ಸ್ತ್ರೀ ವಾರ ಭವಿಷ್ಯ ಧನು ರಾಶಿಯಿಂದ ಮೀನದವರೆಗೆ: ತಂದೆಯ ಆರೋಗ್ಯ ಏರುಪೇರಾಗಲಿದೆ, ಕೆಲಸ ಬದಲಿಸಲಿದ್ದೀರಿ
ಸ್ತ್ರೀ ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಧನು ರಾಶಿಯಿಂದ ಮೀನದವರೆಗಿನ ಮಹಿಳೆಯರಿಗೆ ಏನು ಫಲ? ಇಲ್ಲಿದೆ ವಿವರ.

ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 30 ರ ಶುಕ್ರವಾರದಿಂದ ಜೂನ್ 5ರ ಗುರುವಾರದವರೆಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಧನಸ್ಸು ರಾಶಿ
ಕುಟುಂಬದ ಹಿರಿಯರ ಮಾತನ್ನು ಗೌರವಿಸುವಿರಿ. ಕುಟುಂಬಕ್ಕೆ ಸಂಬಂಧಿಸಿದ ವಿಚಾರಗಳಲ್ಲಿ ನಿಮ್ಮ ನಿರ್ಧಾರವೇ ಅಂತಿಮವಾಗುತ್ತದೆ. ಆರಂಭಿಸಿದ ಕೆಲಸ ಕಾರ್ಯಗಳಲ್ಲಿ ಖಚಿತವಾದ ಗೆಲುವು ದೊರೆಯುತ್ತದೆ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವಿರಿ. ಉದ್ಯೋಗಸ್ಥರಿಗೆ ಉನ್ನತ ಅಧಿಕಾರ ದೊರೆಯುತ್ತದೆ. ಒಮ್ಮೆ ತೆಗೆದುಕೊಂಡ ತೀರ್ಮಾನಗಳನ್ನು ಅನಾವಶ್ಯಕವಾಗಿ ಬದಲಿಸುವಿರಿ. ವಿದ್ಯಾರ್ಥಿಗಳ ಜೀವನದಲ್ಲಿ ವಿಶೇಷ ಅಭಿವೃದ್ಧಿ ಇರುತ್ತದೆ. ಆತಂಕದ ಪರಿಸ್ಥಿತಿಯಲ್ಲಿ ಬುದ್ಧಿವಂತಿಕೆಯ ತೀರ್ಮಾನವನ್ನು ತೆಗೆದುಕೊಳ್ಳುವಿರಿ. ಸಮಾಜದಲ್ಲಿ ಗೌರವಯುತಸ್ಥಾನ ಗಳಿಸುವಿರಿ. ಅಧಿಕಾರದ ಆಸೆ ಇರುವುದಿಲ್ಲ. ಆದರೆ ದೊರೆಯುವ ಅವಕಾಶಗಳನ್ನು ದೂರ ಮಾಡುವುದಿಲ್ಲ. ನಿಮ್ಮ ಮನದ ನೋವನ್ನು ಬೇರೆಯವರಿಗೆ ತಿಳಿಸುವುದಿಲ್ಲ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ಇರುತ್ತದೆ. ಕುಟುಂಬದ ಸದಸ್ಯರ ಜೊತೆಯಲ್ಲಿ ಯಾತ್ರಾಸ್ಥಳಕ್ಕೆ ಭೇಟಿ ನೀಡುವಿರಿ.
ಪರಿಹಾರ: ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ.
