Hindustan Times Kannada Authors list: Get the complete list of HT Kannada authors | Hindustan Times Kannada
ಕನ್ನಡ ಸುದ್ದಿ  /  ನಮ್ಮ ಲೇಖಕರು

ನಮ್ಮ ಲೇಖಕರು

Manjunath B Kotagunasi

TwittereMail
ಮಂಜುನಾಥ ಕೊಟಗುಣಸಿ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಚೀಫ್‌ ಕಂಟೆಂಟ್‌ ಪ್ರೊಡ್ಯೂಸರ್‌, ಮನರಂಜನೆ ವಿಭಾಗದಲ್ಲಿ ಕಾರ್ಯನಿರ್ವಹಣೆ. ಈ ಮೊದಲು ವಿಜಯವಾಣಿ, ವಿಶ್ವವಾಣಿ ಪತ್ರಿಕೆಗಳು ಮತ್ತು ಟಿವಿ9 ಸುದ್ದಿವಾಹಿನಿಯ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಕೆಲಸ ಮಾಡಿದ ಅನುಭವ. ಸಿನಿಮಾ ಮೋಹಿ, ಕ್ರಿಕೆಟ್‌ ಪ್ರಿಯ. ಧಾರವಾಡ ಜಿಲ್ಲೆಯ ಕಲಘಟಗಿ ನಿವಾಸಿ.

Kiran Kumar I G

TwittereMail
ಕಿರಣ್ ಐ.ಜಿ.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜನರ ಬದುಕು ಸುಧಾರಿಸಬಲ್ಲ ಟೆಕ್‌ ಮತ್ತು ಗ್ಯಾಜೆಟ್ ಇವರ ಆಸಕ್ತಿಯ ಕ್ಷೇತ್ರ. ಯಾವುದೇ ವಿಷಯವಾದರೂ ಶ್ರದ್ಧೆಯಿಂದ ಕಲಿಯಬಲ್ಲೆ, ಬರೆಯಬಲ್ಲೆ ಎನ್ನುವುದು ಇವರ ವಿಶ್ವಾಸ. ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕ ವೆಬ್ ಹಾಗೂ ಟಿವಿ9 ಕನ್ನಡ ಡಿಜಿಟಲ್‌ನ ವಿವಿಧ ವಿಭಾಗಗಳಲ್ಲಿ ಒಟ್ಟು 10 ವರ್ಷ ಕೆಲಸ ಮಾಡಿದ ಅನುಭವ. ಇಮೇಲ್: kiran.kumar@htdigital.in

Prasanna Kumar P N

TwittereMail
ಪ್ರಸನ್ನಕುಮಾರ್ ಪಿ.ಎನ್.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಸಂಜೆವಾಣಿ, ವಿಶ್ವವಾಣಿ, ಪ್ರಜಾವಾಣಿ, ಈಟಿವಿ ಭಾರತ್, ನ್ಯೂಸ್ ಫಸ್ಟ್​ ಮಾಧ್ಯಮ ಸಂಸ್ಥೆಗಳಲ್ಲಿ ಒಟ್ಟು 7 ವರ್ಷ ಸೇವೆ ಸಲ್ಲಿಸಿದ ಅನುಭವ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಲಿಂಗಯ್ಯನಪಾಳ್ಯ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.

Reshma

TwittereMail
ರೇಷ್ಮಾ ಶೆಟ್ಟಿ: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜೀವನಶೈಲಿ (ಲೈಫ್‌ಸ್ಟೈಲ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ ದಿನಪತ್ರಿಕೆಯ ವಿವಿಧ ವಿಭಾಗಗಳಲ್ಲಿ 9 ವರ್ಷಗಳ ಅನುಭವ. ಆರೋಗ್ಯ, ಆಹಾರ, ಸಿನಿಮಾ, ಕಿರುತೆರೆ ಆಸಕ್ತಿಯ ಕ್ಷೇತ್ರಗಳು. ಕುಂದಾಪುರ ತಾಲ್ಲೂಕಿನ ವಕ್ವಾಡಿ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.

