Team India: ಸ್ಟಿಂಗ್, ವೇಗದ ಬೌಲರ್‌ಗಳ ಮುಂದೆ ಟೀಂ ಇಂಡಿಯಾ ಬ್ಯಾಟ್ಸಮನ್‌ಗಳ ಪರದಾಟ; ಏಷ್ಯಾಕಪ್ ಗೆಲ್ಲೋಕೆ ಏನು ಮಾಡಬೇಕು?
ಏಷ್ಯಾಕಪ್‌ನಲ್ಲಿ ಶುಕ್ರವಾರ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಮಳೆಯಿಂದ ಡ್ರಾನಲ್ಲಿ ಅಂತ್ಯಗೊಂಡಿತ್ತು. ಏಷ್ಯಾಕಪ್ ಬಳಿಕ ಟೀಂ ಇಂಡಿಯಾ ಐಸಿಸಿ ವಿಶ್ವಕಪ್ ಆಡಲಿದೆ. ಈ ದೊಡ್ಡ ಟೂರ್ನಿಗೂ ಮುನ್ನವೇ ಭಾರತ ತಂಡದ ತಯಾರಿಯನ್ನು ಪಾಕಿಸ್ತಾನ ಬಯಲಿಗೆಳೆದಿದೆ.
ಏಷ್ಯಾಕಪ್‌ನಲ್ಲಿ ಭಾರತ-ಪಾಕಿಸ್ತಾನ ನಡುವಿನ ಮೂರನೇ ಪಂದ್ಯ ಮಳೆಯಿಂದಾಗಿ ಡ್ರಾನಲ್ಲಿ ಅಂತ್ಯಗೊಂಡಿತ್ತು. ಟೀಂ ಇಂಡಿಯಾ ಒಂದು ಇನ್ನಿಂಗ್ಸ್ ಮುಗಿಸಿತ್ತು. ಆದರೆ ಎರಡನೇ ಇನ್ನಿಂಗ್ಸ್‌ಗೆ ಮಳೆ ಅವಕಾಶವೇ ನೀಡಿರಲಿಲ್ಲ. ಹೀಗಾಗಿ ಪಂದ್ಯವನ್ನು ಡ್ರಾ ಮಾಡಬೇಕಾಯಿತು. ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡ 266 ರನ್‌ಗಳಿಸಿ ಆಲೌಟ್ ಆಗಿತ್ತು.
ಟೀಂ ಇಂಡಿಯಾ ನಿಗದಿತ 50 ಓವರ್‌ಗಳನ್ನು ಪೂರ್ಣಗೊಳಿಸಲು ಸಾಧ್ಯವಾಗಿರಲಿಲ್ಲ. ತಂಡದ ಟಾಪ್ ಆರ್ಡರ್ ಸೂಪರ್ ಫ್ಲಾಪ್ ಆಗಿತ್ತು. ಇದರ ನಂತರ ಇಶಾನ್ ಕಿಶನ್ ಮತ್ತು ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾಗೆ ಆಗಬೇಕಿದ್ದ ಅವಮಾನದಿಂದ ಪಾರು ಮಾಡಿದ್ದರು.
ಅಗ್ರ ಕ್ರಮಾಂಕದ ಬ್ಯಾಟರ್‌ಗಳಿಂದ ಕಳಪೆ ಬ್ಯಾಟಿಂಗ್
2023ರ ವಿಶ್ವಕಪ್‌ಗೂ ಆರಂಭಕ್ಕೂ ಮುನ್ನ ಏಕದಿನ ಮಾದರಿಯ ಏಷ್ಯಾಕಪ್ ಟೂರ್ನಿ ನಡೆಯುತ್ತಿದೆ. ತನ್ನ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾದ ಅಗ್ರ ಬ್ಯಾಟರ್‌ಗಳು ರನ್ ಗಳಿಸಲು ಪರದಾಡಿದರು. ನಾಯಕ ರೋಹಿತ್ ಶರ್ಮಾ 22 ಎಸೆತಗಳಲ್ಲಿ 11 ರನ್ ಗಳಿಸಿ ಶಾಹೀನ್ ಅಫ್ರಿದಿ ಬೌಲಿಂಗ್‌ನಲ್ಲಿ ಔಟಾಗಿದ್ದರು.
ಐದನೇ ಓವರ್‌ಗಳಲ್ಲಿ ರೋಹಿತ್ ಔಟಾಗುತ್ತಿದ್ದಂತೆ 7ನೇ ಓವರ್‌ನ ಮೂರನೇ ಎಸೆತದಲ್ಲಿ 4 ರನ್ ಗಳಿಸಿದ್ದ ವಿರಾಟ್ ಕೊಹ್ಲಿ ಕೂಡ ಶಾಹೀನ್ ಅಫ್ರಿದಿ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು. ಇದಾದ ಬಳಿಕ ನಿಧಾನವಾಗಿ ಬ್ಯಾಟಿಂಗ್ ಮಾಡುತ್ತಿದ್ದ ಶುಭ್ಮನ್ ಗಿಲ್ 32 ಎಸೆತಗಳಲ್ಲಿ 10 ರನ್ ಗಳಿಸಿ ಹ್ಯಾರಿಸ್‌ಗೆ ಓವರ್‌ಗಳಲ್ಲಿ ಔಟಾದರು.