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ
ಮಕರ ರಾಶಿ
ನಿಮ್ಮ ಒಳ್ಳೆಯತನಕ್ಕೆ ನಿಮ್ಮ ವಿರೋಧಿಗಳು ಮನಸೋಲುತ್ತಾರೆ. ಬಂಧು ಬಳಗದವರಿಂದ ದೂರ ಉಳಿಯುವಿರಿ. ಜೀವನದ ಕಷ್ಟ ನಷ್ಟಗಳನ್ನು ಗೆಲ್ಲುವಿರಿ. ಕ್ರಮೇಣವಾಗಿ ಕುಟುಂಬದ ಸಮಸ್ಯೆಗಳು ಮರೆಯಾಗುತ್ತವೆ. ನಿಮ್ಮ ಪ್ರಯತ್ನದಿಂದ ಕುಟುಂಬದ ಹಣಕಾಸಿನ ಸಮಸ್ಯೆಯೂ ಕಡಿಮೆಯಾಗುತ್ತದೆ. ಉದ್ಯೋಗದಲ್ಲಿ ನಿಮ್ಮ ನಿರೀಕ್ಷೆಯಂತೆ ಯಶಸ್ಸು ಕಾಣುವಿರಿ. ಸ್ವಂತ ಉದ್ಯಮ ಇದ್ದಲ್ಲಿ ಮಧ್ಯಮ ಗತಿಯ ಲಾಭ ದೊರೆಯುತ್ತದೆ. ಮಕ್ಕಳಿಗೆ ಸಮಾಜದಿಂದ ವಿಶೇಷ ಗೌರವ ದೊರೆಯುತ್ತದೆ. ವಿದ್ಯಾರ್ಥಿಗಳು ನಿಧಾನಗತಿಯಲ್ಲಿ ಕಲಿಕೆಯಲ್ಲಿ ಪ್ರಗತಿ ಕಾಣುತ್ತಾರೆ. ನಿಮ್ಮ ತಂದೆಯವರ ಆರೋಗ್ಯದಲ್ಲಿ ತೊಂದರೆ ಇರುತ್ತದೆ. ದಂಪತಿಗಳ ನಡುವೆ ಉತ್ತಮ ಬಾಂಧವ್ಯ ಇರಲಿದೆ. ಪ್ರವಾಸದ ವೇಳೆ ಇಷ್ಟವಾದ ಪದಾರ್ಥ ಒಂದನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಕೆಲಸ ಕಾರ್ಯಗಳ ನಡುವೆ ನಿಮ್ಮ ಆರೋಗ್ಯದ ಬಗ್ಗೆ ಗಮನ ವಹಿಸಲು ವಿಫಲರಾಗುವಿರಿ.
ಪರಿಹಾರ: ಬೆಲ್ಲದಿಂದ ಮಾಡಿದ ಆಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಕೆಂಪು ಬಣ್ಣ
ಕುಂಭ ರಾಶಿ
ಆರೋಗ್ಯದಲ್ಲಿ ಏರಿಳಿತ ಇರಲಿದೆ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ವಹಿಸಿ. ಪತಿಯ ಜೊತೆ ಹಣಕಾಸಿನ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗಲಿದೆ. ನಿಮ್ಮ ಮಾತನ್ನು ಗೌರವಿಸದೇ ಹೋದಲ್ಲಿ ಕೋಪಕ್ಕೆ ಒಳಗಾಗುವಿರಿ. ಕಲುಷಿತ ಆಹಾರ ಸೇವನೆಯಿಂದ ತೊಂದರೆ ಇದೆ. ಧಾರ್ಮಿಕ ಕೆಲಸ ಕಾರ್ಯಗಳ ನೇತೃತ್ವ ವಹಿಸುವಿರಿ. ನಿಮಗೆ ಮೂತ್ರದ ಸೋಂಕು ಉಂಟಾಗುವ ಸಾಧ್ಯತೆ ಇದೆ. ಪತಿಗೆ ಸಂಬಂಧಿಸಿದ ಹಣಕಾಸಿನ ವ್ಯವಹಾರದಲ್ಲಿ ನಿಮ್ಮ ಮಾತೆ ವೇದವಾಕ್ಯವಾಗುತ್ತದೆ. ಅವಿವಾಹಿತರಿಗೆ ವಿವಾಹ ಯೋಗವಿದೆ. ದೇಶವಿದೇಶಗಳಿಗೆ ಪ್ರಯಾಣ ಬೆಳೆಸುವಿರಿ. ನಿಮ್ಮ ಮಕ್ಕಳ ಯಶಸ್ಸಿನಲ್ಲಿ ನಿಮ್ಮ ಪಾತ್ರ ಮುಖ್ಯವಾಗುತ್ತದೆ. ದಂಪತಿಗಳ ನಡುವೆ ಉತ್ತಮ ಬಾಂಧವ್ಯವಿರುತ್ತದೆ. ಉದ್ಯೋಗದಲ್ಲಿ ಆಸಕ್ತಿ ಕಡಿಮೆ ಆಗಲಿದೆ. ಸ್ವಂತ ವ್ಯಾಪಾರ ವ್ಯವಹಾರ ಆರಂಭಿಸುವ ಸಾಧ್ಯತೆಗಳಿವೆ.