Prasanna Kumar PN

TwittereMail
ಪ್ರಸನ್ನಕುಮಾರ್ ಪಿ.ಎನ್.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಸಂಜೆವಾಣಿ, ವಿಶ್ವವಾಣಿ, ಪ್ರಜಾವಾಣಿ, ಈಟಿವಿ ಭಾರತ್, ನ್ಯೂಸ್ ಫಸ್ಟ್​ ಮಾಧ್ಯಮ ಸಂಸ್ಥೆಗಳಲ್ಲಿ ಒಟ್ಟು 7 ವರ್ಷ ಸೇವೆ ಸಲ್ಲಿಸಿದ ಅನುಭವ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಲಿಂಗಯ್ಯನಪಾಳ್ಯ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.

Jayaraj

TwittereMail
ಜಯರಾಜ್‌ ಅಮಿನ್: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್‌ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಈಟಿವಿ ಭಾರತ್, ಇನ್‌ಶಾರ್ಟ್ಸ್‌ ವಿವಿಧ ವಿಭಾಗಗಳಲ್ಲಿ ಒಟ್ಟು 6 ವರ್ಷಗಳ ಅನುಭವ. ಕಲೆ, ಸಾಹಿತ್ಯ, ಭೂಗೋಳದ ಬಗ್ಗೆ ಹೆಚ್ಚು ಆಸಕ್ತಿ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಹೊಸಮೊಗ್ರು ನಿವಾಸಿ.

Rakshitha Sowmya

TwittereMail
ರಕ್ಷಿತಾ ಸೌಮ್ಯ: 'ಹಿಂದೂಸ್ತಾನ್‌ ಟೈಮ್ಸ್‌ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್‌. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಮನರಂಜನೆ ಮತ್ತು ಆಹಾರ ಇಷ್ಟದ ಕ್ಷೇತ್ರಗಳು. ಮೈಸೂರು ಆಕಾಶವಾಣಿ ಕೇಂದ್ರ, ಜ್ಞಾನವಾಣಿಯಲ್ಲಿ ಉದ್ಘೋಷಕಿ, ಸ್ಥಳೀಯ ಸುದ್ದಿ ವಾಹಿನಿಯಲ್ಲಿ ನ್ಯೂಸ್‌ ಆಂಕರ್‌, ಪಬ್ಲಿಕ್‌ ಟಿವಿ, ಈ ಟಿವಿ ಭಾರತ್‌, ನಮ್ಮ ಕನ್ನಡ ಡಿಜಿಟಲ್‌ ಸೇರಿದಂತೆ ಮಾಧ್ಯಮ ಕ್ಷೇತ್ರದಲ್ಲಿ 14 ವರ್ಷ ಅನುಭವ. ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ನಿವಾಸಿ.

Praveen Chandra B

TwittereMail
ಪ್ರವೀಣ್ ಚಂದ್ರ ಪುತ್ತೂರು: 'ಹಿಂದೂಸ್ತಾನ್‌ ಟೈಮ್ಸ್‌ ಕನ್ನಡ'ದಲ್ಲಿ ಸಹಾಯಕ ಸುದ್ದಿ ಸಂಪಾದಕ. ಒನ್‌ ಇಂಡಿಯಾ, ವಿಜಯ ಕರ್ನಾಟಕದಲ್ಲಿ ಒಟ್ಟು 16 ವರ್ಷಗಳ ಅನುಭವ. ಆನ್‌ಲೈನ್‌ ಪತ್ರಿಕೋದ್ಯಮದಲ್ಲಿ ಎತ್ತರದ ಸಾಧನೆ ಮಾಡುವ ಕನಸು. ಡಿಜಿಟಲ್‌ ಜಗತ್ತಿನಲ್ಲಿ ಹೊಸತನ್ನು ಕಲಿಯುವ ಆಸಕ್ತಿ. ಮನರಂಜನೆ, ಶಿಕ್ಷಣ, ಉದ್ಯೋಗ, ತಂತ್ರಜ್ಞಾನ, ವಾಣಿಜ್ಯ, ಕರ್ನಾಟಕ, ದೇಶ- ವಿದೇಶ, ಸಿನಿಮಾ, ಷೇರುಪೇಟೆ, ಜೀವನಶೈಲಿ... ಹಲವು ವಿಚಾರಗಳ ಬಗ್ಗೆ ತಳಸ್ಪರ್ಶಿಯಾಗಿ ಬರೆಯಬಲ್ಲರು. ಎಸ್‌ಇಒ ತಂತ್ರಗಳನ್ನು ಪತ್ರಿಕೋದ್ಯಮದ ಹದಕ್ಕೆ ಪಳಗಿಸುವ ಸಾಮರ್ಥ್ಯ ರೂಢಿಸಿಕೊಂಡವರು. ಇಮೇಲ್: praveen.chandra@htdigital.in