ಹೈವೋಲ್ಟೇಜ್ ಪಂದ್ಯದಲ್ಲೇ ಹೀಗಾದರೆ ಮುಂದಿನ ಪಂದ್ಯಗಳು ಹೇಗೆ?
ಶ್ರೇಯಸ್ ಅಯ್ಯರ್ ಕೂಡ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲುವಲ್ಲಿ ವಿಫಲವಾಗಿದ್ದರು. 9 ಎಸೆತಗಳಲ್ಲಿ 14 ರನ್ ಗಳಿಸಿದ್ದ ಅಯ್ಯರ್ ಹ್ಯಾರಿಸ್ ಬೌಲಿಂಗ್‌ನಲ್ಲಿ ವಿಕೆಟ್ ನೀಡಬೇಕಾಯಿತು. ಬ್ಯಾಟ್ಸಮನ್‌ಗಳ ಈ ಮುಜುಗರದ ಪ್ರದರ್ಶನದಿಂದ ವಿಶ್ವಕಪ್‌ಗೆ ಭಾರತ ತಂಡದ ಸಿದ್ಥತೆ ಇನ್ನೂ ಪೂರ್ಣಗೊಂಡಿಲ್ಲ ಎಂಬುದು ಎದ್ದು ಕಾಣುತ್ತಿತ್ತು.
ಪಾಕಿಸ್ತಾನ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತದ ದಿಗ್ಗಜ ಆಟಗಾರರು ಸೋಲನುಭವಿಸಿದ್ದು, ವಿಶ್ವಕಪ್ ಸಿದ್ಧತೆಗಳ ಬಗ್ಗೆ ಪ್ರಶ್ನೆಗಳು ಎದ್ದಿವೆ. ಸಾಮಾಜಿಕ ಜಾಲತಾಣಗಳಲ್ಲಿ ವಿರಾಟ್ ಕೊಹ್ಲಿ ಮತ್ತು ನಾಯಕ ರೋಹಿತ್ ಶರ್ಮಾ ಸೇರಿದಂತೆ ಟೀಂ ಇಂಡಿಯಾದ ಫ್ಲಾಪ್ ಬ್ಯಾಟ್ಸಮನ್‌ಗಳನ್ನು ಅಭಿಮಾನಿಗಳು ಟ್ರೋಲ್ ಮಾಡಿದ್ದಾರೆ. ಕೊಹ್ಲಿ ಮತ್ತು ರೋಹಿತ್ ಶ್ರಮಾ ಕುರಿತು ವಿವಿಧ ಮೀಮ್ಸ್‌ಗಳನ್ನು ಹಂಚಿಕೊಂಡಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಶೀಘ್ರದಲ್ಲೇ ವಿಶ್ವಕಪ್‌ಗೆ ಟೀಂ ಇಂಡಿಯಾವನ್ನು ಪ್ರಕಟಿಸಿಲಿದೆ. ಆದರೆ ತಂಡದ ಸದ್ಯದ ತಯಾರಿ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.
2021ರ ಟಿ20 ವಿಶ್ವಕಪ್‌ನಲ್ಲೂ ರೋಹಿತ್ ಶರ್ಮಾ ವಿಫಲ
ವೇಗಿ ಶಾಹೀನ್ ಶಾ ಅಫ್ರಿದಿ ಬೌಲಿಂಗ್‌ನಲ್ಲಿ ವಿರಾಟ್ ಕೊಹ್ಲಿ ಮತ್ತು ನಾಯಕ ರೋಹಿತ್ ಶರ್ಮಾ ವಿಕೆಟ್ ಒಪ್ಪಿಸಿದ್ದರು. ಈ ಇಬ್ಬರು ಅನುಭವಿಗಳೊಂದಿಗೆ ಟೀಂ ಇಂಡಿಯಾ ಪರ ಶಾಹೀನ್ ಬೌಲಿಂಗ್‌ನಲ್ಲಿ ಹೇಗೆ ಆಡಬೇಕೆಂದು ತಿಳಿಯುತ್ತಿಲ್ಲವೇ ಎಂಬ ಪ್ರಶ್ನೆಗಳು ಎದುರಾಗಿವೆ. 2021ರ ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರೂ ಕೂಡ ಶಾಹೀನ್ ಬೌಲಿಂಗ್ ಎದುರಿಸಿದ್ದರು. ಆಗಲೂ ರೋಹಿತ್ ಅವರನ್ನು ಅಫ್ರಿದಿ ಔಟ್ ಮಾಡಿದ್ದರು.