ಪರಿಹಾರ: ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ
ಮೀನ ರಾಶಿ
ಹೊಗಳಿಕೆಯ ಮಾತುಗಳಿಗೆ ಮರುಳಾಗಿ ಹಣಕಾಸಿನ ವಿಚಾರದಲ್ಲಿ ನಿಮ್ಮ ಪತಿಯು ತೊಂದರೆಗೆ ಸಿಲುಕುತ್ತಾರೆ. ಗರ್ಭಿಣಿಯರ ಆರೋಗ್ಯದಲ್ಲಿ ಸಮಸ್ಯೆ ಇರುತ್ತದೆ. ಸಂಗೀತ ನಾಟ್ಯವನ್ನು ಕಲಿತವರಿಗೆ ವಿಶೇಷ ಅವಕಾಶ ಮತ್ತು ಗೌರವ ದೊರೆಯಲಿದೆ. ವಾಸಸ್ಥಳವನ್ನು ಬದಲಿಸುವಿರಿ. ವಿದೇಶಕ್ಕೆ ತರಳುವ ಅವಕಾಶವೊಂದು ಕೈ ತಪ್ಪಲಿದೆ. ಪತಿಯ ಜೊತೆಯಲ್ಲಿ ಕಾರಣ ಇಲ್ಲದೆ ವಿವಾದಗಳಲ್ಲಿ ತೊಡಗುವಿರಿ. ಹೊಟ್ಟೆಗೆ ಸಂಬಂಧಿಸಿದ ತೊಂದರೆ ಇರಲಿದೆ. ಯಾರನ್ನೂ ಸುಲಭವಾಗಿ ನಂಬುವುದಿಲ್ಲ. ಪತಿಯನ್ನು ಸಹ ಅನುಮಾನಿಸುವಿರಿ. ವದಂತಿಗಳಿಗೆ ಮಾರು ಹೋಗುವಿರಿ. ದಂಪತಿಗಳ ನಡುವೆ ಉತ್ಸವ ಬಾಂಧವ್ಯ ಇರುವುದಿಲ್ಲ. ಕೆಲಸದ ಒತ್ತಡವನ್ನು ಎದುರಿಸಲಾಗದೆ ಉದ್ಯೋಗವನ್ನು ಬದಲಿಸುವಿರಿ. ಸೋದರನಿಗೆ ಹಣದ ಸಹಾಯ ಮಾಡುವಿರಿ. ಪರಿಚಯ ಇರುವವರ ಜೊತೆಯಲ್ಲಿ ವಿವಾಹವಾಗುತ್ತದೆ ಸುಲಭದ ಕೆಲಸ ಕಾರ್ಯಗಳನ್ನು ಹೆಚ್ಚಿನ ಪರಿಶ್ರಮದಿಂದ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ
ಪರಿಹಾರ: ಮಕ್ಕಳಿಗೆ ಗೋಧಿಯಿಂದ ತಯಾರಿಸಿದ ಸಿಹಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಹಳದಿ ಬಣ್ಣ
ಬರಹ: ಹೆಚ್. ಸತೀಶ್, ಜ್ಯೋತಿಷಿ, ಬೆಂಗಳೂರು
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ಸ್ತ್ರೀ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).