹಣವನ್ನು ಉಳಿಸುವಿರಿ.

ಪರಿಹಾರ: ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಬಿಳಿ ಬಣ್ಣ

ವೃಷಭ ರಾಶಿ

ಹಣಕಾಸಿನ ಜವಾಬ್ದಾರಿಯ ಕಾರಣ ಮನದಲ್ಲಿ ಅತಂಕವಿರುತ್ತದೆ. ನಿಮ್ಮ ಸ್ವಂತ ನಿರ್ಧಾರಕ್ಕೆ ಬದ್ದರಾಗುವಿರಿ. ಕುಟುಂಬದ ವಿದ್ಯಾಮಾನದಲ್ಲಿ ಹೆಚ್ಚಿನ ಆಸಕ್ತಿ ಇರುವುದಿಲ್ಲ. ಆದರೆ ನಿಮ್ಮಿಂದ ಯಾವುದೇ ತೊಂದರೆ ಎದುರಾಗದು. ದಾಂಪತ್ಯದ ವಿಚಾರದಲ್ಲಿ ಯಾರ ಮಾತನ್ನೂ ನಂಬುವುದಿಲ್ಲ. ಸ್ವಂತ ನಿರ್ಧಾರದಿಂದ ಹಣದ ವಿವಾದವನ್ನು ಗೆಲ್ಲುವಿರಿ. ಎಲ್ಲರ ಮನಸ್ಸನ್ನು ಮಾತುಗಾರಿಕೆಯಿಂದ ಗೆಲ್ಲಲು ಯಶಸ್ವಿಯಾಗುವಿರಿ. ಯಾರ ಮನಸ್ಸಿಗೂ ಬೇಸರ ಆಗದಂತೆ ಸ್ನೇಹದಿಂದ ವರ್ತಿಸುವಿರಿ. ಬುದ್ಧಿವಂತಿಕೆಯಿಂದ ಸ್ವಂತ ಕೆಲಸದಲ್ಲಿ ಉತ್ತಮ ಲಾಭವನ್ನು ಗಳಿಸಿಕೊಳ್ಳುವಿರಿ. ಹಣದ ಕೊರತೆ ಇರದು. ಚಿನ್ನದ ಒಡವೆಗಾಗಿ ಹಣವನ್ನು ಖರ್ಚು ಮಾಡುವಿರಿ. ಬಹುರಾಷ್ಟ್ರೀಯತೆಯ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ಸಮಯವನ್ನು ಅರಿತು ಉದ್ಯೋಗವನ್ನು ಬದಲಿಸುವಿರಿ. ವಿದ್ಯಾಭ್ಯಾಸದಲ್ಲಿ ಅನಿರೀಕ್ಷಿತ ತಿರುವು ದೊರೆಯಲಿದೆ. ಪತಿಯನ್ನು ಅನುಮಾನ ದೃಷ್ಟಿಯಿಂದ ನೋಡುವಿರಿ. ರಕ್ತಕ್ಕೆ ಸಂಬಂಧಿಸಿದ ತೊಂದರೆ ಇದ್ದಲ್ಲಿ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ.

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 1
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಬೂದು ಬಣ್ಣ

