ಸ್ತ್ರೀ ವಾರ ಭವಿಷ್ಯ: ಮೇಷ ರಾಶಿಯವರಿಗೆ ದಾಂಪತ್ಯ ಜೀವನದಲ್ಲಿ ನೆಮ್ಮದಿ ಇರುತ್ತೆ, ವೃಷಭ ರಾಶಿಯವರು ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಾರೆ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಸ್ತ್ರೀ ವಾರ ಭವಿಷ್ಯ: ಮೇಷ ರಾಶಿಯವರಿಗೆ ದಾಂಪತ್ಯ ಜೀವನದಲ್ಲಿ ನೆಮ್ಮದಿ ಇರುತ್ತೆ, ವೃಷಭ ರಾಶಿಯವರು ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಾರೆ

ಸ್ತ್ರೀ ವಾರ ಭವಿಷ್ಯ: ಮೇಷ ರಾಶಿಯವರಿಗೆ ದಾಂಪತ್ಯ ಜೀವನದಲ್ಲಿ ನೆಮ್ಮದಿ ಇರುತ್ತೆ, ವೃಷಭ ರಾಶಿಯವರು ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಾರೆ

ಸ್ತ್ರೀ ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ಮಹಿಳಾ ರಾಶಿಯವರಿಗೆ ಏನು ಫಲ? 1 ವಾರ ಭವಿಷ್ಯದ ವಿವರ ಇಲ್ಲಿದೆ.

ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ಸ್ತ್ರೀ ವಾರ ಭವಿಷ್ಯ
ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ಸ್ತ್ರೀ ವಾರ ಭವಿಷ್ಯ

ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 16 ರ ಶುಕ್ರವಾರದಿಂದ 22ರ ಗುರುವಾರದವರೆಗೆ ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಮೇಷ ರಾಶಿ

ಯಾವುದೇ ಸಂದರ್ಭ ಎದುರಾದರೂ ಧೈರ್ಯ ಮತ್ತು ಆತ್ಮವಿಶ್ವಾಸದಿಂದ ವರ್ತಿಸುವಿರಿ. ಆದರೆ ಮಾಡಬೇಕಾದ ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ಆಸಕ್ತಿ ಇರುವುದಿಲ್ಲ. ನಿಧಾನವಾದರೂ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ದೈಹಿಕ ಶ್ರಮ ಉಂಟಾದರೂ ಮಾಡಬೇಕಾದ ಕೆಲಸ ಕಾರ್ಯಗಳನ್ನು ನಿಲ್ಲಿಸುವುದಿಲ್ಲ. ಆಡಂಬರದ ಜೀವನ ಇಷ್ಟಪಡುವುದಿಲ್ಲ. ಅನಾವಶ್ಯಕವಾಗಿ ಬೇರೆಯವರ ಜೊತೆಯಲ್ಲಿ ವಾದ ಮಾಡುವುದಿಲ್ಲ. ಆರೋಗ್ಯವನ್ನು ಕಾಪಾಡಿಕೊಳ್ಳಲು ದಿಟ್ಟ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಮನದ ನಿರೀಕ್ಷೆಯನ್ನು ತಲುಪಲು ಶ್ರಮಿಸುವಿರಿ. ಕುಟುಂಬದಲ್ಲಿ ನಿಮ್ಮ ಒತ್ತಾಸೆಯಿಂದ ಶುಭ ಕಾರ್ಯಗಳು ನಡೆಯಲಿದೆ. ಬೇಗನೆ ಕೋಪ ಬಂದರು ತಪ್ಪು ನಿರ್ಧಾರ ತೆಗೆದುಕೊಳ್ಳುವುದಿಲ್ಲ. ತಲೆಗೆ ಪೆಟ್ಟಾಗಬಹುದು ಎಚ್ಚರಿಕೆ ಇರಲಿ. ದಾಂಪತ್ಯ ಜೀವನದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ಮಕ್ಕಳ ಜವಾಬ್ದಾರಿಯನ್ನು ಏಕಾಂಗಿಯಾಗಿ ನಿರ್ವಹಿಸಬಲ್ಲಿರಿ.

