ಚಾಂಪಿಯನ್ಸ್ ಟ್ರೋಫಿ 2025: ಭಾರತ-ಪಾಕಿಸ್ತಾನ ಹೊರತುಪಡಿಸಿ ಎಲ್ಲಾ ತಂಡಗಳು ಪ್ರಕಟ, ಹೀಗಿವೆ 6 ಬಲಿಷ್ಠ ಟೀಮ್ಸ್
2025ರ ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಒಟ್ಟು ಎಂಟು ತಂಡಗಳು ಭಾಗವಹಿಸಲಿದ್ದು, ಈಗಾಗಲೇ 6 ತಂಡಗಳು ತಮ್ಮ ತಾತ್ಕಾಲಿಕ ತಂಡವನ್ನು ಪ್ರಕಟಿಸಿವೆ. ಭಾರತ ಮತ್ತು ಆತಿಥೇಯ ಪಾಕಿಸ್ತಾನ ತಂಡ ಇನ್ನಷ್ಟೇ ಪ್ರಕಟವಾಗಬೇಕಿದೆ.

ಬರೋಬ್ಬರಿ 8 ವರ್ಷಗಳ ನಂತರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ನಡೆಯುತ್ತಿದೆ. ಪಂದ್ಯಾವಳಿಯು ಫೆಬ್ರುವರಿ 19ರಿಂದ ಪಾಕಿಸ್ತಾನ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆಯಲಿದೆ. ಒಟ್ಟು ಎಂಟು ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದ್ದು, ಭಾರತದ ಎಲ್ಲಾ ಪಂದ್ಯಗಳು ದುಬೈನಲ್ಲಿ ನಡೆಯಲಿದೆ. 2017ರ ಫೈನಲ್‌ನಲ್ಲಿ ಭಾರತ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಪಾಕಿಸ್ತಾನ ತಂಡವು ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿಯಲಿದೆ. ಈಗಾಗಲೇ ಭಾರತ ಮತ್ತು ಪಾಕಿಸ್ತಾನ ತಂಡವನ್ನು ಹೊರತುಪಡಿಸಿ ಉಳಿದ ಎಲ್ಲಾ ತಂಡಗಳು ಚಾಂಪಿಯನ್ಸ್ ಟ್ರೋಫಿಗೆ ತಂಡವನ್ನು ಪ್ರಕಟಿಸಿವೆ.
ಭಾರತ ಮತ್ತು ಪಾಕಿಸ್ತಾನದೊಂದಿಗೆ ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ತಂಡಗಳು ಚಾಂಪಿಯನ್ಸ್ ಟ್ರೋಫಿಯ 'ಎ' ಗುಂಪಿನಲ್ಲಿದ್ದರೆ, 'ಬಿ' ಗುಂಪಿನಲ್ಲಿ ಅಫ್ಘಾನಿಸ್ತಾನ, ಇಂಗ್ಲೆಂಡ್, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳಿವೆ.
ಟೂರ್ನಿಗೆ ತಾತ್ಕಾಲಿಕ ತಂಡದ ಪಟ್ಟಿಯನ್ನು ಸಲ್ಲಿಸಲು ಐಸಿಸಿ ಜನವರಿ 12ರ ಗಡುವು ನಿಗದಿಪಡಿಸಿತ್ತು. ಈಗಾಗಲೇ ಆರು ತಂಡಗಳು ತಮ್ಮ 15 ಸದಸ್ಯರ ತಂಡವನ್ನು ಹೆಸರಿಸಿವೆ. ಆದರೆ ಆತಿಥೇಯ ಪಾಕಿಸ್ತಾನ ಮತ್ತು ಭಾರತ ಇನ್ನೂ ತಮ್ಮ ತಂಡವನ್ನು ಬಹಿರಂಗಪಡಿಸಿಲ್ಲ. ಜಸ್ಪ್ರೀತ್ ಬುಮ್ರಾ ಮತ್ತು ಕುಲ್ದೀಪ್ ಯಾದವ್ ಅವರ ಫಿಟ್ನೆಸ್, ಬಿಸಿಸಿಐಗೆ ಮುಖ್ಯ ಕಾಳಜಿಯಾಗಿದೆ. ಹೀಗಾಗಿ ತಂಡದ ಪ್ರಕಟಣೆಗೆ ಹೆಚ್ಚುವರಿ ಅವಧಿಯನ್ನು ಬಿಸಿಸಿಐ ಕೋರಿದೆ ಎಂದು ವರದಿಯಾಗಿದೆ. ಹೀಗಾಗಿ ಜನವರಿ 19ರಂದು ಭಾರತ ತಂಡ ಪ್ರಕಟಗೊಳ್ಳುವ ನಿರೀಕ್ಷೆಯಿದೆ.