ಮಹತ್ವದ ಐಸಿಸಿ ವಿಶ್ವಕಪ್‌ನಲ್ಲಿ ಬ್ಯಾಟಿಂಗ್ ಬಲಿಷ್ಠವಾಗಬೇಕಿದೆ. ಹೀಗಾಗಿ ಪಾಕಿಸ್ತಾನದ ಶಾಹೀನ್ ಅಫ್ರಿದಿ ಜೊತೆಗೆ ನ್ಯೂಜಿಲೆಂಡ್‌ನ ಟ್ರೆಂಟ್ ಬೌಲ್ಟ್ ಮತ್ತು ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ಅವರ ಎಸೆತಗಳನ್ನು ಹೇಗೆ ಎದುರಿಸಬೇಕೆಂದು ಟೀಂ ಇಂಡಿಯಾದ ಬ್ಯಾಟರ್‌ಗಳು ಲೆಕ್ಕಾಚಾರಗಳನ್ನು ಹಾಕಿಕೊಳ್ಳಬೇಕು.
ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ 66 ರನ್ ಆಗುವಷ್ಟರಲ್ಲಿ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಇಶಾನ್ ಕಿಶನ್ ಮತ್ತು ಹಾರ್ದಿಕ್ ಪಾಂಡ್ಯ ತಂಡದ ಮೊತ್ತ 200ರ ಗಡಿ ದಾಟಿಸಲು ಉಪಯುಕ್ತ ರನ್ ಕಾಣಿಕೆ ನೀಡಿದ್ದರು. ಇವರಿಬ್ಬರು 5ನೇ ವಿಕೆಟ್‌ಗೆ 138 ರನ್‌ಗಳ ದಾಖಲೆಯ ಜೊತೆಯಾಟವಾಡಿದ್ದರು. ಇದಾದ ಬಳಿಕ 7ನೇ ಕ್ರಮಾಂಕದಲ್ಲಿ ರವೀಂದ್ರ ಜಡೇಜಾ ಮತ್ತು 8ನೇ ಕ್ರಮಾಂಕದಲ್ಲಿ ಶಾರ್ದೂಲ್ ಠಾಕೂರ್ ತಂಡದ ಸ್ಕೋರ್ ಹೆಚ್ಚಿಸುವ ನಿರೀಕ್ಷಿ ಇತ್ತು. ಆದರೆ ಅದು ಕೂಡ ವಿಫಲಾವಾಯ್ತು.
ಕೆಳ ಕ್ರಮಾಂಕದಲ್ಲೂ ಬ್ಯಾಟಿಂಗ್ ಕುಸಿತ
ಕಳೆ ಕ್ರಮಾಂಕದಲ್ಲಿ ರವೀಂದ್ರ ಜಡೇಡಾ 14 ರನ್ ಮತ್ತು ಶಾರ್ದೂಲ್ ಠಾಕೂರ್ 3 ರನ್ ಗಳಿಸಿ ಸುಲಭವಾಗಿ ಔಟಾದರು. ವೇಗಿ ಜಸ್ಪ್ರೀತ್ ಬುಮ್ರಾ ಕೆಲವು ಉತ್ತಮ ಹೊಡೆತಗಳನ್ನು ಆಡಿದರು. ಆದರೆ 16 ರನ್ ಗಳಿಸಲಷ್ಟೇ ಶಕ್ತರಾದರು. ಕುಲ್ದೀಪ್ ಯಾದವ್ 4 ರನ್ ಗಳಿಸಿದರು. ಹೀಗಾಗಿ ಕೆಳ ಕ್ರಮಾಂಕದ ಆಟಗಾರರೂ ಸವಾಲಿನ ಮೊತ್ತ ಪೇರಿಸಲು ನೆರವಾಗಲಿಲ್ಲ. ಇದರಿಂದಾಗಿ ತಂಡ 266 ರನ್ ಗಳಿಗೆ ಸಮೀತವಾಯಿತು. ವಿಶ್ವಕಪ್‌ಗೂ ಮುನ್ನ ಈ ವಿಭಾಗದಲ್ಲಿ ಬಹಳಷ್ಟು ಸುಧಾರಣೆಯಾಗಬೇಕು. ಈ ನಿಟ್ಟಿನಲ್ಲಿ ಆಟಗಾರರು ಹೆಚ್ಚಿನ ಶ್ರಮ ಹಾಕಬೇಕು. ಆಗ ಮಾತ್ರ ಬಲಿಷ್ಠ ತಂಡಗಳ ಬೌಲರ್‌ಗಳ ವಿರುದ್ಧ ಉತ್ತಮ ಬ್ಯಾಟಿಂಗ್ ಸಾಧ್ಯವಾಗಲಿದೆ.