Asia Cup Final Records: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾಗೆ ಭಾರಿ ಗೆಲುವು ಸೇರಿ ಏಷ್ಯಾಕಪ್ ಫೈನಲ್‌ನಲ್ಲಿ ದಾಖಲಾದ ರೆಕಾರ್ಡ್ಸ್ ಇವು
ಕನ್ನಡ ಸುದ್ದಿ  /  ಕ್ರಿಕೆಟ್  /  Asia Cup Final Records: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾಗೆ ಭಾರಿ ಗೆಲುವು ಸೇರಿ ಏಷ್ಯಾಕಪ್ ಫೈನಲ್‌ನಲ್ಲಿ ದಾಖಲಾದ ರೆಕಾರ್ಡ್ಸ್ ಇವು

Asia Cup Final Records: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾಗೆ ಭಾರಿ ಗೆಲುವು ಸೇರಿ ಏಷ್ಯಾಕಪ್ ಫೈನಲ್‌ನಲ್ಲಿ ದಾಖಲಾದ ರೆಕಾರ್ಡ್ಸ್ ಇವು

ಫೈನಲ್‌ ಪಂದ್ಯದಲ್ಲಿ ಶ್ರೀಲಂಕಾವನ್ನು ಮಣಿಸಿ ಏಷ್ಯಾಕಪ್ ಗೆದ್ದಿರುವ ಟೀಂ ಇಂಡಿಯಾ ಹಲವು ದಾಖಲೆಗಳನ್ನು ಬರೆದಿದೆ. ಏಷ್ಯಾಕಪ್ ಫೈನಲ್‌ನಲ್ಲಿ ದಾಖಲೆಯಾದ ರೆಕಾರ್ಡ್ಸ್ ಪಟ್ಟಿ ಇಲ್ಲಿದೆ.

ಶ್ರೀಲಂಕಾವನ್ನು ಮಣಿಸಿ 2023ರ ಏಷ್ಯಾಕಪ್ ಟ್ರೋಫಿಯನ್ನು ಗೆದ್ದ ಟೀಂ ಇಂಡಿಯಾ (PTI)
ಶ್ರೀಲಂಕಾವನ್ನು ಮಣಿಸಿ 2023ರ ಏಷ್ಯಾಕಪ್ ಟ್ರೋಫಿಯನ್ನು ಗೆದ್ದ ಟೀಂ ಇಂಡಿಯಾ (PTI)

2023ರ ಏಷ್ಯಾಕಪ್ ಫೈನಲ್‌ನ (Asia Cup Final 2023) ಇಡೀ ಪಂದ್ಯ 22 ರಿಂದ 23 ಓವರ್‌ಗಳಲ್ಲಿ ಮುಗಿದು ಹೋಗುತ್ತದೆ ಎಂದು ಯಾರೂ ಊಹೆ ಕೂಡ ಮಾಡಿರಲಿಲ್ಲ. ಟೀಂ ಇಂಡಿಯಾದ (Team India) ಸೂಪರ್ ಸ್ಟಾರ್ ಸಿರಾಜ್ (Mohammed Siraj) ಬೌಲಿಂಗ್‌ನಿಂದಾಗಿ ಏಷ್ಯಾಕಪ್ ಫೈನಲ್ ಪಂದ್ಯವನ್ನು ಭಾರತ 10 ವಿಕೆಟ್‌ಗಳಿಂದ ಗೆದ್ದುಕೊಂಡಿದೆ.

ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ಭಾನುವಾರ (ಸೆಪ್ಟೆಂಬರ್ 17) ಶ್ರೀಲಂಕಾ (India vs Sri Lanka Final) ನೀಡಿದ್ದ 51 ರನ್‌ಗಳ ಗುರಿಯನ್ನು ಟೀಂ ಇಂಡಿಯಾ ಕೇವಲ 6.1 ಓವರ್‌ನಲ್ಲಿ ಮುಟ್ಟಿತ್ತು. ಇನ್ನೂ 263 ಎಸೆತಗಳು ಬಾಕಿ ಇರುವಾಗಲೇ ಗೆದ್ದು ಟ್ರೋಫಿಯನ್ನು ಎತ್ತಿ ಹಿಡಿದಿದೆ.

ಭಾರತ ಕ್ರಿಕೆಟ್ (Cricket) ತಂಡದ ವೇಗಿ ಮೊಹಮ್ಮದ್ ಸಿರಾಜ್ ಆರು ವಿಕೆಟ್‌ಗಳನ್ನು ಪಡೆದು ಶ್ರೀಲಂಕಾ ಕೇವಲ 15.2 ಓವರ್‌ಗಳಲ್ಲಿ 50 ರನ್‌ಗಳಿಗೆ ಆಲೌಟ್ ಆಗುವಂತೆ ಮಾಡಿದರು. ಬಳಿಕ ಟೀಂ ಇಂಡಿಯಾ 6.1 ಓವರ್‌ನಲ್ಲಿ ಲಂಕಾದ 51 ರನ್‌ಗಳ ಗುರಿಯನ್ನು ಮುಟ್ಟಿತ್ತು. ಈ ಪಂದ್ಯದಲ್ಲಿ ಕೆಲವು ದಾಖಲೆಗಳು ಸೃಷ್ಟಿಯಾಗಿವೆ. ಅದರ ಮಾಹಿತಿ ಇಲ್ಲಿದೆ.