ಚಾಂಪಿಯನ್ಸ್ ಟ್ರೋಫಿಗೆ ಈಗಾಗಲೇ ಪ್ರಕಟಿಸಲಾದ ತಂಡಗಳ ಗುಂಪುವಾರು ವಿವರ
ಗ್ರೂಪ್ ಎ : (ಭಾರತ ಮತ್ತು ಪಾಕಿಸ್ತಾನ ತಂಡಗಳು ಇನ್ನಷ್ಟೇ ಪ್ರಕಟವಾಗಬೇಕಿದೆ).
ನ್ಯೂಜಿಲೆಂಡ್ ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕಲ್ ಬ್ರೇಸ್ವೆಲ್, ಮಾರ್ಕ್ ಚಾಪ್ಮನ್, ಡಿವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲಾಥಮ್, ಡೇರಿಲ್ ಮಿಚೆಲ್, ವಿಲ್ ಒ'ರೂರ್ಕ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಬೆನ್ ಸಿಯರ್ಸ್, ನಾಥನ್ ಸ್ಮಿತ್, ಕೇನ್ ವಿಲಿಯಮ್ಸನ್, ವಿಲ್ ಯಂಗ್.
ಬಾಂಗ್ಲಾದೇಶ ತಂಡ: ನಜ್ಮುಲ್ ಹುಸೇನ್ ಶಾಂಟೊ (ನಾಯಕ), ಸೌಮ್ಯ ಸರ್ಕಾರ್, ತಂಜಿದ್ ಹಸನ್, ತೌಹಿದ್ ಹೃದೋಯ್, ಮುಷ್ಫಿಕರ್ ರಹೀಮ್, ಎಂಡಿ ಮಹಮೂದ್ ಉಲ್ಲಾ, ಜೇಕರ್ ಅಲಿ ಅನಿಕ್, ಮೆಹಿದಿ ಹಸನ್ ಮಿರಾಜ್, ರಿಷದ್ ಹುಸೇನ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರಹಮಾನ್, ಪರ್ವೇಜ್ ಹುಸೇನ್, ನಸುಮ್ ಅಹ್ಮದ್, ತಂಜೀಮ್ ಹಸನ್ ಸಾಕಿಬ್, ನಹೀದ್ ರಾನಾ
ಗ್ರೂಪ್ ಬಿ
ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜೇಕಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸ್, ಬೆನ್ ಡಕೆಟ್, ಜೇಮಿ ಓವರ್ಟನ್, ಜೇಮಿ ಸ್ಮಿತ್, ಲಿಯಾಮ್ ಲಿವಿಂಗ್‌ಸ್ಟನ್, ಆದಿಲ್ ರಶೀದ್, ಜೋ ರೂಟ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.
ಅಫ್ಘಾನಿಸ್ತಾನ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ಇಬ್ರಾಹಿಂ ಜದ್ರಾನ್, ರಹಮಾನುಲ್ಲಾ ಗುರ್ಬಾಜ್, ಸಿದಿಕುಲ್ಲಾ ಅಟಲ್, ರಹಮತ್ ಶಾ, ಇಕ್ರಮ್ ಅಲಿಖಿಲ್, ಗುಲ್ಬದಿನ್ ನೈಬ್, ಅಜ್ಮತುಲ್ಲಾ ಒಮರ್ಜೈ, ಮೊಹಮ್ಮದ್ ನಬಿ, ರಶೀದ್ ಖಾನ್, ಎಎಂ ಘಜನ್ಫರ್, ನೂರ್ ಅಹ್ಮದ್, ಫಜಲ್ಹಾಕ್ ಫಾರೂಕಿ, ಫರೀದ್ ಮಲಿಕ್, ನವೀದ್ ಜದ್ರನ್.
ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಆ್ಯರೋನ್ ಹಾರ್ಡಿ, ಜೋಶ್ ಹೇಜಲ್ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲಬುಶೇನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ಶಾರ್ಟ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯ್ನಸ್, ಆಡಮ್ ಜಂಪಾ.
ದಕ್ಷಿಣ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಟೋನಿ ಡಿ ಜೋರ್ಜಿ, ಮಾರ್ಕೊ ಜಾನ್ಸೆನ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಮ್, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಲುಂಗಿ ಎನ್ಗಿಡಿ. ಅನ್ರಿಚ್ ನಾರ್ಟ್ಜೆ, ಕಗಿಸೊ ರಬಾಡ, ರಿಯಾನ್ ರಿಕೆಲ್ಟನ್, ತಬ್ರೈಜ್ ಶಮ್ಸಿ, ಟ್ರಿಸ್ಟಾನ್ ಸ್ಟಬ್ಸ್, ರಾಸ್ಸಿ ವಾನ್ ಡೆರ್ ಡಸ್ಸೆನ್.