ಪರಿಹಾರ: ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ವೃಷಭ ರಾಶಿ

ಒಮ್ಮೆ ತೆಗೆದುಕೊಂಡ ನಿರ್ಧಾರವನ್ನು ಬದಲಿಸುವುದಿಲ್ಲ. ಉದ್ಯೋಗದಲ್ಲಿ ಉನ್ನತ ಪದವಿ ಪ್ರತಿಷ್ಠೆ ದೊರೆಯುತ್ತದೆ. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತೀರಿ. ಮಾತನಾಡಲು ಆರಂಭಿಸಿದರೆ ಮುಕ್ತಾಯವೇ ಇರುವುದಿಲ್ಲ. ಆದರೆ ವಿನಯವಂತಿಕೆಯಿಂದ ಜವಾಬ್ದಾರಿಯನ್ನು ನಿರ್ವಹಿಸುವಿರಿ. ಕುಟುಂಬದ ಸದಸ್ಯರೊಂದಿಗೆ ಶಾಂತಿಯಿಂದ ವರ್ತಿಸುವಿರಿ. ಅಲಂಕಾರ ಪ್ರಿಯರು. ಸ್ವಂತ ನಿರ್ಧಾರದಿಂದ ಯಾವುದೇ ಕೆಲಸ ಕಾರ್ಯಗಳನ್ನು ಆರಂಭಿಸುವುದಿಲ್ಲ. ಆದರೆ ಬೇರೆಯವರ ಸಹಾಯ ದೊರಕಿದಲ್ಲಿ ಅಪಾಯದ ಸನ್ನಿವೇಶವನ್ನೂ ಎದುರಿಸಬಲ್ಲಿರಿ. ಏಕಾಂಗಿಯಾಗಿ ಕುಟುಂಬದ ಪರಿಸ್ಥಿತಿಯನ್ನು ಸುಸ್ಥಿತಿಗೆ ತಲುಪಿಸುವಿರಿ. ಹಣವನ್ನು ಕಷ್ಟದ ಪರಿಸ್ಥಿತಿಯಲ್ಲಿಯೂ ಉಳಿಸಲು ಯಶಸ್ವಿಯಾವುವಿರಿ. ಸೋಲು ಗೆಲುವಿನ ಬಗ್ಗೆ ಯೋಚಿಸುವುದಿಲ್ಲ. ನಿಮ್ಮ ಪ್ರತಿಭೆಯ ಬಗ್ಗೆ ಹೆಚ್ಚಿನ ವಿಶ್ವಾಸವಿರುತ್ತದೆ. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವಿರಿ. ಮಕ್ಕಳಿಂದ ಸಮಯಕ್ಕೆ ತಕ್ಕಂತಹ ಸಹಾಯ ಸಹಕಾರ ನಿಮಗೆ ದೊರೆಯುತ್ತದೆ.

ಪರಿಹಾರ: ಬಲಗೈಯಲ್ಲಿ ಬೆಳ್ಳಿಯ ಕೈಖಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಕೆಂಪು ಬಣ್ಣ

ಮಿಥುನ ರಾಶಿ

ನಿಮ್ಮ ನಡವಳಿಕೆಗಳು ಬೇರೆಯವರಿಗೆ ಸ್ಫೂರ್ತಿದಾಯಕವಾಗುತ್ತದೆ. ನೆನಪಿನ ಶಕ್ತಿಯು ಹೆಚ್ಚಾಗುತ್ತದೆ. ಇದರಿಂದ ಅಪೂರ್ಣಗೊಂಡ ಕೆಲಸ ಕಾರ್ಯಗಳು ಸುಲಭವಾಗಿ ಪೂರ್ಣಗೊಳ್ಳಲಿವೆ. ಹಣಕಾಸಿನ ವ್ಯವಹಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರಲಿದೆ. ಯಾವುದೇ ವಿಚಾರವನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳುವಿರಿ. ಸವಿಯಾದ ಮಾತಿನಿಂದ ಎಲ್ಲರ ಮನ ಗೆಲ್ಲುವಿರಿ. ಗಾಯಕರಿಗೆ ಉತ್ತಮ ಅವಕಾಶಗಳು ದೊರೆಯಲಿವೆ. ಸಭೆ ಸಮಾರಂಭಗಳಿಂದ ದೂರ ಉಳಿಯುವಿರಿ. ಉದ್ಯೋಗದಲ್ಲಿ ಬುದ್ದಿವಂತಿಕೆಯಿಂದ ಉನ್ನತ ಅಧಿಕಾರ ಗಳಿಸುವಿರಿ. ಮಕ್ಕಳ ವಿಚಾರದಲ್ಲಿ ನಿರೀಕ್ಷಿತ ಫಲಗಳು ದೊರೆಯುತ್ತವೆ. ಪತಿ ಮತ್ತು ಮಕ್ಕಳ ಜೊತೆಯಲ್ಲಿ ಪ್ರವಾಸಕ್ಕೆ ತೆರಳುವಿರಿ. ಒಂದೇ ರೀತಿಯ ಕೆಲಸ ಕಾರ್ಯಗಳನ್ನು ಇಷ್ಟ ಪಡುವುದಿಲ್ಲ. ಸೋದರಮಾವನಿಂದ ಹಣದ ಸಹಕಾರ ದೊರೆಯುತ್ತದೆ. ಸ್ಥಿರವಾದ ಮನಸ್ಸಿರುವುದಿಲ್ಲ.