ಏಷ್ಯಾಕಪ್ 2023ರ ಫೈನಲ್‌ ಪಂದ್ಯದಲ್ಲಿ ದಾಖಲಾದ ಪ್ರಮುಖ ದಾಖಲೆಗಳಿವು

  • ಟೀಂ ಇಂಡಿಯಾ 8ನೇ ಬಾರಿ ಏಷ್ಯಾಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಏಷ್ಯಾಕಪ್ ಟ್ರೋಫಿಯನ್ನು ಅತಿ ಹೆಚ್ಚು ಬಾರಿ ಗೆದ್ದ ತಂಡ ಎಂಬ ದಾಖಲೆಯನ್ನು ಟೀಂ ಇಂಡಿಯಾ ಬರೆದಿದೆ
  • ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಸಿರಾಜ್ ಏಕದಿನ ಇತಿಹಾಸದಲ್ಲಿ ಒಂದು ಪಂದ್ಯದಲ್ಲಿ ವೇಗವಾಗಿ (16 ಎಸೆತ) 5 ವಿಕೆಟ್ ಗಳಿಸಿದ ದಾಖಲೆಯನ್ನು ಸರಿಗಟ್ಟಿದರು. 2003 ರಲ್ಲಿ ಲಂಕಾ ವೇಗಿ ಚಮಿಂದಾ ವಾಸ್ ಏಕದಿನ ಪಂದ್ಯದಲ್ಲಿ 16 ಎಸೆತಗಳಲ್ಲಿ 5 ವಿಕೆಟ್‌ಗಳ ಸಾಧನೆ ಮಾಡಿದ್ದರು. ಇದೀಗ 20 ವರ್ಷಗಳ ನಂತರ ಸಿರಾಜ್ ಆ ದಾಖಲೆಯನ್ನು ಸರಿಗಟ್ಟಿದ್ದಾರೆ
  • ಮೊಹಮ್ಮದ್ ಸಿರಾಜ್ ಏಕದಿನ ಪಂದ್ಯವೊಂದರಲ್ಲಿ ಒಂದೇ ಓವರ್‌ನಲ್ಲಿ ನಾಲ್ಕು ವಿಕೆಟ್ ಪಡೆದ ಭಾರತದ ಮೊದಲ ಬೌಲರ್ ಎಂಬ ದಾಖಲೆ ಬರೆದಿದ್ದಾರೆ. ವಿಶ್ವದ ನಾಲ್ಕನೇ ಬೌಲರ್ ಎನಿಸಿದ್ದಾರೆ.
  • ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಇನ್ನೂ 263 ಎಸೆತಗಳು ಬಾಕಿ ಇರುವಂತೆಯೇ ಗೆಲುವು ಸಾಧಿಸಿದೆ. ಇದು ಏಕದಿನ ಕ್ರಿಕೆಟ್‌ನಲ್ಲಿ ಚೇಸಿಂಗ್‌ನ ಬಾಲ್‌ಗಳ ವಿಷಯದಲ್ಲಿ ಟೀಂ ಇಂಡಿಯಾಗೆ ದೊಡ್ಡ ಗೆಲುವು.
  • ಸಿರಾಜ್ ಏಕದಿನ ಕ್ರಿಕೆಟ್‌ನಲ್ಲಿ 50 ವಿಕೆಟ್ ಗಳಿಸಿದ ಎರಡನೇ ವೇಗದ ಬೌಲರ್ ಎನಿಸಿಕೊಂಡರು. ಅಜಂತಾ ಮೆಂಡಿಸ್ ಮೊದಲ ಸ್ಥಾನದಲ್ಲಿದ್ದಾರೆ.
  • ಈ ಪಂದ್ಯದಲ್ಲಿ ಶ್ರೀಲಂಕಾ 15.2 ಓವರ್‌ಗಳಲ್ಲಿ 50 ರನ್‌ಗಳಿಗೆ ಆಲೌಟ್ ಆಯಿತು. ಇದು ಏಕದಿನ ಇತಿಹಾಸದಲ್ಲಿ ಶ್ರೀಲಂಕಾ ತಂಡದ ಎರಡನೇ ಅತಿ ಕಡಿಮೆ ಸ್ಕೋರ್ ಆಗಿದೆ. 2012ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಶ್ರೀಲಂಕಾ 42 ರನ್‌ಗಳಿಗೆ ಆಲೌಟ್ ಆಗಿತ್ತು.
  • ಮೊಹಮ್ಮದ್ ಸಿರಾಜ್ ಏಕದಿನ ಕ್ರಿಕೆಟ್‌ನಲ್ಲಿ ಆರು ವಿಕೆಟ್ ಪಡೆದ ಭಾರತದ 11ನೇ ಬೌಲರ್ ಎನಿಸಿಕೊಂಡರು.
  • ಮೊಹಮ್ಮದ್ ಅಜರುದ್ದೀನ್ ಮತ್ತು ಎಂಎಸ್ ಧೋನಿ ನಂತರ ರೋಹಿತ್ ಶರ್ಮಾ ಎರಡು ಬಾರಿ ಏಷ್ಯಾಕಪ್ ಪ್ರಶಸ್ತಿಯನ್ನು ಗೆದ್ದ ಟೀಂ ಇಂಡಿಯಾದ ಮೂರನೇ ನಾಯಕ ಎನಿಸಿದರು.

ಏಷ್ಯಾಕಪ್ 2023ರ ಫೈನಲ್‌ನಲ್ಲಿ ಆರು ವಿಕೆಟ್‌ಗಳನ್ನು ಕಬಳಿಸಿದ ಭಾರತದ ವೇಗಿ ಮೊಹಮ್ಮದ್ ಸಿರಾಜ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಟೀಂ ಇಂಡಿಯಾದ ಸ್ಪಿನ್ನರ್ ಕುಲ್ದೀಪ್ ಯಾದವ್ ಟೂರ್ನಿಯ ಶ್ರೇಷ್ಠ ಆಟಗಾರ ಪ್ರಶಸ್ತಿಯನ್ನು ಪಡೆದರು.

Whats_app_banner