ಮಿಥುನ ರಾಶಿ

ಅನುಮಾನದ ಕಾರಣದಿಂದಾಗಿ ಉತ್ತಮ ಉದ್ಯೋಗದಿಂದ ದೂರ ಉಳಿಯುವಿರಿ. ಹಣಕಾಸಿನ ವಿಚಾರದಲ್ಲಿ ಒಮ್ಮೆ ತೆಗೆದು ಕೊಂಡ ನಿರ್ಧಾರವನ್ನು ಬದಲಾಯಿಸುವಿರಿ. ಕುಟುಂಬದ ಐಕ್ಯತೆಯಲ್ಲಿ ನಿಮ್ಮ ಪಾತ್ರ ಮುಖ್ಯವಾಗುತ್ತದೆ. ಮಕ್ಕಳನ್ನು ಸರಿದಾರಿಯಲ್ಲಿ ನಡೆಸುವಿರಿ. ಪತಿಯ ಜೀವನದಲ್ಲಿ ಉತ್ತಮ ಬದಲಾವಣೆಗಳು ನಿಮ್ಮಿಂದ ಉಂಟಾಗಲಿವೆ. ನಿಮ್ಮ ತಂದೆ ನಿಮಗೆ ನೆಚ್ಚಿನ ಉಡುಗೊರೆಯೊಂದನ್ನು ನೀಡಲಿದ್ದಾರೆ. ಕುಟುಂಬಕ್ಕೆ ಸಂಬಂಧಿಸಿದ ಮನಸ್ತಾಪಗಳಿಗೆ ಸೂಕ್ತ ಸಲಹೆ ನೀಡುವಿರಿ. ಆತ್ಮೀಯರಿಂದ ಶುಭ ವರ್ತಮಾನವೊಂದು ಬರಲಿದೆ. ದ್ಯೋಗದಲ್ಲಿ ನಿಮಗೆ ಹೊಸ ಜವಾಬ್ದಾರಿ ದೊರೆಯಲಿದೆ. ಅಜೀರ್ಣದ ತೊಂದರೆ ಇರುತ್ತದೆ. ಪತಿಯ ಜೊತೆಯಲ್ಲಿ ಮನರಂಜನಾ ಸ್ಥಳಕ್ಕೆ ಭೇಟಿ ನೀಡುವಿರಿ. ದುಡುಕದೆ ಸಹನೆಯಿಂದ ಎಲ್ಲರ ಮನಸ್ಸನ್ನು ಗೆಲ್ಲುವಿರಿ.

ಪರಿಹಾರ: ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಕಂದು ಬಣ್ಣ

ಕಟಕ ರಾಶಿ

ಏಕಾಂಗಿಯಾಗಿ ಹೋರಾಟದ ಮನೋಭಾವನೆಯನ್ನು ತೋರುವಿರಿ. ಹಾಸ್ಯದ ಗುಣದಿಂದ ಎಲ್ಲರ ಸಂತೋಷಕ್ಕೆ ಕಾರಣರಾಗುವಿರಿ. ಬೇಸರದಿಂದ ದೂರ ಉಳಿಯಲು ಮನರಂಜನೆಯನ್ನು ಆಶ್ರಯಿಸುವಿರಿ. ಪತಿಯಜೊತೆಯಲ್ಲಿ ಉತ್ತಮ ಒಡನಾಟ ಇರುತ್ತದೆ. ದೂರದ ಸ್ಥಳಲ್ಲಿ ಸ್ವಂತ ಮನೆಯನ್ನು ಕೊಳ್ಳುವ ಆಸೆ ಈಡೇರುತ್ತದೆ. ತಾಯಿಯವರ ಆರೋಗ್ಯದಲ್ಲಿ ತೊಂದರೆ ಕಂಡುಬರುತ್ತದೆ. ಯಾತ್ರಾಸ್ಥಳಕ್ಕೆ ಪತಿಯ ಜೊತೆ ತೆರಳುವಿರಿ. ಸೋದರಿಗೆ ದುಬಾರಿ ಉಡುಗೊರೆ ನೀಡುವಿರಿ. ಹಣಕಾಸಿನ ವ್ಯವಹಾರದಲ್ಲಿ ಮನಸ್ಸಿರುವುದಿಲ್ಲ. ನವವಿವಾಹಿತರಿಗೆ ಸಂತಾನ ಲಾಭವಿದೆ. ವಿದ್ಯಾರ್ಥಿನಿಯರಿಗೆ ವಿದೇಶದ ಸಂಸ್ಥೆಯಲ್ಲಿ ಉದ್ಯೋಗಾವಕಾಶ ದೊರೆಯಲಿದೆ. ವದಂತಿಯನ್ನು ನಂಬುವುದಿಲ್ಲ. ಪತಿಯ ಆರೋಗ್ಯದಲ್ಲಿ ಏರುಪೇರು ಇರುತ್ತದೆ. ಸ್ವಂತ ಖರ್ಚಿಗೆ ಅವಶ್ಯಕವಾದಷ್ಟು ಹಣವನ್ನು ಸಂಪಾದಿಸುವಿರಿ. ಎಲ್ಲರಜೊತೆ ಪ್ರೀತಿಯಿಂದ ಬಾಳುವಿರಿ.

ಪರಿಹಾರ: ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಕಪ್ಪು ಬಣ್ಣ

ಬರಹ: ಹೆಚ್‌. ಸತೀಶ್‌, ಜ್ಯೋತಿಷಿ, ಬೆಂಗಳೂರು

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ಸ್ತ್ರೀ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Raghavendra M Y

TwittereMail
ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.