ಪರಿಹಾರ: ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಕಟಕ ರಾಶಿ

ಚುರುಕುತನದಿಂದ ದಿನ ನಿತ್ಯದ ಕೆಲಸ ಕಾರ್ಯಗಳಲ್ಲಿ ನಿರತರಾಗುವಿರಿ. ದುಡುಕುತನ ಇರುವುದಿಲ್ಲ. ಎಲ್ಲರ ಜೊತೆಯಲ್ಲಿ ಸ್ನೇಹ ಪ್ರೀತಿಯಿಂದ ವರ್ತಿಸುವಿರಿ. ದೀರ್ಘಕಾಲದ ಪ್ರವಾಸಕ್ಕೆ ತೆರಳುವಿರಿ. ಕುಟುಂಬದ ಹಣಕಾಸಿನ ಜವಾಬ್ದಾರಿಯು ನಿಮ್ಮದಾಗುತ್ತದೆ. ಕಷ್ಟಪಟ್ಟು ಕೂಡಿಟ್ಟ ಹಣವನ್ನು ಖರ್ಚು ಮಾಡಬೇಕಾಗುತ್ತದೆ. ಉದ್ಯೋಗದಲ್ಲಿ ಬೇಸರ ಸನ್ನಿವೇಶವಿರುತ್ತದೆ. ಆತ್ಮೀಯರ ಸಹಾಯದಿಂದ ಉದ್ಯೋಗವನ್ನು ಬದಲಿಸುವಿರಿ. ಬಂಧು ಬಳಗದವರಲ್ಲಿ ಪ್ರೀತಿ ವಿಶ್ವಾಸ ಗಳಿಸುವಿರಿ. ಒಳ್ಳೆಯ ಕೆಲಸಗಳಿಗೆ ಹಣವು ಖರ್ಚಾಗುತ್ತದೆ. ಒಮ್ಮೆ ತೆಗೆದುಕೊಂಡ ತೀರ್ಮಾನಗಳನ್ನು ಬದಲಿಸುವುದಿಲ್ಲ. ಕಫದ ತೊಂದರೆಯಿಂದ ಬಳಲುವಿರಿ. ಹಿತ ಮಿತವಾಗಿ ಎಲ್ಲರ ಜೊತೆ ಮಾತನಾಡುವಿರಿ. ಧಾರ್ಮಿಕ ಕೇಂದ್ರಗಳಿಗೆ ಹಣದ ಸಹಾಯ ಮಾಡುವಿರಿ. ದಂಪತಿ ನಡುವೆ ಹೊಂದಾಣಿಕೆಯ ಗುಣ ಇರುತ್ತದೆ. ಆತ್ಮೀಯರ ತಪ್ಪನ್ನು ಮನ್ನಿಸಿ ಸರಿಪಡಿಸುವಿರಿ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಹಳದಿ ಬಣ್ಣ

ಬರಹ: ಹೆಚ್‌. ಸತೀಶ್‌, ಜ್ಯೋತಿಷಿ, ಬೆಂಗಳೂರು

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ಸ್ತ್ರೀ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Raghavendra M Y

TwittereMail
ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.