Manjunath Kotagunasi

TwittereMail
ಮಂಜುನಾಥ ಕೊಟಗುಣಸಿ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಚೀಫ್‌ ಕಂಟೆಂಟ್‌ ಪ್ರೊಡ್ಯೂಸರ್‌, ಮನರಂಜನೆ ವಿಭಾಗದಲ್ಲಿ ಕಾರ್ಯನಿರ್ವಹಣೆ. ಈ ಮೊದಲು ವಿಜಯವಾಣಿ, ವಿಶ್ವವಾಣಿ ಪತ್ರಿಕೆಗಳು ಮತ್ತು ಟಿವಿ9 ಸುದ್ದಿವಾಹಿನಿಯ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಕೆಲಸ ಮಾಡಿದ ಅನುಭವ. ಸಿನಿಮಾ ಮೋಹಿ, ಕ್ರಿಕೆಟ್‌ ಪ್ರಿಯ. ಧಾರವಾಡ ಜಿಲ್ಲೆಯ ಕಲಘಟಗಿ ನಿವಾಸಿ.

prashanth.br@htdigital.in

eMail
ಪ್ರಶಾಂತ್ ಬಿ.ಆರ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ವಿಡಿಯೋ ಪ್ರೊಡ್ಯೂಸರ್. ಕಸ್ತೂರಿ, ಸಮಯ ಟಿವಿ, ಸುದ್ದಿ ಟಿವಿ, ಜನಶ್ರೀ, ದಿಗ್ವಿಜಯ ಚಾನೆಲ್‌ನಲ್ಲಿ ಒಟ್ಟು 16 ವರ್ಷಗಳ ಅನುಭವ. ಊರುಗಳನ್ನು ಸುತ್ತುವುದು, ಸಿನಿಮಾ ನೋಡುವುದು, ಅಡುಗೆ ಮಾಡುವುದು ಹವ್ಯಾಸ. ಕ್ರಿಕೆಟ್ ಅಭಿಮಾನಿ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಉಜಿರೆ ಸ್ವಂತ ಊರು. ಇಮೇಲ್: prashanth.br@htdigital.in

D M Ghanashyam

TwittereMail
ಡಿ.ಎಂ.ಘನಶ್ಯಾಮ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸಂಪಾದಕ. ಊರು ಸುತ್ತುವುದು, ಜನರ ಒಡನಾಟ, ಪುಸ್ತಕಗಳನ್ನು ಓದುವುದು ಇಷ್ಟ. ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ಪ್ರಜಾವಾಣಿ ದಿನಪತ್ರಿಕೆಗಳ ವಿವಿಧ ವಿಭಾಗಗಳು ಹಾಗೂ ಟಿವಿ9 ಜಾಲತಾಣದಲ್ಲಿ ಒಟ್ಟು 20 ವರ್ಷ ಕಾರ್ಯನಿರ್ವಹಿಸಿದ ಅನುಭವ. ಫೀಚರ್ ರೈಟಿಂಗ್ ಇಷ್ಟದ ಪ್ರಕಾರ. ಆರ್ಥಿಕ ವಿದ್ಯಮಾನ, ಕದನ ಕಥನ, ಅಧ್ಯಾತ್ಮ, ಗ್ರಾಮೀಣ ಅಭಿವೃದ್ಧಿ ಕುರಿತು ಆಸ್ಥೆಯಿಂದ ಬರೆಯುತ್ತಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಸ್ವಂತ ಊರು. ಸಮಾಜದಲ್ಲಿ ಒಳಿತಿನ ಕನಸು, ಆಕಾಂಕ್ಷೆ, ಮೌಲ್ಯ ಬಿತ್ತುವುದೇ ಪತ್ರಿಕೋದ್ಯಮದ ಮೂಲ ಉದ್ದೇಶ ಎಂದು ನಂಬಿದವರು. ಇಮೇಲ್: dm.ghanashyam@htdigital.in

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.

Raghavendra M Y

TwittereMail
ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.