ಇಂಡೋ-ಆಫ್ರಿಕಾ ಮೂರನೇ ಟಿ20; ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ಕೆ
ಕನ್ನಡ ಸುದ್ದಿ  /  ಕ್ರಿಕೆಟ್  /  ಇಂಡೋ-ಆಫ್ರಿಕಾ ಮೂರನೇ ಟಿ20; ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ಕೆ

ಇಂಡೋ-ಆಫ್ರಿಕಾ ಮೂರನೇ ಟಿ20; ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ಕೆ

South Africa vs India: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡವು ಮೊದಲಿಗೆ ಬ್ಯಾಟಿಂಗ್‌ ಮಾಡುತ್ತಿದೆ.

ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ
ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ20 ಪಂದ್ಯದಲ್ಲಿ (India vs South Africa 3rd T20I) ಟಾಸ್‌ ಗೆದ್ದ ಸೌತ್‌ ಆಫ್ರಿಕಾ ಮೊದಲಿಗೆ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಜೋಹಾನ್ಸ್​ಬರ್ಗ್​ನ ವಾಂಡರರ್ಸ್ ಮೈದಾನದಲ್ಲಿ (Wanderers Stadium, Johannesburg) ನಡೆಯುತ್ತಿರುವ ಪಂದ್ಯದಲ್ಲಿಯೂ ಭಾರತ ಮೊದಲಿಗೆ ಬ್ಯಾಟಿಂಗ್‌ ನಡೆಸಲಿದೆ.

ಪಂದ್ಯಕ್ಕಾಗಿ ದಕ್ಷಿಣ ಆಫ್ರಿಕಾ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದೆ. ಅತ್ತ ಭಾರತ ತಂಡದ ಆಡುವ ಬಳಗದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಎರಡನೇ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದು ಕೂಡಾ ಆಡುತ್ತಿದೆ.

ಇದನ್ನೂ ಓದಿ | ಭಾರತ ವಿಶ್ವಕಪ್ ಗೆದ್ದ ಮೈದಾನದಲ್ಲೇ 3ನೇ ಟಿ20; ಅಂತಿಮ ಪಂದ್ಯಕ್ಕೂ ಇದೆಯೇ ಮಳೆಯ ಆತಂಕ? ಇಲ್ಲಿದೆ ಮಾಹಿತಿ

ಈಗಾಗಲೇ ದಕ್ಷಿಣ ಆಫ್ರಿಕಾ ತಂಡವು ಎರಡನೇ ಪಂದ್ಯ ಗೆದ್ದು ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಪಡೆದಿದೆ. ಹೀಗಾಗಿ ಉಭಯ ತಂಡಗಳಿಗೂ ಈ ಪಂದ್ಯ ಮಹತ್ವದ್ದಾಗಿದೆ. ದಕ್ಷಿಣ ಆಫ್ರಿಕಾ ಸರಣಿ ಗೆಲುವಿಗೆ ಎದುರು ನೋಡುತ್ತಿದ್ದರೆ, ಭಾರತಕ್ಕೆ ಸರಣಿ ಸಮಬಲಗೊಳಿಸುವ ಅವಕಾಶವಿದೆ.

ಪಿಚ್​ ರಿಪೋರ್ಟ್

ಜೋಹಾನ್ಸ್‌ಬರ್ಗ್‌ನ ದಿ ವಾಂಡರರ್ಸ್ ಸ್ಟೇಡಿಯಂನಲ್ಲಿ ಸಮತೋಲಿತ ಪ್ರದರ್ಶನ ನಿರೀಕ್ಷಿಸಬಹುದು. ಬ್ಯಾಟರ್‌ಗಳು ಮತ್ತು ಬೌಲರ್‌ಗಳಿಂದ ಸಮಾನವಾದ ಪೈಪೋಟಿ ಸಾಧ್ಯವಿದೆ. ಒಟ್ಟು 10 ಪಂದ್ಯಗಳು ಈ ಮೈದಾನದಲ್ಲಿ ನಡೆದಿವೆ. ಮೊದಲು ಬ್ಯಾಟಿಂಗ್ ನಡೆಸಿದ ತಂಡಗಳು 3 ಬಾರಿ, ಚೇಸಿಂಗ್ ನಡೆಸಿದ ತಂಡಗಳು 7 ಬಾರಿ ಗೆಲುವು ಸಾಧಿಸಿವೆ.

ಪಂದ್ಯದ ವಿವರ

ಪಂದ್ಯದ ಆರಂಭ - ರಾತ್ರಿ 8.30ಕ್ಕೆ (ಭಾರತೀಯ ಕಾಲಮಾನ)

ಸ್ಥಳ- ವಾಂಡರರ್ಸ್ ಮೈದಾನ​, ಜೋಹಾನ್ಸ್​ಬರ್ಗ್.

ನೇರ ಪ್ರಸಾರ - ಸ್ಟಾರ್ ಸ್ಪೋರ್ಟ್ಸ್​ ನೆಟ್ವರ್ಕ್, ಡಿಸ್ನಿ + ಹಾಟ್​ಸ್ಟಾರ್​.

ಉಭಯ ತಂಡಗಳ ಮುಖಾಮುಖಿ

ಒಟ್ಟು ಪಂದ್ಯಗಳು - 25

ದಕ್ಷಿಣ ಆಫ್ರಿಕಾ ಗೆಲುವು - 11

ಟೀಮ್ ಇಂಡಿಯಾ ಗೆಲುವು - 13

ಫಲಿತಾಂಶ ಇಲ್ಲದೆ ಅಂತ್ಯ - 01

3ನೇ ಟಿ20 ಪಂದ್ಯಕ್ಕೆ ಭಾರತ ಆಡುವ ಬಳಗ

ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್‌ (ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ(ವಿಕೆಟ್‌ ಕೀಪರ್), ರವೀಂದ್ರ ಜಡೇಜಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್.

ದಕ್ಷಿಣ ಆಫ್ರಿಕಾ ಆಡುವ ಬಳಗ

ರೀಜಾ ಹೆಂಡ್ರಿಕ್ಸ್, ಮ್ಯಾಥ್ಯೂ ಬ್ರೀಟ್ಜ್ಕೆ, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್‌ ಕೀಪರ್), ಡೇವಿಡ್ ಮಿಲ್ಲರ್, ಡೊನೊವನ್ ಫೆರೆರಾ, ಆಂಡಿಲ್ ಫೆಹ್ಲುಕ್ವಾಯೊ, ಕೇಶವ್ ಮಹಾರಾಜ್, ಲಿಜಾದ್ ವಿಲಿಯಮ್ಸ್, ತಬ್ರೈಜ್ ಶಮ್ಸಿ, ನಾಂಡ್ರೆ ಬರ್ಗರ್.

Whats_app_banner